Deuteronomy · chapter 32 · verse 12
Deuteronomy 32:12 in Kannada
ಕರ್ತನು ಒಬ್ಬನೇ ಅವನನ್ನು ನಡಿಸಿದನು. ಅನ್ಯ ದೇವರು ಒಬ್ಬನೂ ಅವನ ಸಂಗಡ ಇದ್ದಿಲ್ಲ.
Kartanu obbane avanannu nadisidanu. Anya devaru obbanoo avana sangada iddilla.
Deuteronomy 32:12 in English
- King James Version (KJV)
- [So] the LORD alone did lead him, and [there was] no strange god with him.
- World English Bible (WEB)
- The LORD alone led him. There was no foreign god with him.
- American Standard Version (ASV)
- Jehovah alone did lead him, And there was no foreign god with him.
- Bible in Basic English (BBE)
- So the Lord only was his guide, no other god was with him.
- Darby Translation (DBY)
- So Jehovah alone did lead him, And no strange god [was] with him.
- Webster's Bible (WBS)
- [So] the LORD alone did lead him, and [there was] no strange God with him.
- Young's Literal Translation (YLT)
- Jehovah alone doth lead him, And there is no strange god with him.
Read in context
- 10ಆತನು ಅರಣ್ಯದ ಭೂಮಿಯಲ್ಲಿಯೂ ಕಿರುಚುವ ಅಡವಿಯ ಕಾಡಿನಲ್ಲಿಯೂ ಅವನನ್ನು ಕಂಡುಕೊಂಡನು; ಆತನು ಅವನನ್ನು ನಡಿಸಿ, ಉಪದೇಶಿಸಿದನು. ತನ್ನ ಕಣ್ಣುಗುಡ್ಡೆಯಂತೆ ಕಾಪಾಡಿದನು.
- 11ಹದ್ದು ತನ್ನ ಗೂಡಿನಿಂದ ಮರಿಗಳನ್ನು ಹೊರಡಿಸಿ ಅವುಗಳ ಮೇಲೆ ರೆಕ್ಕೆಯನ್ನಾಡಿಸಿ ತನ್ನ ರೆಕ್ಕೆಗಳನ್ನು ಚಾಚಿ, ತಕ್ಕೊಂಡು ರೆಕ್ಕೆಯ ಮೇಲೆ ಎತ್ತಿಕೊಳ್ಳುವಂತೆ
- 12ಕರ್ತನು ಒಬ್ಬನೇ ಅವನನ್ನು ನಡಿಸಿದನು. ಅನ್ಯ ದೇವರು ಒಬ್ಬನೂ ಅವನ ಸಂಗಡ ಇದ್ದಿಲ್ಲ.
- 13ಅವನು ಹೊಲದ ಆದಾಯವನ್ನು ತಿನ್ನುವ ಹಾಗೆ ಭೂಮಿಯ ಎತ್ತರವಾದ ಸ್ಥಳಗಳಲ್ಲಿ ಅವನನ್ನು ಹೋಗ ಮಾಡಿ ಬಂಡೆಯೊಳಗಿಂದ ಜೇನನ್ನೂ ಬಿಳೀ ಕಲ್ಲಿನ ಬಂಡೆಯೊಳಗಿಂದ ಎಣ್ಣೆಯನ್ನೂ ಅವನಿಗೆ ಕುಡಿಯಲು ಕೊಟ್ಟನು.
- 14ಹಸುಗಳ ಬೆಣ್ಣೆಯನ್ನೂ ಕುರಿಗಳ ಹಾಲನ್ನೂ ಕುರಿಮರಿಗಳ ಕೊಬ್ಬಿನೊಂದಿಗೆ ಬಾಷಾನಿನ ಟಗರು ಗಳನ್ನೂ ಹೋತಗಳನ್ನೂ ಉತ್ತಮ ಗೋಧಿಯ ಸಂಗಡ ಕೊಟ್ಟನು. ನೀನು ಶುದ್ಧ ದ್ರಾಕ್ಷಾರಸವನ್ನು ಕುಡಿದಿ.
Cross references
- Psalm 78:52–53 ಕೀರ್ತನೆಗಳು 78:52–53ಕುರಿಗಳ ಹಾಗೆ ತನ್ನ ಜನರನ್ನು ಹೊರತಂದು, ಮಂದೆಯ ಹಾಗೆ ಅರಣ್ಯದಲ್ಲಿ ಅವರನ್ನು ನಡಿಸಿದನು. ಅವರನ್ನು ಸುರಕ್ಷಿತವಾಗಿ ನಡಿಸಿದಕಾರಣ ಅವರು ಹೆದರಲಿಲ್ಲ; ಆದರೆ ಸಮುದ್ರವು ಅವರ ಶತ್ರುಗಳನ್ನು ಮುಚ್ಚಿಬಿಟ್ಟಿತು.
- Isaiah 46:4 ಯೆಶಾಯ 46:4ನಿಮ್ಮ ಮುಪ್ಪಿನ ಪ್ರಾಯದ ವರೆಗೆ ನಾನೇ (ಆಧಾರ) ನರೆಗೂದಲು ಬಂದಾಗಲೂ ನಾನು ನಿಮ್ಮನ್ನು ಹೊರುವೆನು, ನಾನೇ ಉಂಟುಮಾಡಿದೆನು, ನಾನೇ ಹೊರುವೆನು, ಅಂತೂ ನಾನು ನಿಮ್ಮನ್ನು ಹೊತ್ತು ಬಿಡುಗಡೆ ಮಾಡುವೆನು.
