Deuteronomy · chapter 7 · verse 18
Deuteronomy 7:18 in Kannada
ನೀನು ಅವರಿಗೆ ಭಯಪಡಬೇಡ; ನಿನ್ನ ದೇವರಾದ ಕರ್ತನು ಫರೋಹನಿಗೂ ಎಲ್ಲಾ ಐಗುಪ್ತಕ್ಕೂ ಮಾಡಿದ್ದನು
Neenu avarige bhayapadabeda; ninna devaraada kartanu pharohanigoo ellaa aiguptakkoo maadiddanu
Deuteronomy 7:18 in English
- King James Version (KJV)
- Thou shalt not be afraid of them: [but] shalt well remember what the LORD thy God did unto Pharaoh, and unto all Egypt;
- World English Bible (WEB)
- you shall not be afraid of them. You shall remember well what the LORD your God did to Pharaoh and to all Egypt:
- American Standard Version (ASV)
- thou shalt not be afraid of them: thou shalt well remember what Jehovah thy God did unto Pharaoh, and unto all Egypt;
- Bible in Basic English (BBE)
- Have no fear of them, but keep well in mind what the Lord your God did to Pharaoh and to all Egypt;
- Darby Translation (DBY)
- fear them not; remember well what Jehovah thy God did unto Pharaoh, and unto all the Egyptians;
- Webster's Bible (WBS)
- Thou shalt not be afraid of them: [but] shalt well remember what the LORD thy God did to Pharaoh, and to all Egypt;
- Young's Literal Translation (YLT)
- thou art not afraid of them; thou dost surely remember that which Jehovah thy God hath done to Pharaoh, and to all Egypt,
Read in context
- 16ನಿನ್ನ ದೇವರಾದ ಕರ್ತನು ನಿನಗೆ ಒಪ್ಪಿಸುವ ಜನಗಳನ್ನೆಲ್ಲಾ ನೀನು ಸಂಹರಿಸಿಬಿಡುವಿ; ಅವರ ಮೇಲೆ ನೀನು ಕಟಾಕ್ಷವಿಡಬಾರದು; ಇಲ್ಲವೆ ಅವರ ದೇವರು ಗಳನ್ನು ಸೇವಿಸಬಾರದು; ಅದು ನಿನಗೆ ಉರುಲಾ ಗುವದು.
- 17ಈ ಜನಾಂಗಗಳು ನನಗಿಂತ ಹೆಚ್ಚಾದವರಾ ಗಿದ್ದಾರೆ, ನಾನು ಹೇಗೆ ಅವರನ್ನು ವಶಮಾಡಿಕೊಳ್ಳಲಿ ಎಂದು ನಿನ್ನ ಹೃದಯದಲ್ಲಿ ಅಂದುಕೊಂಡು
- 18ನೀನು ಅವರಿಗೆ ಭಯಪಡಬೇಡ; ನಿನ್ನ ದೇವರಾದ ಕರ್ತನು ಫರೋಹನಿಗೂ ಎಲ್ಲಾ ಐಗುಪ್ತಕ್ಕೂ ಮಾಡಿದ್ದನು
- 19ನಿನ್ನ ಕಣ್ಣುಗಳು ನೋಡಿದ ದೊಡ್ಡ ಉಪದ್ರವ ಗಳನ್ನೂ ನಿನ್ನ ದೇವರಾದ ಕರ್ತನು ನಿನ್ನನ್ನು ಹೊರಗೆ ಬರಮಾಡಿದಾಗ ಉಂಟಾದ ಗುರುತುಗಳನ್ನೂ ಅದ್ಭುತ ಗಳನ್ನೂ ಬಲವಾದ ಕೈಯನ್ನೂ ಚಾಚಿದ ತೋಳನ್ನೂ ನೀನು ಚೆನ್ನಾಗಿ ಜ್ಞಾಪಕಮಾಡಿಕೊಳ್ಳಬೇಕು. ನೀನು ಯಾವ ಜನಗಳಿಗೆ ಭಯಪಡುತ್ತೀಯೋ ಆ ಜನಗಳಿ ಗೆಲ್ಲಾ ನಿನ್ನ ಕರ್ತನಾದ ದೇವರು ಹಾಗೆಯೇ ಮಾಡು ವನು.
