Ecclesiastes · chapter 10 · verse 8
Ecclesiastes 10:8 in Kannada
ಯಾವನು ಕುಣಿಯನ್ನು ಅಗೆಯುವನೋ ಅದರಲ್ಲೇ ಅವನು ಬೀಳುವನು; ಯಾವನು ಬೇಲಿಯನ್ನು ಮುರಿ ಯುವನೋ ಅವನನ್ನು ಹಾವು ಕಚ್ಚುವದು.
Yaavanu kuniyannu ageyuvano adaralle avanu beeluvanu; yaavanu beliyannu muri yuvano avanannu haavu kachchuvadu.
Ecclesiastes 10:8 in English
- King James Version (KJV)
- He that diggeth a pit shall fall into it; and whoso breaketh an hedge, a serpent shall bite him.
- World English Bible (WEB)
- He who digs a pit may fall into it; and whoever breaks through a wall may be bitten by a snake.
- American Standard Version (ASV)
- He that diggeth a pit shall fall into it; and whoso breaketh through a wall, a serpent shall bite him.
- Bible in Basic English (BBE)
- He who makes a hole for others will himself go into it, and for him who makes a hole through a wall the bite of a snake will be a punishment.
- Darby Translation (DBY)
- He that diggeth a pit falleth into it; and whoso breaketh down a hedge, a serpent biteth him.
- Webster's Bible (WBS)
- He that diggeth a pit shall fall into it; and whoever breaketh a hedge, a serpent shall bite him.
- Young's Literal Translation (YLT)
- Whoso is digging a pit falleth into it, And whoso is breaking a hedge, a serpent biteth him.
Read in context
- 6ಮೂರ್ಖತನವು ಬಹಳ ಎತ್ತರವಾದ ಸ್ಥಳದಲ್ಲಿಡಲ್ಪಡುತ್ತದೆ. ಸಿರಿತನವು ಕೆಳಗಿನ ಸ್ಥಳದಲ್ಲಿ ಕೂತುಕೊಳ್ಳುವದು.
- 7ನಾನು ಕುದುರೆಗಳ ಮೇಲೆ ಸೇವಕರನ್ನೂ ಮತ್ತು ಪ್ರಭುಗಳು ಸೇವಕರ ಹಾಗೆ ಭೂಮಿಯ ಮೇಲೆ ನಡೆಯುವದನ್ನೂ ನೋಡಿದ್ದೇನೆ.
- 8ಯಾವನು ಕುಣಿಯನ್ನು ಅಗೆಯುವನೋ ಅದರಲ್ಲೇ ಅವನು ಬೀಳುವನು; ಯಾವನು ಬೇಲಿಯನ್ನು ಮುರಿ ಯುವನೋ ಅವನನ್ನು ಹಾವು ಕಚ್ಚುವದು.
- 9ಯಾವನು ಕಲ್ಲುಗಳನ್ನು ಕೀಳುವನೋ ಅವುಗಳಿಂದ ಅವನು ನೋವುಪಡುವನು; ಯಾವನು ಕಟ್ಟಿಗೆ ಕಡಿಯುವನೋ ಅದರಿಂದ ಅವನು ಅಪಾಯಗೊಳ್ಳುವನು.
- 10ಕಬ್ಬಿಣ ಮೊಂಡಾಗಿದ್ದು ಅದರ ಬಾಯಿಯನ್ನು ಮಸೆಯದಿ ದ್ದರೆ ಅವನು ತಪ್ಪದೆ ಹೆಚ್ಚು ಬಲವನ್ನು ಹಾಕಬೇಕು; ಜ್ಞಾನವು ಬದುಕಿಗೆ ಪ್ರಯೋಜನವಾಗಿದೆ.
Cross references
- Proverbs 26:27 ಜ್ಞಾನೋಕ್ತಿಗಳು 26:27ಗುಂಡಿ ಯನ್ನು ತೋಡುವವನು ತಾನೇ ಅದರಲ್ಲಿ ಬೀಳುತ್ತಾನೆ; ಕಲ್ಲು ಹೊರಳಿಸುವವನ ಮೇಲೆಯೇ ಅದು ತಿರಿಗಿ ಹೊರಳುವದು.ಸುಳ್ಳು ನಾಲಿಗೆಯಿಂದ ಬಾಧಿಸಲ್ಪ ಟ್ಟವರನ್ನೇ ಅದು ಹಗೆಮಾಡುವದು; ಮುಖಸ್ತುತಿ ಮಾಡುವ ಬಾಯಿಯು ನಾಶನವನ್ನುಂಟುಮಾಡುತ್ತದೆ.
