Deuteronomy · chapter 4 · verse 31
Deuteronomy 4:31 in Kannada
ಆತನ ಮಾತಿಗೆ ವಿಧೇಯರಾದರೆ (ನಿನ್ನ ದೇವರಾದ ಕರ್ತನು ಕರುಣೆಯುಳ್ಳ ದೇವರೇ;) ಆತನು ನಿನ್ನನ್ನು ಕೈಬಿಡುವದಿಲ್ಲ; ಇಲ್ಲವೆ ನಾಶಮಾಡುವದಿಲ್ಲ; ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನು ಮರೆಯುವದಿಲ್ಲ.
Aatana maatige vidheyaraadare (ninna devaraada kartanu karuneyulla devare;) aatanu ninnannu kaibiduvadilla; illave naashamaaduvadilla; aatanu ninna pitrugalige pramaanamaadida odambadikeyannu mareyuvadilla.
Deuteronomy 4:31 in English
- King James Version (KJV)
- (For the LORD thy God [is] a merciful God;) he will not forsake thee, neither destroy thee, nor forget the covenant of thy fathers which he sware unto them.
- World English Bible (WEB)
- For the LORD your God is a merciful God. He will not fail you nor destroy you, nor forget the covenant of your fathers which he swore to them.
- American Standard Version (ASV)
- for Jehovah thy God is a merciful God; he will not fail thee, neither destroy thee, nor forget the covenant of thy fathers which he sware unto them.
- Bible in Basic English (BBE)
- Because the Lord your God is a God of mercy, he will not take away his help from you or let destruction overtake you, or be false to the agreement which he made by an oath with your fathers.
- Darby Translation (DBY)
- — for Jehovah thy God is a merciful God, — he will not forsake thee, neither destroy thee, nor forget the covenant of thy fathers which he swore unto them.
- Webster's Bible (WBS)
- (For the LORD thy God [is] a merciful God;) he will not forsake thee, neither destroy thee, nor forget the covenant of thy fathers, which he swore to them.
- Young's Literal Translation (YLT)
- for a merciful God [is] Jehovah thy God; He doth not fail thee, nor destroy thee, nor forget the covenant of thy fathers, which He hath sworn to them.
Read in context
- 29ಅಲ್ಲಿಂದ ನಿನ್ನ ದೇವರಾದ ಕರ್ತನನ್ನು ಹುಡುಕಿದರೆ ಆತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಹುಡುಕಿದರೆ, ಆತ ನನ್ನು ಕಂಡುಕೊಳ್ಳುವಿ.
- 30ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು
- 31ಆತನ ಮಾತಿಗೆ ವಿಧೇಯರಾದರೆ (ನಿನ್ನ ದೇವರಾದ ಕರ್ತನು ಕರುಣೆಯುಳ್ಳ ದೇವರೇ;) ಆತನು ನಿನ್ನನ್ನು ಕೈಬಿಡುವದಿಲ್ಲ; ಇಲ್ಲವೆ ನಾಶಮಾಡುವದಿಲ್ಲ; ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನು ಮರೆಯುವದಿಲ್ಲ.
- 32ನಿನ್ನ ಮುಂದೆ ಇದ್ದ ಪೂರ್ವದ ದಿವಸಗಳನ್ನು ದೇವರು ಭೂಮಿಯ ಮೇಲೆ ಮನುಷ್ಯನನ್ನು ಸೃಷ್ಟಿಸಿ ದಂದಿನಿಂದ ವಿಚಾರಿಸು; ಆಕಾಶದ ಈ ಕಡೆಯಿಂದ ಆ ಕಡೆಯವರೆಗೂ ವಿಚಾರಿಸು; ಇದರಂತೆ ದೊಡ್ಡ ಕಾರ್ಯ ಉಂಟಾಯಿತೇ? ಇಲ್ಲವೆ ಇದರಂತೆ ಕೇಳ ಲ್ಪಟ್ಟಿತೇ?
- 33ನೀನು ಕೇಳಿದಂತೆ ಬೆಂಕಿಯೊಳಗಿಂದ ಮಾತನಾಡುವ ದೇವರ ಶಬ್ದವನ್ನು ಕೇಳಿ ಬದುಕಿದ ಜನರು ಇದ್ದಾರೆಯೇ?
Cross references
- Deuteronomy 31:8 ಧರ್ಮೋಪದೇಶಕಾಂಡ 31:8ಇದಲ್ಲದೆ ಕರ್ತನು ತಾನೇ ನಿನ್ನ ಮುಂದೆ ಹೋಗುತ್ತಾನೆ; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ತೊರೆಯುವದಿಲ್ಲ, ವಿಸರ್ಜಿಸುವದಿಲ್ಲ; ನೀನು ಭಯಪಡಬೇಡ; ಅಂಜಿಕೊಳ್ಳಬೇಡ ಎಂದು ಹೇಳಿದನು.
- Psalm 116:5 ಕೀರ್ತನೆಗಳು 116:5ಕರ್ತನು ಕೃಪೆಯೂ ನೀತಿಯೂ ಉಳ್ಳವನು; ಹೌದು, ನಮ್ಮ ದೇವರು ಅಂತಃಕರಣವುಳ್ಳವನು.
- Nehemiah 9:31 ನೆಹೆಮೀಯ 9:31ಆದರೂ ನೀನು ನಿನ್ನ ಅಧಿಕವಾದ ಕರುಣೆಯ ನಿಮಿತ್ತ ಅವರನ್ನು ಸಂಪೂರ್ಣ ನಾಶಮಾಡಿ ಬಿಡ ಲಿಲ್ಲ; ಅವರನ್ನು ಕೈಬಿಡಲೂ ಇಲ್ಲ. ಯಾಕಂದರೆ ನೀನು ಕೃಪೆಯೂ ಕರುಣೆಯುಳ್ಳ ದೇವರಾಗಿದ್ದೀ.
- Jonah 4:2 ಯೋನ 4:2ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಓ ಕರ್ತನೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನೇ ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು; ನೀನು ಕರುಣೆಯೂ ಕನಿಕರವೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳದೇವರೆಂದೂ ಕೇಡಿನ ವಿಷಯವಾಗಿ ಪಶ್ಚಾತ್ತಾಪ ಪಡುವಾತನೆಂದೂ ನನಗೆ ತಿಳಿದಿತ್ತು.
- 2 Chronicles 30:9 2 ಪೂರ್ವಕಾಲವೃತ್ತಾಂತ 30:9ನೀವು ಕರ್ತನ ಕಡೆಗೆ ತಿರುಗಿದರೆ ನಿಮ್ಮ ಸಹೋದ ರರೂ ನಿಮ್ಮ ಮಕ್ಕಳೂ ತಿರಿಗಿ ಈ ದೇಶಕ್ಕೆ ಬರುವ ಹಾಗೆ ತಮ್ಮನ್ನು ಸೆರೆಯಾಗಿ ಒಯ್ದವರ ಸಮ್ಮುಖದಲ್ಲಿ ಕರುಣೆಯನ್ನು ಹೊಂದುವರು. ನಿಮ್ಮ ದೇವರಾದ ಕರ್ತನು ಕೃಪೆಯೂ ಕರುಣೆಯೂ ಉಳ್ಳವನಾಗಿದ್ದಾನೆ, ನೀವು ಆತನ ಕಡೆಗೆ ತಿರುಗಿದರೆ ಆತನು ನಿಮ್ಮ ಕಡೆ ಯಿಂದ ತನ್ನ ಮುಖ ತೊಲಗಿಸನು ಎಂದು ಹೇಳಿದರು.