- 20ಇದಲ್ಲದೆ ಉಳಿದವರೂ ನಿನಗೆ ಮರೆಯಾಗಿ ಉಳುಕೊಂಡವರೂ ನಾಶವಾಗುವ ತನಕ ನಿನ್ನ ದೇವ ರಾದ ಕರ್ತನು ಕಡಜದ ಹುಳವನ್ನು ಅವರಲ್ಲಿ ಕಳುಹಿ ಸುವನು.
Cross references
- Psalm 105:5 ಕೀರ್ತನೆಗಳು 105:5ಆತನು ಮಾಡಿದ ಆಶ್ಚರ್ಯ ಕಾರ್ಯಗಳನ್ನೂ ಆತನ ಅದ್ಭುತಗಳನ್ನೂ ಆತನ ಬಾಯಿಯ ನ್ಯಾಯಗಳನ್ನೂ ಜ್ಞಾಪಕಮಾಡಿ ಕೊಳ್ಳಿರಿ;
- Deuteronomy 31:6 ಧರ್ಮೋಪದೇಶಕಾಂಡ 31:6ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು.
- Psalm 77:11 ಕೀರ್ತನೆಗಳು 77:11ಕರ್ತನ ಕ್ರಿಯೆಗಳನ್ನು ನೆನಸಿ ನಿಶ್ಚಯವಾಗಿ ಪುರಾತನ ಅದ್ಭುತ ಗಳನ್ನು ಜ್ಞಾಪಿಸಿಕೊಳ್ಳುವೆನು.
- Deuteronomy 1:29 ಧರ್ಮೋಪದೇಶಕಾಂಡ 1:29ಆಗ ನಾನು ನಿಮಗೆ--ಅಂಜಬೇಡಿರಿ; ಅವರಿಗೆ ಭಯಪಡಬೇಡಿರಿ.
- Isaiah 51:9–10 ಯೆಶಾಯ 51:9–10ಓ ಕರ್ತನ ತೋಳೇ, ಎಚ್ಚರಗೊಳ್ಳು, ಎಚ್ಚರ ಗೊಳ್ಳು, ಬಲವನ್ನು ಹೊಂದಿಕೋ; ಹಿಂದಿನ ಜನಾಂಗ ಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂ ತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ? ಸಮುದ್ರವನ್ನೂ ದೊಡ್ಡ ಅಗಾಧದ ನೀರನ್ನು ಬತ್ತಿಸಿ, ವಿಮುಕ್ತರಾದವರು ಹಾದು ಹೋಗುವದಕ್ಕೆ ಸಮು ದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ?
- Isaiah 63:11–15 ಯೆಶಾಯ 63:11–15ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ? ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ? ಅಡವಿಯಲ್ಲಿ ಕುದುರೆಯಂತೆ ಅಗಾಧಗಳಲ್ಲಿ ಅವರನ್ನು ಎಡವದ ಹಾಗೆ ನಡಿಸಿ ದವನು ಎಲ್ಲಿ ಅಂದನು. ಪಶುವು ತಗ್ಗಿಗೆ ಇಳಿ ಯುವ ಪ್ರಕಾರ, ಕರ್ತನ ಆತ್ಮನು ಅವರಿಗೆ ವಿಶ್ರಾಂತಿ ಕೊಟ್ಟನು; ಈ ಪ್ರಕಾರ ನೀನು ನಿನಗೆ ಮಹಿಮೆ ಯುಳ್ಳ ಹೆಸರನ್ನು ಉಂಟು ಮಾಡುವ ಹಾಗೆ, ನಿನ್ನ ಜನರನ್ನು ನಡಿಸಿದಿ. ಆಕಾಶದಿಂದ, ನಿನ್ನ ಪರಿ ಶುದ್ಧ ಮಹಿಮೆಯ ನಿವಾಸದಿಂದ ದೃಷ್ಟಿಸಿನೋಡು; ನಿನ್ನ ಆಸಕ್ತಿಯೂ ನಿನ್ನ ಪರಾಕ್ರಮವೂ ನಿನ್ನ ಕರುಳುಗಳ ಘೋಷವೂ ನನ್ನ ವಿಷಯವಾದ ನಿನ್ನ ಕರುಣೆಗಳೂ ಎಲ್ಲಿ? ಬಿಗಿ ಹಿಡುಕೊಂಡಿದ್ದೀಯೋ?
