Deuteronomy · chapter 9 · verse 15
Deuteronomy 9:15 in Kannada
ಆಗ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದೆನು; ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿತ್ತು; ಒಡಂಬಡಿ ಕೆಯ ಎರಡು ಹಲಗೆಗಳು ನನ್ನ ಎರಡು ಕೈಗಳಲ್ಲಿ ಇದ್ದವು.
Aaga naanu tirugikondu bettadinda ilidenu; aa bettavu benkiyinda uriyuttittu; odambadi keya eradu halagegalu nanna eradu kaigalalli iddavu.
Deuteronomy 9:15 in English
- King James Version (KJV)
- So I turned and came down from the mount, and the mount burned with fire: and the two tables of the covenant [were] in my two hands.
- World English Bible (WEB)
- So I turned and came down from the mountain, and the mountain was burning with fire. The two tablets of the covenant were in my two hands.
- American Standard Version (ASV)
- So I turned and came down from the mount, and the mount was burning with fire: and the two tables of the covenant were in my two hands.
- Bible in Basic English (BBE)
- So turning round I came down from the mountain, and the mountain was burning with fire; and the two stones of the agreement were in my hands.
- Darby Translation (DBY)
- And I turned and came down from the mountain, and the mountain burned with fire; and the two tables of the covenant were in my two hands.
- Webster's Bible (WBS)
- So I turned and came down from the mount, and the mount burned with fire: and the two tables of the covenant [were] in my two hands.
- Young's Literal Translation (YLT)
- 'And I turn, and come down from the mount, and the mount is burning with fire, and the two tables of the covenant on my two hands,
Read in context
- 13ಇದಲ್ಲದೆ ಕರ್ತನು ನನಗೆ--ನಾನು ಈ ಜನವನ್ನು ನೋಡಿದ್ದೇನೆ; ಇಗೋ, ಇದು ಬಗ್ಗದ ಕುತ್ತಿಗೆಯುಳ್ಳ ಜನವೇ.
- 14ನನ್ನನ್ನು ಬಿಡು; ಆಗ ಅವರನ್ನು ನಾಶಮಾಡಿ ಅವರ ಹೆಸರನ್ನು ಆಕಾಶದ ಕೆಳಗಿನಿಂದ ಅಳಿಸಿಬಿಟ್ಟು ನಿನ್ನನ್ನು ಅವರಿಗಿಂತ ಬಲವಾದ ಬಹು ಜನಾಂಗವಾಗ ಮಾಡುವೆನು ಎಂದು ಹೇಳಿದನು.
- 15ಆಗ ನಾನು ತಿರುಗಿಕೊಂಡು ಬೆಟ್ಟದಿಂದ ಇಳಿದೆನು; ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿತ್ತು; ಒಡಂಬಡಿ ಕೆಯ ಎರಡು ಹಲಗೆಗಳು ನನ್ನ ಎರಡು ಕೈಗಳಲ್ಲಿ ಇದ್ದವು.
- 16ನಾನು ನೋಡಿದಾಗ ಇಗೋ, ನೀವು ನಿಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪ ಮಾಡಿ ಎರಕ ಹೊಯ್ದ ಕರುವನ್ನು ನಿಮಗೆ ಮಾಡಿ ಕೊಂಡು ಕರ್ತನು ನಿಮಗೆ ಆಜ್ಞಾಪಿಸಿದ್ದ ಮಾರ್ಗವನ್ನು ಬೇಗ ಬಿಟ್ಟುಹೋಗಿದ್ದಿರಿ.
- 17ಆಗ ನಾನು ಆ ಎರಡು ಹಲಗೆಗಳನ್ನು ತಕ್ಕೊಂಡು ನನ್ನ ಎರಡು ಕೈಗಳಿಂದ ಬಿಸಾಡಿ ನಿಮ್ಮ ಕಣ್ಣು ಮುಂದೆ ಒಡೆದು ಹಾಕಿದೆನು.
Cross references
- Exodus 19:18 ವಿಮೋಚನಕಾಂಡ 19:18ಕರ್ತನು ಅಗ್ನಿಯೊಳಗೆ ಸೀನಾಯಿ ಬೆಟ್ಟದ ಮೇಲೆ ಇಳಿದದ್ದರಿಂದ ಆ ಬೆಟ್ಟದಲ್ಲೆಲ್ಲಾ ಹೊಗೆ ಹಾಯುತ್ತಿತ್ತು. ಅದರ ಹೊಗೆಯು ಆವಿಗೆಯ ಹೊಗೆ ಯಂತೆ ಏರಿ ಬರುತ್ತಾ ಇತ್ತು. ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.
