Deuteronomy · chapter 5 · verse 2
Deuteronomy 5:2 in Kannada
ನಮ್ಮ ದೇವರಾದ ಕರ್ತನು ಹೋರೇ ಬಿನಲ್ಲಿ ನಮ್ಮ ಸಂಗಡ ಆ ಒಡಂಬಡಿಕೆಯನ್ನು ಮಾಡಿದನು.
Namma devaraada kartanu hore binalli namma sangada aa odambadikeyannu maadidanu.
Deuteronomy 5:2 in English
- King James Version (KJV)
- The LORD our God made a covenant with us in Horeb.
- World English Bible (WEB)
- The LORD our God made a covenant with us in Horeb.
- American Standard Version (ASV)
- Jehovah our God made a covenant with us in Horeb.
- Bible in Basic English (BBE)
- The Lord our God made an agreement with us in Horeb.
- Darby Translation (DBY)
- Jehovah our God made a covenant with us in Horeb.
- Webster's Bible (WBS)
- The LORD our God made a covenant with us in Horeb.
- Young's Literal Translation (YLT)
- Jehovah our God made with us a covenant in Horeb;
Read in context
- 1ಆಗ ಮೋಶೆಯು ಇಸ್ರಾಯೇಲ್ಯರನ್ನೆಲ್ಲಾ ಕರೆದು ಅವರಿಗೆ--ಓ ಇಸ್ರಾಯೇಲೇ, ನಾನು ಈಹೊತ್ತು ನಿಮಗೆ ಹೇಳುವ ನಿಯಮಗಳನ್ನೂ ನ್ಯಾಯಗಳನ್ನೂ ಕೇಳಿರಿ; ಅವುಗಳನ್ನು ಕಲಿತು ಕೈಕೊಂಡು ನಡೆಯಬೇಕು.
- 2ನಮ್ಮ ದೇವರಾದ ಕರ್ತನು ಹೋರೇ ಬಿನಲ್ಲಿ ನಮ್ಮ ಸಂಗಡ ಆ ಒಡಂಬಡಿಕೆಯನ್ನು ಮಾಡಿದನು.
- 3ಕರ್ತನು ಆ ಒಡಂಬಡಿಕೆಯನ್ನು ನಮ್ಮ ಪಿತೃಗಳ ಸಂಗಡ ಅಲ್ಲ, ನಮ್ಮ ಸಂಗಡವೇ ಮಾಡಿದನು. ನಾವೆಲ್ಲರೂ ಈಹೊತ್ತು ಇಲ್ಲಿ ಜೀವಿತರಾಗಿದ್ದೇವೆ.
- 4ಮುಖಾಮುಖಿಯಾಗಿ ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಮಾತನಾಡಿದನು.
Cross references
- Deuteronomy 4:23 ಧರ್ಮೋಪದೇಶಕಾಂಡ 4:23ನಿಮ್ಮ ದೇವರಾದ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತು ನಿಮ್ಮ ದೇವರಾದ ಕರ್ತನು ಬೇಡವೆಂದು ಕೆತ್ತಿದ ಯಾವ ರೂಪದ ವಿಗ್ರಹ ವನ್ನೂ ಮಾಡಿಕೊಳ್ಳದ ಹಾಗೆ ಜಾಗ್ರತೆಯಾಗಿರ್ರಿ.
- Exodus 19:5–8 ವಿಮೋಚನಕಾಂಡ 19:5–8ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ. ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು. ಆಗ ಮೋಶೆಯು ಬಂದು ಜನರ ಹಿರಿಯರನ್ನು ಕರೆದು ಕರ್ತನು ತನಗೆ ಆಜ್ಞಾಪಿಸಿದ ಈ ಮಾತುಗ ಳನ್ನೆಲ್ಲಾ ಅವರ ಮುಂದೆ ಇಟ್ಟನು. ಜನರೆಲ್ಲಾ ಏಕವಾಗಿ ಉತ್ತರ ಕೊಟ್ಟು--ಕರ್ತನು ಹೇಳಿದವುಗಳನ್ನೆಲ್ಲಾ ಮಾಡುತ್ತೇವೆ ಎಂದು ಹೇಳಿದರು. ಆಗ ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿರಿಗಿ ಹೇಳಿದನು.
