Deuteronomy · chapter 7 · verse 4
Deuteronomy 7:4 in Kannada
ಯಾಕಂದರೆ ಅವರು ಬೇರೆ ದೇವರುಗಳನ್ನು ನಿನ್ನ ಕುಮಾರರು ಸೇವಿಸುವ ಹಾಗೆ ನನ್ನಿಂದ ತೊಲಗಿಸಾರು. ಆಗ ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ನಿನ್ನನ್ನು ಬೇಗ ನಾಶಮಾಡಿಯಾನು.
Yaakandare avaru bere devarugalannu ninna kumaararu sevisuva haage nanninda tolagisaaru. Aaga kartana kopavu nimma mele uriyalu aatanu ninnannu bega naashamaadiyaanu.
Deuteronomy 7:4 in English
- King James Version (KJV)
- For they will turn away thy son from following me, that they may serve other gods: so will the anger of the LORD be kindled against you, and destroy thee suddenly.
- World English Bible (WEB)
- For that would turn away your sons from following me, that they may serve other gods. So the LORD’s anger would be kindled against you, and he would destroy you quickly.
- American Standard Version (ASV)
- For he will turn away thy son from following me, that they may serve other gods: so will the anger of Jehovah be kindled against you, and he will destroy thee quickly.
- Bible in Basic English (BBE)
- For through them your sons will be turned from me to the worship of other gods: and the Lord will be moved to wrath against you and send destruction on you quickly.
- Darby Translation (DBY)
- for he will turn away thy son from following me, and they will serve other gods, and the anger of Jehovah will be kindled against you, and he will destroy thee quickly.
- Webster's Bible (WBS)
- For they will turn away thy son from following me, that they may serve other gods: so will the anger of the LORD be kindled against you, and destroy thee suddenly.
- Young's Literal Translation (YLT)
- for he doth turn aside thy son from after Me, and they have served other gods, and the anger of Jehovah hath burned against you, and hath destroyed thee hastily.
Read in context
- 2ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಒಪ್ಪಿಸಲು ನೀನು ಅವರನ್ನು ಹೊಡೆದು ಸಂಪೂರ್ಣವಾಗಿ ನಿರ್ಮೂಲ ಮಾಡಬೇಕು. ಅವರ ಸಂಗಡ ಒಡಂಬಡಿಕೆ ಮಾಡಿ ಕೊಳ್ಳಬಾರದು. ಇಲ್ಲವೆ ಅವರಿಗೆ ದಯೆತೋರಿಸ ಬಾರದು.
- 3ಇಲ್ಲವೆ ಅವರ ಸಂಗಡ ಮದುವೆಮಾಡಿ ಕೊಳ್ಳಬಾರದು; ನಿನ್ನ ಕುಮಾರ್ತೆಯನ್ನು ಅವನ ಮಗ ನಿಗೆ ಕೊಡಬಾರದು. ನಿನ್ನ ಕುಮಾರನಿಗೆ ಅವನ ಕುಮಾರ್ತೆಯನ್ನು ತಕ್ಕೊಳ್ಳಬಾರದು.
- 4ಯಾಕಂದರೆ ಅವರು ಬೇರೆ ದೇವರುಗಳನ್ನು ನಿನ್ನ ಕುಮಾರರು ಸೇವಿಸುವ ಹಾಗೆ ನನ್ನಿಂದ ತೊಲಗಿಸಾರು. ಆಗ ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ನಿನ್ನನ್ನು ಬೇಗ ನಾಶಮಾಡಿಯಾನು.
- 5ಅವರಿಗೆ ಮಾಡಬೇಕಾದ ದ್ದೇನಂದರೆ ಅವರ ಬಲಿಪೀಠಗಳನ್ನು ಒಡೆದುಹಾಕ ಬೇಕು; ಅವರ ವಿಗ್ರಹಗಳನ್ನು ಮುರಿದುಹಾಕಬೇಕು; ಅವರ ತೋಪುಗಳನ್ನು ಕಡಿದುಹಾಕಬೇಕು; ಅವರು ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು.
- 6ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ.
Cross references
- Deuteronomy 6:15 ಧರ್ಮೋಪದೇಶಕಾಂಡ 6:15(ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ರೋಷವುಳ್ಳ ದೇವರೇ; ನಿನ್ನ ದೇವ ರಾದ ಕರ್ತನ ಕೋಪವು ನಿನ್ನ ಮೇಲೆ ಉರಿಯಲು ಆತನು ನಿನ್ನನ್ನು ಭೂಮಿಯ ಮೇಲಿಂದ ನಾಶ ಮಾಡುವನು.)