- Leviticus 26:42 ಯಾಜಕಕಾಂಡ 26:42ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವ ರಿಗೆ ಮಾಡಿದ ನನ್ನ ಒಡಂಬಡಿಕೆಯನ್ನೂ ಅವರ ದೇಶವನ್ನೂ ಜ್ಞಾಪಕಮಾಡಿಕೊಳ್ಳುವೆನು.
- Exodus 34:6–7 ವಿಮೋಚನಕಾಂಡ 34:6–7ಕರ್ತನು ಅವನೆದುರಿಗೆ ಹಾದು ಹೋಗುತ್ತಾ--ಕರ್ತನು, ಕರ್ತನಾದ ದೇವರು, ಕರುಣಾಳುವೂ ಕೃಪಾಳುವೂ ದೀರ್ಘಶಾಂತನೂ ಒಳ್ಳೇತನದಲ್ಲಿ ಮತ್ತು ಸತ್ಯದಲ್ಲಿ ಸಮೃದ್ಧಿಯಾದಾತನೂ ಸಾವಿರ (ತಲೆಗಳ) ವರೆಗೂ ಕರುಣೆ ತೋರಿಸುವಾತನೂ ದೋಷಾಪರಾಧ ವನ್ನೂ ಪಾಪವನ್ನೂ ಕ್ಷಮಿಸುವಾತನೂ ಅಪರಾಧಿ ಯನ್ನು ನಿರಪರಾಧಿಯೆಂದು ಎಣಿಸದವನೂ ತಂದೆಗಳ ದೋಷವನ್ನು ಮಕ್ಕಳ ಮೇಲೆಯೂ ಮೊಮ್ಮಕ್ಕಳ ಮೇಲೆಯೂ ಮೂರನೆಯ ಮತ್ತು ನಾಲ್ಕನೆಯ ತಲೆ ಗಳವರೆಗೂ ವಿಚಾರಿಸುವಾತನೂ ಎಂದು ಪ್ರಕಟಿಸಿ ಕೊಂಡನು.
- Deuteronomy 31:6 ಧರ್ಮೋಪದೇಶಕಾಂಡ 31:6ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು.
- Psalm 145:8–9 ಕೀರ್ತನೆಗಳು 145:8–9ಕರ್ತನು ಕೃಪಾಳುವೂ ಅಂತಃಕರಣವೂ ದೀರ್ಘಶಾಂತಿಯೂ ಮಹಾಕರುಣೆಯುಳ್ಳವನೂ ಆಗಿದ್ದಾನೆ. ಕರ್ತನು ಸರ್ವರಿಗೂ ಒಳ್ಳೆಯವನು; ಆತನ ಅಂತಃಕರಣವು ಆತನ ಎಲ್ಲಾ ಕೆಲಸಗಳ ಮೇಲೆ ಅದೆ.
- Psalm 111:9 ಕೀರ್ತನೆಗಳು 111:9ತನ್ನ ಜನರಿಗೆ ವಿಮೋಚನೆಯನ್ನು ಕಳುಹಿ ಸಿದನು; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಆಜ್ಞಾಪಿಸಿದನು; ಆತನ ಹೆಸರು ಪರಿಶುದ್ಧವೂ ಘನವೂ ಆಗಿದೆ.ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
- Joshua 1:5 ಯೆಹೋಶುವ 1:5ಆದರೆ ನೀನು ಜೀವಿಸುವ ದಿವಸಗಳಲ್ಲೆಲ್ಲಾ ಯಾವನೂ ನಿನ್ನ ಮುಂದೆ ನಿಲ್ಲಲಾರನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಕೈಬಿಡುವುದಿಲ್ಲ, ಇಲ್ಲವೆ ನಿನ್ನನ್ನು ತೊರೆಯುವದಿಲ್ಲ.
- Psalm 111:5 ಕೀರ್ತನೆಗಳು 111:5ಆತನು ತನಗೆ ಭಯಪಡುವ ವರಿಗೆ ಆಹಾರ ಕೊಟ್ಟಿದ್ದಾನೆ; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವನು.