Deuteronomy · chapter 33 · verse 9
Deuteronomy 33:9 in Kannada
ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.
Avanu tanna tande taayigalige--naanu ava nannu nodalilla andanu. Tanna sahodarara gurutannu tilukollalilla. Tanna svanta makkalannu ariyalilla. Yaakandare avaru (leviyaru) ninna vaakyavannu kaikondu ninna odambadikeyannu kaapaadiddaare.
Deuteronomy 33:9 in English
- King James Version (KJV)
- Who said unto his father and to his mother, I have not seen him; neither did he acknowledge his brethren, nor knew his own children: for they have observed thy word, and kept thy covenant.
- World English Bible (WEB)
- He said of his father, and of his mother, ‘I have not seen him.’ He didn’t acknowledge his brothers, nor did he know his own children; for they have observed your word, and keep your covenant.
- American Standard Version (ASV)
- Who said of his father, and of his mother, I have not seen him; Neither did he acknowledge his brethren, Nor knew he his own children: For they have observed thy word, And keep thy covenant.
- Bible in Basic English (BBE)
- Who said of his father, Who is he? and of his mother, I have not seen her; he kept himself separate from his brothers and had no knowledge of his children: for they have given ear to your word and kept your agreement.
- Darby Translation (DBY)
- Who said to his father and to his mother, I see him not, And he acknowledged not his brethren, And knew not his own children; For they have observed thy word, And kept thy covenant.
- Webster's Bible (WBS)
- Who said to his father and to his mother, I have not seen him, neither did he acknowledge his brethren, nor know his own children: for they have observed thy word, and kept thy covenant.
- Young's Literal Translation (YLT)
- Who is saying of his father and his mother, I have not seen him; And his brethren he hath not discerned, And his sons he hath not known; For they have observed Thy saying, And Thy covenant they keep.
Read in context
- 7ಯೂದನ ಆಶೀರ್ವಾದವು ಇದೇ; ಕರ್ತನೇ, ಯೂದನ ಶಬ್ದವನ್ನು ಕೇಳು; ಅವನನ್ನು ತನ್ನ ಜನರ ಬಳಿಗೆ ಸೇರಿಸು; ತನ್ನ ಕೈಗಳು ಅವನಿಗೆ ಸಾಕಾಗಿವೆ. ಅವನ ವೈರಿಗಳ ವಿಷಯದಲ್ಲಿ ಅವನಿಗೆ ಸಹಾಯ ವಾಗಿರು ಎಂದು ಹೇಳಿದನು.
- 8ಲೇವಿಯ ವಿಷಯವಾಗಿ--ನಿನ್ನ ತುವಿಾ್ಮೇಮ್ ನಿನ್ನ ಊರೀಮ್ ಮಸ್ಸದಲ್ಲಿ ನೀನು ಶೋಧಿಸಿದಂಥ ಮೆರೀ ಬಾದ ನೀರಿನ ಬಳಿಯಲ್ಲಿ ನೀನು ವಿವಾದ ಮಾಡಿದಂಥ ನಿನ್ನ ಪರಿಶುದ್ಧನ ಬಳಿಯಲ್ಲಿ ಇರುವವು;
- 9ಅವನು ತನ್ನ ತಂದೆ ತಾಯಿಗಳಿಗೆ--ನಾನು ಅವ ನನ್ನು ನೋಡಲಿಲ್ಲ ಅಂದನು. ತನ್ನ ಸಹೋದರರ ಗುರುತನ್ನು ತಿಳುಕೊಳ್ಳಲಿಲ್ಲ. ತನ್ನ ಸ್ವಂತ ಮಕ್ಕಳನ್ನು ಅರಿಯಲಿಲ್ಲ. ಯಾಕಂದರೆ ಅವರು (ಲೇವಿಯರು) ನಿನ್ನ ವಾಕ್ಯವನ್ನು ಕೈಕೊಂಡು ನಿನ್ನ ಒಡಂಬಡಿಕೆಯನ್ನು ಕಾಪಾಡಿದ್ದಾರೆ.
- 10ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು.
