Deuteronomy · chapter 33 · verse 26
Deuteronomy 33:26 in Kannada
ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ಆತನು ನಿನ್ನ ಸಹಾಯಕ್ಕೆ ಪರಲೋಕದಲ್ಲಿಯೂ ತನ್ನ ಘನತೆಯಲ್ಲಿಯೂ ಆಕಾಶದ ಮೇಲೆಯೂ ಬರುತ್ತಾನೆ.
Yeshuroonana devara haage yaaroo illa. Aatanu ninna sahaayakke paralokadalliyoo tanna ghanateyalliyoo aakaashada meleyoo baruttaane.
Deuteronomy 33:26 in English
- King James Version (KJV)
- [There is] none like unto the God of Jeshurun, [who] rideth upon the heaven in thy help, and in his excellency on the sky.
- World English Bible (WEB)
- “There is no one like God, Jeshurun, who rides on the heavens for your help, in his excellency on the skies.
- American Standard Version (ASV)
- There is none like unto God, O Jeshurun, Who rideth upon the heavens for thy help, And in his excellency on the skies.
- Bible in Basic English (BBE)
- No other is like the God of Jeshurun, coming on the heavens to your help, and letting his glory be seen in the skies.
- Darby Translation (DBY)
- There is none like unto the God of Jeshurun, Who rideth upon the heavens to thy help, And in his majesty, upon the clouds.
- Webster's Bible (WBS)
- [There is] none like to the God of Jeshurun, [who] rideth upon the heaven in thy help, and in his excellence on the sky.
- Young's Literal Translation (YLT)
- There is none like the God of Jeshurun, Riding the heavens in thy help, And in His excellency the skies.
Read in context
- 24ಅವನು ಆಶೇರನ ವಿಷಯವಾಗಿ--ಆಶೇರನು ಮಕ್ಕಳ ಆಶೀರ್ವಾದವನ್ನು ಹೊಂದಲಿ. ತನ್ನ ಸಹೋದ ರರ ಅಂಗೀಕಾರವನ್ನು ಹೊಂದಲಿ. ಅವನ ಕಾಲು ಎಣ್ಣೆಯಲ್ಲಿ ಅದ್ದಿರಲಿ.
- 25ಕಬ್ಬಿಣವೂ ತಾಮ್ರವೂ ನಿನ್ನ ಪಾದರಕ್ಷೆಯಾಗಿರಲಿ. ನಿನ್ನ ದಿವಸಗಳ ಪ್ರಕಾರ ನಿನ್ನ ಬಲವು ಇರಲಿ ಎಂದು ಹೇಳಿದನು.
- 26ಯೆಶುರೂನನ ದೇವರ ಹಾಗೆ ಯಾರೂ ಇಲ್ಲ. ಆತನು ನಿನ್ನ ಸಹಾಯಕ್ಕೆ ಪರಲೋಕದಲ್ಲಿಯೂ ತನ್ನ ಘನತೆಯಲ್ಲಿಯೂ ಆಕಾಶದ ಮೇಲೆಯೂ ಬರುತ್ತಾನೆ.
- 27ನಿತ್ಯನಾದ ದೇವರು ನಿನ್ನ ಆಶ್ರಯವು; ಆತನ ನಿತ್ಯವಾದ ತೋಳುಗಳು ಕೆಳಗಿವೆ, ಶತ್ರುವನ್ನು ನಿನ್ನ ಮುಂದೆ ಹೊರಡಿಸಿ--ಅವರನ್ನು ನಾಶಮಾಡು ಎಂದು ಹೇಳುವನು.
