Deuteronomy · chapter 4 · verse 15
Deuteronomy 4:15 in Kannada
ಆದದರಿಂದ ನಿಮ್ಮ ವಿಷಯವಾಗಿ ಬಹಳ ಜಾಗ್ರತೆಯಾಗಿರ್ರಿ; ಕರ್ತನು ಹೋರೇಬಿನಲ್ಲಿ ಬೆಂಕಿ ಯೊಳಗಿಂದ ನಿಮ್ಮ ಸಂಗಡ ಮಾತನಾಡಿದ ದಿನದಲ್ಲಿ ನೀವು ಯಾವ ತರವಾದ ಆಕಾರವನ್ನೂ ನೋಡಲಿ ಲ್ಲವಲ್ಲಾ.
Aadadarinda nimma vishayavaagi bahala jaagrateyaagirri; kartanu horebinalli benki yolaginda nimma sangada maatanaadida dinadalli neevu yaava taravaada aakaaravannoo nodali llavallaa.
Deuteronomy 4:15 in English
- King James Version (KJV)
- Take ye therefore good heed unto yourselves; for ye saw no manner of similitude on the day [that] the LORD spake unto you in Horeb out of the midst of the fire:
- World English Bible (WEB)
- Be very careful, for you saw no kind of form on the day that the LORD spoke to you in Horeb out of the middle of the fire,
- American Standard Version (ASV)
- Take ye therefore good heed unto yourselves; for ye saw no manner of form on the day that Jehovah spake unto you in Horeb out of the midst of the fire;
- Bible in Basic English (BBE)
- So keep watch on yourselves with care; for you saw no form of any sort on the day when the voice of the Lord came to you in Horeb out of the heart of the fire:
- Darby Translation (DBY)
- And take great heed to your souls (for ye saw no form on the day that Jehovah spoke to you in Horeb from the midst of the fire),
- Webster's Bible (WBS)
- Take ye therefore good heed to yourselves; for ye saw no manner of similitude on the day [that] the LORD spoke to you in Horeb out of the midst of the fire;
- Young's Literal Translation (YLT)
- and ye have been very watchful of your souls, for ye have not seen any similitude in the day of Jehovah's speaking unto you in Horeb out of the midst of the fire,
Read in context
- 13ಆತನು ಹತ್ತು ಆಜ್ಞೆಗಳೆಂಬ ತನ್ನ ಒಡಂಬಡಿಕೆಯನ್ನು ನಿಮಗೆ ತಿಳಿಸಿ ಅದನ್ನು ಅನುಸರಿಸಬೇಕೆಂದು ನಿಮಗೆ ಆಜ್ಞಾಪಿಸಿ ಅವುಗಳನ್ನು ಕಲ್ಲಿನ ಎರಡು ಹಲಗೆಗಳ ಮೇಲೆ ಬರೆದನು.
- 14ನೀವು ದಾಟಿಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಮಾಡತಕ್ಕ ನಿಯಮ ನ್ಯಾಯಗಳನ್ನು ನಿಮಗೆ ಬೋಧಿಸಬೇಕೆಂದು ಆಗಲೇ ಕರ್ತನು ನನಗೆ ಆಜ್ಞಾಪಿಸಿದನು.
- 15ಆದದರಿಂದ ನಿಮ್ಮ ವಿಷಯವಾಗಿ ಬಹಳ ಜಾಗ್ರತೆಯಾಗಿರ್ರಿ; ಕರ್ತನು ಹೋರೇಬಿನಲ್ಲಿ ಬೆಂಕಿ ಯೊಳಗಿಂದ ನಿಮ್ಮ ಸಂಗಡ ಮಾತನಾಡಿದ ದಿನದಲ್ಲಿ ನೀವು ಯಾವ ತರವಾದ ಆಕಾರವನ್ನೂ ನೋಡಲಿ ಲ್ಲವಲ್ಲಾ.
- 16ನಿಮ್ಮನ್ನು ನೀವೇ ಕೆಡಿಸಿಕೊಳ್ಳದ ಹಾಗೆ ನಿಮಗಾಗಿ ಕೆತ್ತಿದ ವಿಗ್ರಹವನ್ನು ಅಂದರೆ ಗಂಡು ಇಲ್ಲವೆ ಹೆಣ್ಣಿನ ಆಕಾರದಲ್ಲಿ ಯಾವ ವಿಧವಾದ ಪ್ರತಿಮೆ ಯನ್ನೂ
- 17ಭೂಮಿಯ ಮೇಲಿರುವ ಯಾವದೊಂದು ಮೃಗದ ಹೋಲಿಕೆಯನ್ನೂ ಆಕಾಶದಲ್ಲಿ ಹಾರುವಂಥ ರೆಕ್ಕೆಯುಳ್ಳ ಯಾವದೊಂದು ಪಕ್ಷಿಯ ಹೋಲಿಕೆ ಯನ್ನೂ ಭೂಮಿಯ ಮೇಲೆ ಹರಿದಾಡುವಂಥ ಯಾವ ದೊಂದರ ಹೋಲಿಕೆಯನ್ನೂ
Cross references
- Deuteronomy 4:12 ಧರ್ಮೋಪದೇಶಕಾಂಡ 4:12ಬೆಂಕಿಯ ಮಧ್ಯದೊಳಗಿಂದ ಕರ್ತನು ನಿಮ್ಮ ಸಂಗಡ ಮಾತನಾಡಿದನು; ವಾಕ್ಯಗಳ ಧ್ವನಿಯನ್ನು ನೀವು ಕೇಳಿದಿರಿ; ಆದರೆ ಆಕಾರವನ್ನು ನೋಡಲಿಲ್ಲ; ಧ್ವನಿಯನ್ನು ಮಾತ್ರ ಕೇಳಿದಿರಿ.
