Deuteronomy · chapter 4 · verse 38
Deuteronomy 4:38 in Kannada
ನಿನಗಿಂತ ದೊಡ್ಡದಾದ ನಿನಗಿಂತ ಬಲಿಷ್ಠ ವಾದ ಜನಾಂಗಗಳನ್ನು ನಿನ್ನ ಮುಂದೆ ಓಡಿಸಿ ನಿನ್ನನ್ನು ಒಳಗೆ ಬರಮಾಡಿ ಈ ದಿನ ಇರುವಂತೆ ನಿನಗೆ ಅವರ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟನು.
Ninaginta doddadaada ninaginta balishtha vaada janaangagalannu ninna munde odisi ninnannu olage baramaadi ee dina iruvante ninage avara deshavannu svaastyavaagi kottanu.
Deuteronomy 4:38 in English
- King James Version (KJV)
- To drive out nations from before thee greater and mightier than thou [art], to bring thee in, to give thee their land [for] an inheritance, as [it is] this day.
- World English Bible (WEB)
- to drive out nations from before you greater and mightier than you, to bring you in, to give you their land for an inheritance, as it is today.
- American Standard Version (ASV)
- to drive out nations from before thee greater and mightier than thou, to bring thee in, to give thee their land for an inheritance, as at this day.
- Bible in Basic English (BBE)
- Driving out before you nations greater and stronger than you, to take you into their land and give it to you for your heritage, as at this day.
- Darby Translation (DBY)
- to dispossess nations from before thee greater and mightier than thou art, to bring thee in, to give thee their land for an inheritance, as it is this day.
- Webster's Bible (WBS)
- To drive out nations from before thee, greater and mightier than thou [art] , to bring thee in, to give thee their land [for] an inheritance, as [it is] this day.
- Young's Literal Translation (YLT)
- to dispossess nations greater and stronger than thou, from thy presence, to bring thee in to give to thee their land — an inheritance, as [at] this day.
Read in context
- 36ಆತನು ನಿನ್ನ ಶಿಕ್ಷಣಕ್ಕಾಗಿ ಆಕಾಶದೊಳಗಿಂದ ತನ್ನ ಶಬ್ದವನ್ನು ನಿನಗೆ ಕೇಳ ಮಾಡಿದನು; ಭೂಮಿಯ ಮೇಲೆ ತನ್ನ ಮಹಾಅಗ್ನಿ ಯನ್ನು ನಿನಗೆ ತೋರಿಸಿದನು; ಬೆಂಕಿಯೊಳಗಿಂದ ಆತನ ಮಾತುಗಳನ್ನು ಕೇಳಿದಿ.
- 37ಆತನು ನಿನ್ನ ಪಿತೃಗಳನ್ನು ಪ್ರೀತಿಮಾಡಿದ್ದರಿಂದ ಅವರ ತರುವಾಯ ಅವರ ಸಂತತಿಯನ್ನು ಆದು ಕೊಂಡು ನಿನ್ನನ್ನು ತನ್ನ ದೃಷ್ಟಿಯಲ್ಲಿ ತನ್ನ ಮಹಾ ಬಲ ದೊಂದಿಗೆ ಐಗುಪ್ತದೊಳಗಿಂದ ಹೊರಗೆ ಬರಮಾಡಿ ದನು.
- 38ನಿನಗಿಂತ ದೊಡ್ಡದಾದ ನಿನಗಿಂತ ಬಲಿಷ್ಠ ವಾದ ಜನಾಂಗಗಳನ್ನು ನಿನ್ನ ಮುಂದೆ ಓಡಿಸಿ ನಿನ್ನನ್ನು ಒಳಗೆ ಬರಮಾಡಿ ಈ ದಿನ ಇರುವಂತೆ ನಿನಗೆ ಅವರ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟನು.
