Ecclesiastes · chapter 11 · verse 5
Ecclesiastes 11:5 in Kannada
ಹೇಗೆ ನೀನು ಆತ್ಮೀಯ ಮಾರ್ಗವು ಯಾವದೆಂದೂ ಮತ್ತು ಮಗು ವಿರುವ ಅವಳ ಗರ್ಭದಲ್ಲಿ ಎಲುಬುಗಳು ಹೇಗೆ ಬೆಳೆಯುವವೆಂದೂ ತಿಳಿದುಕೊಳ್ಳಲಾರಿಯೋ ಹಾಗೆ ಯೇ ಎಲ್ಲವನ್ನೂ ಮಾಡುವ ದೇವರ ಕೆಲಸವನ್ನೂ ತಿಳಿದುಕೊಳ್ಳಲಾರಿ.
Hege neenu aatmeeya maargavu yaavadendoo mattu magu viruva avala garbhadalli elubugalu hege beleyuvavendoo tilidukollalaariyo haage ye ellavannoo maaduva devara kelasavannoo tilidukollalaari.
Ecclesiastes 11:5 in English
- King James Version (KJV)
- As thou knowest not what [is] the way of the spirit, [nor] how the bones [do grow] in the womb of her that is with child: even so thou knowest not the works of God who maketh all.
- World English Bible (WEB)
- As you don’t know what is the way of the wind, nor how the bones grow in the womb of her who is with child; even so you don’t know the work of God who does all.
- American Standard Version (ASV)
- As thou knowest not what is the way of the wind, [nor] how the bones [do grow] in the womb of her that is with child; even so thou knowest not the work of God who doeth all.
- Bible in Basic English (BBE)
- As you have no knowledge of the way of the wind, or of the growth of the bones in the body of her who is with child, even so you have no knowledge of the works of God who has made all.
- Darby Translation (DBY)
- As thou knowest not what is the way of the spirit, how the bones [grow] in the womb of her that is with child, even so thou knowest not the work of God who maketh all.
- Webster's Bible (WBS)
- As thou knowest not what [is] the way of the spirit, [nor] the structure of the parts of conception in her that is with child: even so thou knowest not the works of God who maketh all.
- Young's Literal Translation (YLT)
- As thou knowest not what [is] the way of the spirit, How — bones in the womb of the full one, So thou knowest not the work of God who maketh the whole.
Read in context
- 3ಮೋಡ ಗಳು ಮಳೆಯಿಂದ ತುಂಬಿದ್ದರೆ ಅವು ತಾವಾಗಿಯೇ ಭೂಮಿಯ ಮೇಲೆ ಬರಿದುಮಾಡಿಕೊಳ್ಳುತ್ತವೆ; ಮರವು ಉತ್ತರ ಇಲ್ಲವೆ ದಕ್ಷಿಣಕ್ಕೆ ಬಿದ್ದರೆ ಆ ಮರವು ಬಿದ್ದ ಸ್ಥಳದಲ್ಲಿಯೇ ಇರುವದು.
- 4ಯಾವನು ಗಾಳಿಯನ್ನು ಲಕ್ಷಿಸುವನೋ ಅವನು ಬಿತ್ತುವದಿಲ್ಲ; ಮೋಡಗಳನ್ನು ಗಮನಿಸುವವನು ಕೊಯ್ಯುವದಿಲ್ಲ.
- 5ಹೇಗೆ ನೀನು ಆತ್ಮೀಯ ಮಾರ್ಗವು ಯಾವದೆಂದೂ ಮತ್ತು ಮಗು ವಿರುವ ಅವಳ ಗರ್ಭದಲ್ಲಿ ಎಲುಬುಗಳು ಹೇಗೆ ಬೆಳೆಯುವವೆಂದೂ ತಿಳಿದುಕೊಳ್ಳಲಾರಿಯೋ ಹಾಗೆ ಯೇ ಎಲ್ಲವನ್ನೂ ಮಾಡುವ ದೇವರ ಕೆಲಸವನ್ನೂ ತಿಳಿದುಕೊಳ್ಳಲಾರಿ.
