Deuteronomy · chapter 6 · verse 11
Deuteronomy 6:11 in Kannada
ನೀನು ತುಂಬದಿದ್ದ ಎಲ್ಲಾ ಒಳ್ಳೆಯವುಗಳು ತುಂಬಿರುವ ಮನೆ ಗಳನ್ನೂ ಅಗೆಯದಿರುವ ಬಾವಿಗಳನ್ನೂ ನೆಡದ ದ್ರಾಕ್ಷೇ ತೋಟಗಳನ್ನೂ ಇಪ್ಪೇತೋಟಗಳನ್ನೂ ನಿನಗೆ ಕೊಡ ಲಾಗಿ ನೀನು ತಿಂದು ತೃಪ್ತಿಯಾದಾಗ
Neenu tumbadidda ellaa olleyavugalu tumbiruva mane galannoo ageyadiruva baavigalannoo nedada draakshe totagalannoo ippetotagalannoo ninage koda laagi neenu tindu truptiyaadaaga
Deuteronomy 6:11 in English
- King James Version (KJV)
- And houses full of all good [things], which thou filledst not, and wells digged, which thou diggedst not, vineyards and olive trees, which thou plantedst not; when thou shalt have eaten and be full;
- World English Bible (WEB)
- and houses full of all good things which you didn’t fill, and cisterns dug out which you didn’t dig, vineyards and olive trees which you didn’t plant, and you shall eat and be full;
- American Standard Version (ASV)
- and houses full of all good things, which thou filledst not, and cisterns hewn out, which thou hewedst not, vineyards and olive-trees, which thou plantedst not, and thou shalt eat and be full;
- Bible in Basic English (BBE)
- And houses full of good things not stored up by you, and places for storing water which you did not make, and vine-gardens and olive-trees not of your planting; and you have taken food and are full;
- Darby Translation (DBY)
- and houses full of everything good which thou filledst not, and wells digged which thou diggedst not, vineyards and oliveyards which thou plantedst not, and thou shalt have eaten and shalt be full;
- Webster's Bible (WBS)
- And houses full of all good [things] , which thou didst not fill, and wells digged, which thou didst not dig, vineyards and olive-trees, which thou didst not plant; when thou shalt have eaten and be full;
- Young's Literal Translation (YLT)
- and houses full of all good things which thou hast not filled, and wells digged which thou hast not digged, vineyards and olive-yards which thou hast not planted, and thou hast eaten, and been satisfied;
Read in context
- 9ಅವುಗಳನ್ನು ನಿನ್ನ ಮನೆಯ ಕಂಬಗಳ ಮೇಲೆಯೂ ನಿನ್ನ ಬಾಗಲುಗಳ ಮೇಲೆಯೂ ಬರೆಯಬೇಕು.
- 10ಇದಲ್ಲದೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನನ್ನು ಸೇರಿಸಿ ನೀನು ಕಟ್ಟದ ದೊಡ್ಡದಾದ ಒಳ್ಳೇ ಪಟ್ಟಣಗಳನ್ನೂ
- 11ನೀನು ತುಂಬದಿದ್ದ ಎಲ್ಲಾ ಒಳ್ಳೆಯವುಗಳು ತುಂಬಿರುವ ಮನೆ ಗಳನ್ನೂ ಅಗೆಯದಿರುವ ಬಾವಿಗಳನ್ನೂ ನೆಡದ ದ್ರಾಕ್ಷೇ ತೋಟಗಳನ್ನೂ ಇಪ್ಪೇತೋಟಗಳನ್ನೂ ನಿನಗೆ ಕೊಡ ಲಾಗಿ ನೀನು ತಿಂದು ತೃಪ್ತಿಯಾದಾಗ
- 12ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ನಿನ್ನನ್ನು ಹೊರಗೆ ಬರ ಮಾಡಿದ ಕರ್ತನನ್ನು ಮರೆಯದ ಹಾಗೆ ನೋಡಿ ಕೋ.
- 13ನಿನ್ನ ದೇವರಾದ ಕರ್ತನಿಗೆ ನೀನು ಭಯಪಡ ಬೇಕು; ಆತನನ್ನು ಸೇವಿಸಬೇಕು, ಆತನ ಹೆಸರಿನಲ್ಲಿ ಪ್ರಮಾಣ ಮಾಡಬೇಕು.
