Deuteronomy · chapter 4 · verse 2
Deuteronomy 4:2 in Kannada
ನಾನು ನಿಮಗೆ ಆಜ್ಞಾಪಿಸುವ ವಾಕ್ಯದ ಸಂಗಡ ಏನನ್ನೂ ಕೂಡಿಸಬೇಡಿರಿ; ಅದರಿಂದ ಏನನ್ನೂ ತೆಗೆಯಬೇಡಿರಿ; ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳಬೇಕು.
Naanu nimage aajnyaapisuva vaakyada sangada enannoo koodisabediri; adarinda enannoo tegeyabediri; naanu nimage aajnyaapisuvantha nimma devaraada kartana aajnyegalannu kaikollabeku.
Deuteronomy 4:2 in English
- King James Version (KJV)
- Ye shall not add unto the word which I command you, neither shall ye diminish [ought] from it, that ye may keep the commandments of the LORD your God which I command you.
- World English Bible (WEB)
- You shall not add to the word which I command you, neither shall you take away from it, that you may keep the commandments of the LORD your God which I command you.
- American Standard Version (ASV)
- Ye shall not add unto the word which I command you, neither shall ye diminish from it, that ye may keep the commandments of Jehovah your God which I command you.
- Bible in Basic English (BBE)
- Make no addition to the orders which I give you, and take nothing from them, but keep the orders of the Lord your God which I give you.
- Darby Translation (DBY)
- Ye shall not add to the word which I command you, neither shall ye take from it, that ye may keep the commandments of Jehovah your God which I command you.
- Webster's Bible (WBS)
- Ye shall not add to the word which I command you, neither shall ye diminish [aught] from it, that ye may keep the commandments of the LORD your God which I command you.
- Young's Literal Translation (YLT)
- Ye do not add to the word which I am commanding you, nor diminish from it, to keep the commands of Jehovah your God which I am commanding you.
Read in context
- 1ಹೀಗಿರುವದರಿಂದ ಈಗ ಇಸ್ರಾಯೇಲೇ, ನೀವು ಬದುಕಿ ನಿಮ್ಮ ಪಿತೃಗಳ ದೇವರಾದ ಕರ್ತನು ನಿಮಗೆ ಕೊಡುವ ದೇಶವನ್ನು ಪ್ರವೇಶಿಸಿ ಸ್ವತಂತ್ರಿಸಿಕೊಳ್ಳುವ ಹಾಗೆ ನಾನು ನಿಮಗೆ ಬೋಧಿಸುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿ ಅವುಗಳನ್ನು ಮಾಡಿರಿ.
- 2ನಾನು ನಿಮಗೆ ಆಜ್ಞಾಪಿಸುವ ವಾಕ್ಯದ ಸಂಗಡ ಏನನ್ನೂ ಕೂಡಿಸಬೇಡಿರಿ; ಅದರಿಂದ ಏನನ್ನೂ ತೆಗೆಯಬೇಡಿರಿ; ನಾನು ನಿಮಗೆ ಆಜ್ಞಾಪಿಸುವಂಥ ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನು ಕೈಕೊಳ್ಳಬೇಕು.
- 3ಬಾಳ್ಪೆಯೋರನ ವಿಷಯದಲ್ಲಿ ಕರ್ತನು ಮಾಡಿದವುಗಳನ್ನು ನಿಮ್ಮ ಕಣ್ಣುಗಳು ನೋಡಿದವು; ಬಾಳ್ಪೆ ಯೋರನನ್ನು ಹಿಂಬಾಲಿಸಿದ ಮನುಷ್ಯರನ್ನೆಲ್ಲಾ ನಿನ್ನ ದೇವರಾದ ಕರ್ತನು ನಿಮ್ಮ ಮಧ್ಯದಲ್ಲಿಂದ ನಾಶ ಮಾಡಿದನಲ್ಲವೇ?
- 4ಆದರೆ ನಿಮ್ಮ ದೇವರಾದ ಕರ್ತನಿಗೆ ಅಂಟಿಕೊಂಡವರಾದ ನೀವೆಲ್ಲರು ಇಂದು ಬದುಕುತ್ತೀರಿ.
Cross references
- Proverbs 30:6 ಜ್ಞಾನೋಕ್ತಿಗಳು 30:6ಆತನು ನಿನ್ನನ್ನು ಗದರಿಸುವಂತೆಯೂ ನೀನು ಸುಳ್ಳುಗಾರನೆಂದು ತೋರು ವಂತೆಯೂ ಆತನ ಮಾತುಗಳಿಗೆ ಯಾವದನ್ನು ಸೇರಿಸ ಬೇಡ.
- Deuteronomy 12:32 ಧರ್ಮೋಪದೇಶಕಾಂಡ 12:32ನಾನು ನಿನಗೆ ಆಜ್ಞಾಪಿಸುವ ಮಾತುಗಳನ್ನೆಲ್ಲಾ ಲಕ್ಷಿಸಿ ಕೈಕೊಳ್ಳಬೇಕು; ಅದಕ್ಕೆ ಕೂಡಿಸಬೇಡ; ಇಲ್ಲವೆ ಅದರಿಂದ ಕಡಿಮೆಮಾಡಬೇಡ.
- Revelation 22:18–19 ಪ್ರಕಟನೆ 22:18–19ಈ ಪುಸ್ತಕದ ಪ್ರವಾದನಾವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನಂ ದರೆ--ಯಾವನಾದರೂ ಇವುಗಳಿಗೆ ಕೂಡಿಸಿದರೆ ದೇವರು ಅವನಿಗೆ ಈ ಪುಸ್ತಕದಲ್ಲಿ ಬರೆದಿರುವ ಉಪ ದ್ರವಗಳನ್ನು ಕೂಡಿಸುವನು. ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ವಾಕ್ಯಗಳಿಂದ ತೆಗೆದು ಬಿಟ್ಟರೆ ಜೀವಗ್ರಂಥದಿಂದಲೂ ಪರಿಶುದ್ಧ ಪಟ್ಟಣ ದಿಂದಲೂ ಈ ಪುಸ್ತಕದಲ್ಲಿ ಬರೆದಿರುವವುಗಳಿಂದಲೂ ಅವನ ಪಾಲನ್ನು ದೇವರು ತೆಗೆದುಬಿಡುವನು.
- Joshua 1:7 ಯೆಹೋಶುವ 1:7ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣವೆಲ್ಲಾದರ ಪ್ರಕಾರ ನೀನು ಕೈಕೊಂಡು ನಡೆ ಯುವ ಹಾಗೆ ಬಲವಾಗಿರು, ಬಹು ಧೈರ್ಯದಿಂದಿರು, ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ ಅದನ್ನು (ನ್ಯಾಯಪ್ರಮಾಣವನ್ನು) ಬಿಟ್ಟು ಬಲ ಕ್ಕಾದರೂ ಎಡಕ್ಕಾದರೂ ತಿರುಗಬೇಡ.
- Matthew 5:18 ಮತ್ತಾಯನು 5:18ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Galatians 3:15 ಗಲಾತ್ಯದವರಿಗೆ 3:15ಸಹೊದರರೇ, ಮನುಷ್ಯ ರೀತಿಯಲ್ಲಿ ನಾನು ಮಾತನಾಡುತ್ತೇನೆ. ಸ್ಥಿರಪಡಿಸಿದ ಒಂದು ಒಡಂಬಡಿಕೆ ಯು ಕೇವಲ ಮನುಷ್ಯನದಾಗಿದ್ದರೂ ಅದನ್ನು ಯಾರೂ ರದ್ದು ಮಾಡುವದಿಲ್ಲ ಇಲ್ಲವೆ ಅದಕ್ಕೆ ಹೆಚ್ಚೇನೂ ಕೂಡಿಸುವದಿಲ್ಲ.
