Deuteronomy · chapter 4 · verse 16
Deuteronomy 4:16 in Kannada
ನಿಮ್ಮನ್ನು ನೀವೇ ಕೆಡಿಸಿಕೊಳ್ಳದ ಹಾಗೆ ನಿಮಗಾಗಿ ಕೆತ್ತಿದ ವಿಗ್ರಹವನ್ನು ಅಂದರೆ ಗಂಡು ಇಲ್ಲವೆ ಹೆಣ್ಣಿನ ಆಕಾರದಲ್ಲಿ ಯಾವ ವಿಧವಾದ ಪ್ರತಿಮೆ ಯನ್ನೂ
Nimmannu neeve kedisikollada haage nimagaagi kettida vigrahavannu andare gandu illave hennina aakaaradalli yaava vidhavaada pratime yannoo
Deuteronomy 4:16 in English
- King James Version (KJV)
- Lest ye corrupt [yourselves], and make you a graven image, the similitude of any figure, the likeness of male or female,
- World English Bible (WEB)
- lest you corrupt yourselves, and make yourself a carved image in the form of any figure, the likeness of male or female,
- American Standard Version (ASV)
- lest ye corrupt yourselves, and make you a graven image in the form of any figure, the likeness of male or female,
- Bible in Basic English (BBE)
- So that you may not be turned to evil ways and make for yourselves an image in the form of any living thing, male or female,
- Darby Translation (DBY)
- lest ye corrupt yourselves, and make you a graven image, the form of any figure, the pattern of male or female,
- Webster's Bible (WBS)
- Lest ye corrupt [yourselves] , and make to you a graven image, the similitude of any figure, the likeness of male or female,
- Young's Literal Translation (YLT)
- lest ye do corruptly, and have made to you a graven image, a similitude of any figure, a form of male or female —
Read in context
- 14ನೀವು ದಾಟಿಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಮಾಡತಕ್ಕ ನಿಯಮ ನ್ಯಾಯಗಳನ್ನು ನಿಮಗೆ ಬೋಧಿಸಬೇಕೆಂದು ಆಗಲೇ ಕರ್ತನು ನನಗೆ ಆಜ್ಞಾಪಿಸಿದನು.
- 15ಆದದರಿಂದ ನಿಮ್ಮ ವಿಷಯವಾಗಿ ಬಹಳ ಜಾಗ್ರತೆಯಾಗಿರ್ರಿ; ಕರ್ತನು ಹೋರೇಬಿನಲ್ಲಿ ಬೆಂಕಿ ಯೊಳಗಿಂದ ನಿಮ್ಮ ಸಂಗಡ ಮಾತನಾಡಿದ ದಿನದಲ್ಲಿ ನೀವು ಯಾವ ತರವಾದ ಆಕಾರವನ್ನೂ ನೋಡಲಿ ಲ್ಲವಲ್ಲಾ.
- 16ನಿಮ್ಮನ್ನು ನೀವೇ ಕೆಡಿಸಿಕೊಳ್ಳದ ಹಾಗೆ ನಿಮಗಾಗಿ ಕೆತ್ತಿದ ವಿಗ್ರಹವನ್ನು ಅಂದರೆ ಗಂಡು ಇಲ್ಲವೆ ಹೆಣ್ಣಿನ ಆಕಾರದಲ್ಲಿ ಯಾವ ವಿಧವಾದ ಪ್ರತಿಮೆ ಯನ್ನೂ
- 17ಭೂಮಿಯ ಮೇಲಿರುವ ಯಾವದೊಂದು ಮೃಗದ ಹೋಲಿಕೆಯನ್ನೂ ಆಕಾಶದಲ್ಲಿ ಹಾರುವಂಥ ರೆಕ್ಕೆಯುಳ್ಳ ಯಾವದೊಂದು ಪಕ್ಷಿಯ ಹೋಲಿಕೆ ಯನ್ನೂ ಭೂಮಿಯ ಮೇಲೆ ಹರಿದಾಡುವಂಥ ಯಾವ ದೊಂದರ ಹೋಲಿಕೆಯನ್ನೂ
- 18ಭೂಮಿಯ ಕೆಳಗಿನ ನೀರುಗಳಲ್ಲಿರುವ ಯಾವದೊಂದು ವಿಾನಿನ ಹೋಲಿಕೆ ಯನ್ನೂ ಮಾಡದ ಹಾಗೆಯೂ
Cross references
- Acts 17:29 ಅಪೊಸ್ತಲರ ಕೃತ್ಯಗಳು 17:29ನಾವು ದೇವರ ಸಂತಾನದವ ರಾಗಿದ್ದ ಮೇಲೆ ದೈವತ್ವವು ಮನುಷ್ಯನ ಶಿಲ್ಪ ವಿದ್ಯೆ ಯಿಂದಲೂ ಕಲ್ಪನೆಯಿಂದಲೂ ಕೆತ್ತಿರುವ ಚಿನ್ನ ಬೆಳ್ಳಿ ಕಲ್ಲಿಗೆ ಸಮಾನವೆಂದು ನಾವು ಭಾವಿಸಲೇಬಾರದು.