Cross references
- Deuteronomy 7:12–18 ಧರ್ಮೋಪದೇಶಕಾಂಡ 7:12–18ನೀವು ಈ ನ್ಯಾಯಗಳನ್ನು ಕೇಳಿ ಕಾಪಾಡಿ ನಡೆದು ಕೊಂಡರೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗ ಳಿಗೆ ಪ್ರಮಾಣಮಾಡಿದ ಒಡಂಬಡಿಕೆಯನ್ನೂ ಕರುಣೆ ಯನ್ನೂ ನಿನಗೋಸ್ಕರ ನೆರವೇರಿಸುವನು. ಆತನು ನಿನ್ನನ್ನು ಪ್ರೀತಿಮಾಡಿ ಆಶೀರ್ವದಿಸಿ ಹೆಚ್ಚಿಸುವನು; ನಿನಗೆ ಕೊಡುತ್ತೇನೆಂದು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನ ಗರ್ಭದ ಫಲ ವನ್ನೂ ಭೂಮಿಯ ಹುಟ್ಟುವಳಿಯನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಪಶುಗಳನ್ನೂ ನಿನ್ನ ಕುರಿಮಂದೆಗಳನ್ನೂ ಆಶೀರ್ವದಿಸುವನು. ಎಲ್ಲಾ ಜನಗಳಿಗಿಂತಲೂ ನೀನು ಆಶೀರ್ವದಿಸಲ್ಪಟ್ಟವನಾ ಗಿರುವಿ; ನಿಮ್ಮೊಳಗೆ ಸ್ತ್ರೀಯರಲ್ಲಾಗಲಿ ಪುರುಷರ ಲ್ಲಾಗಲಿ ಪಶುಗಳಲ್ಲಾಗಲಿ ಬಂಜೆತನವು ಇರುವದಿಲ್ಲ. ಕರ್ತನು ಎಲ್ಲಾ ರೋಗಗಳನ್ನು ನಿನ್ನಿಂದ ತೆಗೆದು ಬಿಡುವನು; ನಿನಗೆ ತಿಳಿದಿರುವ ಐಗುಪ್ತದ ಕೆಟ್ಟ ರೋಗಗಳನ್ನೆಲ್ಲಾ ನಿನ್ನ ಮೇಲೆ ಬರಮಾಡದೆ ನಿನ್ನನ್ನು ಹಗೆಮಾಡುವವರೆಲ್ಲರ ಮೇಲೆ ಅವುಗಳನ್ನು ಬರ ಮಾಡುವನು. ನಿನ್ನ ದೇವರಾದ ಕರ್ತನು ನಿನಗೆ ಒಪ್ಪಿಸುವ ಜನಗಳನ್ನೆಲ್ಲಾ ನೀನು ಸಂಹರಿಸಿಬಿಡುವಿ; ಅವರ ಮೇಲೆ ನೀನು ಕಟಾಕ್ಷವಿಡಬಾರದು; ಇಲ್ಲವೆ ಅವರ ದೇವರು ಗಳನ್ನು ಸೇವಿಸಬಾರದು; ಅದು ನಿನಗೆ ಉರುಲಾ ಗುವದು. ಈ ಜನಾಂಗಗಳು ನನಗಿಂತ ಹೆಚ್ಚಾದವರಾ ಗಿದ್ದಾರೆ, ನಾನು ಹೇಗೆ ಅವರನ್ನು ವಶಮಾಡಿಕೊಳ್ಳಲಿ ಎಂದು ನಿನ್ನ ಹೃದಯದಲ್ಲಿ ಅಂದುಕೊಂಡು ನೀನು ಅವರಿಗೆ ಭಯಪಡಬೇಡ; ನಿನ್ನ ದೇವರಾದ ಕರ್ತನು ಫರೋಹನಿಗೂ ಎಲ್ಲಾ ಐಗುಪ್ತಕ್ಕೂ ಮಾಡಿದ್ದನು
- Deuteronomy 8:10–20 ಧರ್ಮೋಪದೇಶಕಾಂಡ 8:10–20ನೀನು ತಿಂದು ತೃಪ್ತಿ ಹೊಂದಿದಾಗ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಉತ್ತಮ ದೇಶದಲ್ಲಿ ಆತನನ್ನು ಸ್ತುತಿಸಬೇಕು. ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ಆಜ್ಞೆ ನ್ಯಾಯ ನಿಯಮಗಳನ್ನು ಕಾಪಾಡದವರೂ ನಿನ್ನ ದೇವರಾದ ಕರ್ತನನ್ನು ಮರೆಯದವರೂ ಆಗಬೇಡಿರಿ. ನೀನು ತಿಂದು ತೃಪ್ತಿಹೊಂದಿದಾಗಲೂ ಒಳ್ಳೇ ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಮಾಡುವಾಗಲೂ ನಿನ್ನ ಪಶು ಕುರಿಗಳು ಹೆಚ್ಚಿದಾಗಲೂ ಬೆಳ್ಳಿ ಬಂಗಾರ ನಿನಗೆ ಹೆಚ್ಚಿದಾಗಲೂ ನಿನಗಿರುವಂಥದ್ದೆಲ್ಲಾ ಹೆಚ್ಚಿದಾ ಗಲೂ ನಿನ್ನ ಹೃದಯವು ಉಬ್ಬಿಕೊಳ್ಳದ ಹಾಗೆಯೂ ನಿನ್ನನ್ನು ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ, ಅಗ್ನಿ ಸರ್ಪಗಳೂ ಚೇಳುಗಳೂ ಬರವೂ ಉಳ್ಳ ನೀರಿಲ್ಲದ ಆ ಮಹಾ ಭಯಂಕರವಾದ ಅರಣ್ಯದಲ್ಲಿ ನಿನ್ನನ್ನು ನಡಿಸಿದಂಥ, ಬಿಳೀಕಲ್ಲಿನ ಬಂಡೆಯೊಳಗಿಂದ ನಿನಗೆ ನೀರು ಬರ ಮಾಡಿದಂಥ, ನಿನ್ನನ್ನು ಕುಂದಿಸಿ ಶೋಧಿಸಿ ಕಡೆಯಲ್ಲಿ ನಿನಗೆ ಒಳ್ಳೇದನ್ನು ಮಾಡುವಂತೆ, ನಿನ್ನ ಪಿತೃಗಳು ಅರಿಯದ ಮನ್ನವನ್ನು ಅರಣ್ಯದಲ್ಲಿ ನಿನಗೆ ತಿನ್ನಿಸಿ ದಂಥ ನಿನ್ನ ದೇವರಾದ ಕರ್ತನನ್ನು ಮರೆತು-- ನನ್ನ ಬಲವೇ ಮತ್ತು ನನ್ನ ಕೈಯ ಸಾಮರ್ಥ್ಯವೇ ನನಗೆ ಈ ಆಸ್ತಿಯನ್ನು ಸಂಪಾದಿಸಿತೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳದ ಹಾಗೆ ನೋಡಿಕೋ. ನಿನ್ನ ದೇವ ರಾದ ಕರ್ತನನ್ನು ಜ್ಞಾಪಕಮಾಡಿಕೊಳ್ಳಬೇಕು; ಈ ಹೊತ್ತು ಇರುವಂತೆ ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ತನ್ನ ಒಡಂಬಡಿಕೆಯನ್ನು ಸ್ಥಾಪಿಸುವ ಹಾಗೆ ಆಸ್ತಿಯನ್ನು ಸಂಪಾದಿಸುವ ಬಲವನ್ನು ನಿನಗೆ ಕೊಡುವಾತನು ಆತನೇ. ನೀನು ಹೇಗಾದರೂ ನಿನ್ನ ದೇವರಾದ ಕರ್ತನನ್ನು ಮರೆತು ಬೇರೆ ದೇವರುಗಳನ್ನು ಹಿಂಬಾಲಿಸಿ ಅವುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ ನೀವು ನಿಶ್ಚಯವಾಗಿ ನಾಶವಾಗುವಿರೆಂದು ನಿಮಗೆ ವಿರೋಧ ವಾಗಿ ಈಹೊತ್ತು ಸಾಕ್ಷಿ ಹೇಳುತ್ತೇನೆ.ನೀವು ನಿಮ್ಮ ದೇವರಾದ ಕರ್ತನ ಮಾತಿಗೆ ವಿಧೇಯರಾಗದ ಕಾರಣ ಕರ್ತನು ನಿಮ್ಮ ಮುಂದೆ ನಾಶಮಾಡುವ ಜನಾಂಗಗಳ ಹಾಗೆಯೇ ನೀವು ನಾಶವಾಗುವಿರಿ. ನೀವು ನಿಮ್ಮ ದೇವರಾದ ಕರ್ತನ ಮಾತಿಗೆ ವಿಧೇಯರಾಗದ ಕಾರಣ ಕರ್ತನು ನಿಮ್ಮ ಮುಂದೆ ನಾಶಮಾಡುವ ಜನಾಂಗಗಳ ಹಾಗೆಯೇ ನೀವು ನಾಶವಾಗುವಿರಿ.