- Psalm 7:15–16 ಕೀರ್ತನೆಗಳು 7:15–16ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ. ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
- Esther 7:10 ಎಸ್ತೇರಳು 7:10ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
- Amos 5:19 ಆಮೋಸ 5:19ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ ಕರಡಿಯನ್ನು ಎದುರುಗೊಂಡ ಹಾಗೆಯೂ ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈ ಒರಗಿ ಸಿದಾಗ ಸರ್ಪವು ಕಚ್ಚಿದ ಹಾಗೆಯೂ ಇರುವದು.
- 2 Samuel 17:23 2 ಸಮುವೇಲನು 17:23ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.
- Amos 9:3 ಆಮೋಸ 9:3ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು.
- Psalm 9:15–16 ಕೀರ್ತನೆಗಳು 9:15–16ಜನಾಂಗಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲಿ ಅವರ ಕಾಲು ಸಿಕ್ಕಿಕೊಂಡಿತು. ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
- Judges 9:5 ನ್ಯಾಯಸ್ಥಾಪಕರು 9:5ಅವನು ಒಫ್ರದಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ತನ್ನ ಸಹೋದರರಾದ ಯೆರುಬ್ಬಾಳನ ಎಪ್ಪತ್ತು ಮಂದಿ ಕುಮಾರರನ್ನು ಒಂದು ಕಲ್ಲಿನ ಮೇಲೆ ಕೊಂದು ಹಾಕಿದನು. ಆದರೆ ಯೆರುಬ್ಬಾಳನ ಚಿಕ್ಕ ಮಗನಾದ ಯೋತಾಮನು ಒಬ್ಬನೇ ಉಳಿದನು; ಯಾಕಂದರೆ ಅವನು ಅಡಗಿಕೊಂಡನು.
- Judges 9:53–57 ನ್ಯಾಯಸ್ಥಾಪಕರು 9:53–57ಆದರೆ ಒಬ್ಬ ಸ್ತ್ರೀಯು ಒಂದು ಬೀಸುವ ಕಲ್ಲಿನ ತುಂಡನ್ನು ಅಬೀಮೆಲೆಕನ ತಲೆಯ ಮೇಲೆ ಹಾಕಿ; ಅದರಿಂದ ಅವನ ತಲೆಯನ್ನು ಒಡೆದುಹಾಕಿದಳು. ಆಗ ಅವನು ಶೀಘ್ರವಾಗಿ ತನ್ನ ಆಯುಧಗಳನ್ನು ಹೊರುವ ಸೇವಕ ನನ್ನು ಕರೆದು ಅವನಿಗೆ--ಒಬ್ಬ ಸ್ತ್ರೀಯು ಕೊಂದಳೆಂದು ಮನುಷ್ಯರು ನನ್ನನ್ನು ಕುರಿತು ಹೇಳದ ಹಾಗೆ ನೀನು ನಿನ್ನ ಕತ್ತಿಯನ್ನು ಇರಿದು ನನ್ನನ್ನು ಕೊಲ್ಲು ಎಂದು ಅವನಿಗೆ ಹೇಳಿದನು. ಹಾಗೆಯೇ ಅವನ ಸೇವಕನು ಅವನನ್ನು ತಿವಿದು ಹಾಕಿದನು; ಅವನು ಸತ್ತನು. ಅಬೀಮೆಲೆಕನು ಸತ್ತುಹೋದದ್ದನ್ನು ಇಸ್ರಾಯೇಲ್ ಮನುಷ್ಯರು ನೋಡಿದಾಗ ಅವರವರು ತಮ್ಮ ಸ್ಥಳಗಳಿಗೆ ಹೋದರು. ಈ ಪ್ರಕಾರ ಅಬೀಮೆಲೆಕನು ತನ್ನ ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿದ್ದರಿಂದ ತನ್ನ ತಂದೆಗೆ ಮಾಡಿದ ಕೇಡನ್ನು ದೇವರು ಅವನ ಮೇಲೆ ತಿರಿಗಿ ಬರಮಾಡಿದನು.ಇದಲ್ಲದೆ ಶೆಕೆಮಿನ ಮನುಷ್ಯರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದನು. ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂತು. ಇದಲ್ಲದೆ ಶೆಕೆಮಿನ ಮನುಷ್ಯರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದನು. ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂತು.
- 2 Samuel 18:15 2 ಸಮುವೇಲನು 18:15ಯೋವಾಬನ ಆಯುಧ ಹಿಡಿಯುವ ಹತ್ತು ಮಂದಿ ಯೌವನಸ್ಥರು ಸುತ್ತಿಕೊಂಡು ಅಬ್ಷಾಲೋಮನನ್ನು ಕೊಂದುಹಾಕಿದರು.