- 39ಹೀಗಿರುವ ದರಿಂದ ಮೇಲಿನ ಆಕಾಶದಲ್ಲಿಯೂ ಕೆಳಗಿನ ಭೂಮಿ ಯಲ್ಲಿಯೂ ಕರ್ತನೇ ದೇವರೆಂದು ಮತ್ತೊಬ್ಬನಿಲ್ಲ ವೆಂದು ಈಹೊತ್ತು ತಿಳುಕೊಂಡು ಮನಸ್ಸಿಗೆ ತಂದು ಕೋ.
- 40ನಿನಗೂ ನಿನ್ನ ತರುವಾಯ ನಿನ್ನ ಮಕ್ಕಳಿಗೂ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀನು ಬಹಳ ದಿವಸವಿರುವ ಹಾಗೆಯೂ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ನಿಯಮ ಗಳನ್ನೂ ಆಜ್ಞೆಗಳನ್ನೂ ಕಾಪಾಡು ಎಂದು ಹೇಳಿದನು.
Cross references
- Deuteronomy 7:1 ಧರ್ಮೋಪದೇಶಕಾಂಡ 7:1ನೀನು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ಬರಮಾಡಿದಾಗ ಆತನು ನಿನಗಿಂತ ದೊಡ್ಡ ವರೂ ಬಲಿಷ್ಠರೂ ಆದ ಏಳು ಜನಾಂಗಗಳನ್ನು ಅಂದರೆ ಹಿತ್ತಿಯರನ್ನೂ ಗಿರ್ಗಾಷಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಈ ಪ್ರಕಾರ ಬಹಳ ಜನಾಂಗ ಗಳನ್ನು ನಿನ್ನ ಮುಂದೆ ಹೊರಡಿಸಿ
- Exodus 23:27–28 ವಿಮೋಚನಕಾಂಡ 23:27–28ನನ್ನ ಭಯವನ್ನು ನಿಮ್ಮ ಮುಂದೆ ಕಳುಹಿಸಿ ನೀವು ಸೇರುವ ಜನರನ್ನೆಲ್ಲಾ ನಾಶಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿ ಸುವಂತೆ ಮಾಡುವೆನು. ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳುಹಿಸುವೆನು.
- Deuteronomy 11:23 ಧರ್ಮೋಪದೇಶಕಾಂಡ 11:23ಕರ್ತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಮುಂದೆ ಹೊರಡಿಸುವನು; ನೀವು ನಿಮಗಿಂತ ಬಲವುಳ್ಳ ದೊಡ್ಡ ಜನಾಂಗಗಳನ್ನು ಸ್ವಾಧೀನ ಮಾಡಿಕೊಳ್ಳುವಿರಿ.
- Psalm 44:2–3 ಕೀರ್ತನೆಗಳು 44:2–3ನೀನು ನಿನ್ನ ಕೈಯಿಂದ ಜನಾಂಗಗಳನ್ನು ಹೊರಡಿಸಿ (ನಮ್ಮ ತಂದೆಗಳನ್ನು) ನೆಟ್ಟಿದ್ದೀ; ಜನರನ್ನು ಬಾಧೆಪಡಿಸಿ ಅವರನ್ನು ಹೊರಗೆ ಹಾಕಿದಿ. ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ.
