Ecclesiastes · chapter 2 · verse 19
Ecclesiastes 2:19 in Kannada
ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ.
Avanu jnyaaniyo moodha no yaarige gottu? Aadaroo naanu patta ellaa prayaasada meleyoo sooryana kelage naanu jnyaaniyendu torpadisikondavara meleyoo avanu aaluvanu. Idoo vyarthave.
Ecclesiastes 2:19 in English
- King James Version (KJV)
- And who knoweth whether he shall be a wise [man] or a fool? yet shall he have rule over all my labour wherein I have laboured, and wherein I have shewed myself wise under the sun. This [is] also vanity.
- World English Bible (WEB)
- Who knows whether he will be a wise man or a fool? Yet he will have rule over all of my labor in which I have labored, and in which I have shown myself wise under the sun. This also is vanity.
- American Standard Version (ASV)
- And who knoweth whether he will be a wise man or a fool? yet will he have rule over all my labor wherein I have labored, and wherein I have showed myself wise under the sun. This also is vanity.
- Bible in Basic English (BBE)
- And who is to say if that man will be wise or foolish? But he will have power over all my work which I have done and in which I have been wise under the sun. This again is to no purpose.
- Darby Translation (DBY)
- And who knoweth whether he will be a wise [man] or a fool? yet shall he have rule over all my labour at which I have laboured, and wherein I have been wise under the sun. This also is vanity.
- Webster's Bible (WBS)
- And who knoweth whether he shall be a wise [man] or a fool? yet shall he have rule over all my labor in which I have labored, and in which I have showed myself wise under the sun. This [is] also vanity.
- Young's Literal Translation (YLT)
- And who knoweth whether he is wise or foolish? yet he doth rule over all my labour that I have laboured at, and that I have done wisely under the sun! this also [is] vanity.
Read in context
- 17ಆದಕಾರಣ ಜೀವವನ್ನು ನಾನು ಹಗೆಮಾಡಿದೆನು; ಸೂರ್ಯನ ಕೆಳಗೆ ನಡೆಯುವ ಕಾರ್ಯವು ವ್ಯಥೆಯಾಗಿ ನನಗೆ ತೋರಿತು; ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕ ರವೂ ಆಗಿವೆ.
- 18ಹೌದು, ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆಮಾಡಿದೆನು; ನನ್ನ ತರು ವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕು.
- 19ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ.
- 20ಆದದರಿಂದ ಸೂರ್ಯನ ಕೆಳಗೆ ಪ್ರಯಾಸ ಪಟ್ಟ ಎಲ್ಲಾ ಪ್ರಯಾಸದ ವಿಷಯವಾಗಿ ನನ್ನ ಹೃದಯವು ನಿರಾಶೆಗೊಳ್ಳುವಂತೆ ನಾನು ತಿರುಗಾಡಿದೆನು.
- 21ಜ್ಞಾನ ದಲ್ಲಿಯೂ ತಿಳುವಳಿಕೆಯಲ್ಲಿಯೂ ಯಥಾರ್ಥವಾಗಿ ಪ್ರಯಾಸಪಟ್ಟ ಒಬ್ಬ ಮನುಷ್ಯನಿದ್ದಾನೆ; ಆದರೂ ಇವು ಗಳಲ್ಲಿ ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡುವನು. ಇದು ವ್ಯರ್ಥವೂ ದೊಡ್ಡ ಕೇಡೂ ಆಗಿದೆ.
Cross references
- Ecclesiastes 3:22 ಪ್ರಸಂಗಿ 3:22ಆದಕಾರಣ ಮನುಷ್ಯನು ತನ್ನ ಸ್ವಂತ ಕೆಲಸಗಳಲ್ಲಿ ಆನಂದಿಸುವದಕ್ಕಿಂತ ಒಳ್ಳೆಯದು ಯಾವದೂ ಇಲ್ಲ ವೆಂದು ನಾನು ಗ್ರಹಿಸುತ್ತೇನೆ; ಅದೇ ಅವನ ಪಾಲು; ಅದರಿಂದ ತನ್ನ ಜೀವಮಾನದ ನಂತರ ಸಂಭವಿಸುವದನ್ನು ನೋಡುವಂತೆ ಯಾವನು ಅವನನ್ನು ಪುನಃ ಬರಮಾಡುತ್ತಾನೆ.?
- James 3:17 ಯಾಕೋಬನು 3:17ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- 2 Chronicles 10:13–16 2 ಪೂರ್ವಕಾಲವೃತ್ತಾಂತ 10:13–16ಅರಸನು ಜನರಿಗೆ ಕಠಿಣವಾದ ಪ್ರತ್ಯುತ್ತರ ಹೇಳಿದನು; ಹಿರಿಯರು ಅವನಿಗೆ ಕೊಟ್ಟ ಆಲೋಚನೆಯನ್ನು ಬಿಟ್ಟು ಯೌವ ನಸ್ಥರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ-- ನನ್ನ ತಂದೆಯು ನಿಮ್ಮ ನೊಗವನ್ನು ಭಾರ ಮಾಡಿದನು; ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬೆತ್ತಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು. ಹೀಗೆ ಅರ ಸನು ಜನರ ಮಾತನ್ನು ಕೇಳದೆ ಹೋದನು. ಕರ್ತನು ನೆಬಾಟನ ಮಗನಾದ ಯಾರೊಬ್ಬಾಮನಿಗೆ ಶಿಲೋವಿ ನವನಾದ ಅಹೀಯನ ಮುಖಾಂತರ ಹೇಳಿದ ವಾಕ್ಯವು ಈಡೇರುವದಕ್ಕೆ ಈ ಕಾರಣ ದೇವರಿಂದ ಉಂಟಾ ಯಿತು. ಅರಸನು ತಮಗೆ ಕಿವಿಗೊಡದೆ ಹೋದ ನೆಂದು ಸಮಸ್ತ ಇಸ್ರಾಯೇಲ್ಯರು ನೋಡಿ ಅರಸನಿಗೆ ಪ್ರತ್ಯುತ್ತರವಾಗಿ--ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಇಲ್ಲ. ಇಸ್ರಾ ಯೇಲ್ಯರೇ, ನಿಮ್ಮ ಗುಡಾರಗಳಿಗೆ ಹೋಗಿರಿ; ದಾವೀ ದನೇ, ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರೆಲ್ಲರು ತಮ್ಮ ಗುಡಾರಗಳಿಗೆ ಹೋದರು.
- 2 Chronicles 12:9–10 2 ಪೂರ್ವಕಾಲವೃತ್ತಾಂತ 12:9–10ಹಾಗೆಯೇ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧ ವಾಗಿ ಬಂದು ಕರ್ತನ ಮನೆಯ ಬೊಕ್ಕಸಗಳನ್ನೂ ಅರಸನ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡನು; ಎಲ್ಲವನ್ನೂ ತೆಗೆದುಕೊಂಡನು. ಇದಲ್ಲದೆ ಸೊಲೊ ಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ತಕ್ಕೊಂಡು ಹೋದನು. ಇದಕ್ಕೆ ಬದಲಾಗಿ ಅರಸ ನಾದ ರೆಹಬ್ಬಾಮನು ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಸನು ಮನೆಯ ಬಾಗಲನ್ನು ಕಾಯುವ ಕಾವಲಿನ ಅಧಿಪತಿಗಳ ಕೈಯಲ್ಲಿ ಅವುಗಳನ್ನು ಒಪ್ಪಿಸಿ ದನು.
- 1 Kings 14:25–28 1 ಅರಸುಗಳು 14:25–28ಅರಸನಾದ ರೆಹಬ್ಬಾಮನ ಐದನೇ ವರುಷದಲ್ಲಿ ಏನಾಯಿತಂದರೆ, ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರೋಧವಾಗಿ ಏರಿ ಬಂದನು. ಅವನು ಕರ್ತನ ಮಂದಿರದ ಬೊಕ್ಕಸಗಳನ್ನೂ ಅರ ಸರ ಮನೆಯ ಬೊಕ್ಕಸಗಳನ್ನೂ ತೆಗೆದುಕೊಂಡದ್ದಲ್ಲದೆ ಸಮಸ್ತವನ್ನೂ ತೆಗೆದುಕೊಂಡನು. ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತಕ್ಕೊಂಡು ಹೋದನು. ಆದರೆ ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ ಅರಮನೆಯ ಬಾಗಿಲನ್ನು ಕಾಯುವ ಕಾವಲಿ ನವರ ಅಧಿಪತಿಯ ಕೈಯಲ್ಲಿ ಒಪ್ಪಿಸಿದನು. ಅರಸನು ಕರ್ತನ ಮನೆಗೆ ಹೋಗುತ್ತಿರುವಾಗ ಕಾವಲಿನವರು ಅವುಗಳನ್ನು ಎತ್ತಿಕೊಂಡು ಬಂದರು; ಮತ್ತು ಅವುಗಳನ್ನು ಹಿಂದಕ್ಕೆ ಕಾವಲಿನ ಚಾವಡಿಗೆ ತಂದರು.
