Ecclesiastes · chapter 1 · verse 4
Ecclesiastes 1:4 in Kannada
ಒಂದು ಸಂತಾನವು ಗತಿಸುತ್ತದೆ, ಮತ್ತೊಂದು ಸಂತಾನವು ಬರುತ್ತದೆ; ಆದರೆ ಭೂಮಿಯು ಎಂದಿಗೂ ನಿಲ್ಲುತ್ತದೆ.
Ondu santaanavu gatisuttade, mattondu santaanavu baruttade; aadare bhoomiyu endigoo nilluttade.
Ecclesiastes 1:4 in English
- King James Version (KJV)
- [One] generation passeth away, and [another] generation cometh: but the earth abideth for ever.
- World English Bible (WEB)
- One generation goes, and another generation comes; but the earth remains forever.
- American Standard Version (ASV)
- One generation goeth, and another generation cometh; but the earth abideth for ever.
- Bible in Basic English (BBE)
- One generation goes and another comes; but the earth is for ever.
- Darby Translation (DBY)
- [One] generation passeth away, and [another] generation cometh, but the earth standeth for ever.
- Webster's Bible (WBS)
- [One] generation passeth away, and [another] generation cometh: but the earth abideth for ever.
- Young's Literal Translation (YLT)
- A generation is going, and a generation is coming, and the earth to the age is standing.
Read in context
- 2ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥಗಳಲ್ಲಿ ವ್ಯರ್ಥ ಎಂದು ಪ್ರಸಂಗಿ ಹೇಳುತ್ತಾನೆ; ಎಲ್ಲವೂ ವ್ಯರ್ಥ.
- 3ಸೂರ್ಯನ ಕೆಳಗೆ ಮನುಷ್ಯನು ಪಡುವ ಎಲ್ಲಾ ಪ್ರಯಾಸದಲ್ಲಿ ಅವನಿಗೆ ಲಾಭವೇನು?
- 4ಒಂದು ಸಂತಾನವು ಗತಿಸುತ್ತದೆ, ಮತ್ತೊಂದು ಸಂತಾನವು ಬರುತ್ತದೆ; ಆದರೆ ಭೂಮಿಯು ಎಂದಿಗೂ ನಿಲ್ಲುತ್ತದೆ.
- 5ಸೂರ್ಯನು ಏರುತ್ತಾನೆ, ಸೂರ್ಯನು ಇಳಿಯುತ್ತಾನೆ; ತಾನು ಏರಿದ ಸ್ಥಳಕ್ಕೆ ಆತುರಪಡುತ್ತಾನೆ.
- 6ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ, ಉತ್ತರದ ಕಡೆಗೆ ತಿರುಗುತ್ತದೆ; ಅದು ಬಿಡದೆ ಗುಂಡಾಗಿ ಸುತ್ತುತ್ತದೆ; ಆ ಗಾಳಿಯು ತನ್ನ ಸುತ್ತಳತೆಗಳ ಪ್ರಕಾರ ಹಿಂದಿರು ಗುತ್ತದೆ.
Cross references
- Psalm 104:5 ಕೀರ್ತನೆಗಳು 104:5ಯುಗಯುಗಾಂತರಗಳಿಗೂ ಅದು ಕದಲದ ಹಾಗೆ ಭೂಮಿಯನ್ನು ಅದರ ಅಸ್ತಿವಾರಗಳ ಮೇಲೆ ಆತನು ಸ್ಥಾಪಿಸಿದನು.
- Ecclesiastes 6:12 ಪ್ರಸಂಗಿ 6:12ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.
- Zechariah 1:5 ಜೆಕರ್ಯ 1:5ನಿಮ್ಮ ಪಿತೃ ಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ?
- Matthew 24:35 ಮತ್ತಾಯನು 24:35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.