- Deuteronomy 9:1–5 ಧರ್ಮೋಪದೇಶಕಾಂಡ 9:1–5ಓ ಇಸ್ರಾಯೇಲೇ, ಕೇಳು; ನೀನು ಹೋಗಿ ನಿನಗಿಂತ ದೊಡ್ಡದಾದ ಬಲಿಷ್ಠ ಜನಾಂಗ ಗಳನ್ನೂ ಆಕಾಶದ ವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ ಅನಾಕ್ಯರ ಮಕ್ಕಳ ಮುಂದೆ ಯಾರು ನಿಲ್ಲುವರು ಎಂದು ನೀನು ಕೇಳಿ ತಿಳುಕೊಂಡಂಥ ಆ ಮಹಾ ಎತ್ತರವಾದ ಜನವಾಗಿರುವ ಅನಾಕ್ಯರ ಮಕ್ಕಳನ್ನೂ ಸ್ವತಂತ್ರಿಸಿಕೊಳ್ಳುವದಕ್ಕೆ ಈಹೊತ್ತು ಯೊರ್ದನನ್ನು ದಾಟುತ್ತೀ. ಹೀಗಿರುವದರಿಂದ ನೀನು ಈಹೊತ್ತು ತಿಳಿದುಕೊಳ್ಳತಕ್ಕದ್ದೇನಂದರೆ--ನಿನ್ನ ದೇವ ರಾದ ಕರ್ತನೇ ನಿನ್ನ ಮುಂದೆ ದಾಟಿಹೋಗುತ್ತಾನೆ; ಆತನು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡು ವನು; ಆತನು ಅವರನ್ನು ನಿನ್ನ ಮುಂದೆ ತಗ್ಗಿಸುವನು; ಈ ಪ್ರಕಾರ ಅವರನ್ನು ಸ್ವಾಧೀನಪಡಿಸಿಕೊಂಡು ಕರ್ತನು ನಿನಗೆ ಹೇಳಿದ ಹಾಗೆ ಅವರನ್ನು ಬೇಗ ನಾಶಮಾಡುವಿ. ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ತಳ್ಳಿಹಾಕಿದಾಗ--ನನ್ನ ನೀತಿಯ ನಿಮಿತ್ತ ಈ ದೇಶವನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ಕರ್ತನು ನನ್ನನ್ನು ಕರಕೊಂಡು ಬಂದಿದ್ದಾನೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳ ಬಾರದು; ಆ ಜನಾಂಗಗಳ ಕೆಟ್ಟತನದ ನಿಮಿತ್ತ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ. ನಿನ್ನ ನೀತಿಗೋಸ್ಕರವೂ ನಿನ್ನ ಹೃದಯದ ಯಥಾರ್ಥತೆ ಗೋಸ್ಕರವೂ ನೀನು ಅವರ ದೇಶವನ್ನು ಸ್ವತಂತ್ರಿಸಿ ಕೊಳ್ಳುವದಕ್ಕೆ ಬರುವದಿಲ್ಲ; ಆ ಜನಾಂಗಗಳ ಕೆಟ್ಟತನ ಕ್ಕೋಸ್ಕರವೂ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
- Deuteronomy 8:18 ಧರ್ಮೋಪದೇಶಕಾಂಡ 8:18ನಿನ್ನ ದೇವ ರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳಬೇಕು; ಈ ಹೊತ್ತು ಇರುವಂತೆ ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ತನ್ನ ಒಡಂಬಡಿಕೆಯನ್ನು ಸ್ಥಾಪಿಸುವ ಹಾಗೆ ಆಸ್ತಿಯನ್ನು ಸಂಪಾದಿಸುವ ಬಲವನ್ನು ನಿನಗೆ ಕೊಡುವಾತನು ಆತನೇ.
- Joshua 3:10 ಯೆಹೋಶುವ 3:10ಯೆಹೋಶು ವನು--ಜೀವವುಳ್ಳ ದೇವರು ನಿಮ್ಮ ಮಧ್ಯದಲ್ಲಿರು ವದನ್ನೂ ಆತನು ಕಾನಾನ್ಯರು ಹಿತ್ತಿಯರು ಹಿವ್ವಿಯರು ಪೆರಿಜೀಯರು ಗಿರ್ಗಾಷಿಯರು ಅಮೋರಿಯರು ಯೊಬೂಸಿಯರು ಇವರನ್ನು ನಿಮ್ಮ ಮುಂದೆ ನಿಶ್ಚಯ ವಾಗಿ ಓಡಿಸಿ ಬಿಡುವದನ್ನೂ ನೀವು ತಿಳಿಯುವ ಹಾಗೆ