Deuteronomy · chapter 4 · verse 28
Deuteronomy 4:28 in Kannada
ಅಲ್ಲಿ ನೀವು ಮನುಷ್ಯರ ಕೈಕೆಲಸವಾದ ಅಂದರೆ ನೋಡದೆಯೂ ಕೇಳದೆಯೂ ಉಣ್ಣದೆಯೂ ಮೂಸಿ ನೋಡದೆಯೂ ಇರುವಂಥ ಮರ ಕಲ್ಲುಗಳಾದ ದೇವರುಗಳನ್ನು ಸೇವಿಸುವಿರಿ.
Alli neevu manushyara kaikelasavaada andare nodadeyoo keladeyoo unnadeyoo moosi nodadeyoo iruvantha mara kallugalaada devarugalannu sevisuviri.
Deuteronomy 4:28 in English
- King James Version (KJV)
- And there ye shall serve gods, the work of men’s hands, wood and stone, which neither see, nor hear, nor eat, nor smell.
- World English Bible (WEB)
- There you will serve gods, the work of men’s hands, wood and stone, which neither see, nor hear, nor eat, nor smell.
- American Standard Version (ASV)
- And there ye shall serve gods, the work of men’s hands, wood and stone, which neither see, nor hear, nor eat, nor smell.
- Bible in Basic English (BBE)
- There you will be the servants of gods, made by men's hands, of wood and stone, having no power of seeing or hearing or taking food or smelling.
- Darby Translation (DBY)
- And ye shall there serve gods, the work of men's hands, wood and stone, which neither see, nor hear, nor eat, nor smell.
- Webster's Bible (WBS)
- And there ye shall serve gods, the work of men's hands, wood and stone, which neither see, nor hear, nor eat, nor smell.
- Young's Literal Translation (YLT)
- and ye have served there gods, work of man's hands, wood and stone, which see not, nor hear, nor eat, nor smell.
Read in context
- 26ನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ.
- 27ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
- 28ಅಲ್ಲಿ ನೀವು ಮನುಷ್ಯರ ಕೈಕೆಲಸವಾದ ಅಂದರೆ ನೋಡದೆಯೂ ಕೇಳದೆಯೂ ಉಣ್ಣದೆಯೂ ಮೂಸಿ ನೋಡದೆಯೂ ಇರುವಂಥ ಮರ ಕಲ್ಲುಗಳಾದ ದೇವರುಗಳನ್ನು ಸೇವಿಸುವಿರಿ.
- 29ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ.
- 30ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು
Cross references
- Deuteronomy 28:64 ಧರ್ಮೋಪದೇಶಕಾಂಡ 28:64ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.
- Jeremiah 16:13 ಯೆರೆಮೀಯ 16:13ಆದದರಿಂದ ನಾನು ನಿಮ್ಮನ್ನು ಈ ದೇಶದೊಳಗಿಂದ ಬಿಸಾಡಿ ನಿಮಗೂ ನಿಮ್ಮ ತಂದೆಗಳಿಗೂ ತಿಳಿಯದ ದೇಶಕ್ಕೆ ಎಸೆಯುವೆನು; ಅಲ್ಲಿ ನೀವು ರಾತ್ರಿ ಹಗಲು ಬೇರೆ ದೇವರುಗಳಿಗೆ ಸೇವೆಮಾಡುವಿರಿ ನಾನು ನಿಮಗೆ ಕನಿಕರ ತೋರಿಸುವದಿಲ್ಲ.
- Isaiah 46:7 ಯೆಶಾಯ 46:7ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.
- Deuteronomy 28:36 ಧರ್ಮೋಪದೇಶಕಾಂಡ 28:36ಕರ್ತನು ನಿನ್ನನ್ನೂ ನೀನು ನಿನ್ನ ಮೇಲೆ ಇರಿಸಿಕೊಳ್ಳುವ ಅರಸನನ್ನೂ ನೀನೂ ನಿನ್ನ ಪಿತೃಗಳೂ ಅರಿಯದ ಜನಾಂಗದ ಬಳಿಗೆ ಹೋಗ ಮಾಡುವನು; ಅಲ್ಲಿ ಮರವೂ ಕಲ್ಲೂ ಆಗಿರುವ ಬೇರೆ ದೇವರುಗಳನ್ನು ನೀನು ಸೇವಿಸುವಿ.
