Ecclesiastes · chapter 3 · verse 17
Ecclesiastes 3:17 in Kannada
ನಾನು ನನ್ನ ಹೃದಯದಲ್ಲಿ -- ನೀತಿವಂತರನ್ನೂ ದುಷ್ಟರನ್ನೂ ದೇವರು ತೀರ್ಪುಮಾಡುವನು; ಪ್ರತಿಯೊಂದು ಉದ್ದೇ ಶಕ್ಕೂ ಪ್ರತಿಯೊಂದು ಕೆಲಸಕ್ಕೂ ಸಮಯವಿದೆ ಎಂದು ಅಂದುಕೊಂಡೆನು.
Naanu nanna hrudayadalli -- neetivantarannoo dushtarannoo devaru teerpumaaduvanu; pratiyondu udde shakkoo pratiyondu kelasakkoo samayavide endu andukondenu.
Ecclesiastes 3:17 in English
- King James Version (KJV)
- I said in mine heart, God shall judge the righteous and the wicked: for [there is] a time there for every purpose and for every work.
- World English Bible (WEB)
- I said in my heart, “God will judge the righteous and the wicked; for there is a time there for every purpose and for every work.”
- American Standard Version (ASV)
- I said in my heart, God will judge the righteous and the wicked; for there is a time there for every purpose and for every work.
- Bible in Basic English (BBE)
- I said in my heart, God will be judge of the good and of the bad; because a time for every purpose and for every work has been fixed by him.
- Darby Translation (DBY)
- I said in my heart, God will judge the righteous and the wicked; for there is a time there for every purpose and for every work.
- Webster's Bible (WBS)
- I said in my heart, God will judge the righteous and the wicked: for [there is] a time there for every purpose and for every work.
- Young's Literal Translation (YLT)
- I said in my heart, 'The righteous and the wicked doth God judge, for a time [is] to every matter and for every work there.'
Read in context
- 15ಇದ್ದದ್ದು ಈಗ ಇದೆ, ಇರುವದು ಆಗಲೇ ಇತ್ತು; ಗತಿಸಿಹೋದದ್ದನ್ನು ದೇವರು ಕೇಳುತ್ತಾನೆ.
- 16ಕೆಟ್ಟದ್ದು ಇತ್ತೆಂದು ಸೂರ್ಯನ ಕೆಳಗೆ ನ್ಯಾಯ ತೀರ್ಪಿನ ಸ್ಥಳವನ್ನು ಮತ್ತು ದುಷ್ಕೃತ್ಯ ಇದೆಯೆಂದು ನೀತಿಯ ಸ್ಥಾನವನ್ನು ನಾನು ಕಂಡೆನು.
- 17ನಾನು ನನ್ನ ಹೃದಯದಲ್ಲಿ -- ನೀತಿವಂತರನ್ನೂ ದುಷ್ಟರನ್ನೂ ದೇವರು ತೀರ್ಪುಮಾಡುವನು; ಪ್ರತಿಯೊಂದು ಉದ್ದೇ ಶಕ್ಕೂ ಪ್ರತಿಯೊಂದು ಕೆಲಸಕ್ಕೂ ಸಮಯವಿದೆ ಎಂದು ಅಂದುಕೊಂಡೆನು.
- 18ಮನುಷ್ಯ ಪುತ್ರರ ಸ್ಥಿತಿಯ ವಿಷ ಯವಾಗಿ ದೇವರು ಅವರನ್ನು ಪ್ರತ್ಯಕ್ಷಪಡಿಸುವನೆಂದೂ ಅವರು ತಾವೇ ಮೃಗಗಳೆಂದು ತಾವು ಕಂಡುಕೊಳ್ಳ ಬೇಕೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು.
- 19ಮೃಗಗಳಿಗೆ ಸಂಭವಿಸುವದು ಮನುಷ್ಯರ ಪುತ್ರರಿಗೂ ಸಂಭವಿಸುತ್ತದೆ; ಅವರಿಗೆ ಒಂದೇ ಸಂಗತಿ ಸಂಭವಿಸು ತ್ತದೆ; ಒಂದು ಸಾಯುವ ಹಾಗೆ ಮತ್ತೊಂದು ಸಾಯು ತ್ತದೆ; ಹೌದು, ಅವರೆಲ್ಲರಿಗೂ ಒಂದೇ ಒಂದು ಉಸಿ ರಾಟ ಇದೆ; ಆದಕಾರಣ ಮೃಗಕ್ಕಿಂತ ಮನುಷ್ಯನಿಗೆ ಯಾವ ಶ್ರೇಷ್ಠತೆಯೂ ಇಲ್ಲ; ಎಲ್ಲವೂ ವ್ಯರ್ಥ.