- Ezekiel 16:10–20 ಯೆಹೆಜ್ಕೇಲನು 16:10–20ಇದಲ್ಲದೆ ನಾನು ಕಸೂ ತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲ ಪ್ರಾಣಿಯ ಜೋಡುಗಳನ್ನು ಕೊಟ್ಟೆನು, ನಯವಾದ ನಾರುಮಡಿ ಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು. ನಾನು ಆಭರಣಗಳಿಂದಲೂ ನಿನ್ನನ್ನು ಅಲಂಕರಿಸಿದೆನು; ನಾನು ನಿನ್ನ ಕೈಗಳಿಗೆ ಕಡಗ ಗಳನ್ನು, ನಿನ್ನ ಕೊರಳಿಗೆ ಸರವನ್ನು ಹಾಕಿದೆನು. ನಿನ್ನ ಹಣೆಯ ಮೇಲೆ ರತ್ನಾಭರಣವನ್ನೂ ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ ನಿನ್ನ ತಲೆಯ ಮೇಲೆ ಶೃಂಗಾರ ಕಿರೀಟವನ್ನೂ ಇಟ್ಟೆನು. ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಯವಾದ ಹಿಟ್ಟನ್ನೂ ಜೇನನ್ನೂ ಎಣ್ಣೆಯನ್ನೂ ತಿನ್ನುತ್ತಿದ್ದೆ, ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ. ಇದಲ್ಲದೆ, ನಿನ್ನ ಸೌಂದ ರ್ಯದಿಂದ ನಿನ್ನ ಕೀರ್ತಿಯು ಅನ್ಯಜನಾಂಗಗಳಲ್ಲಿ ಹಬ್ಬಿತು; ಯಾಕಂದರೆ ನಾನು ನಿನ್ನ ಮೇಲೆ ಇಟ್ಟ ಸಂಪೂರ್ಣ ವೈಭವದಿಂದಲೇ ಎಂದು ದೇವರಾದ ಕರ್ತನು ಹೇಳುತ್ತಾನೆ. ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸ ವಿಟ್ಟು ನಿನ್ನ ಕೀರ್ತಿಯ ನಿಮಿತ್ತವಾಗಿ ಸೂಳೆತನ ಮಾಡಿದೆ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿವಿಾರಿ ಹಾದರತನ ಮಾಡಿದೆ; ಒಬ್ಬೊಬ್ಬನಿಗೂ ಒಳಗಾದೆ. ನಿನ್ನ ವಸ್ತ್ರಗಳನ್ನು ತೆಗೆದುಕೊಂಡು ಚಿತ್ರ ವಿಚಿತ್ರ ಮಾಡಿ ಅಲಂಕರಿಸಿಕೊಂಡು ಪೂಜಾಸ್ಥಳದಲ್ಲಿ ವ್ಯಭಿಚಾರ ಮಾಡಿದೆ, ಇದು ನಡೆಯತಕ್ಕದ್ದಲ್ಲ ಮತ್ತು ನಡೆಯಬಾರದಂಥ ಕೆಲಸವಾಗಿದೆ. ಇದಲ್ಲದೆ ನಾನು ನಿನಗೆ ಬೆಳ್ಳಿ ಬಂಗಾರದಿಂದ ಮಾಡಿಸಿಕೊಟ್ಟಿದ್ದ ನಿನ್ನ ಅಂದವಾದ ಆಭರಣಗಳನ್ನು ತೆಗೆದು ಅವುಗಳಿಂದ ಪುರುಷ ರೂಪಗಳನ್ನು ಮಾಡಿಕೊಂಡು ಅದರ ಸಂಗಡ ವ್ಯಭಿಚಾರ ಮಾಡಿದಿ. ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಅವರಿಗೆ ಹೊದಿಸಿ ನನ್ನ ಎಣ್ಣೆಯನ್ನೂ ಧೂಪ ವನ್ನೂ ಅವರ ಮುಂದೆ ಇಟ್ಟೆ. ನಾನು ನಿನಗೆ ನನ್ನ ಆಹಾರವನ್ನೂ ನಿನಗೆ ನಯವಾದ ಹಿಟ್ಟನ್ನೂ ಎಣ್ಣೆ ಮತ್ತು ಜೇನುಗಳನ್ನೂ ಸುವಾಸನೆಗಾಗಿ ಕೊಟ್ಟೆ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ ಎಂದು ದೇವರಾದ ಕರ್ತನು ಹೇಳುತ್ತಾನೆ. ಇದಾದ ಮೇಲೆ ನನಗೆ ಹುಟ್ಟಿದ್ದ ನನ್ನ ಕುಮಾರರನ್ನೂ ಕುಮಾರ್ತೆ ಯರನ್ನೂ ಅವರ ಆಹಾರಕ್ಕಾಗಿ ಅರ್ಪಿಸಿದಿ. ಈ ನಿನ್ನ ವ್ಯಭಿಚಾರ ಸಾಮಾನ್ಯವಾದದ್ದಲ್ಲ,