- 28ಇಸ್ರಾಯೇಲು ಒಂಟಿಯಾಗಿ ಭರವಸದಿಂದ ಸುರಕ್ಷಿತವಾಗಿ ವಾಸಿಸುವದು. ಧಾನ್ಯ ದ್ರಾಕ್ಷಾರಸಗಳ ದೇಶದಲ್ಲಿ ಯಾಕೋಬನ ಬುಗ್ಗೆ ಇರುವದು. ಅವನ ಆಕಾಶಗಳು ಸಹ ಮಂಜನ್ನು ಸುರಿಸುವವು.ಇಸ್ರಾಯೇಲೇ, ನೀನು ಸಂತೋಷವುಳ್ಳವನೂ ನಿನ್ನ ಸಹಾಯದ ಗುರಾಣಿಯೂ ನಿನ್ನ ಘನತೆಯ ಕತ್ತಿಯೂ ಆಗಿರುವ ಕರ್ತನಿಂದ ರಕ್ಷಿಸಲ್ಪಟ್ಟ ಓ ಜನವೇ, ನಿನ್ನ ಹಾಗೆ ಯಾರಿದ್ದಾರೆ? ನಿನ್ನ ಶತ್ರುಗಳು ನಿನಗೆ ಸುಳ್ಳುಗಾರರಾಗಿ ಕಂಡುಬರುವರು. ನೀನು ಅವರ ಉನ್ನತವಾದ ಸ್ಥಳಗಳ ಮೇಲೆ ನಡೆದು ಹೋಗುವಿ.
Cross references
- Exodus 15:11 ವಿಮೋಚನಕಾಂಡ 15:11ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ?
- Isaiah 43:11–13 ಯೆಶಾಯ 43:11–13ನಾನೇ, ನಾನೇ, ಕರ್ತನಾಗಿದ್ದೇನೆ, ನನ್ನ ಹೊರತು ಯಾವ ರಕ್ಷಕನೂ ಇಲ್ಲ. ನಿಮ್ಮಲ್ಲಿ ಅನ್ಯದೇವರು ಇಲ್ಲದಿರುವಾಗಲೇ ನಾನೇ ರಕ್ಷಣೆ ಯನ್ನು ಪ್ರಕಟಿಸಿ ತೋರಿಸಿದ್ದೇನೆ; ಆದದರಿಂದ ನೀವು ನನ್ನ ಸಾಕ್ಷಿಗಳು; ನಾನೇ ದೇವರೆಂದು ಕರ್ತನು ನುಡಿಯು ತ್ತಾನೆ. ಹೌದು, ಅಂದಿನಿಂದಲೇ ನಾನಿದ್ದೇನೆ; ನನ್ನ ಕೈಯಿಂದ ಬಿಡಿಸುವವರು ಯಾರೂ ಇಲ್ಲ; ನನ್ನ ಕೆಲಸಕ್ಕೆ ಅಡ್ಡಿ ಬರುವವನಾರು?
- Habakkuk 3:8 ಹಬಕ್ಕೂಕ 3:8ಕರ್ತನು ನದಿಗಳ ಮೇಲೆ ಉರಿಗೊಂಡನೋ? ನದಿಗಳ ಮೇಲೆ ನಿನ್ನ ಕೋಪವಿತ್ತೋ? ಸಮುದ್ರದ ಮೇಲೆ ನಿನ್ನ ರೌದ್ರ ವಿತ್ತೋ? ಇದಕ್ಕಾಗಿ ನಿನ್ನ ಕುದುರೆ ಗಳ ಮೇಲೆ ಸವಾರಿ ಮಾಡಿ ನಿನ್ನ ರಕ್ಷಣೆಯ ರಥಗ ಳಲ್ಲಿ ಹತ್ತಿದಿಯೋ?
- Jeremiah 10:6 ಯೆರೆಮೀಯ 10:6ಓ ಕರ್ತನೇ, ನಿನ್ನ ಹಾಗೆ ಯಾರೂ ಇಲ್ಲ; ನೀನು ಮಹೋ ತ್ತಮನು, ನಿನ್ನ ಹೆಸರು ಪರಾಕ್ರಮದಲ್ಲಿ ದೊಡ್ಡದು.