- Exodus 24:8 ವಿಮೋಚನಕಾಂಡ 24:8ತರು ವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ--ಇಗೋ, ಈ ಎಲ್ಲಾ ಮಾತುಗಳ ವಿಷಯದಲ್ಲಿ ಕರ್ತನು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತವು ಇದೇ ಅಂದನು.
- Hebrews 9:19–23 ಇಬ್ರಿಯರಿಗೆ 9:19–23ಮೋಶೆಯು ಪ್ರತಿಯೊಂದು ವಿಧಿಯನ್ನು ನ್ಯಾಯಪ್ರಮಾಣದ ಪ್ರಕಾರ ಜನರೆಲ್ಲರಿಗೆ ಹೇಳಿದ ಮೇಲೆ ನೀರು, ಕೆಂಪು ಉಣ್ಣೇ, ಹಿಸ್ಸೋಪು ಇವು ಗಳೊಂದಿಗೆ ಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಗ್ರಂಥದ ಮೇಲೆ ಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿ-- ಇದು ದೇವರು ನಿಮಗೋಸ್ಕರ ವಿಧಿಸಿದ ಒಡಂಬಡಿಕೆಯ ರಕ್ತವಾಗಿದೆ ಎಂದು ಹೇಳಿದನು. ಇದಲ್ಲದೆ ಗುಡಾರದ ಮೇಲೆಯೂ ಸೇವೆಗೆ ಬೇಕಾಗಿರುವ ಎಲ್ಲಾ ಉಪ ಕರಣಗಳ ಮೇಲೆಯೂ ರಕ್ತವನ್ನು ಪ್ರೋಕ್ಷಿಸಿದನು. ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ. ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.
- Hebrews 8:6–13 ಇಬ್ರಿಯರಿಗೆ 8:6–13ಆದರೆ ಆತನು ಅದಕ್ಕಿಂತ ಶ್ರೇಷ್ಠವಾದ ಸೇವೆಯನ್ನು ಹೊಂದಿದ ವನಾಗಿದ್ದಾನೆ; ಉತ್ತಮವಾದ ವಾಗ್ದಾನಗಳ ಮೇಲೆ ಸ್ಥಾಪಿತವಾದ ಶ್ರೇಷ್ಠವಾದ ಒಡಂಬಡಿಕೆಗೆ ಸಹ ಮಧ್ಯಸ್ಥನಾಗಿದ್ದಾನೆ. ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲ ದ್ದಾಗಿದ್ದರೆ ಎರಡನೆಯದಕ್ಕೆ ಅವಕಾಶವು ಇರುತ್ತಿರಲಿಲ್ಲ. ಆತನು ಆದರ ಮೇಲೆ ತಪ್ಪುಹೊರಿಸಿ ಹೀಗೆಂ ದನು--ಇಗೋ, ನಾನು ಇಸ್ರಾಯೇಲ್ ಮನೆತನ ದೊಂದಿಗೂ ಯೆಹೂದ ಮನೆತನದೊಂದಿಗೂ ಹೊಸ ದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿ ಕೊಳ್ಳುವ ದಿನಗಳು ಬರುವವು. ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶ ದೊಳಗಿಂದ ಕರಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾ ದದರಿಂದ ನಾನು ಅವರನ್ನು ಲಕ್ಷ್ಯಕ್ಕೆ ತರಲಿಲ್ಲ ಎಂದು ಕರ್ತನು ಹೇಳುತ್ತಾನೆ. ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ ಇದಲ್ಲದೆ ಪ್ರತಿ ಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದ ರನಿಗೂ--ಕರ್ತನನ್ನು ತಿಳಿದುಕೊಳ್ಳಿರಿ ಎಂದು ಉಪ ದೇಶಿಸುವದಿಲ್ಲ; ಯಾಕಂದರೆ ಚಿಕ್ಕವರಿಂದ ದೊಡ್ಡವರ ವರೆಗೂ ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅನೀತಿಯ ವಿಷಯವಾಗಿ ಕರುಣೆಯುಳ್ಳವನಾಗಿದ್ದು ಅವರ ಪಾಪಗಳನ್ನೂ ಅಪರಾಧಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯು ತ್ತಾನೆ.ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ. ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.