Deuteronomy · chapter 7 · verse 26
Deuteronomy 7:26 in Kannada
ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
Neenu adarante shaapakkolagaagada haage asahyavaadaddannu ninna manege takkondu bara baaradu; adannu sampoornavaagi asahyisabeku; sampoornavaagi hesikollabeku; yaakandare adu shapisalpattadde.
Deuteronomy 7:26 in English
- King James Version (KJV)
- Neither shalt thou bring an abomination into thine house, lest thou be a cursed thing like it: [but] thou shalt utterly detest it, and thou shalt utterly abhor it; for it [is] a cursed thing.
- World English Bible (WEB)
- You shall not bring an abomination into your house and become a devoted thing like it. You shall utterly detest it. You shall utterly abhor it; for it is a devoted thing.
- American Standard Version (ASV)
- And thou shalt not bring an abomination into thy house, and become a devoted thing like unto it: thou shalt utterly detest it, and thou shalt utterly abhor it; for it is a devoted thing.
- Bible in Basic English (BBE)
- And you may not take a disgusting thing into your house, and so become cursed with its curse: but keep yourselves from it, turning from it with fear and hate, for it is a cursed thing.
- Darby Translation (DBY)
- And thou shalt not bring an abomination into thy house, lest thou be a cursed thing like it: thou shalt utterly detest it, and thou shalt utterly abhor it; for it is a cursed thing.
- Webster's Bible (WBS)
- Neither shalt thou bring an abomination into thy house, lest thou shouldst be a cursed thing like it: [but] thou shalt utterly detest it, and thou shalt utterly abhor it; for it [is] a cursed thing.
- Young's Literal Translation (YLT)
- and thou dost not bring in an abomination unto thy house — or thou hast been devoted like it; — thou dost utterly detest it, and thou dost utterly abominate it; for it [is] devoted.
Read in context
- 24ಅವರ ಅರಸುಗಳನ್ನು ನಿನಗೆ ಒಪ್ಪಿಸುವನು. ನೀನು ಅವರ ಹೆಸರನ್ನು ಆಕಾಶದ ಕೆಳಗೆ ಇಲ್ಲದ ಹಾಗೆ ನಾಶಮಾಡುವಿ; ನೀನು ಅವರನ್ನು ನಿರ್ಮೂಲ ಮಾಡುವ ತನಕ ಒಬ್ಬನಾದರೂ ನಿನ್ನ ಮುಂದೆ ನಿಲ್ಲಲಾರನು.
- 25ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು; ಅವುಗಳ ಮೇಲಿರುವ ಬೆಳ್ಳಿ ಬಂಗಾರವನ್ನು ಆಶಿಸಿ ನೀನು ತಕ್ಕೊಳ್ಳಬಾರದು; ಅದು ನಿನಗೆ ಉರ್ಲಾ ದೀತು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
- 26ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
Cross references
- Deuteronomy 13:17 ಧರ್ಮೋಪದೇಶಕಾಂಡ 13:17ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಶಬ್ದವನ್ನು ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ನಿನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಸರಿ ಯಾದದ್ದನ್ನು ಮಾಡಲಾಗಿಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರಿಗಿ ನಿನಗೆ ಕರುಣೆಯನ್ನು ತೋರಿಸಿ ನಿನ್ನ ಮೇಲೆ ಕನಿಕರಪಟ್ಟು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನನ್ನು ಹೆಚ್ಚಿಸುವ ಹಾಗೆ ಆ ಶಾಪವನ್ನು ಹೊಂದಿದ್ದರಲ್ಲಿ ಏನಾದರೂ ನಿನ್ನ ಕೈಗೆ ಅಂಟಿಕೊಳ್ಳಬಾರದು.
