Deuteronomy · chapter 6 · verse 17
Deuteronomy 6:17 in Kannada
ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ಆತನ ಸಾಕ್ಷಿಗಳನ್ನೂ ಆತನ ನಿಯಮ ಗಳನ್ನೂ ಎಚ್ಚರಿಕೆಯಿಂದ ಕೈಕೊಳ್ಳಬೇಕು.
Nimma devaraada kartana aajnyegalannoo aatanu ninage aajnyaapisida aatana saakshigalannoo aatana niyama galannoo echcharikeyinda kaikollabeku.
Deuteronomy 6:17 in English
- King James Version (KJV)
- Ye shall diligently keep the commandments of the LORD your God, and his testimonies, and his statutes, which he hath commanded thee.
- World English Bible (WEB)
- You shall diligently keep the commandments of the LORD your God, and his testimonies, and his statutes, which he has commanded you.
- American Standard Version (ASV)
- Ye shall diligently keep the commandments of Jehovah your God, and his testimonies, and his statutes, which he hath commanded thee.
- Bible in Basic English (BBE)
- Keep with care the orders of the Lord your God, and his rules and his laws which he has given you;
- Darby Translation (DBY)
- Ye shall diligently keep the commandments of Jehovah your God, and his testimonies, and his statutes, which he hath commanded thee.
- Webster's Bible (WBS)
- Ye shall diligently keep the commandments of the LORD your God, and his testimonies, and his statutes, which he hath commanded thee.
- Young's Literal Translation (YLT)
- ye do diligently keep the commands of Jehovah your God, and His testimonies, and His statutes which He hath commanded thee,
Read in context
- 15(ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ರೋಷವುಳ್ಳ ದೇವರೇ; ನಿನ್ನ ದೇವ ರಾದ ಕರ್ತನ ಕೋಪವು ನಿನ್ನ ಮೇಲೆ ಉರಿಯಲು ಆತನು ನಿನ್ನನ್ನು ಭೂಮಿಯ ಮೇಲಿಂದ ನಾಶ ಮಾಡುವನು.)
- 16ನೀವು ಮಸ್ಸದಲ್ಲಿ ಶೋಧಿಸಿದ ಹಾಗೆ ನಿಮ್ಮ ದೇವರಾದ ಕರ್ತನನ್ನು ಶೋಧಿಸಬೇಡಿರಿ.
- 17ನಿಮ್ಮ ದೇವರಾದ ಕರ್ತನ ಆಜ್ಞೆಗಳನ್ನೂ ಆತನು ನಿನಗೆ ಆಜ್ಞಾಪಿಸಿದ ಆತನ ಸಾಕ್ಷಿಗಳನ್ನೂ ಆತನ ನಿಯಮ ಗಳನ್ನೂ ಎಚ್ಚರಿಕೆಯಿಂದ ಕೈಕೊಳ್ಳಬೇಕು.
- 18ನಿನಗೆ ಒಳ್ಳೇದಾಗುವ ಹಾಗೆಯೂ ಕರ್ತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ಆ ಒಳ್ಳೇ ದೇಶವನ್ನು ನೀನು ಪ್ರವೇಶಿಸಿ ಸ್ವತಂತ್ರಿಸಿಕೊಂಡು
- 19ಕರ್ತನು ಹೇಳಿದ ಪ್ರಕಾರ ನಿನ್ನ ಎಲ್ಲಾ ಶತ್ರುಗಳನ್ನು ನಿನ್ನ ಮುಂದೆ ತಳ್ಳಿಹಾಕುವ ಹಾಗೆಯೂ ಕರ್ತನ ದೃಷ್ಟಿಯಲ್ಲಿ ಸರಿ ಯಾದದ್ದನ್ನೂ ಒಳ್ಳೇದನ್ನೂ ಮಾಡಬೇಕು.
Cross references
- Deuteronomy 11:22 ಧರ್ಮೋಪದೇಶಕಾಂಡ 11:22ನಾನು ನಿಮಗೆ ಆಜ್ಞಾಪಿಸುವ ಈ ಆಜ್ಞೆಗಳನ್ನೆಲ್ಲಾ ನೀವು ಎಚ್ಚರಿಕೆಯಿಂದ ಕೈಕೊಂಡು ಅವುಗಳಂತೆ ಮಾಡಿರಿ. ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ಆತನ ಎಲ್ಲಾ ಮಾರ್ಗಗಳಲ್ಲಿ ನಡೆದು ಆತನನ್ನು ಅಂಟಿಕೊಂಡರೆ
- Psalm 119:4 ಕೀರ್ತನೆಗಳು 119:4ನಿನ್ನ ಕಟ್ಟಳೆಗಳನ್ನು ಜಾಗ್ರತೆಯಾಗಿ ಕೈಕೊಳ್ಳ ಬೇಕೆಂದು ನೀನು ಆಜ್ಞಾಪಿಸಿದ್ದೀ.
- 2 Peter 3:14 2 ಪೇತ್ರನು 3:14ಆದಕಾರಣ ಪ್ರಿಯರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವದರಿಂದ ಸಮಾಧಾನ ದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವ ರಾಗಿರ್ರಿ.
- 2 Peter 1:5–10 2 ಪೇತ್ರನು 1:5–10ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ ತಾಳ್ಮೆಗೆ ಭಕ್ತಿಯನ್ನೂ ಭಕ್ತಿಗೆ ಸಹೋದರ ಕರುಣೆಯನ್ನೂ ಸಹೋದರ ಕರುಣೆಗೆ ಪ್ರೀತಿಯನ್ನೂ ಕೂಡಿಸಿರಿ. ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ. ಇವುಗಳಿಲ್ಲದವನು ಕುರುಡನಾಗಿದ್ದಾನೆ; ಅವನು ದೂರದೃಷ್ಟಿಯಿಲ್ಲದವನಾಗಿದ್ದು ತನ್ನ ಹಿಂದಣ ಪಾಪಗಳಿಂದ ಶುದ್ಧನಾದದ್ದನ್ನು ಮರೆತುಬಿಟ್ಟಿದ್ದಾನೆ. ಆದದರಿಂದ ಸಹೋದರರೇ, ನಿಮ್ಮ ಕರೆಯುವಿಕೆ ಯನ್ನೂ ಆಯ್ಕೆಯನ್ನೂ ದೃಢಪಡಿಸಿಕೊಳ್ಳುವದಕ್ಕೆ ಜಾಗ್ರತೆಯಾಗಿರಿ. ಯಾಕಂದರೆ ಇವುಗಳನ್ನು ನೀವು ಮಾಡಿದರೆ ಎಂದಿಗೂ ತಪ್ಪಿಹೋಗುವದಿಲ್ಲ
- 1 Corinthians 15:58 1 ಕೊರಿಂಥದವರಿಗೆ 15:58ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
- Hebrews 6:11 ಇಬ್ರಿಯರಿಗೆ 6:11ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.
- Exodus 15:26 ವಿಮೋಚನಕಾಂಡ 15:26ಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
- Titus 3:8 ತೀತನಿಗೆ 3:8ಇದು ನಂಬತಕ್ಕ ಮಾತಾ ಗಿದೆ. ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಮಾತುಗಳನ್ನು ಯಾವಾಗಲೂ ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಉತ್ತಮವೂ ಪ್ರಯೋಜನಕರವೂ ಆಗಿವೆ.
- Deuteronomy 11:13 ಧರ್ಮೋಪದೇಶಕಾಂಡ 11:13ಹಾಗಾದರೆ ನಾನು ಈಹೊತ್ತು ನಿಮಗೆ ಆಜ್ಞಾಪಿಸುವ ನನ್ನ ಆಜ್ಞೆಗಳನ್ನು ನೀವು ಲಕ್ಷ್ಯಕೊಟ್ಟು ಕೇಳಿ ನಿಮ್ಮ ದೇವರಾದ ಕರ್ತನನ್ನು ಪ್ರೀತಿಮಾಡಿ ನಿಮ್ಮ ಪೂರ್ಣ ಹೃದಯದಿಂದಲೂ ನಿಮ್ಮ ಪೂರ್ಣಪ್ರಾಣದಿಂದಲೂ ಆತನಿಗೆ ಸೇವೆಮಾಡಿದರೆ
- Deuteronomy 6:1–2 ಧರ್ಮೋಪದೇಶಕಾಂಡ 6:1–2ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಮಾಡತಕ್ಕವುಗಳು; ನೀನು ನಿನ್ನ ದೇವರಾದ ಕರ್ತನಿಗೆ ಭಯಪಟ್ಟು ನಾನು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ನೀನೂ ನಿನ್ನ ಮಗನೂ ನಿನ್ನ ಮೊಮ್ಮ ಗನೂ ನಿನ್ನ ಜೀವಿತದ ದಿವಸಗಳಲ್ಲೆಲ್ಲಾ ಕೈಕೊ ಳ್ಳುವ ಹಾಗೆಯೂ ನಿನ್ನ ದಿವಸಗಳು ಬಹಳವಾಗುವ ಹಾಗೆಯೂ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವ ರಾದ ಕರ್ತನು ಆಜ್ಞಾಪಿಸಿದ ಆಜ್ಞೆ ವಿಧಿ ನ್ಯಾಯ ಗಳು ಇವೇ.