- 11ಕರ್ತನೇ, ಅವನ ಆಸ್ತಿಯನ್ನು ಆಶೀರ್ವದಿಸು; ಅವನ ಕೈಕೆಲಸವನ್ನು ಅಂಗೀಕರಿಸು. ಅವನಿಗೆ ವಿರೋಧ ವಾಗಿ ಏಳುವವರ ಮತ್ತು ಅವನನ್ನು ಹಗೆಮಾಡುವವರ ಸೊಂಟಗಳನ್ನು ಅವರು ತಿರಿಗಿ ಏಳದ ಹಾಗೆ ಹೊಡೆ ಅಂದನು.
Cross references
- Matthew 10:37 ಮತ್ತಾಯನು 10:37ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
- Exodus 32:25–29 ವಿಮೋಚನಕಾಂಡ 32:25–29ಜನರು ಬೆತ್ತಲೆಯಾಗಿರುವದನ್ನು ಮೋಶೆಯು ನೋಡಿದಾಗ (ಆರೋನನು ಅವರ ಶತ್ರುಗಳ ಮಧ್ಯ ದಲ್ಲಿ ನಾಚಿಕೆಯಾಗುವಂತೆ ಅವರನ್ನು ಬೆತ್ತಲೆಯಾಗಿ ಮಾಡಿದ್ದನು.) ಅವನು ಪಾಳೆಯದ ಬಾಗಿಲಲ್ಲಿ ನಿಂತುಕೊಂಡು--ಕರ್ತನ ಪಕ್ಷದವನು ಯಾರು ಅವನು ನನ್ನ ಬಳಿಗೆ ಬರಲಿ ಅಂದನು. ಆಗ ಲೇವಿಯ ಕುಮಾರರೆಲ್ಲರು ಅವನ ಬಳಿಗೆ ಕೂಡಿ ಬಂದರು. ಅವನು ಅವರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಳಗಿನಿಂದ ಹೊರಕ್ಕೆ ದ್ವಾರದಿಂದ ದ್ವಾರಕ್ಕೆ ಹೋಗಿ ತನ್ನ ಸಹೋದರನನ್ನೂ ತನ್ನ ಜೊತೆಗಾರನನ್ನೂ ತನ್ನ ನೆರೆಯವನನ್ನೂ ಕೊಲ್ಲಲಿ ಎಂದು ಹೇಳಿದನು. ಲೇವಿಯ ಮಕ್ಕಳು ಮೋಶೆಯ ಮಾತಿನಂತೆ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರುಸಾವಿರ ಜನರು ಸತ್ತರು. ಮೋಶೆಯು--ಈ ದಿನ ಆತನು ನಿಮ್ಮ ಮೇಲೆ ತನ್ನ ಆಶೀರ್ವಾದವನ್ನು ಅನುಗ್ರಹಿಸುವಂತೆ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಮಗನಿಗೋಸ್ಕರವೂ ತನ್ನ ಸಹೋದರನಿಗೋಸ್ಕರವೂ ಈ ದಿನ ಕರ್ತನಿಗೆ ಪ್ರತಿಷ್ಠೆ ಮಾಡಿಕೊಳ್ಳಲಿ ಅಂದನು.
- Leviticus 21:11 ಯಾಜಕಕಾಂಡ 21:11ಇಲ್ಲವೆ ಯಾವ ಮೃತ ಶರೀರದ ಬಳಿಗೂ ಹೋಗಬಾರದು; ತನ್ನ ತಂದೆಗಾಗಲಿ ತಾಯಿಗಾಗಲಿ ತನ್ನನ್ನು ಹೊಲೆಮಾಡಿಕೊಳ್ಳಬಾರದು.
- Luke 14:26 ಲೂಕನು 14:26ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.