- Hosea 14:8 ಹೋಶೇಯ 14:8ಎಫ್ರಾಯಾಮೇ--ನಾನು ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ? ನಾನು ಅವನನ್ನು ಕೇಳಿದ್ದೇನೆ ಮತ್ತು ನಾನು ಅವನನ್ನು ದೃಷ್ಟಿಸಿದ್ದೇನೆ. ನಾನು ಹಸುರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ. ನಿನ್ನ ಫಲವು ನನ್ನಿಂದ ಕಂಡುಕೊಂಡಿ ಎಂದು ಅಂದುಕೊಳ್ಳುವದು.ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
- Ezekiel 11:18 ಯೆಹೆಜ್ಕೇಲನು 11:18ಅವರು ಅಲ್ಲಿಗೆ ಬಂದು ಎಲ್ಲಾ ಹೇಸಿಗೆಯ ಸಂಗತಿಗಳನ್ನೂ ಎಲ್ಲಾ ಅಸಹ್ಯವಾದವುಗಳನ್ನೂ ಅಲ್ಲಿಂದ ತೆಗೆದು ಹಾಕುವರು;
- Romans 2:22 ರೋಮಾಪುರದವರಿಗೆ 2:22ವ್ಯಭಿಚಾರ ಮಾಡಬಾರದೆಂದು ಹೇಳುವ ನೀನು ವ್ಯಭಿಚಾರ ಮಾಡುತ್ತೀಯೋ? ವಿಗ್ರಹಗಳನ್ನು ಅಸಹ್ಯಿಸುವ ನೀನು ಪವಿತ್ರಸ್ಥಳವನ್ನು ಹೊಲೆಮಾಡು ತ್ತೀಯೋ?
- Isaiah 30:22 ಯೆಶಾಯ 30:22ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನು ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಕ್ಕೆ ತೊಲಗಿಹೋಗಿರಿ ಎಂದು ಹೊಲೆಯ ಬಟ್ಟೆಯಂತೆ ಬಿಸಾಡಿಬಿಡುವಿರಿ.
- Ezekiel 14:7 ಯೆಹೆಜ್ಕೇಲನು 14:7ನನಗೆ ತನ್ನನ್ನು ಅನ್ಯನನ್ನಾಗಿ ಮಾಡಿಕೊಂಡು ತನ್ನ ಹೃದಯದಲ್ಲಿ ವಿಗ್ರಹಗಳನ್ನು ಸ್ಥಾಪಿಸಿ ಅಕ್ರಮದ ಎಡೆತಡೆಯನ್ನು ತನ್ನ ಮುಖದ ಮುಂದೆ ಇಟ್ಟುಕೊಂಡು ಪ್ರವಾದಿಯ ಬಳಿಗೆ ನನ್ನ ವಿಷಯವಾಗಿ ವಿಚಾರಿಸಲು ಬರುವ ಪ್ರತಿಯೊಬ್ಬ ಇಸ್ರಾಯೇಲಿನ ಮನೆತನದವರಲ್ಲಿಯೂ ಇಸ್ರಾಯೇಲಿನಲ್ಲಿ ತಂಗುವ ಅನ್ಯರಲ್ಲಿಯೂ ಪ್ರತಿಯೊ ಬ್ಬನಿಗೂ ಕರ್ತನಾದ ನಾನೇ ಉತ್ತರ ಕೊಡುತ್ತೇನೆ.