- Exodus 20:5 ವಿಮೋಚನಕಾಂಡ 20:5ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
- Deuteronomy 4:26 ಧರ್ಮೋಪದೇಶಕಾಂಡ 4:26ನಾನು ಈ ದಿನ ಆಕಾಶ ವನ್ನೂ ಭೂಮಿಯನ್ನೂ ಸಾಕ್ಷಿಗೆ ಕರೆದು ನಿಮಗೆ ಹೇಳುವ ದೇನಂದರೆ--ನೀವು ಯೊರ್ದನನ್ನು ದಾಟಿ ಸ್ವಾಧೀನ ಪಡಿಸಿಕೊಳ್ಳುವ ದೇಶದಲ್ಲಿಂದ ಬೇಗನೆ ಹಾಳಾಗಿ ಹೋಗುವಿರಿ. ನೀವು ಬಹು ದಿವಸ ಇರದೆ ಸಂಪೂರ್ಣ ವಾಗಿ ನಶಿಸುವಿರಿ.
- Judges 3:7–8 ನ್ಯಾಯಸ್ಥಾಪಕರು 3:7–8ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತು ಬಾಳ ನನ್ನೂ ತೋಪುಗಳನ್ನೂ ಸೇವಿಸಿದರು. ಆದದರಿಂದ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪಗೊಂಡು ಅವರನ್ನು ಮೆಸೊಪೋತಾಮ್ಯದ ಅರಸನಾದ ಕೂಷನ್ ರಿಷಾತಯಿಮ್ ಕೈಗೆ ಮಾರಿಬಿಟ್ಟನು. ಇಸ್ರಾಯೇಲ್ ಮಕ್ಕಳು ಕೂಷನ್ರಿಷಾತಯಿಮ್ನ್ನು ಎಂಟು ವರುಷ ಸೇವಿಸಿದರು.
- Judges 10:6–7 ನ್ಯಾಯಸ್ಥಾಪಕರು 10:6–7ಆದರೆ ಇಸ್ರಾಯೇಲ್ ಮಕ್ಕಳು ತಿರಿಗಿ ಕರ್ತನ ಮುಂದೆ ಕೆಟ್ಟತನಮಾಡಿ ಬಾಳನನ್ನೂ ಅಷ್ಟೋರೆತನ್ನೂ ಸಿರಿಯಾ ದೇಶದ ದೇವರುಗಳನ್ನೂ ಚೀದೋನಿನ ದೇವರುಗಳನ್ನೂ ಮೋವಾಬಿನ ದೇವರುಗಳನ್ನೂ ಅಮ್ಮೋನನ ಮಕ್ಕಳ ದೇವರುಗಳನ್ನೂ ಫಿಲಿಷ್ಟಿಯರ ದೇವರುಗಳನ್ನೂ ಸೇವಿಸುವವರಾಗಿ ಕರ್ತನನ್ನು ಸೇವಿ ಸದೆ ಆತನನ್ನು ಬಿಟ್ಟು ಹೋದರು. ಆಗ ಕರ್ತನು ಇಸ್ರಾಯೇಲಿಗೆ ವಿರೋಧವಾಗಿ ಕೋಪಗೊಂಡು ಅವ ರನ್ನು ಫಿಲಿಷ್ಟಿಯರ ಕೈಗೂ ಅಮ್ಮೋನನ ಮಕ್ಕಳ ಕೈಗೂ ಮಾರಿಬಿಟ್ಟನು.
- Judges 2:11 ನ್ಯಾಯಸ್ಥಾಪಕರು 2:11ಇಸ್ರಾಯೇಲ್ ಮಕ್ಕಳು ಕರ್ತನ ಮುಂದೆ ಕೆಟ್ಟತನ ಮಾಡಿ ಬಾಳನನ್ನು ಸೇವಿಸಿ
- Deuteronomy 32:16–17 ಧರ್ಮೋಪದೇಶಕಾಂಡ 32:16–17ಅನ್ಯದೇವತೆಗಳಿಂದ ಆತನಿಗೆ ಅವರು ರೋಷ ಹುಟ್ಟಿಸಿದರು. ಅಸಹ್ಯವಾದವುಗಳಿಂದ ಆತನಿಗೆ ಕೋಪ ವನ್ನು ಎಬ್ಬಿಸಿದರು. ದೇವರಿಗೆ ಅಲ್ಲ, ದೆವ್ವಗಳಿಗೆ, ಅವರು ಅರಿಯದ ದೇವರುಗಳಿಗೆ, ಇತ್ತಲಾಗಿ ಬಂದ ಹೊಸ ದೇವರು ಗಳಿಗೆ ನಿಮ್ಮ ಪಿತೃಗಳು ಭಯಪಡದವುಗಳಿಗೆ ಬಲಿ ಅರ್ಪಿಸಿದರು.
- Judges 2:20 ನ್ಯಾಯಸ್ಥಾಪಕರು 2:20ಆದದರಿಂದ ಕರ್ತನು ಇಸ್ರಾಯೇಲಿನ ಮೇಲೆ ಕೋಪದಿಂದ ಉರಿಗೊಂಡು--ನಾನು ಅವರ ತಂದೆ ಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಈ ಜನಾಂಗವು ವಿಾರಿ ನನ್ನ ಮಾತನ್ನು ಕೇಳದೆ ಹೋದ ದರಿಂದ