- Psalm 119:90–91 ಕೀರ್ತನೆಗಳು 119:90–91ತಲತಲಾಂತರಕ್ಕೂ ನಿನ್ನ ನಂಬಿಗಸ್ತಿಕೆಯು ಇರುವದು; ನೀನು ಭೂಮಿ ಯನ್ನು ಸ್ಥಾಪಿಸಿದಿ; ಅದು ನೆಲೆಯಾಗಿದೆ. ಇಂದಿನ ವರೆಗೆ ನಿನ್ನ್ನ ನಿರ್ಣಯಗಳು ನಿಲ್ಲುತ್ತವೆ; ಯಾಕಂದರೆ ಸರ್ವವೂ ನಿನ್ನನ್ನು ಸೇವಿಸುತ್ತದೆ.
- 2 Peter 3:10–13 2 ಪೇತ್ರನು 3:10–13ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು. ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದ ರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು. ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿ ಹತ್ತಿ ಲಯವಾಗಿ ಹೋಗುವವು, ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ? ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.
- Psalm 102:24–28 ಕೀರ್ತನೆಗಳು 102:24–28ಓ ನನ್ನ ದೇವರೇ, ನನ್ನ ದಿವಸಗಳ ಮಧ್ಯದಲ್ಲಿ ನನ್ನನ್ನು ಒಯ್ಯಬೇಡ; ನಿನ್ನ ವರುಷಗಳು ತಲತಲಾಂತರಗಳಿಗೂ ಅವೆ ಅಂದೆನು. ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ. ಅವು ನಾಶವಾಗುವವು; ಆದರೆ ನೀನು ಸ್ಥಿರ ವಾಗಿರುತ್ತೀ; ಹೌದು, ಅವುಗಳೆಲ್ಲಾ ವಸ್ತ್ರದ ಹಾಗೆ ಜೀರ್ಣವಾಗುವವು; ಉಡುಪಿನ ಹಾಗೆ ಅವುಗ ಳನ್ನು ಬದಲಾಯಿಸುವಿ; ಆಗ ಅವು ಬದಲಾಗುವವು. ಆದರೆ ನೀನು ಏಕ ರೀತಿಯಾಗಿರುತ್ತೀ; ನಿನ್ನ ವರುಷಗಳು ಮುಗಿಯವು.ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು. ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.
- Psalm 89:47–48 ಕೀರ್ತನೆಗಳು 89:47–48ನನ್ನ ಆಯುಸ್ಸು ಎಷ್ಟು ಕಡಿಮೆ ಯೆಂದು ಜ್ಞಾಪಕಮಾಡಿಕೋ; ಎಲ್ಲಾ ಮನುಷ್ಯರನ್ನು ಯಾಕೆ ವ್ಯರ್ಥವಾಗಿ ನಿರ್ಮಿಸಿದ್ದೀ? ಮರಣವನ್ನು ನೋಡದೆ ಬದುಕುವಂಥ, ಸಮಾಧಿಯ ವಶದಿಂದ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಂಥ, ಪುರುಷನು ಯಾರು ಸೆಲಾ.
- Genesis 5:3–31 ಆದಿಕಾಂಡ 5:3–31ಆದಾಮನಿಗೆ ನೂರಮೂವತ್ತು ವರುಷವಾದಾಗ ರೂಪದಲ್ಲಿ ತನ್ನ ಹೋಲಿಕೆಗೆ ಸರಿಯಾದ ಮಗನನ್ನು ಪಡೆದು ಅವನಿಗೆ ಸೇತನೆಂದು ಹೆಸರಿಟ್ಟನು. ಸೇತನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರು ವರುಷಗಳಾ ಗಿದ್ದವು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಆದಾಮನು ಬದುಕಿದ ದಿನಗಳೆಲ್ಲಾ ಒಟ್ಟು ಒಂಭೈನೂರ ಮೂವತ್ತು ವರುಷಗಳಾಗಿದ್ದವು; ತರುವಾಯ ಅವನು ಸತ್ತನು. ಸೇತನು ನೂರ ಐದು ವರುಷದವನಾಗಿದ್ದಾಗ ಅವನಿಂದ ಎನೋಷನು ಹುಟ್ಟಿದನು. ಸೇತನಿಂದ ಎನೋಷನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರಏಳುವರುಷ ಗಳಾಗಿದ್ದವು. ಇದಲ್ಲದೆ ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಸೇತನು ಬದುಕಿದ ದಿನಗಳೆಲ್ಲಾ ಒಟ್ಟು ಒಂಭೈನೂರ ಹನ್ನೆರಡು ವರುಷ ಗಳಾಗಿದ್ದವು; ತರುವಾಯ ಅವನು ಸತ್ತನು. ಎನೋ ಷನು ತೊಂಭತ್ತು ವರುಷದವನಾಗಿದ್ದಾಗ ಅವನಿಂದ ಕೇನಾನನು ಹುಟ್ಟಿದನು. ಎನೋಷನಿಂದ ಕೇನಾ ನನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ಹದಿನೈದು ವರುಷಗಳಾಗಿದ್ದವು. ಇದಲ್ಲದೆ ಅವ ನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಎನೋಷನ ದಿನಗಳೆಲ್ಲಾ ಒಟ್ಟು ಒಂಭೈನೂರ ಐದು ವರುಷಗಳಾಗಿದ್ದವು. ತರುವಾಯ ಅವನು ಸತ್ತನು. ಕೇನಾನನು ಎಪ್ಪತ್ತು ವರುಷದವನಾಗಿ ದ್ದಾಗ ಅವನಿಂದ ಮಹಲಲೇಲನು ಹುಟ್ಟಿದನು. ಕೇನಾನನಿಂದ ಮಹಲಲೇಲನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ನಾಲ್ವತ್ತು ವರುಷಗಳಾ ಗಿದ್ದವು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಕೇನಾನನ ದಿನಗಳೆಲ್ಲಾ ಒಟ್ಟು ಒಂಭೈನೂರ ಹತ್ತು ವರುಷಗಳಾಗಿದ್ದವು. ತರುವಾಯ ಅವನು ಸತ್ತನು. ಮಹಲಲೇಲನು ಅರುವತ್ತೈದು ವರುಷದವನಾಗಿದ್ದಾಗ ಅವನಿಂದ ಯೆರೆದನು ಹುಟ್ಟಿ ದನು. ಮಹಲಲೇಲನಿಂದ ಯೆರೆದನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರ ಮೂವತ್ತು ವರುಷಗಳಾಗಿದ್ದವು; ಅವನಿಂದ ಕುಮಾರರೂ ಕುಮಾ ರ್ತೆಯರೂ ಹುಟ್ಟಿದರು. ಮಹಲಲೇಲನ ದಿನಗ ಳೆಲ್ಲಾ ಎಂಟುನೂರ ತೊಂಭತ್ತೈದು ವರುಷ ಗಳಾಗಿದ್ದವು; ತರುವಾಯ ಅವನು ಸತ್ತನು. ಯೆರೆ ದನು ನೂರ ಅರುವತ್ತೆರೆಡು ವರುಷದವನಾಗಿದ್ದಾಗ ಅವನಿಂದ ಹನೋಕನು ಹುಟ್ಟಿದನು. ಯೆರೆದನಿಂದ ಹನೋಕನು ಹುಟ್ಟಿದ ಮೇಲೆ ಅವನ ದಿನಗಳು ಎಂಟುನೂರು ವರುಷಗಳಾಗಿದ್ದವು; ಅವನಿಂದ ಕುಮಾ ರರೂ ಕುಮಾರ್ತೆಯರೂ ಹುಟ್ಟಿದರು. ಯೆರೆದನ ದಿನಗಳೆಲ್ಲಾ ಒಟ್ಟು ಒಂಭೈನೂರ ಅರುವತ್ತೆರಡು ವರುಷಗಳಾಗಿದ್ದವು; ತರುವಾಯ ಅವನು ಸತ್ತನು. ಹನೋಕನು ಅರುವತ್ತೈದು ವರುಷದವನಾಗಿದ್ದಾಗ ಅವನಿಂದ ಮೆತೂಷೆಲಹನು ಹುಟ್ಟಿದನು. ಹನೋ ಕನಿಂದ ಮೆತೂಷೆಲಹನು ಹುಟ್ಟಿದ ತರುವಾಯ ಅವನು ಮುನ್ನೂರು ವರುಷ ದೇವರೊಂದಿಗೆ ನಡೆದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಹನೋಕನ ದಿನಗಳೆಲ್ಲಾ ಒಟ್ಟು ಮುನ್ನೂರ ಅರುವತ್ತೈದು ವರುಷಗಳಾಗಿದ್ದವು. ದೇವರೊಂದಿಗೆ ನಡೆಯುತ್ತಿದ್ದ ಹನೋಕನನ್ನು ಆತನು ತಕ್ಕೊಂಡದ್ದರಿಂದ ಅವನು ಕಾಣದೆಹೋದನು. ಮೆತೂಷೆಲಹನು ನೂರ ಎಂಭತ್ತೇಳು ವರುಷದ ವನಾಗಿದ್ದಾಗ ಅವನಿಂದ ಲೆಮೆಕನು ಹುಟ್ಟಿದನು. ಮೆತೂಷೆಲಹನಿಂದ ಲೆಮೆಕನು ಹುಟ್ಟಿದ ಮೇಲೆ ಅವನ ದಿನಗಳು ಏಳುನೂರ ಎಂಭತ್ತೆರಡು ವರುಷ ಗಳಾಗಿದ್ದವು. ಅವನಿಂದ ಕುಮಾರರೂ ಕುಮಾರ್ತೆ ಯರೂ ಹುಟ್ಟಿದರು. ಮೆತೂಷೆಲಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಅರುವತ್ತೊಂಭತ್ತು ವರುಷಗಳಾಗಿದ್ದವು; ತರುವಾಯ ಅವನು ಸತ್ತನು. ಲೆಮೆಕನು ನೂರ ಎಂಭತ್ತೆರಡು ವರುಷದವ ನಾಗಿದ್ದಾಗ ಅವನಿಂದ ಒಬ್ಬ ಮಗನು ಹುಟ್ಟಿದನು. ಅವನಿಗೆ ನೋಹ ಎಂದು ಕರೆದು--ಕರ್ತನು ಭೂಮಿಯನ್ನು ಶಪಿಸಿದ್ದರಿಂದ ನಮಗೆ ಉಂಟಾದ ಕೈಕಷ್ಟದಲ್ಲಿಯೂ ಪ್ರಯಾಸದಲ್ಲಿಯೂ ಇವನೇ ನಮ್ಮನ್ನು ಆದರಿಸುವನು ಎಂದು ಹೇಳಿದನು. ಲೆಮೆಕನಿಂದ ನೋಹನು ಹುಟ್ಟಿದ ಮೇಲೆ ಅವನ ದಿನಗಳು ಐನೂರ ತೊಂಭತೈದು ವರುಷಗಳಾಗಿದ್ದವು; ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಲೆಮೆಕನ ದಿನಗಳೆಲ್ಲಾ ಒಟ್ಟು ಏಳುನೂರ ಎಪ್ಪತ್ತೇಳು ವರುಷಗಳಾಗಿದ್ದವು. ತರುವಾಯ ಅವನು ಸತ್ತನು.ನೋಹನು ಐನೂರು ವರುಷದವನಾಗಿದ್ದನು; ನೋಹನಿಂದ ಶೇಮ್ ಹಾಮ್ ಯೆಫೆತ್ ಎಂಬವರು ಹುಟ್ಟಿದರು.
- Psalm 90:9–10 ಕೀರ್ತನೆಗಳು 90:9–10ನಮ್ಮ ದಿವಸಗಳೆಲ್ಲಾ ನಿನ್ನ ಕೋಪದಿಂದ ದಾಟಿಹೋದವು. ನಮ್ಮ ವರುಷಗಳನ್ನು ಕೇಳಿದ ಕಥೆಯ ಹಾಗೆ ಕಳೆ ಯುತ್ತೇವೆ. ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ, ಬಲದಿಂದಿದ್ದರೆ ಎಂಭತ್ತು ವರುಷ; ಆದಾಗ್ಯೂ ಅವು ಗಳ ಬಲವು ಪ್ರಯಾಸವೂ ದುಃಖವೂ ಆಗಿವೆ; ಅದು ಬೇಗ ಕೊಯಿದು ಹಾಕಲ್ಪಡುತ್ತದೆ; ನಾವು ಹಾರಿ ಹೋಗುತ್ತೇವೆ.