- Isaiah 41:10–14 ಯೆಶಾಯ 41:10–14ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ. ಇಗೋ, ನಿನಗೆ ವಿರೋಧ ವಾಗಿ ಉರಿಗೊಂಡವರೆಲ್ಲರೂ ಅವಮಾನಹೊಂದಿ, ಆಶಾಭಂಗಪಡುವರು; ನಿನ್ನ ಸಂಗಡ ವ್ಯಾಜ್ಯವಾಡಿದ ವರು ನಾಶವಾಗಿ ಇಲ್ಲದೆ ಹೋಗುವರು; ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು; ನಿನ್ನ ಸಂಗಡ ಯುದ್ಧಮಾಡಿದವರು ಇಲ್ಲದೆ ಹೋಗಿ ನಿರ್ನಾಮವಾಗುವರು. ನಿನಗೆ ಸಹಾಯ ಮಾಡುತ್ತೇನೆಂದು ನಿನಗೆ ಹೇಳುವ ಕರ್ತನೂ ನಿನ್ನ ದೇವರೂ ಆಗಿರುವ ನಾನೇ ನಿನ್ನ ಕೈಹಿಡಿಯುತ್ತೇನಲ್ಲಾ. ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
- Deuteronomy 3:6 ಧರ್ಮೋಪದೇಶಕಾಂಡ 3:6ನಾವು ಹೆಷ್ಬೋನಿನ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವುಗಳನ್ನೆಲ್ಲಾ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು; ಗಂಡಸರನ್ನೂ ಹೆಂಗಸರನ್ನೂ ಮಕ್ಕ ಳನ್ನೂ ಪ್ರತಿಯೊಂದು ಪಟ್ಟಣವನ್ನೂ ಸಂಪೂರ್ಣ ವಾಗಿ ನಿರ್ಮೂಲಮಾಡಿದೆವು.
- Exodus 7:1–14 ವಿಮೋಚನಕಾಂಡ 7:1–14ಆಗ ಕರ್ತನು ಮೋಶೆಗೆ--ಇಗೋ, ನಿನ್ನನ್ನು ಫರೋಹನಿಗೆ ದೇವರಂತೆ ಮಾಡಿದ್ದೇನೆ; ನಿನ್ನ ಸಹೋದರನಾದ ಆರೋನನ್ನು ನಿನ್ನಗೋಸ್ಕರ ಪ್ರವಾದಿಯನ್ನಾಗಿ ಮಾಡಿದ್ದೇನೆ. ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ನೀನು ಮಾತನಾಡಬೇಕು; ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ನಿನ್ನ ಸಹೋದರನಾದ ಆರೋನನು ಫರೋಹನ ಸಂಗಡ ಮಾತನಾಡಬೇಕು. ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ ನನ್ನ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಐಗುಪ್ತದೇಶದಲ್ಲಿ ಹೆಚ್ಚಿಸುವೆನು. ಆದರೆ ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ; ಆದಾಗ್ಯೂ ನನ್ನ ಕೈಯನ್ನು ಐಗುಪ್ತದ ಮೇಲೆ ಇಟ್ಟು ದೊಡ್ಡ ನ್ಯಾಯತೀರ್ಪು ಗಳಿಂದ ನನ್ನ ಜನರಾದ ಇಸ್ರಾಯೇಲ್ ಸೈನ್ಯವನ್ನೆಲ್ಲಾ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡುವೆನು. ನಾನು ಐಗುಪ್ತದ ಮೇಲೆ ನನ್ನ ಕೈಯನ್ನಿಟ್ಟು ಅವರೊಳ ಗಿಂದ ಇಸ್ರಾಯೇಲ್ ಮಕ್ಕಳನ್ನು ಹೊರಗೆ ಬರಮಾಡಿ ದಾಗ ನಾನೇ ಕರ್ತನೆಂದು ಐಗುಪ್ತ್ಯರಿಗೆ ತಿಳಿದು ಬರುವದು ಎಂದು ಹೇಳಿದನು. ಕರ್ತನು ತಮಗೆ ಆಜ್ಞಾಪಿಸಿದ ಪ್ರಕಾರವೆ ಮೋಶೆ ಆರೋನರು ಮಾಡಿದರು, ಅಂತಯೇ ಅವರು ಮಾಡಿ ದರು. ಅವರು ಫರೋಹನ ಮುಂದೆ ಮಾತನಾಡು ವಾಗ ಮೋಶೆಯು ಎಂಭತ್ತು ವರುಷದವನಾಗಿದ್ದನು, ಆರೋನನು ಎಂಭತ್ತುಮೂರು ವರುಷದವನಾಗಿದ್ದನು. ಆಗ ಕರ್ತನು ಮೋಶೆ ಆರೋನರ ಸಂಗಡ ಮಾತನಾಡಿ-- ಫರೋಹನು ನಿಮಗೆ--ನೀವು ಒಂದು ಅದ್ಭುತಕಾರ್ಯವನ್ನು ತೋರಿಸಿರೆಂದು ಹೇಳುವಾಗ ಮೋಶೆ ಆರೋನನಿಗೆ--ನಿನ್ನ ಕೋಲನ್ನು ತಕ್ಕೊಂಡು ಫರೋಹನ ಮುಂದೆ ಬಿಸಾಡು ಎಂದು ಹೇಳಬೇಕು; ಆಗ ಅದು ಸರ್ಪವಾಗುವದು ಎಂದು ಹೇಳಿದನು. ಮೋಶೆ ಆರೋನರೂ ಫರೋಹನ ಬಳಿಗೆ ಹೋಗಿ ಕರ್ತನು ತಮಗೆ ಆಜ್ಞಾಪಿಸಿದಂತೆಯೇ ಮಾಡಿದರು. ಆರೋನನು ತನ್ನ ಕೋಲನ್ನು ಫರೋಹನ ಮುಂದೆಯೂ ಅವನ ಸೇವಕರ ಮುಂದೆಯೂ ಬಿಸಾಡಿ ದಾಗ ಅದು ಸರ್ಪವಾಯಿತು. ಫರೋಹನು ಸಹ ಜ್ಞಾನಿಗಳನ್ನೂ ಮಂತ್ರವಾದಿಗಳನ್ನೂ ಕರಿಸಿದಾಗ ಐಗುಪ್ತದ ಮಂತ್ರಗಾರರು ಸಹ ತಮ್ಮ ಮಂತ್ರಗಳಿಂದ ಹಾಗೆಯೇ ಮಾಡಿದರು. ಅವರು ತಮ್ಮತಮ್ಮ ಕೋಲುಗಳನ್ನು ಬಿಸಾಡಿದಾಗ ಅವು ಸರ್ಪಗಳಾದವು. ಆದರೆ ಆರೋನನ ಕೋಲು ಅವರ ಕೋಲುಗಳನ್ನು ನುಂಗಿಬಿಟ್ಟಿತು. ಕರ್ತನು ಹೇಳಿದಂತೆಯೇ ಫರೋಹನ ಹೃದಯವು ಆಗ ಕಠಿಣವಾಯಿತು; ಅವನು ಅವರ ಮಾತನ್ನು ಕೇಳಲಿಲ್ಲ. ಆಗ ಕರ್ತನು ಮೋಶೆಗೆ--ಫರೋಹನ ಹೃದಯವು ಕಠಿಣವಾಯಿತು. ಅವನು ಜನರನ್ನು ಕಳುಹಿಸಿಬಿಡುವದಕ್ಕೆ ನಿರಾಕರಿಸಿದನು.
