Deuteronomy · chapter 9 · verse 23
Deuteronomy 9:23 in Kannada
ಇದಲ್ಲದೆ ಕರ್ತನು ನಿಮ್ಮನ್ನು ಕಾದೇಶ್ ಬರ್ನೇಯದಿಂದ ಕಳುಹಿಸುವಾಗ--ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿ ಕೊಳ್ಳಿರಿ ಎಂದು ಹೇಳಿದಾಗ ನೀವು ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಆತನನ್ನು ನಂಬಲಿಲ್ಲ, ಆತನ ಮಾತನ್ನು ಕೇಳಲಿಲ್ಲ.
Idallade kartanu nimmannu kaadesh barneyadinda kaluhisuvaaga--neevu hogi naanu nimage koduva deshavannu svaadheenamaadi kolliri endu helidaaga neevu nimma devaraada kartana appanege virodhavaagi tirugibiddu aatanannu nambalilla, aatana maatannu kelalilla.
Deuteronomy 9:23 in English
- King James Version (KJV)
- Likewise when the LORD sent you from Kadesh-barnea, saying, Go up and possess the land which I have given you; then ye rebelled against the commandment of the LORD your God, and ye believed him not, nor hearkened to his voice.
- World English Bible (WEB)
- When the LORD sent you from Kadesh Barnea, saying, “Go up and possess the land which I have given you,” you rebelled against the commandment of the LORD your God, and you didn’t believe him or listen to his voice.
- American Standard Version (ASV)
- And when Jehovah sent you from Kadesh-barnea, saying, Go up and possess the land which I have given you; then ye rebelled against the commandment of Jehovah your God, and ye believed him not, nor hearkened to his voice.
- Bible in Basic English (BBE)
- And when the Lord sent you from Kadesh-barnea, saying, Go up and take the land which I have given you; you went against the orders of the Lord your God, and had no faith in him, and would not give ear to his voice.
- Darby Translation (DBY)
- And when Jehovah sent you from Kadesh-barnea, saying, Go up and take possession of the land which I have given you, ye rebelled against the word of Jehovah your God, and ye believed him not, nor hearkened to his voice.
- Webster's Bible (WBS)
- Likewise when the LORD sent you from Kadesh-barnea, saying, Go up and possess the land which I have given you; then ye rebelled against the commandment of the LORD your God, and ye believed him not, nor hearkened to his voice.
- Young's Literal Translation (YLT)
- and in Jehovah's sending you from Kadesh-Barnea, saying, Go up, and possess the land which I have given to you, then ye provoke the mouth of Jehovah your God, and have not given credence to Him, nor hearkened to His voice;
Read in context
- 21ಇದಲ್ಲದೆ ನೀವು ಮಾಡಿದ ಪಾಪವಾಗಿರುವ ಆ ಕರುವನ್ನು ತಕ್ಕೊಂಡು ಬೆಂಕಿಯಲ್ಲಿ ಸುಟ್ಟು ತುಳಿದು ಅದು ಧೂಳಿ ನಂತೆ ಪುಡಿಯಾಗುವ ವರೆಗೆ ಚೆನ್ನಾಗಿ ಅರೆದು ಅದರ ಧೂಳನ್ನು ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ನಾನು ಹಾಕಿದೆನು.
- 22ತಬೇರಾನಲ್ಲಿಯೂ ಮಸ್ಸದಲ್ಲಿಯೂ ಕಿಬ್ರೋತ್ ಹತಾವಾದಲ್ಲಿಯೂ ಕರ್ತನಿಗೆ ಕೋಪವನ್ನು ಎಬ್ಬಿಸಿದ ವರಾದಿರಿ.
- 23ಇದಲ್ಲದೆ ಕರ್ತನು ನಿಮ್ಮನ್ನು ಕಾದೇಶ್ ಬರ್ನೇಯದಿಂದ ಕಳುಹಿಸುವಾಗ--ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿ ಕೊಳ್ಳಿರಿ ಎಂದು ಹೇಳಿದಾಗ ನೀವು ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಆತನನ್ನು ನಂಬಲಿಲ್ಲ, ಆತನ ಮಾತನ್ನು ಕೇಳಲಿಲ್ಲ.
