Ecclesiastes · chapter 1 · verse 14
Ecclesiastes 1:14 in Kannada
ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ.
Sooryana kelage nadeyuva ellaa kelasagalannu naanu nodiddene; igo, ellavu vyarthavoo manassige aayaasavoo aagive.
Ecclesiastes 1:14 in English
- King James Version (KJV)
- I have seen all the works that are done under the sun; and, behold, all [is] vanity and vexation of spirit.
- World English Bible (WEB)
- I have seen all the works that are done under the sun; and behold, all is vanity and a chasing after wind.
- American Standard Version (ASV)
- I have seen all the works that are done under the sun; and, behold, all is vanity and a striving after wind.
- Bible in Basic English (BBE)
- I have seen all the works which are done under the sun; all is to no purpose, and desire for wind.
- Darby Translation (DBY)
- I have seen all the works that are done under the sun, and behold, all is vanity and pursuit of the wind.
- Webster's Bible (WBS)
- I have seen all the works that are done under the sun; and behold, all [is] vanity and vexation of spirit.
- Young's Literal Translation (YLT)
- I have seen all the works that have been done under the sun, and lo, the whole [is] vanity and vexation of spirit!
Read in context
- 12ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲ್ಯರ ಮೇಲೆ ಅರಸನಾಗಿದ್ದೆನು.
- 13ಆಕಾಶದ ಕೆಳಗೆ ನಡೆಯುವ ಎಲ್ಲವುಗಳ ವಿಷಯವಾಗಿ ಜ್ಞಾನ ದಿಂದ ವಿಚಾರಿಸಿ ವಿಮರ್ಶಿಸುವದಕ್ಕೆ ನಾನು ನನ್ನ ಮನಸ್ಸು ಇಟ್ಟೆನು; ಇದರ ವಿಷಯವಾದ ಪ್ರಯಾಸವು ಮನಸ್ಸಿನಲ್ಲಿ ಯೋಚಿಸುವಂತೆ ದೇವರು ಮನುಷ್ಯ ಮಕ್ಕಳಿಗೆ ಈ ಕಷ್ಟಕರವಾದ ಪ್ರಯಾಸವನ್ನು ಕೊಟ್ಟಿ ದ್ದಾನೆ.
- 14ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ.
- 15ವಕ್ರ ವಾದದ್ದು ಸರಿಮಾಡುವದಕ್ಕೆ ಆಗುವದಿಲ್ಲ; ಇಲ್ಲದ್ದನ್ನು ಲೆಕ್ಕಿಸುವದು ಅಸಾಧ್ಯ.
- 16ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ--ಇಗೋ, ನಾನು ದೊಡ್ಡ ಸ್ಥಾನಕ್ಕೆ ಬಂದಿದ್ದೇನೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದವರೆಲ್ಲರಿಗಿಂತ ನಾನು ಜ್ಞಾನವನ್ನು ಸಂಪಾದಿಸಿದ್ದೇನೆ. ಹೌದು, ಜ್ಞಾನದ ತಿಳುವಳಿಕೆಯ ದೊಡ್ಡ ಅನುಭವವು ನನ್ನ ಹೃದಯಕ್ಕೆ ಆಯಿತು ಎಂದು ಹೇಳಿದೆನು.
Cross references
- Ecclesiastes 2:11 ಪ್ರಸಂಗಿ 2:11ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ.
- Ecclesiastes 2:26 ಪ್ರಸಂಗಿ 2:26ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
- Ecclesiastes 2:17 ಪ್ರಸಂಗಿ 2:17ಆದಕಾರಣ ಜೀವವನ್ನು ನಾನು ಹಗೆಮಾಡಿದೆನು; ಸೂರ್ಯನ ಕೆಳಗೆ ನಡೆಯುವ ಕಾರ್ಯವು ವ್ಯಥೆಯಾಗಿ ನನಗೆ ತೋರಿತು; ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕ ರವೂ ಆಗಿವೆ.
- Ecclesiastes 6:9 ಪ್ರಸಂಗಿ 6:9ಅಪೇಕ್ಷೆಯ ತಿರುಗಾಟ ಕ್ಕಿಂತ ಕಣ್ಣುಗಳ ದೃಷ್ಟಿಯು ಉತ್ತಮ; ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.
- Ecclesiastes 1:17–18 ಪ್ರಸಂಗಿ 1:17–18ಜ್ಞಾನ ವನ್ನೂ ಹುಚ್ಚುತನವನ್ನೂ ಬುದ್ಧಿಹೀನತೆಯನ್ನೂ ತಿಳು ಕೊಳ್ಳುವಂತೆ ನಾನು ಮನಸ್ಸಿಟ್ಟೆನು; ಇದು ಸಹ ಮನಸ್ಸಿಗೆ ಆಯಾಸವೆಂದು ನಾನು ಅರಿತುಕೊಂಡೆನು.ಬಹು ಜ್ಞಾನವಿದ್ದಲ್ಲಿ ದುಃಖ; ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳು ವವನು ತನ್ನ ವ್ಯಥೆಯನ್ನು ಹೆಚ್ಚಿಸಿಕೊಳ್ಳುತ್ತಾನೆ. ಬಹು ಜ್ಞಾನವಿದ್ದಲ್ಲಿ ದುಃಖ; ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳು ವವನು ತನ್ನ ವ್ಯಥೆಯನ್ನು ಹೆಚ್ಚಿಸಿಕೊಳ್ಳುತ್ತಾನೆ.
- Psalm 39:5–6 ಕೀರ್ತನೆಗಳು 39:5–6ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ. ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.
- Ecclesiastes 4:4 ಪ್ರಸಂಗಿ 4:4ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
- 1 Kings 4:30–32 1 ಅರಸುಗಳು 4:30–32ಸೊಲೊಮೋನನ ಜ್ಞಾನವು ಮೂಡಣ ದೇಶದ ಎಲ್ಲಾ ಜನರ ಜ್ಞಾನಕ್ಕಿಂತಲೂ ಐಗುಪ್ತದ ಎಲ್ಲಾ ಜನರ ಜ್ಞಾನಕ್ಕಿಂತಲೂ ಅಧಿಕವಾಗಿತ್ತು. ಎಜ್ರಾಹಿಯಾದ ಎತಾನನು, ಮಹೋಲನನ ಮಕ್ಕಳಾದ ಹೆಮಾನನು, ಕಲ್ಕೋಲನು, ದರ್ದಾವನು ಮೊದಲಾದ ಎಲ್ಲಾ ಜನ ರಿಗಿಂತ ಅವನು ಜ್ಞಾನಿಯಾಗಿದ್ದನು. ಸುತ್ತಲಿರುವ ಸಕಲ ಜನಾಂಗಗಳಲ್ಲಿ ಅವನ ಕೀರ್ತಿ ಇತ್ತು. ಅವನು ಮೂರು ಸಾವಿರ ಸಾಮತಿಗಳನ್ನು ಹೇಳಿದನು; ಅವನ ಹಾಡುಗಳು ಸಾವಿರದ ಐದು.