- Exodus 6:16–27 ವಿಮೋಚನಕಾಂಡ 6:16–27ತಮ್ಮ ತಮ್ಮ ವಂಶಾವಳಿಗಳ ಪ್ರಕಾರವಾಗಿರುವ ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನ್ ಕೆಹಾತ್ ಮೆರಾರೀ. ಲೇವಿಯು ನೂರ ಮೂವತ್ತೇಳು ವರುಷ ಬದುಕಿದನು. ಗೇರ್ಷೋನನ ಕುಮಾರರು ಅವರ ಗೋತ್ರಗಳಿಗನುಸಾರವಾಗಿ: ಲಿಬ್ನೀ ಶಿವ್ಮೆಾಯರು. ಕೆಹಾತನ ಕುಮಾರರು: ಅಮ್ರಾಮ್ ಇಚ್ಹಾರ್ ಹೆಬ್ರೋನ್ ಉಜ್ಜೀಯೇಲ್. ಕೆಹಾತನು ಜೀವಿಸಿದ ವರುಷಗಳು ನೂರ ಮೂವತ್ತುಮೂರು. ಮೆರಾರೀಯ ಕುಮಾರರು: ಮಹ್ಲೀ ಮೂಷೀ. ವಂಶಾ ವಳಿಗಳ ಪ್ರಕಾರ ಇವರೇ ಲೇವಿಯ ಗೋತ್ರಗಳು. ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆ ದಳನ್ನು ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ ಆರೋನನನ್ನೂ ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರ ಮೂವತ್ತೇಳು ವರುಷಗಳು. ಇಚ್ಹಾರನ ಕುಮಾರರು: ಕೋರಹ ನೆಫೆಗ್ ಜಿಕ್ರೀ. ಉಜ್ಜೀಯೇಲನ ಕುಮಾರರು: ವಿಾಷಾಯೇಲ್ ಎಲ್ಚಾಫಾನ್ ಸಿತ್ರೀ. ಆರೋನನು ಅವ್ಮೆಾನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬ ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ--ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಇವರನ್ನು ಹೆತ್ತಳು. ಕೋರಹನ ಕುಮಾರರು: ಅಸ್ಸೀರ್ ಎಲ್ಕಾನಾ ಅಬೀಯಾಸಾಫ್ ಎಂಬವರು. ಇವರೇ ಕೋರಹೀಯರ ಗೋತ್ರಗಳು. ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಳನ್ನು ತನಗೆ ಹೆಂಡತಿ ಯಾಗಿ ತಕ್ಕೊಂಡನು. ಆಕೆಯು ಅವನಿಗೆ--ಫಿನೇಹಾಸ ನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿ ಯರ ತಂದೆಗಳ ಮುಖ್ಯಸ್ಥರು. ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೊಳಗಿಂದ ಹೊರಗೆ ಬರಮಾಡ ಬೇಕೆಂದು ಕರ್ತನು ಯಾರಿಗೆ ಹೇಳಿದನೋ ಆ ಆರೋನ ಮೋಶೆ ಇವರೇ. ಇಸ್ರಾಯೇಲ್ ಮಕ್ಕ ಳನ್ನು ಹೊರಗೆ ತರುವದಕ್ಕಾಗಿ ಐಗುಪ್ತದ ಅರಸನಾದ ಫರೋಹನ ಸಂಗಡ ಮಾತನಾಡಿದ ಮೋಶೆ ಆರೋನರೂ ಇವರೇ.
