Ecclesiastes · chapter 10 · verse 19
Ecclesiastes 10:19 in Kannada
ನಗೆಗಾಗಿ ಔತಣ ಮಾಡುತ್ತಾರೆ. ದ್ರಾಕ್ಷಾರಸವು ಸಂತೋಷ ಪಡಿಸುತ್ತದೆ. ಹಣವು ಸಮಸ್ತಕ್ಕೂ ಉತ್ತರಕೊಡುತ್ತದೆ.ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.
Nagegaagi autana maaduttaare. Draakshaarasavu santosha padisuttade. Hanavu samastakkoo uttarakoduttade.nimma ooheyalloo arasanannu shapisabediri, neevu malaguva koneyalli aishvaryavannu shapisabediri. Aakaashada pakshigalu dhvaniyannu oyyu vavu; rekkeyullavugalu vishayavannu tilisuvavu.
Ecclesiastes 10:19 in English
- King James Version (KJV)
- A feast is made for laughter, and wine maketh merry: but money answereth all [things].
- World English Bible (WEB)
- A feast is made for laughter, and wine makes the life glad; and money is the answer for all things.
- American Standard Version (ASV)
- A feast is made for laughter, and wine maketh glad the life; and money answereth all things.
- Bible in Basic English (BBE)
- A feast is for laughing, and wine makes glad the heart; but by the one and the other money is wasted.
- Darby Translation (DBY)
- A feast is made for laughter, and wine maketh life merry; but money answereth everything.
- Webster's Bible (WBS)
- A feast is made for laughter, and wine maketh merry: but money answereth all [things] .
- Young's Literal Translation (YLT)
- For mirth they are making a feast, And wine maketh life joyful, And the silver answereth with all.
Read in context
- 17ಓ ದೇಶವೇ, ಶ್ರೇಷ್ಠರ ಮಗನು ನಿನ್ನ ಅರಸನಾದರೆ ಮತ್ತು ನಿನ್ನ ಪ್ರಭುಗಳು ತಕ್ಕಕಾಲಕ್ಕೆ ಸರಿಯಾಗಿ ಅಮಲಿಗಾಗಿ ಅಲ್ಲದೆ ಶಕ್ತಿಗಾಗಿ ಊಟ ಮಾಡಿದರೆ ನಿನಗೆ ಆಶೀರ್ವಾದವಾಗಲಿ.
- 18ಹೆಚ್ಚು ಸೋಮಾರಿತನದಿಂದ ತೊಲೆಗಳು ಜಗ್ಗುತ್ತವೆ ಮತ್ತು ಜೋಲುಗೈಯಿಂದ ಮನೆಗಳು ಸೋರುವವು.
- 19ನಗೆಗಾಗಿ ಔತಣ ಮಾಡುತ್ತಾರೆ. ದ್ರಾಕ್ಷಾರಸವು ಸಂತೋಷ ಪಡಿಸುತ್ತದೆ. ಹಣವು ಸಮಸ್ತಕ್ಕೂ ಉತ್ತರಕೊಡುತ್ತದೆ.ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.
- 20ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.
Cross references
- Psalm 104:15 ಕೀರ್ತನೆಗಳು 104:15ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.
- Ecclesiastes 2:1–2 ಪ್ರಸಂಗಿ 2:1–2ನಾನು ನನ್ನ ಹೃದಯದಲ್ಲಿ--ಹೋಗು, ನಾನು ನಿನ್ನನ್ನು ಸಂತೋಷದ ಮೂಲಕ ಪರೀಕ್ಷಿಸುವೆನು; ಆದಕಾರಣ ಸುಖವನ್ನು ಅನುಭವಿಸು ಎಂದು ಅಂದುಕೊಂಡೆನು. ಇಗೋ, ಇದು ಕೂಡ ವ್ಯರ್ಥವೇ. ನಗೆಯ ವಿಷಯವಾಗಿ--ಇದು ಹುಚ್ಚು ಎಂದೂ ಸಂತೋಷದ ವಿಷಯವಾಗಿ--ಇದೇನು ಮಾಡುತ್ತದೆ ಎಂದೂ ನಾನು ಹೇಳಿದೆನು.