- 24ನಾನು ನಿಮ್ಮನ್ನು ತಿಳಿದಂದಿನಿಂದ ನೀವು ಕರ್ತನಿಗೆ ವಿರೋಧವಾಗಿ ತಿರುಗಿಬೀಳುವವರಾಗಿದ್ದಿರಿ.
- 25ಹೀಗಿರಲಾಗಿ ಕರ್ತನು ನಿಮ್ಮನ್ನು ನಾಶಮಾಡು ತ್ತೇನೆಂದು ಹೇಳಿದ್ದರಿಂದ ನಾನು ಮುಂಚೆ ಬಿದ್ದುಕೊಂಡ ಹಾಗೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಕರ್ತನ ಮುಂದೆ ಬಿದ್ದಿದ್ದೆನು.
Cross references
- Psalm 106:24–25 ಕೀರ್ತನೆಗಳು 106:24–25ಹೌದು, ಅವರು, ಮನೋಹರವಾದ ದೇಶ ವನ್ನು ಅಸಹ್ಯಿಸಿಬಿಟ್ಟು ಆತನ ಮಾತನ್ನು ನಂಬದೆ ಹೋದರು. ತಮ್ಮ ಗುಡಾರಗಳಲ್ಲಿ ಗುಣುಗುಟ್ಟಿ ಕರ್ತನ ಸ್ವರವನ್ನು ಕೇಳದೆ ಹೋದರು.
- Hebrews 4:2 ಇಬ್ರಿಯರಿಗೆ 4:2ಅವರಿಗೆ ಸುವಾರ್ತೆಯು ಸಾರೋಣವಾದಂತೆಯೇ ನಮಗೂ ಸಾರೋಣವಾಯಿತು; ಆದರೆ ಕೇಳಿದವರು ನಂಬಲಿಲ್ಲವಾದ ಕಾರಣ ಸಾರಿದ ಆ ವಾಕ್ಯದಿಂದ ಅವರಿಗೆ ಪ್ರಯೋಜನವಾಗಲಿಲ್ಲ.
- Isaiah 63:10 ಯೆಶಾಯ 63:10ಆದರೆ ಅವರು ತಿರುಗಿ ಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು; ಆದ ದರಿಂದ ಆತನು ತಿರುಗಿಕೊಂಡು, ಅವರಿಗೆ ಶತ್ರು ವಾದನು; ಆತನೇ ಅವರಿಗೆ ವಿರೋಧವಾಗಿ ಯುದ್ಧ ಮಾಡಿದನು.
- Psalm 78:22 ಕೀರ್ತನೆಗಳು 78:22ಅವರು ದೇವರಲ್ಲಿ ನಂಬಿಕೆ ಇಡಲಿಲ್ಲ; ಆತನ ರಕ್ಷಣೆಯಲ್ಲಿ ಭರವಸವಿಡಲಿಲ್ಲ.
