Deuteronomy · chapter 7 · verse 5
Deuteronomy 7:5 in Kannada
ಅವರಿಗೆ ಮಾಡಬೇಕಾದ ದ್ದೇನಂದರೆ ಅವರ ಬಲಿಪೀಠಗಳನ್ನು ಒಡೆದುಹಾಕ ಬೇಕು; ಅವರ ವಿಗ್ರಹಗಳನ್ನು ಮುರಿದುಹಾಕಬೇಕು; ಅವರ ತೋಪುಗಳನ್ನು ಕಡಿದುಹಾಕಬೇಕು; ಅವರು ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು.
Avarige maadabekaada ddenandare avara balipeethagalannu odeduhaaka beku; avara vigrahagalannu muriduhaakabeku; avara topugalannu kadiduhaakabeku; avaru kettida vigrahagalannu benkiyinda sudabeku.
Deuteronomy 7:5 in English
- King James Version (KJV)
- But thus shall ye deal with them; ye shall destroy their altars, and break down their images, and cut down their groves, and burn their graven images with fire.
- World English Bible (WEB)
- But you shall deal with them like this: you shall break down their altars, dash their pillars in pieces, cut down their Asherah poles, and burn their engraved images with fire.
- American Standard Version (ASV)
- But thus shall ye deal with them: ye shall break down their altars, and dash in pieces their pillars, and hew down their Asherim, and burn their graven images with fire.
- Bible in Basic English (BBE)
- But this is what you are to do to them: their altars are to be pulled down and their pillars broken, and their holy trees cut down and their images burned with fire.
- Darby Translation (DBY)
- But thus shall ye deal with them: ye shall break down their altars, and shatter their statues, and hew down their Asherahs, and burn their graven images with fire.
- Webster's Bible (WBS)
- But thus shall ye deal with them; ye shall destroy their altars, and break down their images, and cut down their groves, and burn their graven images with fire.
- Young's Literal Translation (YLT)
- 'But thus thou dost to them: their altars ye break down, and their standing pillars ye shiver, and their shrines ye cut down, and their graven images ye burn with fire;
Read in context
- 3ಇಲ್ಲವೆ ಅವರ ಸಂಗಡ ಮದುವೆಮಾಡಿ ಕೊಳ್ಳಬಾರದು; ನಿನ್ನ ಕುಮಾರ್ತೆಯನ್ನು ಅವನ ಮಗ ನಿಗೆ ಕೊಡಬಾರದು. ನಿನ್ನ ಕುಮಾರನಿಗೆ ಅವನ ಕುಮಾರ್ತೆಯನ್ನು ತಕ್ಕೊಳ್ಳಬಾರದು.
- 4ಯಾಕಂದರೆ ಅವರು ಬೇರೆ ದೇವರುಗಳನ್ನು ನಿನ್ನ ಕುಮಾರರು ಸೇವಿಸುವ ಹಾಗೆ ನನ್ನಿಂದ ತೊಲಗಿಸಾರು. ಆಗ ಕರ್ತನ ಕೋಪವು ನಿಮ್ಮ ಮೇಲೆ ಉರಿಯಲು ಆತನು ನಿನ್ನನ್ನು ಬೇಗ ನಾಶಮಾಡಿಯಾನು.
- 5ಅವರಿಗೆ ಮಾಡಬೇಕಾದ ದ್ದೇನಂದರೆ ಅವರ ಬಲಿಪೀಠಗಳನ್ನು ಒಡೆದುಹಾಕ ಬೇಕು; ಅವರ ವಿಗ್ರಹಗಳನ್ನು ಮುರಿದುಹಾಕಬೇಕು; ಅವರ ತೋಪುಗಳನ್ನು ಕಡಿದುಹಾಕಬೇಕು; ಅವರು ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು.
- 6ಯಾಕಂದರೆ ನೀನು ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಜನವೇ; ನಿನ್ನ ದೇವರಾದ ಕರ್ತನು ನಿನ್ನನ್ನು ಭೂಮಿಯ ಮೇಲಿರುವ ಎಲ್ಲಾ ಜನಗಳೊಳಗಿಂದ ತನಗೆ ಸ್ವಕೀಯ ಜನವಾಗುವ ಹಾಗೆ ಆರಿಸಿಕೊಂಡಿ ದ್ದಾನೆ.
- 7ನೀವು ಎಲ್ಲಾ ಜನಗಳಿಗಿಂತ ಹೆಚ್ಚಾಗಿರುವ ಕಾರಣ ಕರ್ತನು ನಿಮ್ಮನ್ನು ಪ್ರೀತಿಸಿ ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಗಳಿಗಿಂತ ಬಹಳ ಸ್ವಲ್ಪ.