- Ecclesiastes 7:11–12 ಪ್ರಸಂಗಿ 7:11–12ಜ್ಞಾನವು ಬಾಧ್ಯತೆಯ ಹಾಗೆ ಒಳ್ಳೇದು. ಸೂರ್ಯನನ್ನು ನೋಡುವವರಿಗೆ ಅದರಿಂದ ಲಾಭ ವಿದೆ. ಜ್ಞಾನವು ಆಶ್ರಯ, ಧನವು ಆಶ್ರಯ; ಆದರೆ ತಿಳುವಳಿಕೆಯ ಶ್ರೇಷ್ಠತೆ ಏನಂದರೆ, ಅದನ್ನು ಹೊಂದಿದವರಿಗೆ ಜ್ಞಾನವು ಜೀವವನ್ನು ಕೊಡುತ್ತದೆ.
- Isaiah 24:11 ಯೆಶಾಯ 24:11ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲ ಅಸ್ತಮಿಸಿದೆ; ದೇಶದ ಸಡಗರವು ತೊಲಗಿಹೋಗಿದೆ.
- Philippians 4:15–19 ಫಿಲಿಪ್ಪಿಯವರಿಗೆ 4:15–19ಇದಲ್ಲದೆ ಫಿಲಿಪ್ಪಿ ಯವರೇ, ಸುವಾರ್ತೆಯ ಪ್ರಾರಂಭದಲ್ಲಿ ನಾನು ಮಕೆದೋನ್ಯದಿಂದ ಹೊರಟಾಗ ಕೊಡುವದರ ಮತ್ತು ತೆಗೆದುಕೊಳ್ಳುವದರ ವಿಷಯದಲ್ಲಿ ನಿಮ್ಮ ಹೊರತು ಬೇರೆ ಸಭೆಯು ನನ್ನೊಂದಿಗೆ ಭಾಗವಹಿಸಲಿಲ್ಲವೆಂದು ನೀವು ಸಹ ಬಲ್ಲಿರಿ. ನಾನು ಥೆಸಲೋನಿಕದಲ್ಲಿ ದ್ದಾಗಲೂ ನೀವು ಕೆಲವು ಸಾರಿ ನನ್ನ ಕೊರತೆಯನ್ನು ನೀಗಿಸುವದಕ್ಕೆ ಕೊಟ್ಟು ಕಳುಹಿಸಿದಿರಲ್ಲಾ. ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.
- Psalm 112:9 ಕೀರ್ತನೆಗಳು 112:9ಅವನು ಬಡವರಿಗೆ ಧಾರಾಳವಾಗಿ ಕೊಡುತ್ತಾನೆ; ಅವನ ನೀತಿ ಎಂದೆಂದಿಗೂ ನಿಲ್ಲು ತ್ತದೆ; ಅವನ ಕೊಂಬು ಘನದಿಂದ ಎತ್ತಲ್ಪಡುವದು.ದುಷ್ಟನು ನೋಡಿ ದುಃಖಪಡುವನು; ತನ್ನ ಹಲ್ಲು ಗಳನ್ನು ಕಡಿದು ಕರಗಿಹೋಗುವನು; ದುಷ್ಟರ ಆಶೆಯು ನಾಶವಾಗುವದು.
- Isaiah 23:18 ಯೆಶಾಯ 23:18(ಆದರೆ) ಅವಳ ವ್ಯಾಪಾರವೂ ಆದಾಯವೂ ಬೊಕ್ಕಸದಲ್ಲಿ ಹಾಕದೆ ಇಲ್ಲವೆ ಇಟ್ಟುಕೊಳ್ಳದೆ ಕರ್ತನಿಗೆ ಪರಿಶುದ್ಧವಾಗು ವದು. ಅವಳ ವ್ಯಾಪಾರವು ಕರ್ತನ ಸನ್ನಿಧಾನದಲ್ಲಿ ವಾಸಿಸುವ ವರೆಗೆ ಬೇಕಾದಷ್ಟು ಅನ್ನವನ್ನೂ ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನು ಕೂಲವಾಗುವದು.
- Luke 12:19 ಲೂಕನು 12:19ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು.
- 1 Peter 4:3 1 ಪೇತ್ರನು 4:3ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು.
- 1 Samuel 25:36 1 ಸಮುವೇಲನು 25:36ತರುವಾಯ ಅಬೀಗೈಲಳು ನಾಬಾಲನ ಬಳಿಗೆ ಬಂದಾಗ ಇಗೋ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸ ಗೊಂಡಿತ್ತು. ಆದಕಾರಣ ಅವಳು ಉದಯವಾಗುವ ವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ ಹೆಚ್ಚಾದದ್ದ ನ್ನಾಗಲಿ ತಿಳಿಸಲಿಲ್ಲ.