- Psalm 115:4–8 ಕೀರ್ತನೆಗಳು 115:4–8ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ. ಅವುಗಳಿಗೆ ಬಾಯಿ ಉಂಟು; ಮಾತಾಡುವದಿಲ್ಲ; ಕಣ್ಣುಗಳುಂಟು; ನೋಡು ವದಿಲ್ಲ. ಕಿವಿಗಳುಂಟು; ಕೇಳುವದಿಲ್ಲ. ಮೂಗು ಉಂಟು; ಮೂಸುವದಿಲ್ಲ. ಕೈಗಳುಂಟು; ಮುಟ್ಟುವ ದಿಲ್ಲ. ಕಾಲುಗಳುಂಟು; ನಡೆಯುವದಿಲ್ಲ. ತಮ್ಮ ಗಂಟಲಿನಿಂದ ಮಾತನಾಡುವದಿಲ್ಲ, ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವ ರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
- Ezekiel 20:39 ಯೆಹೆಜ್ಕೇಲನು 20:39ನಿಮ್ಮ ವಿಷಯ ವಾಗಿ ಓ ಇಸ್ರಾಯೇಲಿನ ಮನೆತನದವರೇ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ನನಗೆ ಕಿವಿಗೊಡದಿದ್ದರೆ ಹೋಗಿ ಇನ್ನು ಮೇಲೆಯೂ ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ; ಆದರೆ ನಿಮ್ಮ ದಾನಗ ಳಿಂದಲೂ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.
- Isaiah 44:9 ಯೆಶಾಯ 44:9ಕೆತ್ತಿದ ವಿಗ್ರಹವನ್ನು ಮಾಡುವವರೆಲ್ಲರೂ ವ್ಯರ್ಥ ರೇ; ಅವರ ಮನೋರಂಜಕ ವಸ್ತುಗಳು ಯಾತಕ್ಕೂ ಬಾರವು; ಅವರು ನೋಡದೆ ಇಲ್ಲವೆ ತಿಳಿಯದೆ, ನಾಚಿಕೆಗೆ ಗುರಿಯಾಗುವಂತೆ ಅವುಗಳೇ ಅವರಿಗೆ ಸ್ವಂತ ಸಾಕ್ಷಿಗಳಾಗಿರುವವು.
- 1 Samuel 26:19 1 ಸಮುವೇಲನು 26:19ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಕರ್ತನು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ ಕಾಣಿಕೆಯನ್ನು ಅಂಗೀಕರಿಸಲಿ; ಆದರೆ ಮನುಷ್ಯರ ಮಕ್ಕಳು ಇದನ್ನು ಮಾಡಿದರೆ ಅವರು ಕರ್ತನ ಮುಂದೆ ಶಪಿಸಲ್ಪಡಲಿ. ಯಾಕಂದರೆ ನೀನು ಹೋಗಿ ಅನ್ಯದೇವರುಗಳನ್ನು ಸೇವಿಸು ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಕರ್ತನ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.
- Psalm 135:15–18 ಕೀರ್ತನೆಗಳು 135:15–18ಅನ್ಯಜನಾಂಗಗಳ ವಿಗ್ರಹಗಳು ಬೆಳ್ಳಿ ಬಂಗಾರ ದಿಂದ ಮಾಡಿದ ಮನುಷ್ಯನ ಕೈ ಕೆಲಸವಾಗಿವೆ. ಅವು ಗಳಿಗೆ ಬಾಯಿ ಉಂಟು, ಮಾತನಾಡುವದಿಲ್ಲ. ಕಣ್ಣುಗ ಳುಂಟು, ನೋಡುವುದಿಲ್ಲ. ಕಿವಿಗಳುಂಟು, ಕೇಳುವ ದಿಲ್ಲ. ಅವುಗಳ ಬಾಯಿಯಲ್ಲಿ ಶ್ವಾಸವೇನೂ ಇಲ್ಲ. ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸ ವಿಡುವವರೆಲ್ಲರೂ ಅವುಗಳ ಹಾಗೆಯೇ ಇದ್ದಾರೆ.
- Isaiah 45:20 ಯೆಶಾಯ 45:20ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.
- Acts 7:42 ಅಪೊಸ್ತಲರ ಕೃತ್ಯಗಳು 7:42ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರಗಣ ವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ-- ಓ ಇಸ್ರಾಯೇಲ್ ಮನೆತನದವರೇ, ನೀವು ಅರಣ್ಯದಲ್ಲಿ ನಾಲ್ವತ್ತು ವರುಷ ಪ್ರಾಣಿಗಳನ್ನು ಕೊಂದು ಬಲಿಗಳನ್ನು ನನಗೆ ಅರ್ಪಿಸುತ್ತಿದ್ದಿರೆ
- Jeremiah 10:3 ಯೆರೆಮೀಯ 10:3ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