Deuteronomy · chapter 9 · verse 19
Deuteronomy 9:19 in Kannada
ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಮಾಡುವ ಕೋಪ ರೌದ್ರಗಳಿಗೆ ಹೆದರಿದೆನು; ಆ ಕಾಲದಲ್ಲಿಯೂ ಕರ್ತನು ನನ್ನ ಪ್ರಾರ್ಥನೆ ಯನ್ನು ಕೇಳಿದನು.
Kartanu nimmannu naashamaaduva haage nimma mele maaduva kopa raudragalige hedaridenu; aa kaaladalliyoo kartanu nanna praarthane yannu kelidanu.
Deuteronomy 9:19 in English
- King James Version (KJV)
- For I was afraid of the anger and hot displeasure, wherewith the LORD was wroth against you to destroy you. But the LORD hearkened unto me at that time also.
- World English Bible (WEB)
- For I was afraid of the anger and hot displeasure with which the LORD was angry against you to destroy you. But the LORD listened to me that time also.
- American Standard Version (ASV)
- For I was afraid of the anger and hot displeasure, wherewith Jehovah was wroth against you to destroy you. But Jehovah hearkened unto me that time also.
- Bible in Basic English (BBE)
- For I was full of fear because of the wrath of the Lord which was burning against you, with your destruction in view. But again the Lord's ear was open to my prayer.
- Darby Translation (DBY)
- For I was afraid of the anger and fury wherewith Jehovah was wroth against you to destroy you. And Jehovah listened unto me also at that time.
- Webster's Bible (WBS)
- (For I was afraid of the anger and hot displeasure with which the LORD was wroth against you to destroy you.) But the LORD hearkened to me at that time also.
- Young's Literal Translation (YLT)
- 'For I have been afraid because of the anger and the fury with which Jehovah hath been wroth against you, to destroy you; and Jehovah doth hearken unto me also at this time.
Read in context
- 17ಆಗ ನಾನು ಆ ಎರಡು ಹಲಗೆಗಳನ್ನು ತಕ್ಕೊಂಡು ನನ್ನ ಎರಡು ಕೈಗಳಿಂದ ಬಿಸಾಡಿ ನಿಮ್ಮ ಕಣ್ಣು ಮುಂದೆ ಒಡೆದು ಹಾಕಿದೆನು.
- 18ಆ ಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನುಮಾಡಿ ಆತನಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿ ತಿನ್ನದೆ, ನೀರು ಕುಡಿಯದೆ, ಕರ್ತನ ಮುಂದೆ ನಾನು ಬಿದ್ದಿದ್ದೆನು.
- 19ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಮಾಡುವ ಕೋಪ ರೌದ್ರಗಳಿಗೆ ಹೆದರಿದೆನು; ಆ ಕಾಲದಲ್ಲಿಯೂ ಕರ್ತನು ನನ್ನ ಪ್ರಾರ್ಥನೆ ಯನ್ನು ಕೇಳಿದನು.
- 20ಆರೋನನನ್ನು ನಾಶಮಾಡುವ ಹಾಗೆ ಕರ್ತನು ಅವನ ಮೇಲೆಯೂ ಬಹಳ ಕೋಪ ಗೊಂಡನು. ಆದದರಿಂದ ಆರೋನನಿಗೋಸ್ಕರವೂ ಆ ಸಮಯದಲ್ಲಿ ಪ್ರಾರ್ಥನೆಮಾಡಿದೆನು.
- 21ಇದಲ್ಲದೆ ನೀವು ಮಾಡಿದ ಪಾಪವಾಗಿರುವ ಆ ಕರುವನ್ನು ತಕ್ಕೊಂಡು ಬೆಂಕಿಯಲ್ಲಿ ಸುಟ್ಟು ತುಳಿದು ಅದು ಧೂಳಿ ನಂತೆ ಪುಡಿಯಾಗುವ ವರೆಗೆ ಚೆನ್ನಾಗಿ ಅರೆದು ಅದರ ಧೂಳನ್ನು ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ನಾನು ಹಾಕಿದೆನು.
Cross references
- Deuteronomy 10:10 ಧರ್ಮೋಪದೇಶಕಾಂಡ 10:10ಇದಲ್ಲದೆ ನಾನು ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿ ಇದ್ದೆನು. ಕರ್ತನು ಆ ಕಾಲದಲ್ಲಿ ಸಹ ನನ್ನ ಪ್ರಾರ್ಥನೆಯನ್ನು ಕೇಳಿ ನಿನ್ನನ್ನು ನಾಶಮಾಡುವದಕ್ಕೆ ಕರ್ತನು ಇಷ್ಟಪಡಲಿಲ್ಲ.
- Exodus 32:14 ವಿಮೋಚನಕಾಂಡ 32:14ಆಗ ಕರ್ತನು ತನ್ನ ಜನರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿ ಕೊಂಡನು.
- James 5:16–17 ಯಾಕೋಬನು 5:16–17ನೀವು ಸ್ವಸ್ಥವಾಗಬೇಕಾದರೆ ನಿಮ್ಮ ತಪ್ಪುಗಳನ್ನು ಒಬ್ಬರಿಗೊಬ್ಬರು ಅರಿಕೆಮಾಡಿ ಒಬ್ಬರಿ ಗೋಸ್ಕರ ಒಬ್ಬರು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಫಲಕಾರಿಯಾಗುತ್ತದೆ. ಎಲೀಯನು ನಮ್ಮಂಥ ಸ್ವಭಾವವುಳ್ಳವ ನಾಗಿದ್ದನು; ಅವನು ಮಳೆ ಬರಬಾರದೆಂದು ಆಸಕ್ತಿ ಯಿಂದ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳ ವರೆಗೂ ಮಳೆ ಬೀಳಲಿಲ್ಲ.
- Psalm 99:6 ಕೀರ್ತನೆಗಳು 99:6ಆತನ ಯಾಜಕರಲ್ಲಿ ಮೋಶೆಯೂ ಆರೋನನೂ ಆತನ ಹೆಸರನ್ನು ಕರೆಯುವವರಲ್ಲಿ ಸಮುವೇಲನೂ; ಅವರು ಕರ್ತನನ್ನು ಕರೆದಾಗ ಆತನು ಅವರಿಗೆ ಉತ್ತರ ಕೊಟ್ಟನು.
- Exodus 33:17 ವಿಮೋಚನಕಾಂಡ 33:17ಅದಕ್ಕೆ ಕರ್ತನು ಮೋಶೆಗೆ--ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರಕಿತು. ನಾನು ನಿನ್ನನ್ನು ಹೆಸರಿನಿಂದ ತಿಳಿದಿದ್ದೇನೆ ಅಂದನು.
- Exodus 32:10–11 ವಿಮೋಚನಕಾಂಡ 32:10–11ಹೀಗಿರುವದರಿಂದ ನನ್ನ ಕೋಪವು ಅವರ ಮೇಲೆ ಉರಿದು ಅವರನ್ನು ದಹಿಸಿ ಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು ಅಂದನು. ಅದಕ್ಕೆ ಮೋಶೆಯು ತನ್ನ ದೇವರಾದ ಕರ್ತನ ಸನ್ನಿಧಿಯಲ್ಲಿ ಬೇಡಿಕೊಂಡು ಹೇಳಿದ್ದೇನಂದರೆ--ಕರ್ತನೇ, ನೀನು ಮಹಾಶಕ್ತಿಯಿಂದಲೂ ಬಲವುಳ್ಳ ಕೈಯಿಂದಲೂ ಐಗುಪ್ತದೇಶದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನರ ಮೇಲೆ ನಿನ್ನ ಕೋಪವು ಯಾಕೆ ಉರಿಯುವದು?
- Amos 7:2–3 ಆಮೋಸ 7:2–3ಆದದ್ದೇ ನಂದರೆ, ಅವು ಆ ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು--ಓ ಕರ್ತನಾದ ದೇವರೇ, ನನ್ನನ್ನು ಮನ್ನಿಸು; ಯಾಕೋಬನು ಹೇಗೆ ನಿಲ್ಲುವನು? ಅದು ಸಣ್ಣ ಜನಾಂಗ ಎಂದು ವಿಜ್ಞಾಪಿಸಿ ಕೊಳ್ಳಲು ಕರ್ತನು ಇದನ್ನು ಕುರಿತು ಪಶ್ಚಾತ್ತಾಪಪಟ್ಟು ಇದು ಆಗ ಬಾರ ದೆಂದು ಹೇಳಿದನು.
