Ecclesiastes · chapter 2 · verse 17
Ecclesiastes 2:17 in Kannada
ಆದಕಾರಣ ಜೀವವನ್ನು ನಾನು ಹಗೆಮಾಡಿದೆನು; ಸೂರ್ಯನ ಕೆಳಗೆ ನಡೆಯುವ ಕಾರ್ಯವು ವ್ಯಥೆಯಾಗಿ ನನಗೆ ತೋರಿತು; ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕ ರವೂ ಆಗಿವೆ.
Aadakaarana jeevavannu naanu hagemaadidenu; sooryana kelage nadeyuva kaaryavu vyatheyaagi nanage toritu; ellaa vyarthavoo praanakke aayaasaka ravoo aagive.
Ecclesiastes 2:17 in English
- King James Version (KJV)
- Therefore I hated life; because the work that is wrought under the sun [is] grievous unto me: for all [is] vanity and vexation of spirit.
- World English Bible (WEB)
- So I hated life, because the work that is worked under the sun was grievous to me; for all is vanity and a chasing after wind.
- American Standard Version (ASV)
- So I hated life, because the work that is wrought under the sun was grievous unto me; for all is vanity and a striving after wind.
- Bible in Basic English (BBE)
- So I was hating life, because everything under the sun was evil to me: all is to no purpose and desire for wind.
- Darby Translation (DBY)
- And I hated life; for the work that is wrought under the sun was grievous unto me; for all is vanity and pursuit of the wind.
- Webster's Bible (WBS)
- Therefore I hated life; because the work that is wrought under the sun [is] grievous to me: for all [is] vanity and vexation of spirit.
- Young's Literal Translation (YLT)
- And I have hated life, for sad to me [is] the work that hath been done under the sun, for the whole [is] vanity and vexation of spirit.
Read in context
- 15ಆಗ ನಾನು ನನ್ನ ಹೃದಯದಲ್ಲಿ --ಮೂಢನಿಗೆ ಸಂಭವಿಸುವಂತೆ ನನಗೂ ಸಂಭವಿಸು ತ್ತದೆ. ಇದರಿಂದ ಯಾಕೆ ನಾನು ಹೆಚ್ಚು ಜ್ಞಾನದಿಂದ ಇದ್ದೇನೆ ಎಂದು ಅಂದುಕೊಂಡೆನು. ಆಗ ನಾನು ಇದೂ ವ್ಯರ್ಥವೆಂದು ನನ್ನ ಹೃದಯದಲ್ಲಿ ಅಂದು ಕೊಂಡೆನು.
- 16ಮೂಢನಿಗಿಂತ ಜ್ಞಾನವಂತನ ಜ್ಞಾಪ ಕವು ಎಂದಿಗೂ ಇರುವದಿಲ್ಲ; ಈಗ ಇರುವದು ಬರುವ ದಿವಸಗಳಲ್ಲಿ ಮರೆಯಲ್ಪಡುತ್ತದೆ. ಮೂಢನಂತೆ ಜ್ಞಾನಿಯೂ ಸಾಯುವದು ಹೇಗೆ?
- 17ಆದಕಾರಣ ಜೀವವನ್ನು ನಾನು ಹಗೆಮಾಡಿದೆನು; ಸೂರ್ಯನ ಕೆಳಗೆ ನಡೆಯುವ ಕಾರ್ಯವು ವ್ಯಥೆಯಾಗಿ ನನಗೆ ತೋರಿತು; ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕ ರವೂ ಆಗಿವೆ.
- 18ಹೌದು, ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆಮಾಡಿದೆನು; ನನ್ನ ತರು ವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕು.
- 19ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ.
Cross references
- Ecclesiastes 2:11 ಪ್ರಸಂಗಿ 2:11ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ.
- Ecclesiastes 4:2 ಪ್ರಸಂಗಿ 4:2ಆದಕಾರಣ ಇನ್ನೂ ಜೀವ ದಿಂದಿದ್ದು ಬದುಕುವವರಿಗಿಂತ ಆಗಲೇ ಮೃತಪಟ್ಟ ಸತ್ತವರನ್ನು ನಾನು ಹೆಚ್ಚಾಗಿ ಹೊಗಳಿದೆನು.
- Jonah 4:8 ಯೋನ 4:8ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು.
- Jonah 4:3 ಯೋನ 4:3ಆದದರಿಂದ ಓ ಕರ್ತನೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆ; ನಾನು ಬದುಕುವ ದಕ್ಕಿಂತ ಸಾಯುವದು ಒಳ್ಳೇದು ಅಂದನು.
- Job 7:15–16 ಯೋಬನು 7:15–16ಆದದರಿಂದ ನನ್ನ ಪ್ರಾಣವು ಕೊರಳು ಹಿಸುಕುವದನ್ನೂ ನನ್ನ ಜೀವವು ಮರಣವನ್ನೂ ಆದು ಕೊಳ್ಳುತ್ತದೆ. ನಾನು ಬೇಸರಗೊಂಡಿದ್ದೇನೆ; ನಿತ್ಯವಾಗಿ ನಾನು ಬದುಕಲೊಲ್ಲೆನು; ನನ್ನನ್ನು ಬಿಟ್ಟು ಬಿಡು; ಯಾಕಂದರೆ ನನ್ನ ದಿವಸಗಳು ವ್ಯರ್ಥವಾಗಿವೆ.