- Psalm 68:33–34 ಕೀರ್ತನೆಗಳು 68:33–34ಅನಾದಿಯಿಂದಿದ್ದ ಆಕಾಶಗಳಲ್ಲಿ ಸವಾರಿಮಾಡು ವಾತನಿಗೆ ಹಾಡಿರಿ; ಇಗೋ, ಆತನು ತನ್ನ ಮಹಾ ಧ್ವನಿಯಿಂದ ಧ್ವನಿಗೈಯುತ್ತಾನೆ. ದೇವರ ಬಲವನ್ನು ವಿವರಿಸಿರಿ; ಇಸ್ರಾಯೇಲಿನ ಮೇಲೆ ಆತನಿಗೆ ಘನ ತೆಯೂ ಮೇಘಗಳಲ್ಲಿ ಆತನಿಗೆ ಬಲವೂ ಇರುತ್ತದೆ.ಓ ದೇವರೇ, ನಿನ್ನ ಪರಿಶುದ್ಧ ಸ್ಥಳಗಳಿಂದ ನೀನು ಭಯಂಕರನಾಗಿದ್ದೀ; ಇಸ್ರಾಯೇಲಿನ ದೇವರಾದ ಈತನೇ ಜನರಿಗೆ ಬಲವನ್ನೂ ಶಕ್ತಿಯನ್ನೂ ಕೊಡುತ್ತಾನೆ. ದೇವರಿಗೆ ಸ್ತುತಿಯಾಗಿಲಿ.
- Psalm 104:3 ಕೀರ್ತನೆಗಳು 104:3ಆತನು ನೀರುಗಳಲ್ಲಿ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾನೆ; ಮೋಡಗಳನ್ನು ತನ್ನ ರಥವಾಗಿ ಮಾಡು ತ್ತಾನೆ. ಗಾಳಿಯ ರೆಕ್ಕೆಗಳ ಮೇಲೆ ನಡೆದು ಹೋಗು ತ್ತಾನೆ.
- Isaiah 19:1 ಯೆಶಾಯ 19:1ಐಗುಪ್ತ್ಯರ ವಿಷಯವಾದ ದೈವೋಕ್ತಿ; ಇಗೋ ಕರ್ತನು ವೇಗವುಳ್ಳ ಮೇಘವನ್ನು ಹತ್ತಿಕೊಂಡು ಐಗುಪ್ತಕ್ಕೆ ಬರುತ್ತಾನೆ; ಆತನು ಸಮ್ಮುಖ ನಾದಾಗ ಐಗುಪ್ತದ ವಿಗ್ರಹಗಳು ನಡುಗುವವು, ಐಗುಪ್ತ್ಯರ ಹೃದಯವು ಅವರ ಮಧ್ಯೆ ಕರಗುವದು.
- Deuteronomy 32:15 ಧರ್ಮೋಪದೇಶಕಾಂಡ 32:15ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
- Psalm 86:8 ಕೀರ್ತನೆಗಳು 86:8ಕರ್ತನೇ, ದೇವರುಗಳಲ್ಲಿ ನಿನ್ನ ಹಾಗೆ ಒಬ್ಬನೂ ಇಲ್ಲ; ನಿನ್ನ ಕೆಲಸಗಳ ಹಾಗೆ ಒಂದೂ ಇಲ್ಲ.
- Psalm 18:10 ಕೀರ್ತನೆಗಳು 18:10ಆತನು ಕೆರೂಬಿನ ಮೇಲೆ ಕೂತು ಹಾರಿದನು; ಹೌದು, ಗಾಳಿಯ ರೆಕ್ಕೆಗಳ ಮೇಲೆ ಹಾರಿದನು.
- Isaiah 40:18 ಯೆಶಾಯ 40:18ಹೀಗಿರಲು ದೇವರನ್ನು ಯಾರಿಗೆ ಹೋಲಿಸು ವಿರಿ? ಅಥವಾ ಯಾವ ಹೋಲಿಕೆಯನ್ನು ಆತನಿಗೆ ಸಮಾನ ಮಾಡುವಿರಿ?
- Isaiah 40:25 ಯೆಶಾಯ 40:25ಹೀಗಿರಲು ನನ್ನನ್ನು ಯಾರಿಗೆ ಹೋಲಿಸಿ ಸರಿ ಸಮಾನ ಮಾಡುತ್ತೀರಿ ಎಂದು ಪರಿಶುದ್ಧನಾದವನು ಹೇಳುತ್ತಾನೆ.