- Luke 16:9 ಲೂಕನು 16:9ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು.
- 2 Chronicles 24:11–14 2 ಪೂರ್ವಕಾಲವೃತ್ತಾಂತ 24:11–14ಪೆಟ್ಟಿಗೆಯು ಲೇವಿಯರ ಕೈಯಿಂದ ಅರಸನ ಆಸ್ಥಾನಕ್ಕೆ ತರಲ್ಪಟ್ಟಾಗ ಅದರಲ್ಲಿ ಬಹಳ ಹಣ ಕಾಣಿಸಿದ್ದರಿಂದ ಅರಸನ ಶಾಸ್ತ್ರಿಯೂ ಪ್ರಧಾನ ಯಾಜಕನ ಪರಿಚಾರ ಕನೂ ಬಂದು ಪೆಟ್ಟಿಗೆಯನ್ನು ಬರಿದುಮಾಡಿ ತಕ್ಕೊಂಡು ತಿರಿಗಿ ಅದರ ಸ್ಥಳಕ್ಕೆ ಒಯ್ದಿಟ್ಟರು. ಹೀಗೆಯೇ ಅವರು ಪ್ರತಿದಿನ ಮಾಡಿ ಹಣವನ್ನು ಬಹಳ ಕೂಡಿಸಿದರು. ಆಗ ಅರಸನೂ ಯೆಹೋಯಾದನೂ ಅದನ್ನು ಕರ್ತನ ಆಲಯದ ಸೇವೆಯ ಕಾರ್ಯವನ್ನು ಮಾಡುವ ವರಿಗೆ ಕೊಟ್ಟು ಅವರಿಂದ ಮಾಡಿಸಿದನು. ಕರ್ತನ ಆಲಯವನ್ನು ದುರಸ್ತು ಪಡಿಸುವ ನಿಮಿತ್ತ ಕಲ್ಲು ಕಡಿಯುವವರನ್ನೂ ಬಡಿಗಿಯವರನ್ನೂ ಕೂಲಿಗೆ ಕರ ಕೊಂಡರು. ಕರ್ತನ ಆಲಯವನ್ನು ಭದ್ರಮಾಡುವ ನಿಮಿತ್ತ ಕಬ್ಬಿಣ ಹಿತ್ತಾಳೆ ಕೆಲಸ ಮಾಡುವವರನ್ನು ಕೂಲಿಗೆ ಕರಕೊಂಡರು. ಹೀಗೆಯೇ ಕೆಲಸದವರು ಕೆಲಸವನ್ನು ನಡಿಸಿದ್ದರಿಂದ ಕೆಲಸವು ಅವರ ಕೈಯಿಂದ ಪೂರ್ಣ ವಾಯಿತು, ಅವರು ಕರ್ತನ ಆಲಯವನ್ನು ಇದ್ದ ಸ್ಥಿತಿಯಲ್ಲಿ ನಿಲ್ಲಿಸಿ ಅದನ್ನು ಬಲಪಡಿಸಿದರು. ಅವರು ಅದನ್ನು ಮುಗಿಸಿದ ಮೇಲೆ ಮಿಕ್ಕ ಹಣವನ್ನು ಅರ ಸನ ಮುಂದೆಯೂ ಯೆಹೋಯಾದನ ಮುಂದೆಯೂ ತಂದರು. ಅದರಿಂದ ಕರ್ತನ ಆಲಯಕ್ಕೋಸ್ಕರ ಬಂಗಾ ರದ ಬೆಳ್ಳಿಪಾತ್ರೆಗಳಾದ ಸೇವೆಯ ಪಾತ್ರೆಗಳೂ ಅರ್ಪಣೆಯ ಪಾತ್ರೆಗಳೂ ಸೌಟುಗಳೂ ಮಾಡಲ್ಪ ಟ್ಟವು. ಯೆಹೋಯಾದನ ಸಮಸ್ತ ದಿವಸಗಳಲ್ಲಿ ಯಾವಾಗಲೂ ಕರ್ತನ ಆಲಯದಲ್ಲಿ ದಹನಬಲಿ ಗಳನ್ನು ಅರ್ಪಿಸಿದರು.