- Numbers 14:10–41 ಅರಣ್ಯಕಾಂಡ 14:10–41ಸಭೆಯವರೆಲ್ಲರೂ ಅವರನ್ನು ಕಲ್ಲೆಸೆಯಬೇಕೆಂದಿ ದ್ದರು. ಆಗ ಕರ್ತನ ಮಹಿಮೆಯು ಸಭೆಯ ಗುಡಾರ ದಲ್ಲಿ ಇಸ್ರಾಯೇಲ್ ಮಕ್ಕಳಿಗೆಲ್ಲಾ ಪ್ರತ್ಯಕ್ಷವಾಯಿತು. ಆಗ ಕರ್ತನು ಮೋಶೆಗೆ--ಎಷ್ಟರ ವರೆಗೆ ಈ ಜನರು ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ನಡಿಸಿದ ಸಕಲ ಸೂಚಕಕಾರ್ಯಗಳ ದೆಸೆ ಯಿಂದ ನನ್ನನ್ನು ಎಷ್ಟು ಮಾತ್ರಕ್ಕೂ ನಂಬದೆ ಇರುವ ರಲ್ಲಾ? ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲಮಾಡಿ ನಿನ್ನನ್ನು ಅವರಿಗಿಂತ ದೊಡ್ಡದಾದ ಬಲವುಳ್ಳ ಜನಾಂಗವನ್ನಾಗಿ ಮಾಡುವೆನು ಅಂದನು. ಆಗ ಮೋಶೆ ಕರ್ತನಿಗೆ--ಹಾಗಾದರೆ ಐಗುಪ್ತ್ಯರು ಅದನ್ನು ಕೇಳುವರು; ನೀನು ಈ ಜನರನ್ನು ನಿನ್ನ ಬಲದೊಂದಿಗೆ ಅವರ ಮಧ್ಯದಲ್ಲಿಂದ ಹೊರಗೆ ಬರಮಾಡಿದಿಯಲ್ಲಾ! ಅವರು ಈ ದೇಶದ ನಿವಾಸಿ ಗಳಿಗೆ ಅದನ್ನು ಹೇಳುವರು; ಯಾಕಂದರೆ ಕರ್ತನಾದ ನೀನೇ ಈ ಜನರ ಸಂಗಡ ಇದ್ದೀಯೆಂದೂ ಕರ್ತ ನಾದ ನೀನೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀ ಯೆಂದೂ ನಿನ್ನ ಮೇಘವು ಅವರ ಮೇಲೆ ನಿಂತಿದೆ ಯೆಂದೂ ನೀನು ಹಗಲು ಹೊತ್ತಿನಲ್ಲಿ ಮೇಘ ಸ್ತಂಭದಲ್ಲಿಯೂ ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀಯೆಂದೂ ಅವರು ಕೇಳಿದ್ದಾರೆ. ಈಗ ನೀನು ಈ ಜನರನ್ನು ಒಬ್ಬ ಮನುಷ್ಯನೋ ಎಂಬಂತೆ ಕೊಂದುಹಾಕಿದರೆ ನಿನ್ನ ಸುದ್ದಿಯನ್ನು ಕೇಳಿದ ಜನಾಂಗಗಳು-- ಕರ್ತನು ಈ ಜನರನ್ನು ಅವರಿಗೆ ಪ್ರಮಾಣಮಾಡಿದ ದೇಶಕ್ಕೆ ತರಲು ಶಕ್ತಿಸಾಲದ ಕಾರಣ ಅವರನ್ನು ಅರಣ್ಯದಲ್ಲಿ ಕೊಂದು ಹಾಕಿದನು ಎಂದು ಹೇಳುವರು. ಈಗ ನೀನು ಹೇಳಿದ ಪ್ರಕಾರ ನನ್ನ ಕರ್ತನ ಶಕ್ತಿಯು ದೊಡ್ಡದಾಗಿರಲಿ ಎಂದು ನಾನು ಬೇಡುತ್ತೇನೆ. ಕರ್ತನು ದೀರ್ಘಶಾಂತನೂ ಮಹಾಕೃಪೆಯುಳ್ಳವನೂ ಅಕ್ರಮವನ್ನೂ ದ್ರೋಹವನ್ನೂ ಮನ್ನಿಸುವಾತನೂ ಅಪರಾಧಿಯನ್ನು ನಿರಪರಾಧಿಯೆಂದು ಎಣಿಸದವನೂ ಮೂರನೇ ನಾಲ್ಕನೇ ತಲೆಗಳ ವರೆಗೂ ಪಿತೃಗಳ ಅಕ್ರಮವನ್ನು ಮಕ್ಕಳಲ್ಲಿ ವಿಚಾರಿಸುವಾತನೂ ಎಂದು ನೀನು ಹೇಳಿದ್ದೀಯಲ್ಲಾ? ನಿನ್ನ ಕೃಪೆಯು ದೊಡ್ಡದಾಗಿರುವ ಪ್ರಕಾರವೂ ನೀನು ಐಗುಪ್ತದಿಂದ ಇಲ್ಲಿಯ ವರೆಗೆ ಮನ್ನಿಸಿದ ಪ್ರಕಾರವೂ ಈ ಜನರ ಅಕ್ರಮವನ್ನು ದಯ ದಿಂದ ಮನ್ನಿಸು ಎಂದು ಬೇಡಿಕೊಂಡನು. ಆಗ ಕರ್ತನು--ನಿನ್ನ ಮಾತಿನ ಪ್ರಕಾರ ಮನ್ನಿಸಿ ದ್ದೇನೆ. ಆದಾಗ್ಯೂ ನನ್ನ ಜೀವದಾಣೆ, ಭೂಮಿಯೆಲ್ಲಾ ಕರ್ತನ ಮಹಿಮೆಯಿಂದ ತುಂಬಿರುವದು. ಐಗುಪ್ತ ದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿದ ಸೂಚಕಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದ ಈ ಸಕಲ ಮನುಷ್ಯರು ನನ್ನನ್ನು ಈಗ ಹತ್ತು ಸಾರಿ ಶೊಧಿಸಿ ಕೇಳದೆ ಹೋದದ್ದರಿಂದ ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದ ದೇಶವನ್ನು ನಿಶ್ಚಯವಾಗಿ ಅವರು ನೋಡುವದಿಲ್ಲ; ಇಲ್ಲವೆ ನನಗೆ ಕೋಪವನ್ನು ಎಬ್ಬಿಸಿದವರು ಸಹ ಅದನ್ನು ನೋಡು ವದಿಲ್ಲ. ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ನನ್ನ ಆತ್ಮವಿದದ್ದರಿಂದಲೂ ಅವನು ನನ್ನನ್ನು ಪೂರ್ಣ ವಾಗಿ ಹಿಂಬಾಲಿಸಿದ್ದರಿಂದಲೂ ಅವನು ಸಂಚರಿಸಿದ ದೇಶಕ್ಕೆ ಅವನನ್ನು ತರುವೆನು; ಅವನ ಸಂತಾನವು ಅದನ್ನು ಸ್ವತಂತ್ರಿಸಿಕೊಳ್ಳುವದು. (ಆಗ ಅಮಾಲೇ ಕ್ಯರೂ ಕಾನಾನ್ಯರೂ ತಗ್ಗಿನಲ್ಲಿ ವಾಸಮಾಡುತ್ತಿದ್ದರು.) ನಾಳೆ ನೀವು ತಿರುಗಿಕೊಂಡು ಕೆಂಪು ಸಮುದ್ರದ ಮಾರ್ಗವಾಗಿ ಅರಣ್ಯಕ್ಕೆ ಹೊರಡಿರಿ ಎಂದು ಹೇಳಿದನು. ಕರ್ತನು ಮಾತನಾಡಿ ಮೋಶೆಗೂ ಆರೋನ ನಿಗೂ-- ಈ ಕೆಟ್ಟ ಸಭೆಯು ನನಗೆ ವಿರೋಧವಾಗಿ ಗುಣುಗುಟ್ಟುವದನ್ನು ನಾನು ಎಷ್ಟುಕಾಲ ಸಹಿಸಲಿ? ಇಸ್ರಾಯೇಲ್ ಮಕ್ಕಳು ನನಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ನಾನು ಕೇಳಿದ್ದೇನೆ. ಆದದರಿಂದ ನೀನು ಅವರಿಗೆ--ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು ಎಂದು ಕರ್ತನು ಹೇಳುತ್ತಾನೆ. ಈ ಅರಣ್ಯದಲ್ಲಿ ನಿಮ್ಮ ಹೆಣಗಳು ಬೀಳುವವು. ನನಗೆ ವಿರೋಧವಾಗಿ ಗುಣುಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಆದ ನೀವೇ. ಯೆಫುನ್ನೆಯ ಮಗನಾದ ಕಾಲೇಬನು ನೂನನ ಮಗನಾದ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡಿಸುವದಕ್ಕಾಗಿ ಪ್ರಮಾಣಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವು ಬಾರದೆ ಇರುವಿರಿ. ಆದರೆ ಸುಲಿಗೆಯಾಗುವರೆಂದು ನೀವು ಹೇಳಿದ ನಿಮ್ಮ ಮಕ್ಕಳನ್ನು ಅಲ್ಲಿಗೆ ತರುವೆನು; ನೀವು ಅಲಕ್ಷ್ಯ ಮಾಡಿದ ದೇಶವನ್ನು ಅವರು ಅನುಭವಿಸುವರು. ನಿಮ್ಮ ವಿಷಯವಾಗಿಯಾದರೋ ನಿಮ್ಮ ಹೆಣಗಳು ಈ ಅರಣ್ಯದಲ್ಲಿ ಬೀಳುವವು. ಇದಲ್ಲದೆ ನಿಮ್ಮ ಮಕ್ಕಳು ನಾಲ್ವತ್ತು ವರುಷ ಅರಣ್ಯದಲ್ಲಿ ಅಲೆದಾಡಿ ನಿಮ್ಮ ಹೆಣಗಳು ಅರಣ್ಯದಲ್ಲಿ ಹಾಳಾಗಿ ಹೋಗುವ ತನಕ ನಿಮ್ಮ ಜಾರತ್ವ ಗಳನ್ನು ತಾಳಿಕೊಳ್ಳುವರು. ನೀವು ಆ ದೇಶವನ್ನು ಪರೀಕ್ಷಿಸಿದ ನಾಲ್ವತ್ತು ದಿವಸಗಳ ಪ್ರಕಾರ ಒಂದು ದಿನಕ್ಕೆ ಒಂದು ವರುಷವಾಗಿ ಈ ಪ್ರಕಾರ ನಾಲ್ವತ್ತು ವರುಷ ನಿಮ್ಮ ಅಪರಾಧಗಳನ್ನು ಹೊತ್ತು ನನ್ನ ವಾಗ್ದಾನವನ್ನು ಭಂಗಪಡಿಸಿದ ಫಲವನ್ನು ನೀವು ಅನುಭವಿಸುವಿರಿ. ಕರ್ತನಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಕೂಡಿ ಕೊಂಡಿರುವ ಈ ಕೆಟ್ಟ ಸಮೂಹಕ್ಕೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಅರಣ್ಯದಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು. ದೇಶವನ್ನು ಪರೀಕ್ಷಿಸುವದಕ್ಕೆ ಮೋಶೆ ಕಳುಹಿಸಿ ದವರು ಹಿಂದಿರುಗಿ ಆ ದೇಶದ ವಿಷಯವಾಗಿ ಕೆಟ್ಟಸುದ್ದಿ ಯನ್ನು ಎಬ್ಬಿಸಿ ಸಮಸ್ತ ಸಮೂಹವನ್ನು ಮೋಶೆಗೆ ವಿರೋಧವಾಗಿ ಗುಣುಗುಟ್ಟುವಂತೆ ಮಾಡಿ ದೇಶದ ಕೆಟ್ಟ ಸುದ್ದಿಯನ್ನು ಎಬ್ಬಿಸಿದ ಇವರೇ ಕರ್ತನ ಸನ್ನಿಧಿ ಯಲ್ಲಿ ವ್ಯಾಧಿಯಿಂದ ಸತ್ತರು. ಆದರೆ ದೇಶವನ್ನು ಪರೀಕ್ಷಿಸುವದಕ್ಕೆ ಹೋದ ಮನುಷ್ಯರೊಳಗೆ ಇಬ್ಬರಾದ ನೂನನ ಮಗನಾದ ಯೆಹೋಶುವನೂ ಯೆಫುನ್ನೆಯ ಮಗನಾದ ಕಾಲೇಬನೂ ಉಳಿದರು. ಮೋಶೆಯು ಇಸ್ರಾಯೇಲ್ ಮಕ್ಕಳೆಲ್ಲರಿಗೆ ಈ ಮಾತುಗಳನ್ನು ಹೇಳಿದಾಗ ಜನರು ಬಹಳವಾಗಿ ದುಃಖಪಟ್ಟರು. ಮರುದಿವಸ ಬೆಳಿಗ್ಗೆ ಅವರು ಎದ್ದು ಬೆಟ್ಟದ ತುದಿಯ ಮೇಲಕ್ಕೆ ಏರಿ--ಇಗೋ, ಕರ್ತನು ವಾಗ್ದಾನ ಮಾಡಿದ ಸ್ಥಳಕ್ಕೆ ಏರಿ ಹೋಗುವದಕ್ಕೆ ಇದ್ದೇವೆ; ಯಾಕಂದರೆ ನಾವು ಪಾಪಮಾಡಿದ್ದೇವೆ ಅಂದರು. ಆಗ ಮೋಶೆಯು--ನೀವು ಈ ಪ್ರಕಾರ ಯಾಕೆ ಕರ್ತನ ಆಜ್ಞೆಯನ್ನು ವಿಾರುತ್ತೀರಿ? ಅದು ಸಫಲವಾಗು ವದಿಲ್ಲ.