- Deuteronomy 5:23 ಧರ್ಮೋಪದೇಶಕಾಂಡ 5:23(ಆ ಬೆಟ್ಟವು ಬೆಂಕಿಯಿಂದ ಉರಿಯುತ್ತಿರಲಾಗಿ ನೀವು ಕತ್ತಲೆಯಿಂದ ಆ ಶಬ್ದವನ್ನು ಕೇಳಿ ನಿಮ್ಮ ಗೋತ್ರ ಗಳ ಮುಖ್ಯಸ್ಥರೂ ನಿಮ್ಮ ಹಿರಿಯರೂ ನನ್ನ ಬಳಿಗೆ ಬಂದು ನನಗೆ)
- Deuteronomy 4:11 ಧರ್ಮೋಪದೇಶಕಾಂಡ 4:11ಆಗ ನೀವು ಹತ್ತಿರ ಬಂದು ಬೆಟ್ಟದ ಕೆಳಗೆ ನಿಂತಿರಿ; ಆ ಬೆಟ್ಟವು ಕತ್ತಲೆಯಾ ಗಿದ್ದು ಮೇಘಗಳೂ ಗಾಢಾಂಧಕಾರವೂ ಉಂಟಾಗಿ ಆಕಾಶ ಮಧ್ಯದ ವರೆಗೆ ಬೆಂಕಿಯಿಂದ ಉರಿಯು ತ್ತಿತ್ತು.
- Exodus 9:23 ವಿಮೋಚನಕಾಂಡ 9:23ಮೋಶೆಯು ಆಕಾಶದ ಕಡೆಗೆ ಕೋಲನ್ನು ಚಾಚಿ ದನು. ಆಗ ಕರ್ತನು ಗುಡುಗುಗಳನ್ನು ಆನೆಕಲ್ಲಿನ ಮಳೆಯನ್ನು ಸುರಿಸಿದನು. ಅಗ್ನಿಯು ಭೂಮಿಗೆ ಇಳಿದು ಬಂತು. ಹೀಗೆ ಕರ್ತನು ಐಗುಪ್ತದೇಶದ ಮೇಲೆ ಆನೆಕಲ್ಲಿನ ಮಳೆಯನ್ನು ಸುರಿಸಿದನು.
- Exodus 32:14–35 ವಿಮೋಚನಕಾಂಡ 32:14–35ಆಗ ಕರ್ತನು ತನ್ನ ಜನರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿ ಕೊಂಡನು. ಆಗ ಮೋಶೆಯು ತಿರುಗಿಕೊಂಡು ಎರಡೂ ಬದಿಯಲ್ಲಿ ಬರೆದಿರುವ ಹಲಗೆಗಳಾದ ಸಾಕ್ಷಿಯ ಎರಡು ಹಲಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟದಿಂದಿ ಳಿದನು; ಆ ಹಲಗೆಗಳು ಈ ಪಕ್ಕದಲ್ಲಿಯೂ ಆ ಪಕ್ಕದಲ್ಲಿಯೂ ಬರೆಯಲ್ಪಟ್ಟಿದ್ದವು. ಆ ಹಲಗೆಗಳು ದೇವರ ಕೆಲಸವಾಗಿದ್ದವು. ಆ ಬರಹವು ಹಲಗೆಗಳ ಮೇಲೆ ಕೆತ್ತಿದ ದೇವರ ಬರಹವೇ. ಜನರು ಕೂಗುತ್ತಿದ್ದ ಶಬ್ದವನ್ನು ಯೆಹೋಶುವನು ಕೇಳಿದಾಗ ಮೋಶೆಗೆ--ಪಾಳೆಯದಲ್ಲಿ ಯುದ್ಧದ ಶಬ್ದವು ಇದೆ ಎಂದು ಹೇಳಿದನು. ಅದಕ್ಕೆ ಮೋಶೆಯು--ಅದು ಜಯಧ್ವನಿಯು ಅಲ್ಲ, ಅಪ ಜಯದ ಧ್ವನಿಯೂ ಅಲ್ಲ, ಆದರೆ ಹಾಡುವವರ ಧ್ವನಿ ಯನ್ನು ನಾನು ಕೇಳುತ್ತೇನೆ ಅಂದನು. ಇದಾದ ಮೇಲೆ ಮೋಶೆಯು ಪಾಳೆಯದ ಸವಿಾಪಕ್ಕೆ ಬಂದು ಆ ಕರುವನ್ನೂ ಅವರ ನಾಟ್ಯವನ್ನೂ ನೋಡಿ ಕೋಪ ಗೊಂಡು ಕೈಯಲ್ಲಿದ್ದ ಹಲಗೆಗಳನ್ನು ಬಿಸಾಡಿ ಬೆಟ್ಟದ ಅಡಿಯಲ್ಲಿ ಅವುಗಳನ್ನು ಒಡೆದುಬಿಟ್ಟನು. ಅವರು ಮಾಡಿದ ಕರುವನ್ನು ಅವನು ತೆಗೆದುಕೊಂಡು ಅದನ್ನು ಬೆಂಕಿಯಲ್ಲಿ ಸುಟ್ಟು ಪುಡಿಯಾಗುವ ವರೆಗೆ ಅರೆಸಿ ನೀರಿನ ಮೇಲೆ ಚೆಲ್ಲಿ ಆ ನೀರನ್ನು ಇಸ್ರಾಯೇಲ್ ಮಕ್ಕಳು ಕುಡಿಯುವಂತೆ ಮಾಡಿದನು. ಮೋಶೆಯು ಆರೋನನಿಗೆ--ಈ ಜನರ ಮೇಲೆ ದೊಡ್ಡ ಪಾಪವನ್ನು ನೀನು ಬರಮಾಡುವಂತೆ ಅವರು ನಿನಗೆ ಏನು ಮಾಡಿದರು ಎಂದು ಕೇಳಿದನು. ಅದಕ್ಕೆ ಆರೋನನು--ನನ್ನ ಒಡೆಯನ ಕೋಪ ಉರಿಯದೆ ಇರಲಿ. ಈ ಜನರು ಕೇಡಿನ ಮನಸ್ಸಿನವರಾಗಿದ್ದಾರೆಂದು ನೀನು ಬಲ್ಲೆ. ನಮಗೋಸ್ಕರ ನಮ್ಮ ಮುಂದೆ ಹೋಗುವ ದೇವರುಗಳನ್ನು ಮಾಡು. ಯಾಕಂದರೆ ಐಗುಪ್ತದೇಶದೊಳಗಿಂದ ನಮ್ಮನ್ನು ಬರಮಾಡಿದ ಈ ಮೋಶೆಗೆ ಏನಾಯಿತೋ ನಮಗೆ ತಿಳಿಯದು ಎಂದು ನನಗೆ ಅವರು ಹೇಳಿದರು. ಆದದರಿಂದ ನಾನು ಅವರಿಗೆ--ಚಿನ್ನ ಇದ್ದವರು ಅದನ್ನು ಕಿತ್ತು ಬಿಡಲಿ ಅಂದೆನು. ಅವರು ಅದನ್ನು ನನಗೆ ಕೊಟ್ಟರು. ನಾನು ಅದನ್ನು ಬೆಂಕಿಯಲ್ಲಿ ಹಾಕಿದಾಗ ಈ ಕರುವು ಉಂಟಾ ಯಿತು ಅಂದೆನು. ಜನರು ಬೆತ್ತಲೆಯಾಗಿರುವದನ್ನು ಮೋಶೆಯು ನೋಡಿದಾಗ (ಆರೋನನು ಅವರ ಶತ್ರುಗಳ ಮಧ್ಯ ದಲ್ಲಿ ನಾಚಿಕೆಯಾಗುವಂತೆ ಅವರನ್ನು ಬೆತ್ತಲೆಯಾಗಿ ಮಾಡಿದ್ದನು.) ಅವನು ಪಾಳೆಯದ ಬಾಗಿಲಲ್ಲಿ ನಿಂತುಕೊಂಡು--ಕರ್ತನ ಪಕ್ಷದವನು ಯಾರು ಅವನು ನನ್ನ ಬಳಿಗೆ ಬರಲಿ ಅಂದನು. ಆಗ ಲೇವಿಯ ಕುಮಾರರೆಲ್ಲರು ಅವನ ಬಳಿಗೆ ಕೂಡಿ ಬಂದರು. ಅವನು ಅವರಿಗೆ--ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪ್ರತಿಯೊಬ್ಬನು ತನ್ನ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದಲ್ಲೆಲ್ಲಾ ಒಳಗಿನಿಂದ ಹೊರಕ್ಕೆ ದ್ವಾರದಿಂದ ದ್ವಾರಕ್ಕೆ ಹೋಗಿ ತನ್ನ ಸಹೋದರನನ್ನೂ ತನ್ನ ಜೊತೆಗಾರನನ್ನೂ ತನ್ನ ನೆರೆಯವನನ್ನೂ ಕೊಲ್ಲಲಿ ಎಂದು ಹೇಳಿದನು. ಲೇವಿಯ ಮಕ್ಕಳು ಮೋಶೆಯ ಮಾತಿನಂತೆ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರುಸಾವಿರ ಜನರು ಸತ್ತರು. ಮೋಶೆಯು--ಈ ದಿನ ಆತನು ನಿಮ್ಮ ಮೇಲೆ ತನ್ನ ಆಶೀರ್ವಾದವನ್ನು ಅನುಗ್ರಹಿಸುವಂತೆ ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಮಗನಿಗೋಸ್ಕರವೂ ತನ್ನ ಸಹೋದರನಿಗೋಸ್ಕರವೂ ಈ ದಿನ ಕರ್ತನಿಗೆ ಪ್ರತಿಷ್ಠೆ ಮಾಡಿಕೊಳ್ಳಲಿ ಅಂದನು. ಮರುದಿನದಲ್ಲಿ ಆದದ್ದೇನಂದರೆ, ಮೋಶೆಯು ಜನರಿಗೆ-ನೀವು ದೊಡ್ಡ ಪಾಪವನ್ನು ಮಾಡಿದ್ದೀರಿ, (ಆದದರಿಂದ) ಈಗ ನಾನು ಕರ್ತನ ಬಳಿಗೆ ಹೋಗು ವೆನು, ಒಂದು ವೇಳೆ ನಿಮ್ಮ ಪಾಪಕ್ಕಾಗಿ ನಾನು ಪ್ರಾಯ ಶ್ಚಿತ್ತ ಮಾಡಿಯೇನು ಅಂದನು. ಹೀಗೆ ಮೋಶೆಯು ಕರ್ತನ ಬಳಿಗೆ ತಿರಿಗಿ ಹೋಗಿ ಹೇಳಿದ್ದೇನಂದರೆ, ಅಯ್ಯೋ, ಈ ಜನರು ದೊಡ್ಡ ಪಾಪವನ್ನು ಮಾಡಿದ್ದಾರೆ. ಅವರು ತಮಗೆ ಚಿನ್ನದ ದೇವರುಗಳನ್ನು ಮಾಡಿಕೊಂಡಿದ್ದಾರೆ. ಆದಾಗ್ಯೂ ಈಗ ನೀನು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲ ವಾದರೆ ನೀನು ಬರೆದ ನಿನ್ನ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು ಎಂದು ಬೇಡಿಕೊಂಡನು. ಅದಕ್ಕೆ ಕರ್ತನು ಮೋಶೆಗೆ--ನನಗೆ ವಿರೋಧ ವಾಗಿ ಪಾಪಮಾಡಿದವನ ಹೆಸರನ್ನೇ ನಾನು ನನ್ನ ಪುಸ್ತಕದಿಂದ ಅಳಿಸಿಬಿಡುವೆನು. ಆದರೆ ಈಗ ನೀನು ಹೋರಟು ನಾನು ನಿನಗೆ ಹೇಳಿದ ಸ್ಥಳಕ್ಕೆ ಜನರನ್ನು ಕರೆದುಕೊಂಡು ಹೋಗು; ಇಗೋ, ನನ್ನ ದೂತನು ನಿನ್ನ ಮುಂದೆ ಹೋಗುವನು. ಆದಾಗ್ಯೂ ನಾನು ಶಿಕ್ಷಿಸುವ ದಿನದಲ್ಲಿ ಅವರ ಪಾಪಕ್ಕೆ ತಕ್ಕಂತೆ ಶಿಕ್ಷಿಸುವೆನು.ಹೀಗೆ ಜನರ ಪ್ರೇರಣೆಯಿಂದ ಆರೋನನು ಕರುವನ್ನು ಮಾಡಿದ್ದರಿಂದ ಕರ್ತನು ಜನರನ್ನು ಬಾಧಿಸಿದನು. ಹೀಗೆ ಜನರ ಪ್ರೇರಣೆಯಿಂದ ಆರೋನನು ಕರುವನ್ನು ಮಾಡಿದ್ದರಿಂದ ಕರ್ತನು ಜನರನ್ನು ಬಾಧಿಸಿದನು.
- Hebrews 12:18 ಇಬ್ರಿಯರಿಗೆ 12:18ಮುಟ್ಟಬಹುದಾದ ಮತ್ತು ಬೆಂಕಿ ಹತ್ತಿದಂಥ ಬೆಟ್ಟಕ್ಕೂ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