- Luke 16:8 ಲೂಕನು 16:8ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ.
- 1 Kings 12:14–20 1 ಅರಸುಗಳು 12:14–20ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗ ಮಾಡಿದನು; ನಾನು ಅದಕ್ಕೆ ಕೂಡಿಸುವೆನು; ನನ್ನ ತಂದೆಯು ನಿಮ್ಮನ್ನು ಕೊರಡೆಗಳಿಂದ ಶಿಕ್ಷಿಸಿದನು; ನಾನು ನಿಮ್ಮನ್ನು ಚೇಳುಗಳಿಂದ ಶಿಕ್ಷಿಸುವೆನು ಅಂದನು. ಹೀಗೆಯೇ ಅರಸನು ಜನರ ಮಾತು ಕೇಳದೆ ಹೋದನು. ಯಾಕಂದರೆ ಕರ್ತನು ನೆಬಾಟನ ಮಗ ನಾದ ಯೆರೊಬ್ಬಾಮನಿಗೆ ಶಿಲೋನ್ಯನಾದ ಅಹೀಯನ ಮುಖಾಂತರವಾಗಿ ಹೇಳಿದ ಮಾತು ಈಡೇರುವದಕ್ಕೆ ಕಾರಣವು ಕರ್ತನಿಂದ ಉಂಟಾಯಿತು. ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲ್ಯರು ನೋಡಿದಾಗ ಜನರು ಅರಸನಿಗೆ ಪ್ರತ್ಯುತ್ತರವಾಗಿ ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾ ಯೇಲ್ಯರೇ, ನಿಮ್ಮ ಡೇರೆಗಳಿಗೆ ಹೋಗಿರಿ; ದಾವೀ ದನೇ, ಈಗ ನಿನ್ನ ಮನೆಯನ್ನು ನೋಡಿಕೋ ಎಂದು ಹೇಳಿ ಇಸ್ರಾಯೇಲ್ಯರು ತಮ್ಮ ತಮ್ಮ ಡೇರೆಗಳಿಗೆ ಹೋದರು. ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲ್ ಮಕ್ಕಳ ಮೇಲೆ ರೆಹ ಬ್ಬಾಮನು ಆಳಿದನು. ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಅದೋರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲ್ಯರೆಲ್ಲರು ಅವನ ಮೇಲೆ ಕಲ್ಲೆ ಸೆದು ಕೊಂದುಹಾಕಿದರು. ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ತ್ವರೆಮಾಡಿ ತನ್ನ ರಥದ ಮೇಲೆ ಏರಿದನು. ಹೀಗೆಯೇ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಯ ಮೇಲೆ ತಿರುಗಿಬಿದ್ದರು. ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ ಇಸ್ರಾಯೇಲ್ಯ ರೆಲ್ಲರು ಸಭೆಗೆ ಅವನನ್ನು ಕರೇಕಳುಹಿಸಿ ಸಮಸ್ತ ಇಸ್ರಾ ಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆ ಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ.
- James 1:17 ಯಾಕೋಬನು 1:17ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- Ecclesiastes 9:13 ಪ್ರಸಂಗಿ 9:13ನಾನು ಈ ಜ್ಞಾನವನ್ನೂ ಸಹ ಸೂರ್ಯನ ಕೆಳಗೆ ನೋಡಿದೆನು; ಇದು ನನಗೆ ದೊಡ್ಡದಾಗಿ ಕಾಣಿಸಿತು.