- 6ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು, ಸಂಜೆ ತನಕ ನಿನ್ನ ಕೈಯನ್ನು ಹಿಂತೆಗೆಯಬೇಡ; ಇದೋ, ಅದೋ ಯಾವದೋ ಕೈಗೂಡಿ ಬರು ವದೋ ಇಲ್ಲವೆ ಎರಡೂ ಒಂದೇ ರೀತಿ ಒಳ್ಳೆಯದಾ ಗುವವೋ ಎಂದು ನಿನಗೆ ತಿಳಿಯದು.
- 7ನಿಜವಾಗಿ ಬೆಳಕು ಹಿತವಾಗಿಯೂ ಮತ್ತು ಸೂರ್ಯನನ್ನು ನೋಡುವದು ಕಣ್ಣುಗಳಿಗೆ ಮೆಚ್ಚಿಕೆಯಾಗಿಯೂ ಇರು ವದು.
Cross references
- John 3:8 ಯೋಹಾನನು 3:8ಗಾಳಿಯು ತನ್ನ ಮನಸ್ಸು ಬಂದ ಕಡೆಗೆ ಬೀಸುತ್ತದೆ; ನೀನು ಅದರ ಶಬ್ದವನ್ನು ಕೇಳುತ್ತೀ; ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗು ತ್ತದೋ ಹೇಳಲಾರಿ; ಅದರಂತೆಯೇ ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬನು ಇದ್ದಾನೆ ಅಂದನು.
- Ecclesiastes 8:17 ಪ್ರಸಂಗಿ 8:17ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.
- Psalm 92:5 ಕೀರ್ತನೆಗಳು 92:5ಕರ್ತನೇ, ನಿನ್ನ ಕೆಲಸಗಳು ಎಷ್ಟೋ ದೊಡ್ಡವು! ನಿನ್ನ ಯೋಚನೆಗಳು ಬಹಳ ಆಳವಾಗಿವೆ.
- Romans 11:33 ರೋಮಾಪುರದವರಿಗೆ 11:33ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!
- Isaiah 40:28 ಯೆಶಾಯ 40:28ನಿನಗೆ ಗೊತ್ತಿಲ್ಲವೋ? ನೀನು ಕೇಳಲಿಲ್ಲವೋ? ಕರ್ತನು ನಿರಂತರವಾದ ದೇವರೂ ಭೂಮಿಯ ಅಂತ್ಯಗಳನ್ನು ಸೃಷ್ಟಿಸಿದವನೂ ದಣಿಯುವದಿಲ್ಲ ಇಲ್ಲವೆ ಬಳಲುವ ದಿಲ್ಲ; ಆತನ ತಿಳುವಳಿಕೆಯು ಪರಿಶೋಧನೆಗೆ ಅಗಮ್ಯ.
- Psalm 139:13–16 ಕೀರ್ತನೆಗಳು 139:13–16ನೀನು ನನ್ನ ಅಂತರಿಂದ್ರಿಯಗಳನ್ನು ರೂಪಿಸಿದ್ದೀ; ನನ್ನ ತಾಯಿಯ ಗರ್ಭದಲ್ಲಿ ನೀನು ನನ್ನನ್ನು ಮುಚ್ಚಿದ್ದೀ. ನಾನು ಭಯಭರಿತನಾಗಿಯೂ ಅದ್ಭುತ ವಾಗಿಯೂ ಮಾಡಲ್ಪಟ್ಟದ್ದರಿಂದ ನಿನ್ನನ್ನು ಕೊಂಡಾ ಡುತ್ತೇನೆ; ನಿನ್ನ ಕೆಲಸಗಳು ಅದ್ಭುತಗಳಾಗಿವೆ ಎಂದು ನನ್ನ ಮನಸ್ಸಿಗೆ ಚೆನ್ನಾಗಿ ತಿಳಿದಿದೆ; ನಾನು ಮರೆ ಯಲ್ಲಿ ಮಾಡಲ್ಪಟ್ಟಾಗಲೂ ಭೂಮಿಯ ಅಧೋ ಭಾಗಗಳಲ್ಲಿ ವಿಚಿತ್ರವಾಗಿ ಮಾಡಲ್ಪಟ್ಟಾಗಲೂ ನನ್ನ ಅಸ್ತಿತ್ವವು ನಿನಗೆ ಮರೆಯಾಗಿರಲಿಲ್ಲ. ಅದು ಇನ್ನೂ ಪೂರ್ಣವಾಗದಿರುವಾಗ ನನ್ನ ಅಸ್ತಿತ್ವವನ್ನು ನಿನ್ನ ಕಣ್ಣುಗಳು ನೋಡಿದವು; ನನ್ನ ಅಂಗಗಳೆಲ್ಲಾ ನಿನ್ನ ಪುಸ್ತಕದಲ್ಲಿ ಬರೆಯಲ್ಪಟ್ಟವು; ಅವುಗಳಲ್ಲಿ ಒಂದಾ ದರೂ ಇಲ್ಲದಿದ್ದಾಗ ಅವುಗಳು ರೂಪಿಸಲ್ಪಟ್ಟವು.