Cross references
- Exodus 23:24 ವಿಮೋಚನಕಾಂಡ 23:24ಅವರ ದೇವರುಗಳಿಗೆ ನೀವು ಅಡ್ಡಬೀಳಲೂ ಬಾರದು, ಅವುಗಳನ್ನು ಸೇವಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ ಅವರನ್ನು ನಿರ್ಮೂಲ ಮಾಡಿಬಿಟ್ಟು ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದು ಹಾಕಬೇಕು.
- Exodus 34:13 ವಿಮೋಚನಕಾಂಡ 34:13ಆದರೆ ನೀವು ಅವರ ಯಜ್ಞ ವೇದಿಗಳನ್ನು ಹಾಳುಮಾಡಿ ವಿಗ್ರಹಗಳನ್ನು ಒಡೆದು (ಅಶೇರ) ವಿಗ್ರಹ ಸ್ತಂಭಗಳನ್ನು ಕಡಿದುಹಾಕಬೇಕು.
- Deuteronomy 12:2–3 ಧರ್ಮೋಪದೇಶಕಾಂಡ 12:2–3ನೀವು ಸ್ವಾಧೀನಮಾಡಿಕೊಳ್ಳುವ ಜನಾಂಗ ಗಳು ತಮ್ಮ ದೇವರುಗಳಿಗೆ ಎತ್ತರವಾದ ಬೆಟ್ಟಗಳ ಮೇಲೆಯೂ ಗುಡ್ಡಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಸೇವೆಮಾಡಿದ ಸ್ಥಳಗಳನ್ನು, ನೀವು ಪೂರ್ಣವಾಗಿ ನಾಶಮಾಡಬೇಕು. ನೀವು ಅವರ ಬಲಿಪೀಠಗಳನ್ನು ಕೆಡವಿಹಾಕಿ ಅವರ ಸ್ತಂಭಗಳನ್ನು ಒಡೆದು ಅವರ ತೋಪುಗಳನ್ನು ಬೆಂಕಿಯಿಂದ ಸುಟ್ಟು ಅವರ ದೇವರುಗಳ ವಿಗ್ರಹಗಳನ್ನು ಕಡಿದುಹಾಕಿ ಅವರ ಹೆಸರುಗಳನ್ನು ಆ ಸ್ಥಳಗಳೊಳಗಿಂದ ನಾಶಮಾಡಬೇಕು.
- Deuteronomy 7:25 ಧರ್ಮೋಪದೇಶಕಾಂಡ 7:25ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು; ಅವುಗಳ ಮೇಲಿರುವ ಬೆಳ್ಳಿ ಬಂಗಾರವನ್ನು ಆಶಿಸಿ ನೀನು ತಕ್ಕೊಳ್ಳಬಾರದು; ಅದು ನಿನಗೆ ಉರ್ಲಾ ದೀತು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.ನೀನು ಅದರಂತೆ ಶಾಪಕ್ಕೊಳಗಾಗದ ಹಾಗೆ ಅಸಹ್ಯವಾದದ್ದನ್ನು ನಿನ್ನ ಮನೆಗೆ ತಕ್ಕೊಂಡು ಬರ ಬಾರದು; ಅದನ್ನು ಸಂಪೂರ್ಣವಾಗಿ ಅಸಹ್ಯಿಸಬೇಕು; ಸಂಪೂರ್ಣವಾಗಿ ಹೇಸಿಕೊಳ್ಳಬೇಕು; ಯಾಕಂದರೆ ಅದು ಶಪಿಸಲ್ಪಟ್ಟದ್ದೇ.
- Deuteronomy 16:22 ಧರ್ಮೋಪದೇಶಕಾಂಡ 16:22ಯಾವ ವಿಗ್ರಹ ವನ್ನೂ ನಿಲ್ಲಿಸಬಾರದು; ಇದನ್ನು ನಿನ್ನ ದೇವರಾದ ಕರ್ತನು ಹಗೆಮಾಡುತ್ತಾನೆ.
- Deuteronomy 9:21 ಧರ್ಮೋಪದೇಶಕಾಂಡ 9:21ಇದಲ್ಲದೆ ನೀವು ಮಾಡಿದ ಪಾಪವಾಗಿರುವ ಆ ಕರುವನ್ನು ತಕ್ಕೊಂಡು ಬೆಂಕಿಯಲ್ಲಿ ಸುಟ್ಟು ತುಳಿದು ಅದು ಧೂಳಿ ನಂತೆ ಪುಡಿಯಾಗುವ ವರೆಗೆ ಚೆನ್ನಾಗಿ ಅರೆದು ಅದರ ಧೂಳನ್ನು ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ನಾನು ಹಾಕಿದೆನು.