- Deuteronomy 1:19–33 ಧರ್ಮೋಪದೇಶಕಾಂಡ 1:19–33ಆಗ ನೀವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಕರ್ತನು ನಮಗೆ ಆಜ್ಞಾಪಿಸಿದ ಪ್ರಕಾರ ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಅರಣ್ಯವನ್ನೆಲ್ಲಾ ದಾಟಿ ಕಾದೇಶ್ಬರ್ನೇಯಕ್ಕೆ ಬಂದೆವು. ಆಗ ನಾನು ನಿಮಗೆ--ನಮ್ಮ ದೇವರಾದ ಕರ್ತನು ನಮಗೆ ಕೊಡುವ ಅಮೋರಿಯರ ಬೆಟ್ಟಕ್ಕೆ ಬಂದಿರಿ; ಇಗೋ, ನಿನ್ನ ದೇವರಾದ ಕರ್ತನು ದೇಶವನ್ನು ನಿನ್ನ ಮುಂದೆ ಇಟ್ಟಿದ್ದಾನೆ; ನಿನ್ನ ಪಿತೃಗಳ ದೇವರಾದ ಕರ್ತನು ನಿನಗೆ ಹೇಳಿದ ಪ್ರಕಾರ ಹೋಗಿ ಅದನ್ನು ಸ್ವಾಧೀನಪಡಿಸಿಕೋ; ಭಯಪಡಬೇಡ, ಧೈರ್ಯಗೆಡಬೇಡ ಅಂದೆನು. ಆಗ ನೀವೆಲ್ಲರೂ ನನ್ನ ಬಳಿಗೆ ಬಂದು--ನಮ್ಮ ಮುಂದಾಗಿ ಮನುಷ್ಯರನ್ನು ಕಳುಹಿಸೋಣ, ಅವರು ನಮಗೆ ಆ ದೇಶವನ್ನು ಪರಿಶೀಲಿಸಿ ನೋಡಿ ನಾವು ಮೇಲೆ ಹೋಗತಕ್ಕ ಮಾರ್ಗದ ವಿಷಯದಲ್ಲಿಯೂ ನಾವು ಪ್ರವೇಶಿಸುವ ಪಟ್ಟಣಗಳ ವಿಷಯದಲ್ಲಿಯೂ ನಮಗೆ ಸಮಾಚಾರವನ್ನು ತಿಳಿಸಲಿ ಅಂದಿರಿ. ಆ ಮಾತು ನನಗೆ ಒಳ್ಳೇದೆಂದು ತೋಚಿತು; ನಾನು ನಿಮ್ಮಲ್ಲಿ ಕುಲಕ್ಕೆ ಒಬ್ಬನ ಪ್ರಕಾರ ಹನ್ನೆರಡು ಮಂದಿ ಯನ್ನು ತಕ್ಕೊಂಡೆನು. ಅವರು ಹೋಗಿ ಬೆಟ್ಟವನ್ನೇರಿ ಎಷ್ಕೋಲೆಂಬ ಹಳ್ಳದ ಬಳಿಗೆ ಬಂದು ಅದನ್ನು ಹೊಂಚಿ ನೋಡಿ ದೇಶದ ಫಲದಲ್ಲಿ ಕೆಲವನ್ನು ಕೈಯಲ್ಲಿ ತಕ್ಕೊಂಡು ನಮ್ಮ ಬಳಿಗೆ ತಂದು ನಮಗೆ ಸಮಾಚಾರ ವನ್ನು ತಿಳಿಸಿ--ನಮ್ಮ ದೇವರಾದ ಕರ್ತನು ನಮಗೆ ಕೊಡುವ ದೇಶವು ಒಳ್ಳೇದು ಎಂದು ಹೇಳಿದಿರಿ. ಆದರೆ ನೀವು ಮೇಲೆ ಹೋಗುವದಕ್ಕೆ ಮನಸ್ಸಿಲ್ಲದೆ ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ತಿರುಗಿಬಿದ್ದು ನಿಮ್ಮ ಗುಡಾರಗಳಲ್ಲಿ ಗುಣುಗುಟ್ಟಿ--ಕರ್ತನು ನಮ್ಮನ್ನು ಹಗೆಮಾಡಿದ್ದರಿಂದ ನಮ್ಮನ್ನು ಅಮೋರಿಯರ ಕೈಗೆ ಒಪ್ಪಿಸಿ ನಾಶಮಾಡುವದಕ್ಕೆ ಐಗುಪ್ತದೇಶದೊಳ ಗಿಂದ ಹೊರಗೆ ಬರಮಾಡಿದ್ದಾನೆ. ನಾವು ಎಲ್ಲಿಗೆ ಹೋಗೋಣ? ನಮ್ಮ ಸಹೋದರರು--ಆ ಜನರು ನಮಗಿಂತ ದೊಡ್ಡವರೂ ಉದ್ದವಾದವರೂ; ಪಟ್ಟಣ ಗಳು ದೊಡ್ಡವುಗಳೂ ಆಕಾಶದ ಎತ್ತರಕ್ಕೂ ಗೋಡೆ ಯುಳ್ಳವುಗಳೂ; ಇದಲ್ಲದೆ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ ಎಂದು ಹೇಳಿದಿರಿ. ಆಗ ನಾನು ನಿಮಗೆ--ಅಂಜಬೇಡಿರಿ; ಅವರಿಗೆ ಭಯಪಡಬೇಡಿರಿ. ನಿಮ್ಮ ಮುಂದೆ ಹೋಗುವ ನಿಮ್ಮ ದೇವರಾದ ಕರ್ತನು, ಆತನೇ ಐಗುಪ್ತದಲ್ಲಿ ನಿಮ್ಮ ಕಣ್ಣುಗಳ ಮುಂದೆಯೂ ಅರಣ್ಯದಲ್ಲಿಯೂ ನಿಮಗೆ ಮಾಡಿದ ಎಲ್ಲಾದರ ಪ್ರಕಾರ ನಿಮಗೋಸ್ಕರ ಯುದ್ಧಮಾಡುವನು. ಈ ಅರಣ್ಯದಲ್ಲಿ ನಿಮ್ಮ ದೇವ ರಾದ ಕರ್ತನು, ನಿಮ್ಮನ್ನು ತಂದೆ ಮಗನನ್ನು ಹೊತ್ತು ಕೊಳ್ಳುವ ಪ್ರಕಾರ ನೀವು ಹೋದ ಮಾರ್ಗದಲ್ಲೆಲ್ಲಾ ಈ ಸ್ಥಳಕ್ಕೆ ಬರುವ ಪರ್ಯಂತರ ಹೊತ್ತುಕೊಂಡನೆಂದು ನೋಡಿದ್ದೀರಲ್ಲಾ ಅಂದೆನು. ಆದರೆ ಈ ಕಾರ್ಯದಲ್ಲಿ ನೀವು ನಿಮ್ಮ ದೇವರಾದ ಕರ್ತನನ್ನು ನಂಬಲಿಲ್ಲ. ಇಳುಕೊಳ್ಳುವದಕ್ಕೆ ನಿಮಗೆ ಸ್ಥಳವನ್ನು ವಿಚಾರಿಸಲೂ ನೀವು ಹೋಗತಕ್ಕ ಮಾರ್ಗ ವನ್ನು ನಿಮಗೆ ತೋರಿಸಲೂ ರಾತ್ರಿಹೊತ್ತು ಬೆಂಕಿ ಯಲ್ಲಿಯೂ ಹಗಲುಹೊತ್ತು ಮೇಘದಲ್ಲಿಯೂ ಮಾರ್ಗದಲ್ಲಿ ಆತನೇ ನಿಮ್ಮ ಮುಂದೆ ಹೋದನು.
