Ecclesiastes · chapter 2 · verse 20
Ecclesiastes 2:20 in Kannada
ಆದದರಿಂದ ಸೂರ್ಯನ ಕೆಳಗೆ ಪ್ರಯಾಸ ಪಟ್ಟ ಎಲ್ಲಾ ಪ್ರಯಾಸದ ವಿಷಯವಾಗಿ ನನ್ನ ಹೃದಯವು ನಿರಾಶೆಗೊಳ್ಳುವಂತೆ ನಾನು ತಿರುಗಾಡಿದೆನು.
Aadadarinda sooryana kelage prayaasa patta ellaa prayaasada vishayavaagi nanna hrudayavu niraashegolluvante naanu tirugaadidenu.
Ecclesiastes 2:20 in English
- King James Version (KJV)
- Therefore I went about to cause my heart to despair of all the labour which I took under the sun.
- World English Bible (WEB)
- Therefore I began to cause my heart to despair concerning all the labor in which I had labored under the sun.
- American Standard Version (ASV)
- Therefore I turned about to cause my heart to despair concerning all the labor wherein I had labored under the sun.
- Bible in Basic English (BBE)
- So my mind was turned to grief for all the trouble I had taken and all my wisdom under the sun.
- Darby Translation (DBY)
- Then I went about to cause my heart to despair of all the labour wherewith I had laboured under the sun.
- Webster's Bible (WBS)
- Therefore I went about to cause my heart to despair of all the labor which I took under the sun.
- Young's Literal Translation (YLT)
- And I turned round to cause my heart to despair concerning all the labour that I laboured at under the sun.
Read in context
- 18ಹೌದು, ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆಮಾಡಿದೆನು; ನನ್ನ ತರು ವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕು.
- 19ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ.
- 20ಆದದರಿಂದ ಸೂರ್ಯನ ಕೆಳಗೆ ಪ್ರಯಾಸ ಪಟ್ಟ ಎಲ್ಲಾ ಪ್ರಯಾಸದ ವಿಷಯವಾಗಿ ನನ್ನ ಹೃದಯವು ನಿರಾಶೆಗೊಳ್ಳುವಂತೆ ನಾನು ತಿರುಗಾಡಿದೆನು.
- 21ಜ್ಞಾನ ದಲ್ಲಿಯೂ ತಿಳುವಳಿಕೆಯಲ್ಲಿಯೂ ಯಥಾರ್ಥವಾಗಿ ಪ್ರಯಾಸಪಟ್ಟ ಒಬ್ಬ ಮನುಷ್ಯನಿದ್ದಾನೆ; ಆದರೂ ಇವು ಗಳಲ್ಲಿ ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡುವನು. ಇದು ವ್ಯರ್ಥವೂ ದೊಡ್ಡ ಕೇಡೂ ಆಗಿದೆ.
- 22ಸೂರ್ಯನ ಕೆಳಗೆ ತಾನು ಪ್ರಯಾಸ ಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ?
Cross references
- 2 Corinthians 1:8–10 2 ಕೊರಿಂಥದವರಿಗೆ 1:8–10ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು. ಆದರೆ ಮರಣವಾಗು ತ್ತದೆಂಬ ನಿರ್ಣಯವು ನಮ್ಮೊಳಗೆ ಉಂಟಾಯಿತು; ನಾವು ನಮ್ಮ ಮೇಲೆ ಭರವಸವಿಟ್ಟುಕೊಳ್ಳದೆ ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸವಿಡುವವ ರಾಗಬೇಕೆಂದು ಹೀಗಾಯಿತು. ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
- Job 17:11–15 ಯೋಬನು 17:11–15ನನ್ನ ದಿವಸಗಳು ಹಾದು ಹೋದವು: ನನ್ನ ಹೃದ ಯಕ್ಕೆ ಸ್ವಂತವಾಗಿರುವ ನನ್ನ ಉದ್ದೇಶಗಳು ಭಂಗವಾ ದವು. ಅವರು ರಾತ್ರಿಯನ್ನು ಹಗಲನ್ನಾಗಿ ಮಾಡು ತ್ತಾರೆ; ಬೆಳಕು ಕತ್ತಲೆಯ ನಿಮಿತ್ತ ಚಿಕ್ಕದಾಗಿದೆ. ನಾನು ನಿರೀಕ್ಷಿಸಿದರೆ ಸಮಾಧಿಯೇ ನನ್ನ ಮನೆ; ಕತ್ತಲೆಯಲ್ಲಿ ನನ್ನ ಹಾಸಿಗೆಯನ್ನು ಹಾಸಿದ್ದೇನೆ. ಕೊಳೆಯುವಿಕೆಗೆ -- ನೀನು ನನ್ನ ತಂದೆ ಎಂದೂ ಹುಳಕ್ಕೆ--ನನ್ನ ತಾಯಿಯೇ, ನನ್ನ ಅಕ್ಕನೇ ಎಂದೂ ನಾನು ಹೇಳಿದೆನು. ಹಾಗಾದರೆ ಈಗ ನನ್ನ ನಿರೀಕ್ಷೆ ಎಲ್ಲಿ? ನನ್ನ ನಿರೀಕ್ಷೆಯನ್ನು ಯಾರು ನೋಡುವರು?ನಮ್ಮ ಸಂಗಡ ಧೂಳಿನಲ್ಲಿ ವಿಶ್ರಾಂತಿಯಲ್ಲಿರುವಾಗ ಅವರು ಪಾತಾಳದ ಅಗುಳಿಗಳಿಗೆ ಇಳಿದು ಹೋಗುವರು.
- 1 Corinthians 15:19 1 ಕೊರಿಂಥದವರಿಗೆ 15:19ಈ ಜೀವದಲ್ಲಿ ಮಾತ್ರ ನಾವು ಕ್ರಿಸ್ತನಲ್ಲಿ ನಿರೀಕ್ಷೆಯಿಟ್ಟುಕೊಂಡವ ರಾಗಿದ್ದರೆ ನಾವು ಎಲ್ಲಾ ಮನುಷ್ಯರಿಗಿಂತಲೂ ನಿರ್ಭಾಗ್ಯರೇ ಸರಿ.
- Genesis 43:14 ಆದಿಕಾಂಡ 43:14ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು.
- Psalm 39:6–7 ಕೀರ್ತನೆಗಳು 39:6–7ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು. ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವದಕ್ಕೆ ಕಾದುಕೊಳ್ಳಲಿ? ನನ್ನ ನಿರೀಕ್ಷೆ ನಿನ್ನಲ್ಲಿ ಅದೆ.
- 1 Thessalonians 3:3–4 1 ಥೆಸಲೊನೀಕದವರಿಗೆ 3:3–4ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ; ಯಾಕಂದರೆ ಸಂಕಟ ಗಳನ್ನು ಅನುಭವಿಸುವದಕ್ಕಾಗಿ ನಾವು ನೇಮಿಸಲ್ಪಟ್ಟವ ರೆಂದು ನೀವೇ ಬಲ್ಲಿರಷ್ಟೆ. ನಾವು ನಿಮ್ಮ ಬಳಿಯಲ್ಲಿದ್ದಾಗ ನಿಜವಾಗಿಯೂ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ; ಅದರಂತೆಯೇ ಆಯಿ ತೆಂದು ನಿಮಗೆ ತಿಳಿದುಬಂತು.