- Joshua 7:1–26 ಯೆಹೋಶುವ 7:1–26ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್ ಮಕ್ಕಳ ಮೇಲೆ ಉರಿಯಹತ್ತಿತ್ತು. ಆಗ ಯೆಹೋಶುವನು ಅವರಿಗೆ--ನೀವು ದೇಶ ವನ್ನು ಪಾಳತಿ ನೋಡಿ ಬನ್ನಿರಿ ಎಂದು ಹೇಳಿ ಯೆರಿಕೋ ವಿನಿಂದ ಮನುಷ್ಯರನ್ನು ಬೇತೇಲಿಗೆ ಪೂರ್ವಕಡೆಯಾದ ಬೇತಾವೆನಿನ ಬಳಿಯಲ್ಲಿರುವ ಆಯಿಗೆ ಕಳುಹಿಸಿದನು. ಆಗ ಅವರು ಹೋಗಿ ಆಯಿಯನ್ನು ಪಾಳತಿನೋಡಿ ಯೆಹೋಶುವನ ಬಳಿಗೆ ತಿರಿಗಿ ಬಂದು ಅವನಿಗೆ--ಜನರೆಲ್ಲರೂ ಏರಿಹೋಗದೆ ಇರಲಿ; ಆಯಿಯನ್ನು ಹೊಡೆಯುವದಕ್ಕೆ ಎರಡು ಅಥವಾ ಮೂರು ಸಾವಿರ ಜನರು ಮಾತ್ರವೇ ಹೋಗಲಿ; ಅಲ್ಲಿಗೆ ಹೋಗುವ ಜನರೆಲ್ಲರನ್ನೂ ದಣಿಸಬೇಡ; ಯಾಕಂದರೆ ಸ್ವಲ್ಪ ಜನರು ಮಾತ್ರ ಇದ್ದಾರೆ ಅಂದರು. ಹಾಗೆಯೇ ಜನರಲ್ಲಿ ಹೆಚ್ಚು ಕಡಿಮೆ ಮೂರುಸಾವಿರ ಮಂದಿ ಅಲ್ಲಿಗೆ ಹೋದರು; ಆದರೆ ಅವರು ಆಯಿಯ ಮನುಷ್ಯರ ಮುಂದೆ ಓಡಿಹೋದರು. ಆಯಿ ಮನುಷ್ಯರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಹೊಡೆದು ಹಾಕಿದರು. ಬಾಗಲಿನಿಂದ ಪ್ರಾರಂಭಿಸಿ ಷೆಬಾರಿಮಿನ ವರೆಗೂ ಅವರನ್ನು ಹಿಂದಟ್ಟಿ ಇಳಿದು ಹೋಗುವ ವರೆಗೂ ಅವರನ್ನು ಹೊಡೆದರು. ಆದದ ರಿಂದ ಜನರ ಹೃದಯವು ಕರಗಿ ನೀರಿನಂತಾಯಿತು. ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡು ತಾನೂ ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಾಯಂಕಾಲದ ವರೆಗೆ ಕರ್ತನ ಮಂಜೂಷದ ಮುಂದೆ ನೆಲದಮೇಲೆ ಬೋರಲು ಬಿದ್ದರು. ಇದಲ್ಲದೆ ಯೆಹೋಶುವನು--ಅಯ್ಯೋ, ಓ ಕರ್ತನಾದ ದೇವರೇ, ನಮ್ಮನ್ನು ನಾಶಮಾಡುವ ಹಾಗೆ ಅಮೋರಿ ಯರ ಕೈಯಲ್ಲಿ ಒಪ್ಪಿಸಿ ಕೊಡುವದಕ್ಕಾಗಿ ನೀನು ಈ ಜನರು ಯೊರ್ದನನ್ನು ದಾಟಮಾಡಿದ್ದೇನು? ನಮಗೆ ಇಷ್ಟೇ ಸಾಕೆಂದು ನಾವು ಯೊರ್ದನಿನ ಆಚೆಯಲ್ಲಿ ಇದ್ದರೆ ಒಳ್ಳೇದಾಗಿತ್ತು. ಓ ಕರ್ತನೇ, ಈಗ ನಾನೇನು ಹೇಳಲಿ? ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಬೆನ್ನು ತಿರುಗಿಸಿದ್ದಾರಲ್ಲಾ. ಯಾಕಂದರೆ ಕಾನಾನ್ಯರೂ ದೇಶ ವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿ ಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದು ಬಿಡುವರು; ಆಗ ನಿನ್ನ ಮಹತ್ತಾದ ಹೆಸರಿಗೆ ಏನು ಮಾಡುವಿ ಅಂದನು. ಆಗ ಕರ್ತನು ಯೆಹೋಶುವನಿಗೆ--ನೀನು ಎದ್ದೇಳು; ನೀನು ಈ ಪ್ರಕಾರ ಬೋರಲು ಬಿದ್ದಿರುವ ದೇನು? ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ. ಆದದ ರಿಂದ ಇಸ್ರಾಯೇಲ್ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ. ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್ ಕರ್ತನಾದ ದೇವರು ಹೇಳುತ್ತಾನೆ. ಆದದರಿಂದ ಹೊತ್ತಾರೆಯಲ್ಲಿ ನಿಮ್ಮ ಗೋತ್ರಗಳ ಪ್ರಕಾರವೇ ಸೇರಿ ಬನ್ನಿರಿ. ಆಗ ಕರ್ತನು ಹಿಡಿಯುವ ಗೋತ್ರವು ಕುಟುಂಬದ ಪ್ರಕಾರ ವಾಗಿಯೂ ಕರ್ತನು ಹಿಡಿಯುವ ಕುಟುಂಬವು ಮನೆ ಮನೆಯಾಗಿಯೂ ಕರ್ತನು ಹಿಡಿಯುವ ಮನೆಯಲ್ಲಿ ಒಬ್ಬೊಬ್ಬರಾಗಿಯೂ ಸೇರಲಿ. ಆಗ ಶಾಪಕ್ಕೀಡಾದ ದ್ದನ್ನು ತೆಗೆದುಕೊಂಡವನೆಂದು ಹಿಡಿಯಲ್ಪಡುವವನು ಕರ್ತನ ಒಡಂಬಡಿಕೆಯನ್ನು ವಿಾರಿ ಇಸ್ರಾಯೇಲಿ ನಲ್ಲಿ ಬುದ್ಧಿಹೀನವಾದ ಕಾರ್ಯವನ್ನು ಮಾಡಿದ್ದರಿಂದ ಅವನೂ ಅವನಲ್ಲಿರುವ ಸಮಸ್ತವೂ ಬೆಂಕಿಯಿಂದ ಸುಡಲ್ಪಡಬೇಕು ಅಂದನು. ಹೀಗೆಯೇ ಯೆಹೋಶುವನು ಬೆಳಿಗ್ಗೆ ಎದ್ದು ಇಸ್ರಾಯೇಲನ್ನು ಗೋತ್ರಗೋತ್ರವಾಗಿ ಕರೆದಾಗ ಯೂದ ಗೋತ್ರವು ಹಿಡಿಯಲ್ಪಟ್ಟಿತು. ಅವನು ಯೂದನ ಕುಟುಂಬವನ್ನು ಕರೆದಾಗ ಜೆರಹನ ಗೋತ್ರವು ಹಿಡಿಯಲ್ಪಟ್ಟಿತು. ಜೆರಹನ ಗೋತ್ರವನ್ನು ಹೆಸರು ಹೆಸರಾಗಿ ಕರೆದಾಗ ಜಬ್ದೀಯು ಹಿಡಿಯಲ್ಪಟ್ಟನು. ಅವನ ಮನೆಯವರನ್ನು ಅವನು ಹೆಸರುಹೆಸರಾಗಿ ಕರೆದಾಗ ಯೂದನ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಹಿಡಿಯಲ್ಪಟ್ಟನು. ಆಗ ಯೆಹೋಶುವನು ಆಕಾನನಿಗೆ--ನನ್ನ ಮಗನೇ, ನೀನು ಈಗ ಇಸ್ರಾ ಯೇಲಿನ ದೇವರಾದ ಕರ್ತನನ್ನು ಘನಪಡಿಸಿ ಆತನಿಗೆ ಅರಿಕೆಮಾಡು; ಏನು ಮಾಡಿದಿಯೋ ಅದನ್ನು ನನಗೆ ತಿಳಿಸು; ನನಗೆ ಮರೆಮಾಡಬೇಡ ಅಂದನು. ಆಗ ಆಕಾನನು ಯೆಹೋಶುವನಿಗೆ ಪ್ರತ್ಯುತ್ತರವಾಗಿ--ನಿಜವಾಗಿ ನಾನು ಇಸ್ರಾಯೇಲ್ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ಇಂತಿಂಥವುಗಳನ್ನು