- Judges 6:25–26 ನ್ಯಾಯಸ್ಥಾಪಕರು 6:25–26ಅದೇ ರಾತ್ರಿಯಲ್ಲಿ ಕರ್ತನು ಅವನಿಗೆ--ನೀನು ನಿನ್ನ ತಂದೆಗಿರುವ ಎತ್ತುಗಳಲ್ಲಿ ಎಳೇದಾದ ಏಳು ವರುಷದ ಎರಡನೇ ಹೋರಿಯನ್ನು ತೆಗೆದುಕೊಂಡು ಹೋಗಿ ನಿನ್ನ ತಂದೆಗೆ ಇರುವ ಬಾಳನ ಬಲಿಪೀಠವನ್ನು ಕೆಡವಿ ಅದರ ಸವಿಾಪದಲ್ಲಿರುವ ತೋಪನ್ನು ಕಡಿದು ಹಾಕಿ ಈ ಪರ್ವತದ ತುದಿಯಲ್ಲಿ ನೇಮಕವಾದ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಆ ಎರಡನೇ ಹೋರಿಯನ್ನು ತಂದು ಅದನ್ನು ನೀನು ಕಡಿದುಹಾಕಿದ ತೋಪಿನ ಕಟ್ಟಿಗೆಗಳ ಮೇಲೆ ದಹನಬಲಿಯಾಗಿ ಅರ್ಪಿಸು ಅಂದನು.
- Leviticus 26:1 ಯಾಜಕಕಾಂಡ 26:1ನೀವು ನಿಮಗಾಗಿ ವಿಗ್ರಹಗಳನ್ನಾಗಲಿ ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ; ನಿಲ್ಲಿಸುವ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ. ಕಲ್ಲಿನ ವಿಗ್ರಹಗಳನ್ನಾಗಲಿ ನಿಮ್ಮ ದೇಶದಲ್ಲಿಟ್ಟು ಕೊಂಡು ಅವುಗಳಿಗೆ ಅಡ್ಡ ಬೀಳಬೇಡಿರಿ. ನಿಮ್ಮ ದೇವರಾಗಿರುವ ಕರ್ತನು ನಾನೇ.
- 2 Kings 23:6–14 2 ಅರಸುಗಳು 23:6–14ಕರ್ತನ ಆಲಯದೊ ಳಗಿಂದ ವಿಗ್ರಹದ ತೋಪನ್ನು ಯೆರೂಸಲೇಮಿನ ಹೊರಗೆ ಕಿದ್ರೋನ್ ಹಳ್ಳಕ್ಕೆ ಅದನ್ನು ತರಿಸಿ ಅವನು ಕಿದ್ರೋನ್ ಹಳ್ಳದ ಬಳಿಯಲ್ಲಿ ಸುಟ್ಟು ಧೂಳಾಗಿ ಪುಡಿಮಾಡಿ ಆ ಧೂಳಿನ ಪುಡಿಯನ್ನು ಜನರ ಸಮಾಧಿ ಗಳ ಮೇಲೆ ಹಾಕಿಸಿದನು. ಸ್ತ್ರೀಯರು ವಿಗ್ರಹದ ತೋಪಿಗೋಸ್ಕರ ಮನೆಗಳನ್ನು ನೇಯುತ್ತಿದ್ದ ಕಡೆಯಲ್ಲಿ ಕರ್ತನ ಮನೆಯ ಬಳಿಯಲ್ಲಿ ಇದ್ದ ಪುರುಷ ಸಂಗಮರ ಮನೆಗಳನ್ನು ಕೆಡವಿಸಿದನು. ಇದಲ್ಲದೆ ಅವನು ಯೆಹೂದದ ಪಟ್ಟಣಗಳಿಂದ ಯಾಜಕರೆಲ್ಲರನ್ನು ಬರ ಮಾಡಿ ಗೆಬ ಮೊದಲುಗೊಂಡು ಬೇರ್ಷೆಬದ ವರೆಗೂ ಯಾಜಕರು ಧೂಪ ಸುಡುತ್ತಿದ್ದ ಉನ್ನತ ಸ್ಥಳಗಳನ್ನು ಹೊಲೆಮಾಡಿ ಪಟ್ಟಣದ ಬಾಗಲಿನ ಎಡಪಾರ್ಶ್ವದಲ್ಲಿದ್ದ ಪಟ್ಟಣದ ಅಧಿಪತಿಯಾದ ಯೆಹೋಶುವನ ಬಾಗಲಿನ ದ್ವಾರದಲ್ಲಿದ್ದ ಬಾಗಲುಗಳ ಉನ್ನತ ಸ್ಥಳಗಳನ್ನು ಕೆಡವಿ ಹಾಕಿದನು. ಆದರೆ ಉನ್ನತ ಸ್ಥಳಗಳ ಯಾಜಕರು ಯೆರೂಸಲೇಮಿನಲ್ಲಿರುವ ಕರ್ತನ ಬಲಿಪೀಠದ ಬಳಿ ಯಲ್ಲಿ ಸೇರದೆ ತಮ್ಮ ಸಹೋದರರ ಮಧ್ಯದಲ್ಲಿ ಹುಳಿ ಇಲ್ಲದ ರೊಟ್ಟಿಯನ್ನು ತಿನ್ನುತ್ತಾ ಇದ್ದರು. ಯಾವನೂ ತನ್ನ ಮಗನನ್ನಾದರೂ ಮಗಳನ್ನಾದರೂ ಮೋಲೆಕನಿ ಗೋಸ್ಕರ ಬೆಂಕಿದಾಟಿಸದ ಹಾಗೆ ಹಿನ್ನೋಮನ ಮಕ್ಕಳ ತಗ್ಗಿನಲ್ಲಿದ್ದ ತೋಫೆತನ್ನು ಹೊಲೆಮಾಡಿದನು. ಬೈಲ ಲ್ಲಿರುವ ಪ್ರಧಾನನಾದ ನಾತಾನ್ ಮೆಲೆಕನ ಕೊಠಡಿಯ ಹತ್ತಿರ ಇದ್ದ ಕರ್ತನ ಮನೆಯ ದ್ವಾರದ ಬಳಿಯಲ್ಲಿ ಯೆಹೂದದ ಅರಸುಗಳು ಸೂರ್ಯನಿಗೆ ಕೊಟ್ಟ ಕುದುರೆ ಗಳನ್ನು ತೆಗೆದುಹಾಕಿ ಸೂರ್ಯನ ರಥಗಳನ್ನು ಬೆಂಕಿ ಯಿಂದ ಸುಟ್ಟುಬಿಟ್ಟನು. ಯೆಹೂದದ ಅರಸರು ಉಂಟು ಮಾಡಿದ ಆಹಾಜನ ಮೇಲು ಮಾಳಿಗೆಯ ಮೇಲೆ ಇದ್ದ ಬಲಿಪೀಠಗಳನ್ನೂ ಮನಸ್ಸೆಯು ಕರ್ತನ ಮನೆಯ ಎರಡು ಅಂಗಳಗಳಲ್ಲಿ ಮಾಡಿದ ಬಲಿಪೀಠ ಗಳನ್ನೂ ಅರಸನು ಕೆಡವಿಸಿ ಅಲ್ಲಿಂದ ಅದರ ಧೂಳನ್ನು ಕಿದ್ರೋನ್ ಹಳ್ಳದಲ್ಲಿ ಹಾಕಿಸಿದನು. ಇದಲ್ಲದೆ ಯೆರೂಸಲೇಮಿನ ಮುಂದೆ ಮೋಸದ ಬೆಟ್ಟದ ಬಲ ಪಾರ್ಶ್ವದಲ್ಲಿದ್ದ ಚೀದೋನ್ಯರ ಅಸಹ್ಯಕರವಾದ ಅಷ್ಟೋ ರೆತಿಗೂ ಮೋವಾಬ್ಯರ ಅಸಹ್ಯಕರವಾದ ಕೆಮೋಷ ನಿಗೂ ಅಮ್ಮೋನಿನ ಮಕ್ಕಳ ಅಸಹ್ಯಕರವಾದ ಮಿಲ್ಕೋ ಮ್ನಿಗೂ ಇಸ್ರಾಯೇಲಿನ ಅರಸನಾದ ಸೊಲೊ ಮೋನನು ಕಟ್ಟಿಸಿದ ಉನ್ನತ ಸ್ಥಳಗಳನ್ನೂ ಅರಸನು ಹೊಲೆಮಾಡಿ ವಿಗ್ರಹಗಳನ್ನು ಮುರಿದು ವಿಗ್ರಹದ ತೋಪುಗಳನ್ನು ಕಡಿದುಬಿಟ್ಟು ಅವುಗಳ ಸ್ಥಳಗಳನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.
- Exodus 32:20 ವಿಮೋಚನಕಾಂಡ 32:20ಅವರು ಮಾಡಿದ ಕರುವನ್ನು ಅವನು ತೆಗೆದುಕೊಂಡು ಅದನ್ನು ಬೆಂಕಿಯಲ್ಲಿ ಸುಟ್ಟು ಪುಡಿಯಾಗುವ ವರೆಗೆ ಅರೆಸಿ ನೀರಿನ ಮೇಲೆ ಚೆಲ್ಲಿ ಆ ನೀರನ್ನು ಇಸ್ರಾಯೇಲ್ ಮಕ್ಕಳು ಕುಡಿಯುವಂತೆ ಮಾಡಿದನು.