- 2 Corinthians 4:4–6 2 ಕೊರಿಂಥದವರಿಗೆ 4:4–6ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ. ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ. ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
- Isaiah 40:18 ಯೆಶಾಯ 40:18ಹೀಗಿರಲು ದೇವರನ್ನು ಯಾರಿಗೆ ಹೋಲಿಸು ವಿರಿ? ಅಥವಾ ಯಾವ ಹೋಲಿಕೆಯನ್ನು ಆತನಿಗೆ ಸಮಾನ ಮಾಡುವಿರಿ?
- Malachi 2:15 ಮಲಾಕಿಯ 2:15ಅವನಲ್ಲಿ ಆತ್ಮ ಉಳಿದಿದ್ದರೂ ಆತನು ಅವಳನ್ನು ಒಂಟಿಗಳಾಗಿ ಮಾಡಲಿಲ್ಲವೋ? ಮತ್ತು ಒಬ್ಬಳನ್ನು ಯಾಕೆ? ಅವನು ದೇವಭಕ್ತಿಯುಳ್ಳ ಸಂತಾನವನ್ನು ಹುಡುಕುವದಕ್ಕಾ ಗಿಯೇ; ಆದದರಿಂದ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ; ಒಬ್ಬನಾದರೂ ತನ್ನ ಯೌವನದ ಹೆಂಡತಿಯನ್ನು ವಂಚಿಸದೆ ಇರಲಿ,
- Proverbs 4:27 ಜ್ಞಾನೋಕ್ತಿಗಳು 4:27ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.
- Jeremiah 17:21 ಯೆರೆಮೀಯ 17:21ಕರ್ತನು ಹೀಗೆ ಹೇಳುತ್ತಾನೆ--ನಿಮಗೆ ನೀವೇ ಎಚ್ಚರಿಕೆಯಾಗಿರ್ರಿ; ಸಬ್ಬತ್ತಿನ ದಿವಸದಲ್ಲಿ ಹೊರೆಯನ್ನು ಹೊತ್ತುಕೊಂಡು ಇಲ್ಲವೆ ಯೆರೂಸಲೇಮಿನ ಬಾಗಿಲುಗಳೊಳಗೆ ತಕ್ಕೊಂಡು ಬರಬೇಡಿರಿ.
- 1 Chronicles 28:9–10 1 ಪೂರ್ವಕಾಲವೃತ್ತಾಂತ 28:9–10ಇದಲ್ಲದೆ ನನ್ನ ಮಗನಾದ ಸೊಲೊಮೋನನೇ, ನೀನು ನಿನ್ನ ತಂದೆಯ ದೇವ ರನ್ನು ತಿಳಿದು ಆತನನ್ನು ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಸೇವಿಸು. ಕರ್ತನು ಸಕಲ ಹೃದಯಗಳನ್ನು ಶೋಧಿಸಿ ಯೋಚನೆಗಳ ಕಲ್ಪನೆಯ ನ್ನೆಲ್ಲಾ ತಿಳಿದಿದ್ದಾನೆ. ನೀನು ಆತನನ್ನು ಹುಡುಕಿದರೆ ಆತನು ನಿನಗೆ ಸಿಕ್ಕುವನು; ನೀನು ಆತನನ್ನು ಬಿಟ್ಟು ಬಿಟ್ಟರೆ ಆತನು ನಿನ್ನನ್ನು ಎಂದೆಂದಿಗೂ ತೊರೆದುಬಿಡು ವನು. ಆದದರಿಂದ ಜಾಗ್ರತೆಯಾಗಿರು; ಯಾಕಂದರೆ ಕರ್ತನು ಪರಿಶುದ್ಧ ಸ್ಥಾನಕ್ಕೋಸ್ಕರ ಮನೆಯನ್ನು ಕಟ್ಟಿಸು ವದಕ್ಕೆ ನಿನ್ನನ್ನು ಆದುಕೊಂಡಿದ್ದಾನೆ; ನೀನು ದೃಢವಾ ಗಿದ್ದು ಅದನ್ನು ಮಾಡು ಅಂದನು.
- Psalm 119:9 ಕೀರ್ತನೆಗಳು 119:9ಯೌವನಸ್ಥನು ಯಾವದರಿಂದ ತನ್ನ ನಡತೆಯನ್ನು ಶುಚಿಮಾಡಿಕೊಳ್ಳುವನು? ನಿನ್ನ ವಾಕ್ಯವನ್ನು ಕೈಕೊಳ್ಳು ವದರಿಂದಲೇ.
- Hebrews 1:3 ಇಬ್ರಿಯರಿಗೆ 1:3ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
- Proverbs 4:23 ಜ್ಞಾನೋಕ್ತಿಗಳು 4:23ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಜೀವಧಾರೆಗಳು ಅದರೊಳಗಿಂದ ಹೊರಡುವವು.
- Deuteronomy 4:9 ಧರ್ಮೋಪದೇಶಕಾಂಡ 4:9ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು.
- Joshua 23:11 ಯೆಹೋಶುವ 23:11ಆದದರಿಂದ ನೀವು ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡುವ ಹಾಗೆ ನೀವು ಬಹಳ ಎಚ್ಚರಿಕೆಯಾಗಿರ್ರಿ.