ಮಾಡಿದ್ದೇನೆ. ಏನಂದರೆ, ನಾನು ಕೊಳ್ಳೆಯಲ್ಲಿ ಬಾಬೆಲಿನ ಒಂದು ಒಳ್ಳೇ ನಿಲುವಂಗಿಯನ್ನೂ ಇನ್ನೂರು ಬೆಳ್ಳಿ ಶೇಕೆಲುಗಳನ್ನೂ ಐವತ್ತು ಶೇಕೆಲ್ ತೂಕವಾದ ಒಂದು ಬಂಗಾರದ ಗಟ್ಟಿಯನ್ನೂ ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು; ಇಗೋ, ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ; ಬೆಳ್ಳಿಯೂ ಅದರ ಕೆಳಗೆ ಇದೆ ಅಂದನು. ಆಗ ಯೆಹೋಶುವನು ದೂತರನ್ನು ಕಳುಹಿಸಿದನು; ಅವರು ಡೇರೆಗಳಿಗೆ ಓಡಿದರು; ಇಗೋ, ಡೇರೆಯಲ್ಲಿ ಅವು ಬಚ್ಚಿಡಲ್ಪಟ್ಟಿದ್ದವು; ಬೆಳ್ಳಿಯು ಅದರ ಕೆಳಗೆ ಇತ್ತು. ಅವರು ಅವುಗಳನ್ನು ಡೇರೆಯ ಮಧ್ಯದಿಂದ ತೆಗೆದುಕೊಂಡು ಯೆಹೋಶುವನ ಬಳಿಗೂ ಸಮಸ್ತ ಇಸ್ರಾಯೇಲ್ ಮಕ್ಕಳ ಬಳಿಗೂ ತಂದು ಕರ್ತನ ಮುಂದೆ ಇಟ್ಟರು. ಆಗ ಯೆಹೋಶುವನೂ ಅವ ನೊಂದಿಗೆ ಇಸ್ರಾಯೇಲ್ಯರೆಲ್ಲರೂ ಜೆರಹನ ಮಗನಾದ ಆಕಾನನನ್ನೂ ಆ ಬೆಳ್ಳಿಯನ್ನೂ ವಸ್ತ್ರವನ್ನೂ ಬಂಗಾರದ ಗಟ್ಟಿಯನ್ನೂ ಅವನ ಕುಮಾರರನ್ನೂ ಕುಮಾರ್ತೆಯ ರನ್ನೂ ಅವನ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಅವನ ಡೇರೆಯನ್ನೂ ಅವನಿಗಿದ್ದ ಸಮಸ್ತವನ್ನೂ ತೆಗೆದುಕೊಂಡು ಆಕೋರಿನ ತಗ್ಗಿಗೆ ತಂದರು. ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟುಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು. ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
- Leviticus 27:28–29 ಯಾಜಕಕಾಂಡ 27:28–29ಆದಾಗ್ಯೂ ಪ್ರತ್ಯೇಕಿಸಲ್ಪಟ್ಟ ಯಾವದಾದರೂ ಅಂದರೆ ಮನುಷ್ಯನನ್ನಾಗಲಿ ಪಶುವನ್ನಾಗಲಿ ತನ್ನ ಸ್ವಾಸ್ತ್ಯದ ಹೊಲವನ್ನಾಗಲಿ ತನಗಿದ್ದದ್ದನ್ನೆಲ್ಲಾ ಒಬ್ಬ ಮನುಷ್ಯನು ಕರ್ತನಿಗಾಗಿ ಪ್ರತ್ಯೇಕಿಸಿದರೆ ಅದನ್ನು ಮಾರಬಾರದು ಇಲ್ಲವೆ ವಿಮೋಚಿಸಬಾರದು; ಪ್ರತ್ಯೇಕಿ ಸಲ್ಪಟ್ಟ ಪ್ರತಿಯೊಂದು ಕರ್ತನಿಗೆ ಅತೀ ಪರಿಶುದ್ಧ ವಾದದ್ದೇ. ಮನುಷ್ಯರಲ್ಲಿ ಪ್ರತ್ಯೇಕಿಸಲ್ಪಟ್ಟವನು ಯಾವನಾದರು ಪ್ರತ್ಯೇಕಿಸಲ್ಪಡದೆ ಹೋದರೆ ಅವನನ್ನು (ಕ್ರಯಕೊಟ್ಟು) ವಿಮೋಚಿಸಬಾರದು. ಖಂಡಿತವಾಗಿ ಅವನನ್ನು ಕೊಲ್ಲಬೇಕು.