- Psalm 104:24 ಕೀರ್ತನೆಗಳು 104:24ಓ ಕರ್ತನೇ, ನಿನ್ನ ಕೆಲಸಗಳು ಎಷ್ಟೋ ಉಂಟು! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟು ಮಾಡಿದ್ದೀ; ಭೂಮಿಯು ನಿನ್ನ ಸಂಪತ್ತಿನಿಂದ ತುಂಬಿದೆ.
- Ecclesiastes 7:24 ಪ್ರಸಂಗಿ 7:24ದೂರ ದಲ್ಲಿರುವದನ್ನೂ ಅಗಾಧದಲ್ಲಿರುವದನ್ನೂ ಯಾವನು ಕಂಡುಕೊಂಡಾನು?
- Job 26:5–14 ಯೋಬನು 26:5–14ಸತ್ತು ಹೋದವುಗಳೂ ಅವುಗಳ ನಿವಾಸಿಗಳೂ ನೀರುಗಳ ಕೆಳಗೆ ರೂಪಿಸಲ್ಪಡುತ್ತವೆ. ಆತನ ಮುಂದೆ ನರಕವು ಬೆತ್ತಲೆಯಾಗಿದೆ; ನಾಶನಕ್ಕೆ ಮರೆ ಇಲ್ಲ. ಉತ್ತರವನ್ನು ಶೂನ್ಯದ ಮೇಲೆ ವಿಸ್ತರಿಸುತ್ತಾನೆ; ಭೂಮಿ ಯನ್ನು ಏನೂ ಇಲ್ಲದ್ದರ ಮೇಲೆ ತೂಗ ಹಾಕಿದ್ದಾನೆ. ನೀರನ್ನು ತನ್ನ ಮಂದವಾದ ಮೇಘಗಳಲ್ಲಿ ಕಟ್ಟುತ್ತಾನೆ. ಮೇಘವು ಅದರ ಕೆಳಗೆ ಸೀಳಿಹೋಗದು; ಸಿಂಹಾ ಸನದ ಮುಖವನ್ನು ಹಿಂದೆಗೆಯುತ್ತಾನೆ; ಅದರ ಮೇಲೆ ತನ್ನ ಮೇಘವನ್ನು ವಿಸ್ತರಿಸುತ್ತಾನೆ. ಹಗಲು ರಾತ್ರಿ ಮುಗಿಯುವ ವರೆಗೆ ಆತನು ನೀರಿನ ಸುತ್ತಲೂ ಮೇರೆ ಯನ್ನು ಕಟ್ಟಿದ್ದಾನೆ. ಆಕಾಶದ ಸ್ತಂಭಗಳು ಅಲ್ಲಾಡು ತ್ತವೆ; ಆತನ ಗದರಿಕೆಗೆ ಆಶ್ಚರ್ಯಪಡುತ್ತವೆ. ತನ್ನ ಶಕ್ತಿಯಿಂದ ಸಮುದ್ರವನ್ನು ಭೇದಿಸುತ್ತಾನೆ. ತನ್ನ ವಿವೇ ಕದಿಂದ ಗರ್ವಿಷ್ಟನನ್ನು ಹೊಡೆಯುತ್ತಾನೆ. ಆತನ ಆತ್ಮನಿಂದ ಆಕಾಶವು ಶೃಂಗಾರವಾಗಿದೆ; ಆತನ ಕೈ ಓಡುವ ಸರ್ಪವನ್ನು ರೂಪಿಸಿತು.ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು. ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು.