- Matthew 12:48 ಮತ್ತಾಯನು 12:48ಅದಕ್ಕೆ ಆತನು ತನಗೆ ಹೇಳಿದವನಿಗೆ ಪ್ರತ್ಯುತ್ತರವಾಗಿ--ನನ್ನ ತಾಯಿ ಯಾರು? ಮತ್ತು ನನ್ನ ಸಹೋದರರು ಯಾರು? ಎಂದು ಹೇಳಿ ಶಿಷ್ಯರ ಕಡೆಗೆ ತನ್ನ ಕೈಚಾಚಿ--
- Jeremiah 18:18 ಯೆರೆಮೀಯ 18:18ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.
- 1 Chronicles 17:17 1 ಪೂರ್ವಕಾಲವೃತ್ತಾಂತ 17:17ಆದರೂ ಓ ದೇವರೇ, ಇದು ನಿನ್ನ ಕಣ್ಣುಗಳಿಗೆ ಅಲ್ಪಕಾರ್ಯವಾಗಿತ್ತು; ಓ ಕರ್ತನಾದ ದೇವರೇ, ನೀನು ನಿನ್ನ ಸೇವಕನ ಮನೆಯನ್ನು ಕುರಿತು ಬಹುಕಾಲದ ಮಾತು ಹೇಳಿದಿ; ಘನವುಳ್ಳ ಮನುಷ್ಯನ ಸ್ಥಿತಿಯ ಪ್ರಕಾರ ನನ್ನನ್ನು ಗೌರವಿಸಿದಿ.
- Malachi 2:5–7 ಮಲಾಕಿಯ 2:5–7ನನ್ನ ಜೀವದ ಮತ್ತು ಸಮಾಧಾನದ ನನ್ನ ಒಡಂಬಡಿಕೆಯು ಅವನ ಸಂಗಡ ಇತ್ತು; ಅವುಗಳನ್ನು ಅವನಿಗೆ ಕೊಟ್ಟೆನು; ಅವನು ನನಗೆ ಭಯಪಟ್ಟು ನನ್ನ ಹೆಸರಿಗೆ ಅಂಜಿ ಕೊಂಡನು. ಸತ್ಯದ ನ್ಯಾಯಪ್ರಮಾಣವು ಅವನ ಬಾಯಲ್ಲಿ ಇತ್ತು; ಅಕ್ರಮವು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ. ಅವನು ಸಮಾಧಾನದಿಂದಲೂ ನ್ಯಾಯ ದಿಂದಲೂ ನನ್ನ ಸಂಗಡ ನಡೆದುಕೊಂಡು ಅನೇಕರನ್ನು ಅಕ್ರಮದಿಂದ ತಿರುಗಿಸಿದನು. ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ.
- Job 37:24 ಯೋಬನು 37:24ಆದ ದರಿಂದ ಮನುಷ್ಯರು ಆತನಿಗೆ ಭಯಪಡುತ್ತಾರೆ; ಹೃದಯದಲ್ಲಿ ಜ್ಞಾನಿಗಳಾದವರೆಲ್ಲರನ್ನು ಆತನು ಲಕ್ಷಿಸುವದಿಲ್ಲ.
- Galatians 1:10 ಗಲಾತ್ಯದವರಿಗೆ 1:10ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯ ರನ್ನು ಮೆಚ್ಚಿಸುವದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ದಾಸನಲ್ಲ.
- Genesis 29:32 ಆದಿಕಾಂಡ 29:32ಲೇಯಳು ಗರ್ಭಿಣಿ ಯಾಗಿ ಮಗನನ್ನು ಹೆತ್ತು--ನಿಜವಾಗಿಯೂ ಕರ್ತನು ನನ್ನ ಬಾಧೆಯನ್ನು ನೋಡಿದ್ದಾನೆ; ಆದದರಿಂದ ನನ್ನ ಗಂಡನು ನನ್ನನ್ನು ಪ್ರೀತಿಮಾಡುವನೆಂದು ಹೇಳಿ (ಮಗುವಿಗೆ) ರೂಬೇನ್ ಎಂದು ಹೆಸರಿಟ್ಟಳು.
- 2 Corinthians 5:16 2 ಕೊರಿಂಥದವರಿಗೆ 5:16ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರ ಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಹೌದು, ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ಎಂದಿಗೂ ತಿಳುಕೊಳ್ಳುವದಿಲ್ಲ,