- Deuteronomy 5:8 ಧರ್ಮೋಪದೇಶಕಾಂಡ 5:8ಮೇಲಿನ ಆಕಾಶ ದಲ್ಲಾಗಲಿ ಕೆಳಗಿನ ಭೂಮಿಯಲ್ಲಾಗಲಿ ಭೂಮಿಯ ಕೆಳಗಿನ ನೀರುಗಳಲ್ಲಾಗಲಿ ಇರುವಂಥ ಯಾವ ದೊಂದರ ರೂಪದ ವಿಗ್ರಹವನ್ನು ನಿನಗೆ ಮಾಡಿ ಕೊಳ್ಳಬಾರದು,
- Romans 1:22–24 ರೋಮಾಪುರದವರಿಗೆ 1:22–24ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು; ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು. ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು;
- Deuteronomy 4:23 ಧರ್ಮೋಪದೇಶಕಾಂಡ 4:23ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತು ನಿಮ್ಮ ದೇವರಾದ ಕರ್ತನು ಬೇಡವೆಂದು ಕೆತ್ತಿದ ಯಾವ ರೂಪದ ವಿಗ್ರಹ ವನ್ನೂ ಮಾಡಿಕೊಳ್ಳದ ಹಾಗೆ ಜಾಗ್ರತೆಯಾಗಿರ್ರಿ.
- Exodus 20:4–5 ವಿಮೋಚನಕಾಂಡ 20:4–5ನಿನಗೆ ಆಕಾಶದಲ್ಲಾಗಲಿ ಭೂಮಿಯಲ್ಲಾಗಲಿ ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಯಾವದರ ವಿಗ್ರಹವನ್ನಾಗಲಿ ರೂಪವನ್ನಾಗಲಿ ನೀನು ಮಾಡಿಕೊಳ್ಳ ಬಾರದು. ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- Exodus 32:7 ವಿಮೋಚನಕಾಂಡ 32:7ಆಗ ಕರ್ತನು ಮೋಶೆಗೆ--ನೀನು ಇಳಿದು ಹೋಗು; ನೀನು ಐಗುಪ್ತ ದೇಶದೊಳಗಿಂದ ಬರ ಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ.
- Deuteronomy 4:25 ಧರ್ಮೋಪದೇಶಕಾಂಡ 4:25ನಿನ್ನಿಂದ ಮಕ್ಕಳೂ ಮೊಮ್ಮಕ್ಕಳೂ ಹುಟ್ಟಿದ ಮೇಲೆ ನೀವು ಬಹುಕಾಲ ದೇಶದಲ್ಲಿ ಇದ್ದು ತರುವಾಯ ನಿಮ್ಮನ್ನು ಕೆಡಿಸಿಕೊಂಡು ಯಾವದಾದರ ರೂಪವನ್ನು ಕೆತ್ತಿದ ವಿಗ್ರಹವನ್ನು ಮಾಡಿಕೊಂಡು ನಿನ್ನ ದೇವರಾದ ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿ ಆತನಿಗೆ ಕೋಪವನ್ನು ಎಬ್ಬಿಸಿದರೆ
- Deuteronomy 4:8–9 ಧರ್ಮೋಪದೇಶಕಾಂಡ 4:8–9ಇದಲ್ಲದೆ ನಾನು ಈಹೊತ್ತು ನಿಮ್ಮ ಮುಂದೆ ಇಡುವ ಈ ಎಲ್ಲಾ ನ್ಯಾಯಪ್ರಮಾಣದ ಪ್ರಕಾರ ನೀತಿಯುಳ್ಳ ನಿಯಮ ನ್ಯಾಯಗಳುಳ್ಳ ದೊಡ್ಡ ಜನಾಂಗ ಯಾವದು? ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು.
- Acts 20:4–5 ಅಪೊಸ್ತಲರ ಕೃತ್ಯಗಳು 20:4–5ಬೆರೋಯದ ವನಾದ ಸೋಪತ್ರನೂ ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ ಸೆಕುಂದನೂ ದೆರ್ಬೆಯ ಗಾಯನೂ ತಿಮೊಥೆಯನೂ ಆಸ್ಯದ ತುಖಿಕನೂ ತ್ರೊಫಿಮನೂ ಪೌಲನ ಜೊತೆಯಲ್ಲಿ ಆಸ್ಯಕ್ಕೆ ಹೋದರು. ಇವರು ಮುಂಚಿತವಾಗಿ ಹೋಗಿ ನಮಗೋಸ್ಕರ ತ್ರೋವದಲ್ಲಿ ಕಾದುಕೊಂಡರು.
- Isaiah 40:18 ಯೆಶಾಯ 40:18ಹೀಗಿರಲು ದೇವರನ್ನು ಯಾರಿಗೆ ಹೋಲಿಸು ವಿರಿ? ಅಥವಾ ಯಾವ ಹೋಲಿಕೆಯನ್ನು ಆತನಿಗೆ ಸಮಾನ ಮಾಡುವಿರಿ?
- John 4:24 ಯೋಹಾನನು 4:24ದೇವರು ಆತ್ಮನಾಗಿದ್ದಾನೆ; ಆತನನ್ನು ಆರಾಧಿಸುವ ವರು ಆತ್ಮದಿಂದಲೂ ಸತ್ಯದಿಂದಲೂ ಆರಾಧಿಸತಕ್ಕದ್ದು ಅಂದನು.
- Psalm 106:19–20 ಕೀರ್ತನೆಗಳು 106:19–20ಅವರು ಹೋರೇಬಿ ನಲ್ಲಿ ಕರುವನ್ನು ಮಾಡಿ ಎರಕದ ವಿಗ್ರಹಕ್ಕೆ ಅಡ್ಡ ಬಿದ್ದರು. ತಮ್ಮ ಘನವನ್ನು ಹುಲ್ಲು ತಿನ್ನುವ ಎತ್ತಿನ ರೂಪಕ್ಕೆ ಬದಲಾಯಿಸಿದರು.