Ecclesiastes · chapter 12 · verse 14
Ecclesiastes 12:14 in Kannada
ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
Olledaagali, kettaddaagali, pratiyondu rahasyada sangatigoo devaru pratiyondu kelasa vannu kuritu nyaayavichaaranege taruvanu.
Ecclesiastes 12:14 in English
- King James Version (KJV)
- For God shall bring every work into judgment, with every secret thing, whether [it be] good, or whether [it be] evil.
- World English Bible (WEB)
- For God will bring every work into judgment, with every hidden thing, whether it is good, or whether it is evil.
- American Standard Version (ASV)
- For God will bring every work into judgment, with every hidden thing, whether it be good, or whether it be evil.
- Bible in Basic English (BBE)
- God will be judge of every work, with every secret thing, good or evil.
- Darby Translation (DBY)
- For God shall bring every work into judgment, with every secret thing, whether it be good or whether it be evil.
- Webster's Bible (WBS)
- For God will bring every work into judgment, with every secret thing, whether [it is] good, or whether [it is] evil.
- Young's Literal Translation (YLT)
- For every work doth God bring into judgment, with every hidden thing, whether good or bad.'
Read in context
- 12ಕೊನೆಗೆ ನನ್ನ ಮಗನೇ, ಇವುಗಳಿಂದ ಎಚ್ಚರಿಕೆ ಯಾಗಿರು. ಬಹಳ ಪುಸ್ತಕಗಳನ್ನು ಮಾಡುವದಕ್ಕೆ ಅಂತ್ಯ ವಿಲ್ಲ; ಹೆಚ್ಚು ಅಭ್ಯಾಸವು ಶರೀರಕ್ಕೆ ಆಯಾಸವಾಗಿದೆ.
- 13ಸಮಸ್ತ ವಿಷಯವನ್ನು ನಾವು ಕೇಳಿ ಮುಗಿಸೋಣ; ದೇವರಿಗೆ ಭಯಪಡು; ಆತನ ಆಜ್ಞೆಗಳನ್ನು ಪಾಲಿಸು; ಇದೇ ಮನುಷ್ಯನ ಪ್ರಮುಖ ಕರ್ತವ್ಯ.ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
- 14ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
Cross references
- 2 Corinthians 5:10 2 ಕೊರಿಂಥದವರಿಗೆ 5:10ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.
- Romans 2:16 ರೋಮಾಪುರದವರಿಗೆ 2:16ಮನುಷ್ಯರ ರಹಸ್ಯಗಳ ವಿಷಯ ವಾಗಿ ನನ್ನ ಸುವಾರ್ತೆಗನುಸಾರ ಯೇಸು ಕ್ರಿಸ್ತನ ಮುಖಾಂತರ ದೇವರು ನ್ಯಾಯತೀರಿಸುವ ದಿವಸದಲ್ಲಿ ಅವರು ತೀರ್ಪು ಹೊಂದುವರು.
- Matthew 12:36 ಮತ್ತಾಯನು 12:36ಆದರೆ ನಾನು ನಿಮಗೆ ಹೇಳುವದೇನಂದರೆ-- ಮನುಷ್ಯರು ಆಡುವ ಪ್ರತಿಯೊಂದು ವ್ಯರ್ಥವಾದ ಮಾತಿಗಾಗಿ ನ್ಯಾಯವಿಚಾರಣೆಯ ದಿನದಲ್ಲಿ ಅವರು ಲೆಕ್ಕಕೊಡಬೇಕು.
- 1 Corinthians 4:5 1 ಕೊರಿಂಥದವರಿಗೆ 4:5ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
- Matthew 10:26 ಮತ್ತಾಯನು 10:26ಆದದರಿಂದ ಅವರಿಗೆ ಹೆದರಬೇಡಿರಿ; ಯಾಕಂದರೆ ಪ್ರಕಟಿಸಲ್ಪಡದಂತೆ ಯಾವದೂ ಮುಚ್ಚಲ್ಪಡುವದಿಲ್ಲ; ತಿಳಿಯಲ್ಪಡದಂತೆ ಯಾವದೂ ಮರೆಯಾಗುವದಿಲ್ಲ.
- Romans 14:10–12 ರೋಮಾಪುರದವರಿಗೆ 14:10–12ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ. ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ. ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕ ಒಪ್ಪಿಸಬೇಕು.
- Ecclesiastes 11:9 ಪ್ರಸಂಗಿ 11:9ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
- Luke 12:1–2 ಲೂಕನು 12:1–2ಅಷ್ಟರಲ್ಲಿ ಅಸಂಖ್ಯವಾದ ಜನಸಮೂಹವು ಒಬ್ಬರ ಮೇಲೊಬ್ಬರು ತುಳಿದಾಡುವಷ್ಟು ಒಟ್ಟುಗೂಡಿ ಬಂದಿರಲಾಗಿ ಆತನು ಎಲ್ಲಾದಕ್ಕಿಂತ ಮೊದಲು ತನ್ನ ಶಿಷ್ಯರಿಗೆ--ಫರಿಸಾಯರ ಕಪಟವೆಂಬ ಹುಳಿಯ ವಿಷಯದಲ್ಲಿ ನೀವು ಎಚ್ಚರವಾಗಿರ್ರಿ. ಪ್ರಕಟವಾಗದಂತೆ ಯಾವದೂ ಮರೆಯಾಗಿರು ವದಿಲ್ಲ; ಇಲ್ಲವೆ ತಿಳಿಯುವದಕ್ಕಾಗದಂತೆ ಯಾವದೂ ಗುಪ್ತವಾಗಿರುವದಿಲ್ಲ.
- Ecclesiastes 3:17 ಪ್ರಸಂಗಿ 3:17ನಾನು ನನ್ನ ಹೃದಯದಲ್ಲಿ -- ನೀತಿವಂತರನ್ನೂ ದುಷ್ಟರನ್ನೂ ದೇವರು ತೀರ್ಪುಮಾಡುವನು; ಪ್ರತಿಯೊಂದು ಉದ್ದೇ ಶಕ್ಕೂ ಪ್ರತಿಯೊಂದು ಕೆಲಸಕ್ಕೂ ಸಮಯವಿದೆ ಎಂದು ಅಂದುಕೊಂಡೆನು.
- John 5:29 ಯೋಹಾನನು 5:29ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.
- Acts 17:30–31 ಅಪೊಸ್ತಲರ ಕೃತ್ಯಗಳು 17:30–31ಈ ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ. ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸ ವನ್ನು ನೇಮಕ ಮಾಡಿದ್ದಾನೆ. ಆತನನ್ನು ಸತ್ತವರೊಳ ಗಿಂದ ಎಬ್ಬಿಸಿದ್ದರಿಂದ ಇದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.
- Matthew 25:31–46 ಮತ್ತಾಯನು 25:31–46ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು; ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು; ಆತನು ಕುರಿಗಳನ್ನು ತನ್ನ ಬಲಗಡೆ ಯಲ್ಲಿಯೂ ಆಡುಗಳನ್ನು ತನ್ನ ಎಡಗಡೆಯಲ್ಲಿಯೂ ನಿಲ್ಲಿಸುವನು. ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ; ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು. ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು? ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು. ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ. ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ. ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು. ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು. ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು. ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.