Ecclesiastes · chapter 10 · verse 4
Ecclesiastes 10:4 in Kannada
ಆಳುವವನ ಆತ್ಮವು ನಿನಗೆ ವಿರುದ್ಧವಾಗಿ ಎದ್ದರೆ ನಿನ್ನ ಸ್ಥಳವನ್ನು ಬಿಡಬೇಡ; ತಾಳ್ಮೆಯು ಅಭ್ಯಂತರಗಳನ್ನು ತಡೆಯುತ್ತದೆ.
Aaluvavana aatmavu ninage viruddhavaagi eddare ninna sthalavannu bidabeda; taalmeyu abhyantaragalannu tadeyuttade.
Ecclesiastes 10:4 in English
- King James Version (KJV)
- If the spirit of the ruler rise up against thee, leave not thy place; for yielding pacifieth great offences.
- World English Bible (WEB)
- If the spirit of the ruler rises up against you, don’t leave your place; for gentleness lays great offenses to rest.
- American Standard Version (ASV)
- If the spirit of the ruler rise up against thee, leave not thy place; for gentleness allayeth great offences.
- Bible in Basic English (BBE)
- If the wrath of the ruler is against you, keep in your place; in him who keeps quiet even great sins may be overlooked.
- Darby Translation (DBY)
- If the spirit of the ruler rise up against thee, leave not thy place; for quietness pacifieth great offences.
- Webster's Bible (WBS)
- If the spirit of the ruler riseth against thee, leave not thy place; for yielding pacifieth great offenses.
- Young's Literal Translation (YLT)
- If the spirit of the ruler go up against thee, Thy place leave not, For yielding quieteth great sinners.
Read in context
- 2ಒಬ್ಬ ಜ್ಞಾನಿಯಾದ ಮನು ಷ್ಯನ ಹೃದಯವು ಅವನ ಬಲಗೈಯಲ್ಲಿರುತ್ತದೆ; ಆದರೆ ಒಬ್ಬ ಮೂರ್ಖನ ಹೃದಯವು ಅವನ ಎಡಗಡೆಯಿ ರುತ್ತದೆ.
- 3ಹೌದು, ಮೂರ್ಖನು ಮಾರ್ಗದಲ್ಲಿ ನಡೆ ಯುವಾಗಲೂ ಸಹ ಅವನ ಜ್ಞಾನವು ಅವನನ್ನು ತಪ್ಪಿಸುತ್ತದೆ; ಅವನು ತಾನು ಮೂರ್ಖನೆಂದು ಪ್ರತಿಯೊಬ್ಬನಿಗೂ ಹೇಳುತ್ತಾನೆ.
- 4ಆಳುವವನ ಆತ್ಮವು ನಿನಗೆ ವಿರುದ್ಧವಾಗಿ ಎದ್ದರೆ ನಿನ್ನ ಸ್ಥಳವನ್ನು ಬಿಡಬೇಡ; ತಾಳ್ಮೆಯು ಅಭ್ಯಂತರಗಳನ್ನು ತಡೆಯುತ್ತದೆ.
- 5ಆಳುವ ವನ ಸಮ್ಮುಖದಿಂದ ಹೊರಟು ಬರುವ ತಪ್ಪಿನ ಹಾಗಿ ರುವ ಒಂದು ಕೇಡನ್ನು ನಾನು ಸೂರ್ಯನ ಕೆಳಗೆ ನೋಡಿದ್ದೇನೆ.
- 6ಮೂರ್ಖತನವು ಬಹಳ ಎತ್ತರವಾದ ಸ್ಥಳದಲ್ಲಿಡಲ್ಪಡುತ್ತದೆ. ಸಿರಿತನವು ಕೆಳಗಿನ ಸ್ಥಳದಲ್ಲಿ ಕೂತುಕೊಳ್ಳುವದು.
Cross references
- Proverbs 25:15 ಜ್ಞಾನೋಕ್ತಿಗಳು 25:15ದೀರ್ಘ ಶಾಂತಿಯಿಂದ ಪ್ರಭುವನ್ನು ಸಮ್ಮತಿಪಡಿಸಬಹುದು. ಮೃದುವಾದ ನಾಲಿಗೆಯು ಎಲುಬನ್ನು ಮುರಿಯುತ್ತದೆ.