- Nehemiah 1:2–7 ನೆಹೆಮೀಯ 1:2–7ಆಗ ನಾನು ಸೆರೆಯಿಂದ ತಪ್ಪಿಸಿಕೊಂಡ ಯೆಹೂದ್ಯರನ್ನು ಕುರಿತೂ ಯೆರೂಸಲೇಮನ್ನು ಕುರಿತೂ ಅವರನ್ನು ವಿಚಾರಿಸಿದೆನು. ಅವರು ನನಗೆ--ಸೆರೆ ಯನ್ನು ಬಿಟ್ಟ್ಟು ಉಳಿದವರು ಆ ಸೀಮೆಯಲ್ಲಿದ್ದು ಮಹಾ ಕೇಡನ್ನೂ ನಿಂದೆಯನ್ನೂ ಅನುಭವವಿಸುತ್ತಿದ್ದಾರೆ. ಇದ ಲ್ಲದೆ ಯೆರೂಸಲೇಮಿನ ಗೋಡೆಯು ಸಹ ಕೆಡವಲ್ಪ ಟ್ಟಿದೆ; ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ ಎಂದು ಹೇಳಿದರು. ಈ ಮಾತುಗಳನ್ನು ಕೇಳಿದಾಗ ನಾನು ಕುಳಿತುಕೊಂಡು ಅತ್ತು. ಕೆಲವು ದಿವಸ ದುಃಖಿಸಿ ಉಪವಾಸಮಾಡಿ, ಪರಲೋಕದ ದೇವರ ಮುಂದೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ-- ಓ ಪರಲೋ ಕದ ದೇವರಾದ ಕರ್ತನೇ, ನಿನ್ನನ್ನು ಪ್ರೀತಿಮಾಡಿ ನಿನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವವನಾದ ಮತ್ತು ಭಯಂಕರವುಳ್ಳ ದೇವರೇ, ನಿನ್ನ ಸೇವಕರಾದ ಇಸ್ರಾಯೇಲ್ ಮಕ್ಕಳಿ ಗೋಸ್ಕರ ಈಗ ಹಗಲಿರುಳು ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸಿದ ಪ್ರಾರ್ಥನೆಯನ್ನೂ ನಿನಗೆ ವಿರೋಧವಾಗಿ ನಾವು ಮಾಡಿದ ಇಸ್ರಾಯೇಲ್ ಮಕ್ಕಳ ಪಾಪಗಳ ಅರಿಕೆಮಾಡುವದನ್ನೂ ನೀನು ಕೇಳುವ ಹಾಗೆ ನಿನ್ನ ಕಿವಿ ಅಲೈಸುತ್ತಾ ಇರಲಿ, ನಿನ್ನ ಕಣ್ಣುಗಳು ತೆರೆದಿರಲಿ. ನಾನೂ ನನ್ನ ತಂದೆಯ ಮನೆಯವರೂ ಪಾಪಮಾಡಿದ್ದೇವೆ. ನಿನಗೆ ವಿರೋಧವಾಗಿ ಬಹು ಕೆಟ್ಟತನ ಮಾಡಿದ್ದೇವೆ; ನೀನು ನಿನ್ನ ಸೇವಕನಾದ ಮೋಶೆಗೆ ಆಜ್ಞಾಪಿಸಿದ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ನ್ಯಾಯಗಳನ್ನೂ ನಾವು ಕೈಕೊಳ್ಳಲಿಲ್ಲ.
- Luke 12:4–5 ಲೂಕನು 12:4–5ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ. ಆದರೆ ಯಾರಿಗೆ ನೀವು ಭಯಪಡಬೇಕೆಂದು ಮುಂದಾಗಿ ನಾನು ನಿಮ್ಮನ್ನು ಎಚ್ಚರಿಸುತ್ತೇನೆ; ಕೊಂದಮೇಲೆ ನರಕದಲ್ಲಿ ಹಾಕುವದಕ್ಕೆ ಅಧಿಕಾರವಿರುವಾತನಿಗೇ ಭಯಪಡಿರಿ; ಹೌದು, ಆತನಿಗೆ ಭಯಪಡಿರಿ ಎಂದು ನಾನು ನಿಮಗೆ ಹೇಳುತ್ತೇನೆ.
- Deuteronomy 9:8 ಧರ್ಮೋಪದೇಶಕಾಂಡ 9:8ಹೋರೇಬಿನಲ್ಲಿಯೂ ಕರ್ತನಿಗೆ ಕೋಪವನ್ನೆಬ್ಬಿಸಿದಾಗ ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಸಿಟ್ಟುಮಾಡಿ ಕೊಂಡನು.
- Amos 7:5–6 ಆಮೋಸ 7:5–6ಆಗ ನಾನು--ಓ ದೇವರಾದ ಕರ್ತನೇ, ನಿಲ್ಲಿಸಿಬಿಡು ಎಂದು ಬೇಡಿಕೊಳ್ಳುತ್ತೇನೆ; ಯಾಕೋಬು ಯಾರಿಂದ ಎಬ್ಬಿಸ ಲ್ಪಟ್ಟಿತು? ಅದು ಚಿಕ್ಕ ಜನಾಂಗ ಎಂದು ಹೇಳಿದನು. ಕರ್ತನು ಇದಕ್ಕಾಗಿ ಪಶ್ಚಾತ್ತಾಪಪಟ್ಟು ಇವು ಸಹ ಆಗಬಾರದೆಂದು ಕರ್ತನಾದ ದೇವರು ಹೇಳುತ್ತಾನೆ.
- Psalm 106:23 ಕೀರ್ತನೆಗಳು 106:23ಆದದರಿಂದ ಆತನು ಅವರನ್ನು ನಾಶಮಾಡುತ್ತೇನೆಂದು ಹೇಳಿದನು. ಆದರೆ ಆತನು ಆದುಕೊಂಡ ಮೋಶೆಯು ಆತನ ಕೋಪ ವನ್ನು ತಿರುಗಿಸುವ ಹಾಗೆ ಆಪತ್ತಿನಲ್ಲಿ ಆತನ ಮುಂದೆ ನಿಂತುಕೊಂಡನು.