- Psalm 105:26–36 ಕೀರ್ತನೆಗಳು 105:26–36ತನ್ನ ಸೇವಕನಾದ ಮೋಶೆಯನ್ನೂ ತಾನು ಆದು ಕೊಂಡ ಆರೋನನನ್ನೂ ಕಳುಹಿಸಿದನು. ಇವರು ಆತನ ಗುರುತುಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ ಅವರೊಳಗೆ ತೋರಿಸಿದರು. ಆತನು ಕತ್ತಲನ್ನು ಕಳುಹಿಸಿ ಅದನ್ನು ಕತ್ತಲಾಗ ಮಾಡಿದನು; ಆಗ ಆತನ ಮಾತಿಗೆ ಅವರು ಎದು ರಾಡಲಿಲ್ಲ. ಅವರ ನೀರನ್ನು ರಕ್ತವಾಗಿ ಮಾರ್ಪ ಡಿಸಿ; ವಿಾನುಗಳನ್ನು ಸಾಯಿಸಿದನು. ಅವರ ದೇಶದಲೆಲ್ಲಾ ಬಹಳವಾಗಿ ಕಪ್ಪೆಗಳು ತುಂಬಿ ಕೊಂಡವು. ಅರಸುಗಳ ಕೊಠಡಿಗಳಲ್ಲಿ ಸಹ ಬಂದವು. ಆತನು ಹೇಳಲು ನೊಣದ ಗುಂಪುಗಳೂ ಅವರ ಮೇರೆಗಳಲ್ಲೆಲ್ಲಾ ಹೇನುಗಳೂ ಬಂದವು. ಅವರ ಮಳೆಗಾಗಿ ಕಲ್ಮಳೆಯನ್ನೂ ಅಗ್ನಿಜ್ವಾಲೆಗಳನ್ನೂ ದೇಶದಲ್ಲಿ ಬರಮಾಡಿದನು. ಅವರ ದ್ರಾಕ್ಷೇ ಬಳ್ಳಿಯನ್ನೂ ಅಂಜೂರದ ಗಿಡಗಳನ್ನೂ ಹೊಡೆದು ಮೇರೆಗಳ ಮರ ಗಳನ್ನು ಮುರಿದನು. ಆತನು ಹೇಳಲು ಮಿಡಿತೆಗಳೂ ಲೆಕ್ಕವಿಲ್ಲದ ಕಂಬಳಿ ಹುಳಗಳೂ ಬಂದವು, ಅವು ಅವರ ದೇಶದಲ್ಲಿ ಎಲ್ಲಾ ಪಲ್ಯಗಳನ್ನು ನುಂಗಿಬಿಟ್ಟು; ಭೂಮಿಯ ಫಲಗಳನ್ನು ತಿಂದುಬಿಟ್ಟವು. ಅವರ ದೇಶದಲ್ಲಿಯ ಎಲ್ಲಾ ಚೊಚ್ಚಲುಗಳನ್ನೂ ಬಲವುಳ್ಳ ಎಲ್ಲಾ ಪ್ರಮುಖರನ್ನೂ ಹೊಡೆದನು.
- Judges 6:13 ನ್ಯಾಯಸ್ಥಾಪಕರು 6:13ಆಗ ಗಿದ್ಯೋನನು ಅವನಿಗೆ--ನನ್ನ ಕರ್ತನೇ, ಕರ್ತನು ನಮ್ಮ ಸಂಗಡ ಇದ್ದರೆ ಇದೆಲ್ಲಾ ನಮಗೆ ಸಂಭವಿಸಿದ್ದೇನು? ಕರ್ತನು ನಮ್ಮನ್ನು ಐಗುಪ್ತದಿಂದ ಬರಮಾಡಲಿಲ್ಲವೋ ಎಂದು ನಮ್ಮ ತಂದೆಗಳು ನಮಗೆ ವಿವರಿಸಿ ಹೇಳಿದ ಆತನ ಅದ್ಭುತಗಳೆಲ್ಲಾ ಎಲ್ಲಿ? ಈಗ ಕರ್ತನು ನಮ್ಮನ್ನು ಕೈಬಿಟ್ಟು ಮಿದ್ಯಾನ್ಯರ ಕೈಗೆ ಒಪ್ಪಿಸಿ ದ್ದಾನೆ ಅಂದನು.
- Psalm 136:10–15 ಕೀರ್ತನೆಗಳು 136:10–15ಐಗುಪ್ತದ ಚೊಚ್ಚಲಾದವುಗಳನ್ನು ಹೊಡೆದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಇಸ್ರಾಯೇಲನನ್ನು ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಾತನನ್ನು ಕೊಂಡಾಡಿರಿ; ಆತನ ಕರು ಣೆಯು ಎಂದೆಂದಿಗೂ ಅದೆ. ಬಲವಾದ ಕೈಯಿಂ ದಲೂ ಚಾಚಿದ ತೋಳಿನಿಂದಲೂ ಅವರನ್ನು ಹೊರಗೆ ತಂದನು; ಆತನ ಕರುಣೆಯು ಎಂದೆಂದಿಗೂ ಅದೆ. ಕೆಂಪು ಸಮುದ್ರವನ್ನು ವಿಭಾಗಿಸಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಇಸ್ರಾಯೇಲನ್ನು ಅದರ ನಡುವೆ ನಡಿಸಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ. ಫರೋಹನನ್ನೂ ಅವನ ಸೈನ್ಯವನ್ನೂ ಕೆಂಪು ಸಮು ದ್ರದಲ್ಲಿ ಕೆಡವಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.