- Jeremiah 20:14–18 ಯೆರೆಮೀಯ 20:14–18ನಾನು ಹುಟ್ಟಿದ ದಿನವು ಶಪಿಸಲ್ಪಡಲಿ, ನನ್ನ ತಾಯಿ ನನ್ನನ್ನು ಹೆತ್ತ ದಿನವು ಆಶೀರ್ವದಿಸಲ್ಪಡದಿರಲಿ. ನನ್ನ ತಂದೆಗೆ--ನಿನಗೆ ಗಂಡು ಕೂಸು ಹುಟ್ಟಿದೆ ಎಂಬ ಸಮಾಚಾರವನ್ನು ಹೇಳಿ ಬಹಳ ಸಂತೋಷ ಉಂಟು ಮಾಡಿದವನು ಶಪಿಸಲ್ಪಡಲಿ! ಕರ್ತನು ಪಶ್ಚಾತ್ತಾಪಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ; ಅವನು ಬೆಳಿಗ್ಗೆ ಕೂಗನ್ನೂ ಮಧ್ಯಾಹ್ನ ದಲ್ಲಿ ಆರ್ಭಟವನ್ನೂ ಕೇಳಲಿ ನಾನು ಗರ್ಭಬಿಟ್ಟಾ ಗಲೇ ಆತನು ನನ್ನನ್ನು ಕೊಲ್ಲದೆ ಹೋದದ್ದರಿಂದ ಇಲ್ಲವೆ ನನ್ನ ತಾಯಿ ನನಗೆ ಸಮಾಧಿಯಾಗಿದ್ದು ಅವಳ ಗರ್ಭವು ನಿತ್ಯವಾಗಿ ಬಸುರಾಗಿಯೇ ಇದ್ದರೆ ಒಳ್ಳೇದಾ ಗಿತ್ತು.ನಾನು ಕಷ್ಟವನ್ನೂ ಚಿಂತೆಯನ್ನೂ ನೋಡುವ ದಕ್ಕೂ ನನ್ನ ದಿನಗಳು ನಾಚಿಕೆಯಲ್ಲಿ ಕಳೆದುಹೋಗು ವದಕ್ಕೂ ಗರ್ಭದಿಂದ ಹೊರಗೆ ಬಂದದ್ದು ಯಾಕೆ? ನಾನು ಕಷ್ಟವನ್ನೂ ಚಿಂತೆಯನ್ನೂ ನೋಡುವ ದಕ್ಕೂ ನನ್ನ ದಿನಗಳು ನಾಚಿಕೆಯಲ್ಲಿ ಕಳೆದುಹೋಗು ವದಕ್ಕೂ ಗರ್ಭದಿಂದ ಹೊರಗೆ ಬಂದದ್ದು ಯಾಕೆ?
- Ecclesiastes 1:14 ಪ್ರಸಂಗಿ 1:14ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ.
- Job 3:20–22 ಯೋಬನು 3:20–22ಕಷ್ಟದಲ್ಲಿರುವವನಿಗೆ ಬೆಳಕೂ ಕಹಿಯಾದ ಪ್ರಾಣ ವುಳ್ಳವರಿಗೆ ಜೀವವೂ ಯಾಕೆ ಕೊಡಲ್ಪಟ್ಟಿವೆ? ಬಾರ ದಿರುವ ಮರಣಕ್ಕೋಸ್ಕರ ಕಾದುಕೊಂಡವರಿಗೂ ಅಡ ಗಿಸಿದ ನಿಧಿಗಿಂತಲೂ ಹೆಚ್ಚಾಗಿ ಅದಕ್ಕಾಗಿ ಅಗೆಯುತ್ತಾರೆ. ಸಮಾಧಿ ಕಂಡುಕೊಂಡೆವೆಂದು ಸಂತೋಷ ಸಂಭ್ರಮವಾಗಿ ಹರ್ಷಿಸುವವರಿಗೂ
- Ecclesiastes 6:9 ಪ್ರಸಂಗಿ 6:9ಅಪೇಕ್ಷೆಯ ತಿರುಗಾಟ ಕ್ಕಿಂತ ಕಣ್ಣುಗಳ ದೃಷ್ಟಿಯು ಉತ್ತಮ; ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.
- Ecclesiastes 3:16 ಪ್ರಸಂಗಿ 3:16ಕೆಟ್ಟದ್ದು ಇತ್ತೆಂದು ಸೂರ್ಯನ ಕೆಳಗೆ ನ್ಯಾಯ ತೀರ್ಪಿನ ಸ್ಥಳವನ್ನು ಮತ್ತು ದುಷ್ಕೃತ್ಯ ಇದೆಯೆಂದು ನೀತಿಯ ಸ್ಥಾನವನ್ನು ನಾನು ಕಂಡೆನು.
- Habakkuk 1:3 ಹಬಕ್ಕೂಕ 1:3ಯಾಕೆ ನನಗೆ ಅಪರಾಧವನ್ನು ತೋರಿಸಿ ಕಷ್ಟವನ್ನು ನೋಡಮಾಡುತ್ತೀ? ಸೂರೆಯೂ ಹಿಂಸೆಯೂ ನನ್ನ ಮುಂದೆ ಅವೆ; ಜಗಳವನ್ನೂ ತರ್ಕವನ್ನೂ ಎಬ್ಬಿಸುವವರು ಇದ್ದಾರೆ.
- Ezekiel 3:14 ಯೆಹೆಜ್ಕೇಲನು 3:14ಹೀಗೆ ಆತ್ಮನು ನನ್ನನ್ನು ಎತ್ತಿಕೊಂಡು ಹೋದನು; ನಾನು ಕಹಿಯಲ್ಲಿಯೂ ಆತ್ಮನ ಉರಿಯ ಲ್ಲಿಯೂ ಹೋದೆನು; ಅದರೆ ಕರ್ತನ ಕೈ ನನ್ನ ಮೇಲೆ ಬಲವಾಗಿತ್ತು.