- Ecclesiastes 12:13 ಪ್ರಸಂಗಿ 12:13ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
- Mark 7:1–13 ಮಾರ್ಕನು 7:1–13ತರುವಾಯ ಫರಿಸಾಯರೂ ಶಾಸ್ತ್ರಿಗಳಲ್ಲಿ ಕೆಲವರೂ ಯೆರೂಸಲೇಮಿನಿಂದ ಆತನ ಬಳಿಗೆ ಕೂಡಿಬಂದರು. ಆಗ ಆತನ ಶಿಷ್ಯರಲ್ಲಿ ಕೆಲವರು ಅಶುದ್ಧವಾದ ಅಂದರೆ ತೊಳೆಯದಿರುವ ಕೈಗಳಿಂದ ರೊಟ್ಟಿ ತಿನ್ನುವದನ್ನು ಅವರು ನೋಡಿ ತಪ್ಪು ಕಂಡು ಹಿಡಿದರು. ಯಾಕಂದರೆ ಫರಿಸಾಯರು ಮತ್ತು ಯೆಹೂದ್ಯರೆಲ್ಲರು ಹಿರಿಯರ ಸಂಪ್ರದಾಯವನ್ನು ಅನುಸರಿಸುವವರಾಗಿ ತಮ್ಮ ಕೈಗಳನ್ನು ಅನೇಕ ಸಾರಿ ತೊಳೆದುಕೊಳ್ಳದ ಹೊರತು ಊಟಮಾಡುವದಿಲ್ಲ. ಅವರು ಪೇಟೆಯಿಂದ ಬಂದಾಗ ಸ್ನಾನ ಮಾಡದೆ ಊಟಮಾಡುವದಿಲ್ಲ; ಮತ್ತು ಅವರು ಬಟ್ಟಲುಗಳನ್ನು ಪಾತ್ರೆಗಳನ್ನು ಹಿತ್ತಾಳೆಯ ಪಾತ್ರೆಗಳನ್ನು ಮೇಜುಗಳನ್ನು ತೊಳೆಯುವಂಥ ಅನೇಕ ಆಚಾರಗಳನ್ನು ಮಾಡಿಕೊಂಡಿ ದ್ದರು. ತರುವಾಯ ಫರಿಸಾಯರೂ ಶಾಸ್ತ್ರಿಗಳೂ ಆತನಿಗೆ--ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯದ ಪ್ರಕಾರ ಕೈತೊಳಕೊಳ್ಳದೆ ಯಾಕೆ ರೊಟ್ಟಿ ತಿನ್ನುತ್ತಾರೆ ಎಂದು ಕೇಳಿದರು. ಆತನು ಪ್ರತ್ಯುತ್ತರವಾಗಿ ಅವರಿಗೆ --ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸು ತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರ ವಾಗಿದೆ; ಮನುಷ್ಯರ ಕಟ್ಟಳೆಗಳನ್ನು ಬೋಧನೆ ಗಳನ್ನಾಗಿ ಮಾಡಿ ಕಲಿಸುವದರಿಂದ ಅವರು ನನ್ನನ್ನು ಆರಾಧಿಸುವದು ವ್ಯರ್ಥವಾಗಿದೆ ಎಂದು ಬರೆಯಲ್ಪಟ್ಟ ಪ್ರಕಾರ ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ವಿಹಿತವಾಗಿ ಪ್ರವಾದಿಸಿದ್ದಾನೆ. ನೀವು ದೈವಾಜ್ಞೆ ಯನ್ನು ಬದಿಗೆ ಇಡುವದಕ್ಕಾಗಿ ಪಾತ್ರೆಗಳನ್ನು ಮತ್ತು ಬಟ್ಟಲುಗಳನ್ನು ತೊಳೆಯುವ ಮನುಷ್ಯರ ಅನೇಕ ಸಂಪ್ರದಾಯಗಳನ್ನು ಹಿಡಿದು ಅನುಸರಿಸುತ್ತೀರಿ ಅಂದನು. ಆತನು ಅವರಿಗೆ--ನೀವು ನಿಮ್ಮ ಸಂಪ್ರ ದಾಯವನ್ನು ಕೈಕೊಳ್ಳುವಂತೆ ದೈವಾಜ್ಞೆಯನ್ನು ಸಂಪೂರ್ಣವಾಗಿ ಅಸಡ್ಡೆ ಮಾಡುತ್ತೀರಿ. ಯಾಕಂದರೆ ಮೋಶೆಯು--ನಿನ್ನ ತಂದೆಯನ್ನು ನಿನ್ನ ತಾಯಿಯನ್ನು ಸನ್ಮಾನಿಸಬೇಕೆಂತಲೂ ಮತ್ತು--ತಂದೆಯನ್ನಾಗಲೀ ತಾಯಿಯನ್ನಾಗಲೀ ಶಪಿಸುವವನು ಸಾಯಲೇ ಬೇಕೆಂತಲೂ ಹೇಳಿದ್ದಾನೆ. ಆದರೆ ನೀವು--ಒಬ್ಬ ಮನುಷ್ಯನು ತನ್ನ ತಂದೆಗಾಗಲೀ ಅಥವಾ ತಾಯಿ ಗಾಗಲೀ--ನೀನು ನನ್ನಿಂದ ಹೊಂದಲಿಕ್ಕಿರುವ ಪ್ರಯೋಜನವು ಕೊರ್ಬಾನ್ (ಅಂದರೆ ಒಂದು ದಾನ) ಆಗಿದೆ ಎಂದು ಹೇಳಿದರೆ ಅವನು ಸ್ವತಂತ್ರ ನಾಗುವನು ಎಂದು ಅನ್ನುತ್ತೀರಿ; ಅವನು ತನ್ನ ತಂದೆಗಾದರೂ ತಾಯಿಗಾದರೂ ಏನನ್ನೂ ನೀವು ಮಾಡಗೊಡಿಸದೆ ನೀವು ಕಲಿಸಿರುವ ನಿಮ್ಮ ಸಂಪ್ರದಾಯದ ಮೂಲಕ ದೇವರ ವಾಕ್ಯವನ್ನು ನಿರರ್ಥಕಮಾಡುತ್ತೀರಿ, ಇಂಥ ಅನೇಕವಾದವುಗಳನ್ನು ನೀವು ಮಾಡುತ್ತೀರಿ ಅಂದನು.
- Matthew 15:2–9 ಮತ್ತಾಯನು 15:2–9ನಿನ್ನ ಶಿಷ್ಯರು ಹಿರಿಯರ ಸಂಪ್ರದಾಯ ವನ್ನು ಯಾಕೆ ಮಾರುತ್ತಾರೆ? ಯಾಕಂದರೆ ಅವರು ರೊಟ್ಟಿ ತಿನ್ನುವಾಗ ತಮ್ಮ ಕೈಗಳನ್ನು ತೊಳಕೊಳ್ಳುವದಿಲ್ಲ ಅಂದರು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವ ರಿಗೆ--ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಯಾಕೆ ಮಾರುತ್ತೀರಿ? ಯಾಕಂ ದರೆ ದೇವರು ಅಪ್ಪಣೆ ಕೊಟ್ಟು ಹೇಳಿದ್ದೇನಂದರೆ--ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು. ಮತ್ತು--ಯಾವನಾದರೂ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಶಪಿಸಿದರೆ ಅವನು ಸಾಯಲೇಬೇಕು ಎಂಬದೇ. ಆದರೆ ನೀವು--ಯಾವನಾದರೂ ತನ್ನ ತಂದೆಗಾಗಲೀ ತಾಯಿಗಾಗಲೀ-- ನನ್ನಿಂದ ನಿನಗೆ ಪ್ರಯೋಜನ ವಾಗತಕ್ಕದ್ದು ಕಾಣಿಕೆಯಾಯಿತು ಎಂದು ಹೇಳುವದಾ ದರೆ ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ. ಕಪಟಿಗಳೇ, ನಿಮ್ಮ ವಿಷಯವಾಗಿ ಯೆಶಾಯನು ಸರಿಯಾಗಿ ಪ್ರವಾದಿಸಿದನು; ಆದೇ ನಂದರೆ-- ಈ ಜನರು ತಮ್ಮ ಬಾಯಿಂದ ನನ್ನನ್ನು ಸಮಾಪಿಸಿ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ. ಅವರು ಮನುಷ್ಯರ ಆಜ್ಞೆಗಳನ್ನು ಬೋಧಿಸಿ ಕಲಿಸುವ ದರಿಂದ ನನ್ನನ್ನು ಆರಾಧಿಸುವದು ವ್ಯರ್ಥ ಎಂಬದೇ.
- Matthew 5:43 ಮತ್ತಾಯನು 5:43ನೀನು ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ಹಗೆಮಾಡಬೇಕು ಎಂದು ಹೇಳಿರು ವದನ್ನು ನೀವು ಕೇಳಿದ್ದೀರಿ.