- Ecclesiastes 8:3 ಪ್ರಸಂಗಿ 8:3ಅವನ ದೃಷ್ಟಿಯಿಂದ ಹೊರಗೆ ಹೋಗುವದಕ್ಕೆ ಆತುರಪಡಬೇಡಿರಿ; ಕೆಟ್ಟ ಕಾರ್ಯದಲ್ಲಿ ನಿಲ್ಲಬೇಡಿರಿ; ಅವನು ತನಗೆ ಇಷ್ಟ ಬಂದದ್ದನ್ನೆಲ್ಲಾ ಮಾಡುತ್ತಾನೆ.
- 1 Samuel 25:24–44 1 ಸಮುವೇಲನು 25:24–44ದಯಮಾಡಿ ನಿನ್ನ ದಾಸಿಯನ್ನು ಮಾತಾಡಗೊಡಿಸಿ ನಿನ್ನ ದಾಸಿಯ ಮಾತುಗಳನ್ನು ಕೇಳು. ನನ್ನ ಒಡೆಯನು, ದಯಮಾಡಿ ಬೆಲಿಯಾಳನ ಈ ಮನುಷ್ಯ ನಾದ ನಾಬಾಲನ ಮೇಲೆ ಗಮನ ಇಡದೆ ಇರಲಿ. ಯಾಕಂದರೆ ಅವನ ಹೆಸರು ಹೇಗೋ ಹಾಗೆಯೇ ಅವನು ನಾಬಾಲನೆಂಬ ಹೆಸರುಳ್ಳವನು, ಮೂರ್ಖ ತನವು ಅವನ ಸಂಗಡ ಇರುವದು. ಆದರೆ ನನ್ನ ಒಡೆಯನಾದ ನೀನು ಕಳುಹಿಸಿದ ನಿನ್ನ ಯೌವನಸ್ಥರನ್ನು ನಿನ್ನ ದಾಸಿಯಾದ ನಾನು ನೋಡಲಿಲ್ಲ. ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವದಕ್ಕೂ ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವದಕ್ಕೂ ಹೋಗುವದನ್ನು ದೇವರು ಆಟಂಕ ಮಾಡಿದ್ದರಿಂದ ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಿನ್ನ ಶತ್ರುಗಳೂ ನನ್ನ ಒಡೆಯನಿಗೆ ಕೇಡನ್ನು ಹುಡುಕು ವವರೂ ನಾಬಾಲನ ಹಾಗೆಯೇ ಆಗಲಿ. ಈಗ ನಿನ್ನ ದಾಸಿಯು ನನ್ನ ಒಡೆಯನಿಗೆ ತಕ್ಕೊಂಡು ಬಂದ ಈ ಆಶೀರ್ವಾದವು ನನ್ನ ಒಡೆಯನನ್ನು ಹಿಂಬಾಲಿಸುವ ಯೌವನಸ್ಥರಿಗೆ ಕೊಡಲ್ಪಡಲಿ. ನೀನು ದಯಮಾಡಿ ನಿನ್ನ ದಾಸಿಯದ್ರೋಹವನ್ನು ಮನ್ನಿಸಬೇಕು; ನನ್ನ ಒಡೆಯನು ಕರ್ತನ ಯುದ್ಧಗಳನ್ನು ನಡೆಸುತ್ತಾನೆ; ನಿನ್ನ ದಿನಗಳಲ್ಲಿ ನಿನ್ನ ಬಳಿಯಲ್ಲಿ ಕೆಟ್ಟತನವು ಕಂಡುಹಿಡಿ ಯಲ್ಪಟ್ಟದ್ದಿಲ್ಲ; ಆದದರಿಂದ ಕರ್ತನು ನನ್ನ ಒಡೆಯನಿಗೆ ಸ್ಥಿರವಾದ ಮನೆಯನ್ನು ಖಂಡಿತವಾಗಿ ಮಾಡುವನು. ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡು ಕುವದಕ್ಕೆ ಒಬ್ಬನು ಎದ್ದಿದ್ದಾನೆ; ಆದರೂ ನನ್ನ ಒಡೆ ಯನ ಪ್ರಾಣವು ದೇವರಾದ ಕರ್ತನ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಲ್ಪಟ್ಟಿರುವದು; ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ಆತನು ಎಸೆದು ಬಿಡುವನು. ಇದಲ್ಲದೆ ನನ್ನ ಒಡೆಯನಾದ ನಿನ್ನನ್ನು ಕುರಿತು ಕರ್ತನು ಹೇಳಿದ ಒಳ್ಳೇದನ್ನೆಲ್ಲಾ ನಿನಗೆ ಮಾಡಿ ನಿನ್ನನ್ನು ಇಸ್ರಾಯೇಲ್ಯರ ಮೇಲೆ ನಾಯಕನಾಗಿ ನೇಮಿಸಿದಾಗ ಏನಾಗುವ ದಂದರೆ, ನೀನು ಸುಮ್ಮನೆ ರಕ್ತ ಚೆಲ್ಲಿದ್ದೂ ನನ್ನ ಒಡೆಯನು ತನಗೆ ತಾನೇ ಮುಯ್ಯಿ ತೀರಿಸಿಕೊಂಡದ್ದೂ ನಿನಗೆ ವ್ಯಥೆಯಾಗಿರುವದಿಲ್ಲ; ನನ್ನ ಒಡೆಯನ ಹೃದಯಕ್ಕೆ ಅಪರಾಧವಾಗಿರುವದಿಲ್ಲ. ಆದರೆ ನನ್ನ ಒಡೆಯನಿಗೆ ಕರ್ತನು ಚೆನ್ನಾಗಿ ನಡೆಸಿದಾಗ ನಿನ್ನ ದಾಸಿಯನ್ನು ಜ್ಞಾಪಕಮಾಡಿಕೊಳ್ಳಬೇಕು ಅಂದಳು. ಆಗ ದಾವೀದನು ಅಬೀಗೈಲಳಿಗೆ--ನನ್ನನ್ನು ಎದುರು ಗೊಳ್ಳುವದಕ್ಕೆ ಈ ಹೊತ್ತು ನಿನ್ನನ್ನು ಕಳುಹಿಸಿದ ಇಸ್ರಾ ಯೇಲಿನ ದೇವರಾದ ಕರ್ತನಿಗೆ ಸ್ತೋತ್ರವಾಗಲಿ. ನಿನ್ನ ಬುದ್ಧಿಮಾತು ಆಶೀರ್ವದಿಸಲ್ಪಡಲಿ. ನಾನು ರಕ್ತ ಚೆಲ್ಲುವದನ್ನೂ ನನ್ನ ಕೈಯಿಂದ ನಾನೇ ಮುಯ್ಯಿ ತೀರಿಸದಂತೆಯೂ ಈ ಹೊತ್ತು ನನ್ನನ್ನು ಆಟಂಕಪಡಿ ಸಿದ ನಿನಗೆ ಆಶೀರ್ವಾದವಾಗಲಿ. ನಿನಗೆ ಕೇಡು ಮಾಡದ ಹಾಗೆ ನನಗೆ ಆಟಂಕ ಮಾಡಿದ ಇಸ್ರಾ ಯೇಲಿನ ದೇವರಾದ ಕರ್ತನ ಜೀವದಾಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದೆ ಹೋಗಿದ್ದರೆ ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ ಅಂದನು. ಅವಳು ತನಗೆ ತಂದ ದ್ದನ್ನು ದಾವೀದನು ಅವಳ ಕೈಯಿಂದ ತಕ್ಕೊಂಡು ಅವಳಿಗೆ--ನೀನು ಸಮಾಧಾನವಾಗಿ ನಿನ್ನ ಮನೆಗೆ ಹೋಗು; ಇಗೋ, ನಾನು ನಿನ್ನ ಮಾತನ್ನು ಕೇಳಿ ನಿನ್ನ ವಿಜ್ಞಾಪನೆಯನ್ನು ಅಂಗೀಕರಿಸಿದೆನು ಅಂದನು. ತರುವಾಯ ಅಬೀಗೈಲಳು ನಾಬಾಲನ ಬಳಿಗೆ ಬಂದಾಗ ಇಗೋ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸ ಗೊಂಡಿತ್ತು. ಆದಕಾರಣ ಅವಳು ಉದಯವಾಗುವ ವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ ಹೆಚ್ಚಾದದ್ದ ನ್ನಾಗಲಿ ತಿಳಿಸಲಿಲ್ಲ. ಉದಯದಲ್ಲಿ ನಾಬಾಲನಿಗೆ ದ್ರಾಕ್ಷಾರಸದ ಅಮಲು ಇಳಿದಾಗ ಅವನ ಹೆಂಡತಿಯು ಈ ಮಾತುಗಳನ್ನು ಅವನಿಗೆ ತಿಳಿಸಲು ಏನಾಯಿತಂದರೆ, ಅವನ ಹೃದಯವು ಅವನಲ್ಲಿ ಸತ್ತು ಅವನು ಕಲ್ಲಿನ ಹಾಗಾದನು. ಹೆಚ್ಚು ಕಡಿಮೆ ಹತ್ತು ದಿವಸಗಳಾದ ತರುವಾಯ ಏನಾಯಿತಂದರೆ, ಕರ್ತನು ನಾಬಾಲನನ್ನು ಹೊಡೆದದ್ದರಿಂದ ಅವನು ಸತ್ತನು. ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ ತನ್ನ ಸೇವಕ ನನ್ನು ಕೇಡುಮಾಡಗೊಡದ ಹಾಗೆ ಆಟಂಕಿಸಿದ ಕರ್ತನು ಸ್ತುತಿ ಹೊಂದಲಿ; ಯಾಕಂದರೆ ಕರ್ತನು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದನು ಅಂದನು. ದಾವೀದನು ಅಬೀಗೈಲ ಳನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ಅವಳ ಸಂಗಡ ಮಾತನಾಡ ಕಳುಹಿಸಿದನು. ದಾವೀದನ ಸೇವಕರು ಕರ್ಮೆಲಿನಲ್ಲಿರುವ ಅಬೀಗೈಲಳ ಬಳಿಗೆ ಬಂದಾಗ ಅವಳಿಗೆ--ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದನೆಂದು ಹೇಳಿದರು. ಆಗ ಅವಳು ಎದ್ದು ಬೋರಲು ಬಿದ್ದು--ಇಗೋ, ನಿನ್ನ ದಾಸಿ ನನ್ನ ಒಡೆ ಯನ ಸೇವಕರ ಪಾದಗಳನ್ನು ತೊಳೆಯುವ ಒಬ್ಬ ಸೇವಕಳಾಗಬೇಕು ಅಂದಳು. ಅಬೀಗೈಲಳು ಬೇಗನೆ ಎದ್ದು ಕತ್ತೆಯ ಮೇಲೆ ಹತ್ತಿಕೊಂಡು ತನ್ನ ಸಂಗಡ ಇರುವ ಐದು ಮಂದಿ ದಾಸಿಯರನ್ನು ಕರಕೊಂಡು ದಾವೀದನ ಸೇವಕರ ಹಿಂದೆ ಹೋಗಿ ಅವನಿಗೆ ಹೆಂಡತಿ ಯಾದಳು. ಇದಲ್ಲದೆ ದಾವೀದನು ಇಜ್ರೇಲು ಊರಿನವಳಾದ ಅಹೀನೋವಮಳನ್ನು ತಕ್ಕೊಂಡನು.ಅವರಿಬ್ಬರೂ ಅವನಿಗೆ ಹೆಂಡತಿಯರಾದರು.ಆದರೆ ಸೌಲನು ದಾವೀದನ ಹೆಂಡತಿಯಾದ ವಿಾಕಲಳೆಂಬ ತನ್ನ ಕುಮಾರ್ತೆಯನ್ನು ಗಲ್ಲೀಮ್ ಪಟ್ಟಣದ ಲಯಿಷನ ಮಗನಾದ ಪಲ್ಟೀಗೆ ಕೊಟ್ಟನು. ಆದರೆ ಸೌಲನು ದಾವೀದನ ಹೆಂಡತಿಯಾದ ವಿಾಕಲಳೆಂಬ ತನ್ನ ಕುಮಾರ್ತೆಯನ್ನು ಗಲ್ಲೀಮ್ ಪಟ್ಟಣದ ಲಯಿಷನ ಮಗನಾದ ಪಲ್ಟೀಗೆ ಕೊಟ್ಟನು.