- Deuteronomy 32:15 ಧರ್ಮೋಪದೇಶಕಾಂಡ 32:15ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
- Jeremiah 2:31–32 ಯೆರೆಮೀಯ 2:31–32ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ. ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.
- Judges 3:7 ನ್ಯಾಯಸ್ಥಾಪಕರು 3:7ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತು ಬಾಳ ನನ್ನೂ ತೋಪುಗಳನ್ನೂ ಸೇವಿಸಿದರು.
- Proverbs 30:8–9 ಜ್ಞಾನೋಕ್ತಿಗಳು 30:8–9ವ್ಯರ್ಥತ್ವವನ್ನೂ ಸುಳ್ಳುಗಳನ್ನೂ ನನ್ನಿಂದ ದೂರವಾಗಿ ತೆಗೆದುಹಾಕು. ಬಡತನವಾಗಲಿ ಐಶ್ವರ್ಯವಾಗಲಿ ನನಗೆ ಕೊಡಬೇಡ; ನನಗೆ ತಕ್ಕಷ್ಟು ಆಹಾರವನ್ನು ಭೋಜನ ಮಾಡಿಸು; ಇಲ್ಲವಾದರೆ ನಾನು ಸಂತೃಪ್ತನಾಗಿ ನಿನ್ನನ್ನು ನಿರಾಕರಿಸಿ--ಕರ್ತನು ಯಾರು ಎಂದು ಹೇಳಿಯೇನು? ಇಲ್ಲವೆ ನಾನು ಬಡವನಾಗಿ ಕದ್ದುಕೊಂಡು ದೇವರ ನಾಮವನ್ನು ಅಯೋಗ್ಯವಾಗಿ ಎತ್ತೇನು.
- Matthew 19:23–24 ಮತ್ತಾಯನು 19:23–24ತರುವಾಯ ಯೇಸು ತನ್ನ ಶಿಷ್ಯರಿಗೆ-- ಐಶ್ವರ್ಯ ವಂತನು ಪರಲೋಕ ರಾಜ್ಯದಲ್ಲಿ ಸೇರುವದು ಕಷ್ಟ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ತಿರಿಗಿ ನಾನು ನಿಮಗೆ ಹೇಳುವದೇನಂದರೆ-- ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಸೂಜಿಯ ಕಣ್ಣಿನೊಳಗೆ ಒಂಟೆಯು ನುಗ್ಗುವದು ಸುಲಭ ಅಂದನು.
Original words (Hebrew)
- houses · H1004בַּיִת bayith
- full · H4392מָלֵא mâlêʼ
- good · H2898טוּב ṭûwb
- filledst · H4390מָלֵא mâlêʼ
- wells · H953בּוֹר bôwr
- digged · H2672חָצַב châtsab
- diggedst · H2672חָצַב châtsab
- vineyards · H3754כֶּרֶם kerem
- trees · H2132זַיִת zayith
- plantedst · H5193נָטַע nâṭaʻ
- eaten · H398אָכַל ʼâkal
- full · H7646שָׂבַע sâbaʻ