- Isaiah 44:7–8 ಯೆಶಾಯ 44:7–8ನಾನು ಪುರಾತನ ಕಾಲ ದವರನ್ನು ಇಟ್ಟಂದಿನಿಂದ ನನ್ನ ಹಾಗೆ ಕರೆದು, ತಿಳಿಸಿ ಅದನ್ನು ಸರಿಯಾಗಿ ನನಗೋಸ್ಕರ ಸಿದ್ಧಮಾಡಿದವನು ಯಾರು? ಮುಂದೆ ಬರುವವುಗಳನ್ನು ಬರಬೇಕಾದದ್ದನ್ನು ಅವರು ಅವರಿಗೆ ತಿಳಿಸಲಿ. ಹೆದರಬೇಡಿರಿ ಇಲ್ಲವೆ ಭಯಪಡಬೇಡಿರಿ ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ? ಅದನ್ನು ಪ್ರಕಟಿಸಲಿ ಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಹೌದು, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.
- Isaiah 43:11–12 ಯೆಶಾಯ 43:11–12ನಾನೇ, ನಾನೇ, ಕರ್ತನಾಗಿದ್ದೇನೆ, ನನ್ನ ಹೊರತು ಯಾವ ರಕ್ಷಕನೂ ಇಲ್ಲ. ನಿಮ್ಮಲ್ಲಿ ಅನ್ಯದೇವರು ಇಲ್ಲದಿರುವಾಗಲೇ ನಾನೇ ರಕ್ಷಣೆ ಯನ್ನು ಪ್ರಕಟಿಸಿ ತೋರಿಸಿದ್ದೇನೆ; ಆದದರಿಂದ ನೀವು ನನ್ನ ಸಾಕ್ಷಿಗಳು; ನಾನೇ ದೇವರೆಂದು ಕರ್ತನು ನುಡಿಯು ತ್ತಾನೆ.
- Psalm 136:16 ಕೀರ್ತನೆಗಳು 136:16ತನ್ನ ಜನರನ್ನು ಅರಣ್ಯದಲ್ಲಿ ನಡೆಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
- Isaiah 63:9–13 ಯೆಶಾಯ 63:9–13ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು. ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು. ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ? ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ? ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡಿಸಿ ದವನು ಎಲ್ಲಿ ಅಂದನು.
- Deuteronomy 1:31 ಧರ್ಮೋಪದೇಶಕಾಂಡ 1:31ಈ ಅರಣ್ಯದಲ್ಲಿ ನಿಮ್ಮ ದೇವ ರಾದ ಕರ್ತನು, ನಿಮ್ಮನ್ನು ತಂದೆ ಮಗನನ್ನು ಹೊತ್ತು ಕೊಳ್ಳುವ ಪ್ರಕಾರ ನೀವು ಹೋದ ಮಾರ್ಗದಲ್ಲೆಲ್ಲಾ ಈ ಸ್ಥಳಕ್ಕೆ ಬರುವ ಪರ್ಯಂತರ ಹೊತ್ತುಕೊಂಡನೆಂದು ನೋಡಿದ್ದೀರಲ್ಲಾ ಅಂದೆನು.
- Psalm 78:14 ಕೀರ್ತನೆಗಳು 78:14ಹಗಲಿನಲ್ಲಿ ಮೇಘದಿಂದ, ರಾತ್ರಿಯೆಲ್ಲಾ ಬೆಂಕಿಯ ಬೆಳಕಿನಿಂದ ಅವರನ್ನು ನಡಿಸಿದನು.
- Psalm 27:11 ಕೀರ್ತನೆಗಳು 27:11ಓ ಕರ್ತನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನನ್ನ ವಿರೋಧಿಗಳ ನಿಮಿತ್ತ ಸಮವಾದ ಹಾದಿಯಲ್ಲಿ ನನ್ನನ್ನು ನಡಿಸು.
- Nehemiah 9:12 ನೆಹೆಮೀಯ 9:12ಇದಲ್ಲದೆ ಹಗಲಿನಲ್ಲಿ ಮೇಘ ಸ್ತಂಭ ದಿಂದಲೂ ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭ ದಿಂದಲೂ ಅವರನ್ನು ನಡಿಸಿದಿ.
- Deuteronomy 32:39 ಧರ್ಮೋಪದೇಶಕಾಂಡ 32:39ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
- Psalm 80:1 ಕೀರ್ತನೆಗಳು 80:1ಯೋಸೇಫ್ಯರನ್ನು ಮಂದೆಯಂತೆ ನಡಿಸುವಾತನೇ, ಇಸ್ರಾಯೇಲ್ಯರ ಕುರುಬನೇ, ಕಿವಿಗೊಡು; ಕೆರೂಬಿಗಳ ಮಧ್ಯದಲ್ಲಿ ವಾಸಿಸುವಾತನೇ, ಪ್ರಕಾಶಿಸು.