- Job 36:24–33 ಯೋಬನು 36:24–33ಮನುಷ್ಯನು ನೋಡುವ ಆತನ ಕೃತ್ಯಗಳನ್ನು ಘನ ಪಡಿಸುವದಕ್ಕೆ ನೆನಸಿಕೋ. ಎಲ್ಲಾ ಮನುಷ್ಯರು ಅದನ್ನು ನೋಡಬಹುದು, ಮನುಷ್ಯರು ದೂರದಿಂದ ದೃಷ್ಟಿಸುತ್ತಾರೆ. ಇಗೋ, ದೇವರು ದೊಡ್ಡವನಾಗಿದ್ದಾನೆ. ನಾವು ಆತನನ್ನು ಅರಿಯದವರಾಗಿದ್ದೇವೆ. ಆತನ ವರುಷಗಳ ಲೆಕ್ಕಕ್ಕೆ ಶೋಧನೆ ಇಲ್ಲ. ಆತನು ನೀರಿನ ಹನಿಗಳನ್ನು ಕೂಡಿಸಿದಾಗ, ಅದರ ಮಂಜಿನ ಪ್ರಕಾರ ಮಳೆಯನ್ನು ಸುರಿಸುತ್ತವೆ. ಮೋಡಗಳು ಅದನ್ನು ಸುರಿಸಿ ಮನು ಷ್ಯನ ಮೇಲೆ ಸಮೃದ್ಧಿಯಾಗಿ ಸುರಿಯಮಾಡುತ್ತವೆ. ಮೋಡದ ವಿಸ್ತೀರ್ಣತೆಯನ್ನೂ ಆತನ ಗುಡಾರದ ಶಬ್ಧವನ್ನೂ ತಿಳುಕೊಳ್ಳುವವನಾರು? ಇಗೋ, ತನ್ನ ಸುತ್ತಲೂ ಬೆಳಕನ್ನು ವಿಸ್ತರಿಸಿ ಸಮುದ್ರದ ಅಗಾಧವನ್ನು ಮುಚ್ಚುತ್ತಾನೆ. ಅವುಗಳಿಂದ ಜನಗಳಿಗೆ ಆತನು ನ್ಯಾಯ ತೀರಿಸುತ್ತಾನೆ; ಸಮೃದ್ಧಿಯಾಗಿ ಆತನು ಆಹಾರ ಕೊಡುತ್ತಾನೆ. ಮೇಘಗಳಿಂದ ಬೆಳಕನ್ನು ಮುಚ್ಚು ತ್ತಾನೆ;ಅದರ ಶಬ್ದವು ಅದರ ವಿಷಯ ತಿಳಿಸುತ್ತದೆ; ಅವುಗಳ ಮಧ್ಯದಲ್ಲಿ ಬರುವ ಮೋಡದಿಂದ ಪ್ರಕಾಶಿಸ ದಂತೆ ಅಪ್ಪಣೆಕೊಡುತ್ತಾನೆ. ಪಶುಗಳು ಸಹ ಮಂಜಿನ ವಿಷಯವಾಗಿ ತಿಳಿಸುತ್ತವೆ. ಅದರ ಶಬ್ದವು ಅದರ ವಿಷಯ ತಿಳಿಸುತ್ತದೆ; ಅವುಗಳ ಮಧ್ಯದಲ್ಲಿ ಬರುವ ಮೋಡದಿಂದ ಪ್ರಕಾಶಿಸ ದಂತೆ ಅಪ್ಪಣೆಕೊಡುತ್ತಾನೆ. ಪಶುಗಳು ಸಹ ಮಂಜಿನ ವಿಷಯವಾಗಿ ತಿಳಿಸುತ್ತವೆ.
- Job 38:4–30 ಯೋಬನು 38:4–30ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿ ಇದ್ದಿ? ನಿನಗೆ ಗ್ರಹಿಕೆ ಇದ್ದರೆ ತಿಳಿಯಪಡಿಸು. ನಿನಗೆ ತಿಳಿದಿದ್ದರೆ ಅದರ ಅಳತೆಗಳನ್ನು ಹಾಕಿದ ವನಾರು? ಇಲ್ಲವೆ ಅದರ ಮೇಲೆ ಗೆರೆಯನ್ನೆಳೆದವರು ಯಾರು? ಯಾವದರ ಮೇಲೆ ಅದರ ಅಸ್ತಿವಾರ ಸ್ಥಿರವಾಗಿದೆ? ಇಲ್ಲವೆ ಅದರ ಮೂಲೆಗಲ್ಲನ್ನು ಇಟ್ಟವರು ಯಾರು? ಆಗ ಉದಯದ ನಕ್ಷತ್ರಗಳು ಕೂಡ ಹರ್ಷಧ್ವನಿ ಮಾಡುವಾಗ ದೇವರ ಪುತ್ರರೆಲ್ಲಾ ಉಲ್ಲಾ ಸದಿಂದ ಆರ್ಭಟಿಸಿದರು. ಸಮುದ್ರವು ಗರ್ಭದೊಳಗಿಂದ ಹೊರಬಂದಂತೆ, ಅದು ಬೇಧಿಸಿಕೊಂಡು ಬಂದಾಗ ಸಮುದ್ರವನ್ನು ಬಾಗಲುಗಳಿಂದ ಮುಚ್ಚಿದವನಾರು? ನಾನು ಅದರ ವಸ್ತ್ರವಾಗಿ ಮೇಘವನ್ನೂ ಅದಕ್ಕೆ ಬಟ್ಟೆಯಾಗಿ ಅಂಧ ಕಾರವನ್ನೂ ಮಾಡಿದಾಗ ಅದಕ್ಕೆ ನನ್ನ ನೇಮವನ್ನು ನಿರ್ಣಯಿಸಿದೆನು; ಅದಕ್ಕೆ ಅಗುಳಿಗಳನ್ನೂ ಬಾಗಲು ಗಳನ್ನೂ ಇಟ್ಟೆನು. ಇಲ್ಲಿಯ ವರೆಗೆ ಬಂದು ಮುಂದುವರಿಯ ಕೂಡದು; ಇಲ್ಲಿ ನಿನ್ನ ತೆರೆಗಳ ಅಹಂಕಾರ ನಿಲ್ಲಲಿ ಅಂದೆನು. ನಿನ್ನ ದಿವಸಗಳಾರಭ್ಯ ಬೆಳಿಗ್ಗೆಗೆ ಅಪ್ಪಣೆ ಕೊಟ್ಟಿಯೋ? ಅದು ಭೂಮಿಯ ಅಂಚುಗಳನ್ನು ಹಿಡಿಯುವ ಹಾಗೆಯೂ ದುಷ್ಟರು ಅದರೊಳಗಿಂದ ಝಾಡಿಸಲ್ಪಡುವ ಹಾಗೆಯೂ ಉದಯಕ್ಕೆ ಅದರ ಸ್ಥಳವನ್ನು ತಿಳಿಯಪಡಿಸಿದಿಯೋ? ಮುದ್ರೆಯಿಂದ ಮಣ್ಣು ಆಗುವ ಹಾಗೆ ಅದು ಮಾರ್ಪಡುತ್ತದೆ; ವಸ್ತ್ರದ ಹಾಗೆ ಅದು ನಿಂತಿರುತ್ತದೆ. ದುಷ್ಟರಿಂದ ಅವರ ಬೆಳಕು ಹಿಂತೆಗೆಯಲ್ಪಡುತ್ತದೆ. ಎತ್ತಿದ ತೋಳು ಮುರಿದು ಹೋಗುವದು. ನೀನು ಸಮುದ್ರದ ಬುಗ್ಗೆಗಳಲ್ಲಿ ಪ್ರವೇಶಿಸಿ ಇಲ್ಲವೆ ಅಗಾಧವನ್ನು ಹುಡುಕುವದರಲ್ಲಿ ನೀನು ತಿರುಗಾಡಿ ದಿಯೋ? ನಿನಗೆ ಮರಣದ ಬಾಗಲುಗಳು ತೆರೆಯ ಲ್ಪಟ್ಟವೋ? ಇಲ್ಲವೆ ಮರಣದ ನೆರಳಿನ ಬಾಗಲುಗಳನ್ನು ನೀನು ನೋಡಿದಿಯೋ? ಭೂಮಿಯ ವಿಸ್ತಾರ ಗಳವರೆಗೆ ನೀನು ಗ್ರಹಿಸಿದಿಯೋ?