Deuteronomy · chapter 5 · verse 10
Deuteronomy 5:10 in Kannada
ಆದರೆ ನನ್ನನ್ನು ಪ್ರೀತಿ ಮಾಡಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಸಾವಿರಗಳ ವರೆಗೆ ಕರುಣೆ ತೋರಿಸುತ್ತೇನೆ.
Aadare nannannu preeti maadi nanna aajnyegalannu kaikolluvavarige saaviragala varege karune torisuttene.
Deuteronomy 5:10 in English
- King James Version (KJV)
- And shewing mercy unto thousands of them that love me and keep my commandments.
- World English Bible (WEB)
- and showing loving kindness to thousands of those who love me and keep my commandments.
- American Standard Version (ASV)
- and showing lovingkindness unto thousands of them that love me and keep my commandments.
- Bible in Basic English (BBE)
- And I will have mercy through a thousand generations on those who have love for me and keep my laws.
- Darby Translation (DBY)
- and shewing mercy unto thousands of them that love me and keep my commandments.
- Webster's Bible (WBS)
- And showing mercy to thousands of them that love me, and keep my commandments.
- Young's Literal Translation (YLT)
- and doing kindness to thousands, to those loving Me, and to those keeping My commands.
Read in context
- 8ಮೇಲಿನ ಆಕಾಶ ದಲ್ಲಾಗಲಿ ಕೆಳಗಿನ ಭೂಮಿಯಲ್ಲಾಗಲಿ ಭೂಮಿಯ ಕೆಳಗಿನ ನೀರುಗಳಲ್ಲಾಗಲಿ ಇರುವಂಥ ಯಾವ ದೊಂದರ ರೂಪದ ವಿಗ್ರಹವನ್ನು ನಿನಗೆ ಮಾಡಿ ಕೊಳ್ಳಬಾರದು,
- 9ಅವುಗಳಿಗೆ ಅಡ್ಡಬೀಳಲೂಬಾರದು, ಸೇವಿಸಲೂಬಾರದು. ಯಾಕಂದರೆ ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆಮಾಡುವವರಲ್ಲಿ ಪಿತೃಗಳ ಅಕ್ರಮವನ್ನು ಮಕ್ಕಳ ಮೇಲೆ ಮೂರನೆಯ ನಾಲ್ಕನೆಯ ತಲಾಂತರದ ವರೆಗೆ ನ್ಯಾಯತೀರಿಸುತ್ತೇನೆ.
- 10ಆದರೆ ನನ್ನನ್ನು ಪ್ರೀತಿ ಮಾಡಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಸಾವಿರಗಳ ವರೆಗೆ ಕರುಣೆ ತೋರಿಸುತ್ತೇನೆ.
- 11ನಿನ್ನ ದೇವರಾದ ಕರ್ತನ ಹೆಸರನ್ನು ವ್ಯರ್ಥವಾಗಿ ಎತ್ತಬೇಡ; ಕರ್ತನು ತನ್ನ ಹೆಸರನ್ನು ವ್ಯರ್ಥವಾಗಿ ಎತ್ತುವವನನ್ನು ನಿರ್ದೋಷಿಯೆಂದು ಎಣಿಸುವದಿಲ್ಲ.
- 12ನಿನ್ನ ದೇವರಾದ ಕರ್ತನು ನಿನಗೆ ಆಜ್ಞಾಪಿಸಿದಂತೆ ಸಬ್ಬತ್ ದಿವಸವನ್ನು ಪರಿಶುದ್ಧಮಾಡುವದಕ್ಕೆ ಅದನ್ನು ಕಾಪಾಡು.
Cross references
- Romans 8:28 ರೋಮಾಪುರದವರಿಗೆ 8:28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
- 1 John 1:7 1 ಯೋಹಾನನು 1:7ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ.
- Jeremiah 32:18 ಯೆರೆಮೀಯ 32:18ನೀನು ಸಾವಿರಾರು ತಲೆಗಳ ವರೆಗೆ ಪ್ರೀತಿ, ದಯೆ ತೋರಿಸಿ ತಂದೆಗಳ ಅಕ್ರಮವನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸಲ್ಲಿಸುವವನಾಗಿದ್ದೀ; ಮಹತ್ವ ವುಳ್ಳವನೂ ಪರಾಕ್ರಮವುಳ್ಳ ದೇವರೂ ಸೈನ್ಯಗಳ ಕರ್ತನೂ ಎಂಬದು ಆತನ ಹೆಸರು.
- Daniel 9:4 ದಾನಿಯೇಲನು 9:4ನಾನು ಕರ್ತನಾದ ನನ್ನ ದೇವರಿಗೆ ಪ್ರಾರ್ಥಿಸಿ ಮತ್ತು ಅರಿಕೆಮಾಡಿ--ಓ ಕರ್ತನೇ, ಅತಿ ಭಯಂಕರ ವಾದ ಮಹಾ ದೇವರೇ, ನನ್ನನ್ನು ಪ್ರೀತಿಮಾಡಿ ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವವರಿಗೆ ಒಡಂಬಡಿಕೆ ಯನ್ನೂ ಕೃಪೆಯನ್ನೂ ತೋರಿಸಿ ಕಾಪಾಡುವಾತನೇ,
- John 15:14 ಯೋಹಾನನು 15:14ನಾನು ನಿಮಗೆ ಆಜ್ಞಾಪಿಸಿರುವವುಗಳನ್ನು ಮಾಡಿದರೆ ನೀವು ನನ್ನ ಸ್ನೇಹಿತರಾಗಿರುವಿರಿ.