- Genesis 11:20–32 ಆದಿಕಾಂಡ 11:20–32ರೆಗೂವನು ಮೂವತ್ತೆರಡು ವರುಷದವನಾಗಿದ್ದಾಗ ಅವನಿಂದ ಸೆರೂಗನು ಹುಟ್ಟಿದನು. ರೆಗೂವ ನಿಂದ ಸೆರೂಗನು ಹುಟ್ಟಿದ ಮೇಲೆ ರೆಗೂವನು ಇನ್ನೂರ ಏಳು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ಸೆರೂಗನು ಮೂವತ್ತು ವರುಷದವನಾಗಿದ್ದಾಗ ಅವನಿಂದ ನಾಹೋರನು ಹುಟ್ಟಿದನು. ಸೆರೂಗ ನಿಂದ ನಾಹೋರನು ಹುಟ್ಟಿದ ಮೇಲೆ ಸೆರೂಗನು ಇನ್ನೂರು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ನಾಹೋರನು ಇಪ್ಪತ್ತೊಂಭತ್ತು ವರುಷದವನಾಗಿ ದ್ದಾಗ ಅವನಿಂದ ತೆರಹನು ಹುಟ್ಟಿದನು. ನಾಹೋರ ನಿಂದ ತೆರಹನು ಹುಟ್ಟಿದ ಮೇಲೆ ನಾಹೋರನು ನೂರಹತ್ತೊಂಭತ್ತು ವರುಷ ಬದುಕಿದನು. ಅವನಿಂದ ಕುಮಾರರೂ ಕುಮಾರ್ತೆಯರೂ ಹುಟ್ಟಿದರು. ತೆರಹನು ಎಪ್ಪತ್ತು ವರುಷದವನಾಗಿದ್ದಾಗ ಅವ ನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು. ತೆರಹನ ವಂಶಾವಳಿಗಳು ಇವೇ; ತೆರಹನಿಂದ ಅಬ್ರಾಮನೂ ನಾಹೋರನೂ ಹಾರಾನನೂ ಹುಟ್ಟಿದರು. ಹಾರಾನನಿಂದ ಲೋಟನು ಹುಟ್ಟಿದನು. ಆದರೆ ಹಾರಾನನು ತಾನು ಹುಟ್ಟಿದ ಸೀಮೆಯಾದ ಕಲ್ದಿಯರ ಊರ್ನಲ್ಲಿ ತನ್ನ ತಂದೆಯಾದ ತೆರಹನ ಮುಂಚೆಯೇ ಸತ್ತನು. ಅಬ್ರಾಮನೂ ನಾಹೋ ರನೂ ತಮಗೆ ಹೆಂಡತಿಯರನ್ನು ತೆಗೆದುಕೊಂಡರು. ಅಬ್ರಾಮನ ಹೆಂಡತಿಯ ಹೆಸರು ಸಾರಯಳು, ನಾಹೋರನ ಹೆಂಡತಿಯ ಹೆಸರು ಮಿಲ್ಕಾ; ಈಕೆಯು ಹಾರಾನನ ಮಗಳು; ಹಾರಾನನು ಮಿಲ್ಕಳಿಗೂ ಇಸ್ಕಳಿಗೂ ತಂದೆ. ಆದರೆ ಸಾರಯಳು ಬಂಜೆ ಯಾದದ್ದರಿಂದ ಮಕ್ಕಳಿಲ್ಲದೆ ಇದ್ದಳು. ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನ ಮಗನೂ ಆಗಿದ್ದ ಲೋಟನನ್ನೂ ತನ್ನ ಸೊಸೆಯಾದ ಅಬ್ರಾಮನ ಹೆಂಡತಿ ಸಾರಯಳನ್ನೂ ಕರಕೊಂಡು ಕಾನಾನ್ ದೇಶಕ್ಕೆ ಹೋಗು ವದಕ್ಕಾಗಿ ಕಲ್ದೀಯರ ಊರ್ ಅನ್ನು ಬಿಟ್ಟು ಅವರು ಹಾರಾನಿಗೆ ಬಂದು ಅಲ್ಲಿ ವಾಸವಾಗಿದ್ದರು.ತೆರಹನ ದಿನಗಳು ಒಟ್ಟು ಇನ್ನೂರ ಐದು ವರುಷಗಳಾಗಿದ್ದವು. ತರುವಾಯ ತೆರಹನು ಹಾರಾನಿನಲ್ಲಿ ಸತ್ತನು. ತೆರಹನ ದಿನಗಳು ಒಟ್ಟು ಇನ್ನೂರ ಐದು ವರುಷಗಳಾಗಿದ್ದವು. ತರುವಾಯ ತೆರಹನು ಹಾರಾನಿನಲ್ಲಿ ಸತ್ತನು.