ಇದನ್ನೆಲ್ಲಾ ತಿಳು ಕೊಂಡರೆ ತಿಳಿಯಪಡಿಸು. ಬೆಳಕಿನ ನಿವಾಸಕ್ಕೆ ದಾರಿ ಯಾವದು? ಕತ್ತಲೆ ಯಾದರೋ ಅದರ ಸ್ಥಳವೆಲ್ಲಿದೆ? ಅದರ ಗಡಿಯ ವರೆಗೆ ಅದನ್ನು ತೆಗೆದುಕೊಳ್ಳುವಿಯೋ? ಅದರ ಮನೆಗೆ ಹೋಗುವ ಹಾದಿಗಳನ್ನು ಗ್ರಹಿಸಿದಿಯೋ? ಆಗ ಹುಟ್ಟಿದ್ದರಿಂದ ಅದು ನಿನಗೆ ತಿಳಿಯುವದೋ? ನಿನ್ನ ದಿವಸಗಳ ಲೆಕ್ಕವು ಬಹಳವಾಗಿವೆಯಲ್ಲಾ. ನೀನು ಹಿಮದ ಉಗ್ರಾಣಗಳಲ್ಲಿ ಪ್ರವೇಶಿಸಿ ದಿಯೋ? ಇಲ್ಲವೆ ಆನೇಕಲ್ಲಿನ ಉಗ್ರಾಣಗಳನ್ನು ನೋಡಿದಿಯೋ? ಅವುಗಳನ್ನು ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ ಸಮರ ಮತ್ತು ಯುದ್ಧಗಳ ದಿವಸಕ್ಕಾಗಿಯೂ ಇಟ್ಟುಕೊಂಡಿದ್ದೇನೆ. ಬೆಳಕು ಭಾಗವಾ ಗುವಂಥ, ಮೂಡಣ ಗಾಳಿ ಭೂಮಿಯ ಮೇಲೆ ಚದುರುವಂಥ, ಮಾರ್ಗವು ಯಾವದು? ತುಂಬಿ ಹರಿಯುವ ನೀರುಗಳನ್ನು ವಿಭಾಗ ಮಾಡಿದವರು ಯಾರು? ಜಲಕ್ಕೆ ಧಾರೆಗಳನ್ನೂ ಗುಡುಗುಗಳ ಮಿಂಚಿ ಗೆ ಮಾರ್ಗವನ್ನೂ ನೇಮಿಸಿದವನಾರು? ಅದು ಮನುಷ್ಯನಿಲ್ಲದ ಭೂಮಿಯ ಮೇಲೆಯೂ ಜನರಿಲ್ಲದ ಅರಣ್ಯದಲ್ಲಿಯೂ ಸುರಿಯುವದು; ಹಾಳು ಬೈಲು ಗಳಿಗೆ ತೃಪ್ತಿಯನ್ನು ಉಂಟು ಮಾಡುವದು; ಪಲ್ಯಗಳ ಮೊಳಿಕೆಯನ್ನು ಮೊಳಿಸುವದು. ಮಳೆಗೆ ತಂದೆ ಇದ್ದಾನೋ? ಇಲ್ಲವೆ ಮಂಜಿನ ಹನಿಗಳನ್ನು ಹುಟ್ಟಿಸು ವವನಾರು? ಯಾವನ ಹೊಟ್ಟೆಯೊಳಗಿಂದ ನೀರು ಗಡ್ಡೆ ಹೊರಡುತ್ತದೆ? ಆಕಾಶದ ಹಿಮವನ್ನು ಹುಟ್ಟಿಸಿ ದವನಾರು? ಕಲ್ಲಿನ ಹಾಗೆ ನೀರುಗಳು ಅಡಗುತ್ತವೆ; ಅಗಾಧದ ಮೇಲ್ಭಾಗವು ಹೆಪ್ಪುಗಟ್ಟುವದು.
- Psalm 40:5 ಕೀರ್ತನೆಗಳು 40:5ಓ ನನ್ನ ದೇವರಾದ ಕರ್ತನೇ, ನೀನು ಮಾಡಿದ ನಿನ್ನ ಅದ್ಭುತ ಕಾರ್ಯಗಳೂ ನಮ್ಮ ಕಡೆಗಿರುವ ನಿನ್ನ ಯೋಚನೆಗಳೂ ಬಹಳ; ಅವುಗಳನ್ನು ಕ್ರಮವಾಗಿ ನಿನ್ನ ಮುಂದೆ ಎಣಿಸಲಾರೆನು; ಅವುಗಳನ್ನು ನಾನು ತಿಳಿಸಿ ಹೇಳಬೇಕಾದರೆ ಎಣಿಸುವದಕ್ಕಿಂತ ಹೆಚ್ಚಾಗಿವೆ.