- Deuteronomy 6:5–6 ಧರ್ಮೋಪದೇಶಕಾಂಡ 6:5–6ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ಪೂರ್ಣ ಪ್ರಾಣದಿಂದಲೂ ಪೂರ್ಣಬಲದಿಂದಲೂ ಪ್ರೀತಿ ಮಾಡಬೇಕು. ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಈ ಮಾತುಗಳು ನಿನ್ನ ಹೃದಯದಲ್ಲಿ ಇರಬೇಕು.
- Matthew 7:21–27 ಮತ್ತಾಯನು 7:21–27ಕರ್ತನೇ, ಕರ್ತನೇ ಎಂದು ನನಗೆ ಹೇಳುವ ಪ್ರತಿಯೊಬ್ಬನು ಪರಲೋಕರಾಜ್ಯದಲ್ಲಿ ಪ್ರವೇಶಿಸು ವದಿಲ್ಲ; ಆದರೆ ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ಮಾಡುವವನೇ ಅದರಲ್ಲಿ ಪ್ರವೇಶಿ ಸುವನು. ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು. ಆಗ ನಾನು ಅವರಿಗೆ--ನಾನು ನಿಮ್ಮನ್ನು ಎಂದಿಗೂ ಅರಿಯೆನು; ದುಷ್ಟತನ ಮಾಡುವ ನೀವು ನನ್ನಿಂದ ತೊಲಗಿ ಹೋಗಿರಿ ಎಂದು ಹೇಳಿಬಿಡುವೆನು. ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು. ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆದರೂ ಅದು ಬೀಳಲಿಲ್ಲ; ಯಾಕಂದರೆ ಅದರ ಅಸ್ತಿವಾರವು ಬಂಡೆಯ ಮೇಲೆ ಹಾಕಲ್ಪಟ್ಟಿತು. ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು. ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
- James 1:25 ಯಾಕೋಬನು 1:25ಆದರೆ ಬಿಡುಗಡೆ ಯನ್ನುಂಟುಮಾಡುವ ಪರಿಪೂರ್ಣವಾದ ನಿಯಮ ವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು (ವಾಕ್ಯವನ್ನು) ಕೇಳಿ ಮರೆತುಹೋಗುವವ ನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ಕ್ರಿಯೆಯಿಂದ ಧನ್ಯನಾಗುವನು.
- Galatians 5:6 ಗಲಾತ್ಯದವರಿಗೆ 5:6ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
- John 14:15 ಯೋಹಾನನು 14:15ನೀವು ನನ್ನನ್ನು ಪ್ರೀತಿಸುವದಾದರೆ ನನ್ನ ಆಜ್ಞೆ ಗಳನ್ನು ಕೈಕೊಳ್ಳಿರಿ.
- John 14:21–23 ಯೋಹಾನನು 14:21–23ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಅನುಸರಿಸುವವನೇ ನನ್ನನ್ನು ಪ್ರೀತಿಸುವವನು; ನನ್ನನ್ನು ಪ್ರೀತಿಸುವವನನ್ನು ನನ್ನ ತಂದೆಯೂ ಪ್ರೀತಿಸುವನು. ನಾನು ಅವನನ್ನು ಪ್ರೀತಿಸಿ ಅವನಿಗೆ ನನ್ನನ್ನು ವ್ಯಕ್ತಪಡಿಸಿ ಕೊಳ್ಳುವೆನು ಎಂದು ಹೇಳಿದನು. ಯೂದನು (ಇಸ್ಕರಿಯೋತನಲ್ಲ)--ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಕಾಣಿಸಿ ಕೊಳ್ಳುವದು ಹೇಗೆ ಎಂದು ಆತನನ್ನು ಕೇಳಿದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.
- Deuteronomy 10:12–13 ಧರ್ಮೋಪದೇಶಕಾಂಡ 10:12–13ಈಗ ಇಸ್ರಾಯೇಲೇ, ನಿನ್ನ ಕರ್ತನಾದ ದೇವರಿಗೆ ಭಯಪಟ್ಟು ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಕೊಂಡು ಆತನನ್ನು ಪ್ರೀತಿಮಾಡಿ ನಿನ್ನ ಕರ್ತನಾದ ದೇವರಿಗೆ ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಸೇವೆಮಾಡಿ ನಾನು ಈ ಹೊತ್ತು ನಿನ್ನ ಮೇಲಿಗಾಗಿ ನಿನಗೆ ಆಜ್ಞಾಪಿಸುವ ಕರ್ತನ ಆಜ್ಞೆಗಳನ್ನೂ ಆತನ ನಿಯಮಗಳನ್ನೂ ಅನು ಸರಿಸುವದೇ ಹೊರತು ಮತ್ತೇನು ನಿನ್ನ ದೇವರಾಗಿ ರುವ ಕರ್ತನು ನಿನ್ನಿಂದ ಕೇಳುತ್ತಾನೆ?