- Joshua 6:17–24 ಯೆಹೋಶುವ 6:17–24ಇದಲ್ಲದೆ ಈ ಪಟ್ಟಣವೂ ಅದರಲ್ಲಿರುವ ಸಮಸ್ತವೂ ಕರ್ತನ ಶಾಪಕ್ಕೊಳಗಾಗುವದು; ರಾಹಾಬಳೆಂಬ ಸೂಳೆಯೂ ಆಕೆಯ ಮನೆಯಲ್ಲಿ ಇರುವವರೆಲ್ಲರೂ ಮಾತ್ರ ಉಳಿಯಲಿ. ಯಾಕಂದರೆ ನಾವು ಕಳುಹಿಸಿದ ದೂತರನ್ನು ಆಕೆಯು ಬಚ್ಚಿಟ್ಟಳು. ನೀವು ಶಾಪ ಕ್ಕೊಳಗಾದವುಗಳನ್ನು ತೆಗೆದುಕೊಂಡಾಗ ನಿಮ್ಮನ್ನು ಶಾಪಕ್ಕೆ ಈಡಾಗಿ ಮಾಡಿಕೊಂಡು ಇಸ್ರಾಯೇಲಿನ ದಂಡನ್ನು ಶಾಪಕ್ಕೆ ಈಡುಮಾಡಿ ತೊಂದರೆಪಡಿಸದ ಹಾಗೆ ಶಾಪಕ್ಕೆ ಈಡಾದವುಗಳನ್ನು ತೆಗೆದುಕೊಳ್ಳದೆ ಬಹು ಎಚ್ಚರಿಕೆಯಾಗಿರ್ರಿ. ಎಲ್ಲಾ ಬೆಳ್ಳಿ ಬಂಗಾರವೂ ಹಿತ್ತಾಳೆ ಕಬ್ಬಿಣ ಪಾತ್ರೆಗಳೂ ಕರ್ತನಿಗೆ ವಿಾಸಲಾಗಿರ ಬೇಕು. ಅವು ಕರ್ತನ ಭಂಡಾರಕ್ಕೆ ಸೇರಬೇಕು ಅಂದನು. ಹೀಗೆ ಯಾಜಕರು ತುತೂರಿಗಳನ್ನು ಊದಿದಾಗ ಜನರು ಆರ್ಭಟಿಸಿದರು. ತುತ್ತೂರಿಯ ಶಬ್ದವನ್ನು ಜನರು ಕೇಳಿದಾಗ ಮಹಾ ಆರ್ಭಟವಾಗಿ ಆರ್ಭಟಿಸುತ್ತಲೇ ಗೋಡೆಯು ನೆಲಸಮವಾಗಿ ಕೆಳಗೆ ಬಿತ್ತು; ಹೀಗೆ ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಏರಿಹೋದನು. ಆಗ ಪಟ್ಟಣವು ಅವರಿಗೆ ಸ್ವಾಧೀನ ವಾಯಿತು. ಪಟ್ಟಣದಲ್ಲಿರುವ ಎಲ್ಲಾ ಸ್ತ್ರೀ ಪುರುಷ ರನ್ನೂ ಹಿರಿಕಿರಿಯರನ್ನೂ ಕುರಿದನಗಳನ್ನೂ ಕತ್ತೆ ಗಳನ್ನೂ ಕತ್ತಿಯ ಬಾಯಿಂದ ಸಂಪೂರ್ಣವಾಗಿ ನಾಶ ಮಾಡಿದರು. ಆದರೆ ಯೆಹೋಶುವನು ದೇಶವನ್ನು ಪಾಳತಿ ನೋಡುವದಕ್ಕೆ ಹೋಗಿದ್ದ ಇಬ್ಬರು ಮನುಷ್ಯರಿಗೆ-- ನೀವು ಸೂಳೆಯಾದ ಹೆಂಗಸಿನ ಮನೆಗೆ ಹೋಗಿ ಅವಳನ್ನೂ ಅವಳಿಗೆ ಉಂಟಾದ ಸಮಸ್ತವನ್ನೂ ಅವಳಿಗೆ ಆಣೆ ಇಟ್ಟ ಹಾಗೆ ಅಲ್ಲಿಂದ ಹೊರಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು. ಪಾಳತಿಗಾರರಾದ ಯೌವನಸ್ಥರು ಒಳಗೆ ಹೋಗಿ ರಾಹಾಬಳನ್ನೂ ಅವಳ ತಂದೆ ತಾಯಿಯನ್ನೂ ಸಹೋದರರನ್ನೂ ಅವಳಿಗಿದ್ದ ಸಮಸ್ತವನ್ನೂ ಅವಳ ಸಂಬಂಧಿಕರಾದವರೆಲ್ಲರನ್ನೂ ಹೊರಗೆ ಕರತಂದು ಇಸ್ರಾಯೇಲ್ ಪಾಳೆಯದ ಹೊರಗೆ ಅವರನ್ನು ಇರಿಸಿದರು. ಆದರೆ ಪಟ್ಟಣ ವನ್ನೂ ಅದರಲ್ಲಿರುವ ಸಮಸ್ತವನ್ನೂ ಬೆಂಕಿಯಿಂದ ಸುಟ್ಟುಬಿಟ್ಟರು. ಬೆಳ್ಳಿ ಬಂಗಾರವನ್ನೂ ಹಿತ್ತಾಳೆ ಕಬ್ಬಿಣದ ಪಾತ್ರೆಗಳನ್ನೂ ಮಾತ್ರ ಕರ್ತನ ಮನೆಯ ಭಂಡಾರದಲ್ಲಿ ಇಟ್ಟರು.
- Zechariah 5:4 ಜೆಕರ್ಯ 5:4ನಾನು ಅದನ್ನು ಹೊರಗೆ ತರುತ್ತೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಅದು ಕಳ್ಳನ ಮನೆಯಲ್ಲಿಯೂ ನನ್ನ ಹೆಸರಿನಿಂದ ಸುಳ್ಳಾಗಿ ಆಣೆಯಿಡುವವನ ಮನೆಯ ಲ್ಲಿಯೂ ಪ್ರವೇಶಿಸಿ ಅವನ ಮನೆಯ ಮಧ್ಯದಲ್ಲಿ ನಿಂತು ಅದರ ಮರಗಳನ್ನೂ ಅದರ ಕಲ್ಲುಗಳನ್ನೂ ಅಳಿಸಿಬಿಡುವದು ಅಂದನು.
- Habakkuk 2:9–11 ಹಬಕ್ಕೂಕ 2:9–11ತನ್ನ ಗೂಡನ್ನು ಉನ್ನತದಲ್ಲಿ ಇಡುವ ಹಾಗೆಯೂ ಕೇಡಿನ ಕೈಗೆ ತಪ್ಪಿಸಿಕೊಳ್ಳುವ ಹಾಗೆಯೂ ತನ್ನ ಮನೆ ಗೋಸ್ಕರ ದುರ್ಲಾಭವನ್ನು ಆಶಿಸುವವನಿಗೆ ಅಯ್ಯೋ! ಅನೇಕ ಜನಗಳನ್ನು ಕಡಿದುಬಿಡುವದರಿಂದ ನಿನ್ನ ಮನೆಗೆ ನಾಚಿಕೆಯನ್ನು ಯೋಚಿಸಿದ್ದೀ; ಸ್ವಂತ ಪ್ರಾಣಕ್ಕೆ ವಿರೋಧವಾಗಿ ಪಾಪಮಾಡಿದ್ದೀ. ಗೋಡೆಯೊಳ ಗಿಂದ ಕಲ್ಲು ಕೂಗುತ್ತದೆ. ಮರದ ತೊಲೆ ಅದಕ್ಕೆ ಉತ್ತರ ಕೊಡುತ್ತದೆ.
- Isaiah 2:20 ಯೆಶಾಯ 2:20ಆ ದಿನದಲ್ಲಿ ಮನುಷ್ಯನು ಅಡ್ಡಬೀಳುವದಕ್ಕೋಸ್ಕರ ತಾವು ಮಾಡಿ ಕೊಂಡ ಬೆಳ್ಳಿಯ ವಿಗ್ರಹಗಳನ್ನೂ ಚಿನ್ನದ ವಿಗ್ರಹ ಗಳನ್ನೂ ಇಲಿ ಬಾವಲಿಗಳಿಗೆ ಬಿಸಾಡಿಬಿಡುವನು.