- Hebrews 3:18–19 ಇಬ್ರಿಯರಿಗೆ 3:18–19ತನ್ನ ವಿಶ್ರಾಂತಿಯಲ್ಲಿ ಅವರು ಸೇರುವದೇ ಇಲ್ಲವೆಂದು ಯಾರನ್ನು ಕುರಿತು ಆತನು ಪ್ರಮಾಣಮಾಡಿದನು? ನಂಬದವರ ವಿಷಯ ವಾಗಿ ಅಲ್ಲವೇ?ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ. ಅವರು ಸೇರಲಾರದೆ ಹೋದದ್ದು ಅಪನಂಬಿಕೆಯಿಂದಲೇ ಎಂದು ತಿಳಿದುಕೊಳ್ಳುತ್ತೇವೆ.
- Numbers 13:1–4 ಅರಣ್ಯಕಾಂಡ 13:1–4ಕರ್ತನು ಮೋಶೆಯ ಸಂಗಡ ಮಾತನಾಡಿ ನಾನು ಇಸ್ರಾಯೇಲ್ ಮಕ್ಕಳಿಗೆ ಕೊಡುವ ಕಾನಾನ್ ದೇಶವನ್ನು ಪರೀಕ್ಷಿಸುವ ಹಾಗೆ ನೀನು ಮನುಷ್ಯರನ್ನು ಕಳುಹಿಸು. ಅವರವರ ಪಿತೃಗಳ ಗೋತ್ರದ ಪ್ರಕಾರ ಅವರೊಳಗೆ ಅಧಿಕಾರಿಯಾಗಿರುವ ಪ್ರತಿಯೊಬ್ಬನನ್ನು ಕಳುಹಿಸು ಅಂದನು. ಆಗ ಮೋಶೆಯು ಕರ್ತನ ಆಜ್ಞೆಯಂತೆ ಪಾರಾನ್ ಅರಣ್ಯ ದಿಂದ ಅವರನ್ನು ಕಳುಹಿಸಿದನು. ಅವರೆಲ್ಲರೂ ಇಸ್ರಾ ಯೇಲ್ ಮಕ್ಕಳ ಮುಖ್ಯಸ್ಥರಾಗಿದ್ದರು. ಅವರ ಹೆಸರುಗಳು ಯಾವವಂದರೆ: ರೂಬೇನ್ ಗೋತ್ರದ ಜಕ್ಕೂರನ ಮಗನಾದ ಶಮ್ಮೂವನು,
Original words (Hebrew)
- sent · H7971שָׁלַח shâlach
- Kadesh-barnea · H6947קָדֵשׁ בַּרְנֵעַ Qâdêsh Barnêaʻ
- saying · H559אָמַר ʼâmar
- up · H5927עָלָה ʻâlâh
- possess · H3423יָרַשׁ yârash
- land · H776אֶרֶץ ʼerets
- given · H5414נָתַן nâthan
- rebelled · H4784מָרָה mârâh
- commandment · H6310פֶּה peh
- God · H430אֱלֹהִים ʼĕlôhîym
- believed · H539אָמַן ʼâman
- hearkened · H8085שָׁמַע shâmaʻ
- voice · H6963קוֹל qôwl