Cross references
- 2 Corinthians 5:10 2 ಕೊರಿಂಥದವರಿಗೆ 5:10ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡಿಸಿದ ಒಳ್ಳೆಯದಕ್ಕಾಗಲಿ ಕೆಟ್ಟದ್ದಕ್ಕಾಗಲಿ ಸರಿಯಾದದ್ದನ್ನು ಹೊಂದುವದಕ್ಕೋಸ್ಕರ ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿ ಕೊಳ್ಳಲೇಬೇಕು.
- Ecclesiastes 12:14 ಪ್ರಸಂಗಿ 12:14ಒಳ್ಳೇದಾಗಲಿ, ಕೆಟ್ಟದ್ದಾಗಲಿ, ಪ್ರತಿಯೊಂದು ರಹಸ್ಯದ ಸಂಗತಿಗೂ ದೇವರು ಪ್ರತಿಯೊಂದು ಕೆಲಸ ವನ್ನು ಕುರಿತು ನ್ಯಾಯವಿಚಾರಣೆಗೆ ತರುವನು.
- Matthew 16:27 ಮತ್ತಾಯನು 16:27ಯಾಕಂದರೆ ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯಲ್ಲಿ ತನ್ನ ದೂತರೊಡನೆ ಬಂದಾಗ ಆತನು ಪ್ರತಿಯೊಬ್ಬ ನಿಗೂ ಅವನವನ ಕೆಲಸಗಳಿಗೆ ತಕ್ಕಂತೆ ಪ್ರತಿಫಲವನ್ನು ಕೊಡುವನು ಎಂದು ಹೇಳಿದನು.ನಿಮಗೆ ನಿಜವಾಗಿ ಹೇಳುವದೇನಂದರೆ--ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವದನ್ನು ನೋಡುವವರೆಗೆ ಮರಣದ ರುಚಿಯನ್ನು ನೋಡುವದೇ ಇಲ್ಲ ಅಂದನು.
- Ecclesiastes 3:1 ಪ್ರಸಂಗಿ 3:1ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ; ಪ್ರತಿಯೊಂದು ಉದ್ದೇಶಕ್ಕೂ ಒಂದು ಸಮಯವಿದೆ.
- Romans 2:5–10 ರೋಮಾಪುರದವರಿಗೆ 2:5–10ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ. ದೇವರು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿ ಗನುಸಾರವಾಗಿ ಪ್ರತಿಫಲ ಕೊಡುವನು. ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ ಆದರೆ ಒಳ್ಳೆಯದನ್ನು ಮಾಡುವ ಪ್ರತಿ ಮನುಷ್ಯನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ಮಹಿಮೆ ಮಾನ ಮತ್ತು ಸಮಾಧಾನವನ್ನೂ ಕೊಡುವನು.
- Psalm 98:9 ಕೀರ್ತನೆಗಳು 98:9ಆತನು ಭೂಮಿಗೆ ನ್ಯಾಯ ತೀರಿಸಲು ಬರುತ್ತಾನೆ. ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ನ್ಯಾಯದಲ್ಲಿಯೂ ತೀರ್ಪು ಕೊಡುವನು.
- 2 Thessalonians 1:6–10 2 ಥೆಸಲೊನೀಕದವರಿಗೆ 1:6–10ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟಪಡಿಸುವದೂ ರ್ತನಾದ ಯೇಸು ತನ್ನ ಬಲವುಳ್ಳ ದೂತರೊಂದಿಗೆ ಪರಲೋಕ ದಿಂದ ಪ್ರತ್ಯಕ್ಷನಾಗುವಾಗ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನ ಮಾಡುವದೂ ಆತನು (ಕರ್ತನಾದ ಯೇಸು) ದೇವರನ್ನರಿಯ ದವರಿಗೆ ಮತ್ತು ಕರ್ತನಾದ ಯೇಸು ಕ್ರಿಸ್ತನ ಸುವಾರ್ತೆಗೆ ವಿಧೇಯರಾಗದವರಿಗೆ ಉರಿಯುವ ಬೆಂಕಿಯ ಮೂಲಕ ಪ್ರತೀಕಾರ ಮಾಡುವದೂ ದೇವರಿಗೆ ನ್ಯಾಯವಾಗಿದೆ; ಅಂಥವರು ಕರ್ತನ ಸಾನಿಧ್ಯದಿಂದಲೂ ಬಲವುಳ್ಳ ಆತನ ಮಹಿಮೆಯಿಂದಲೂ ನಿತ್ಯ ನಾಶನವೆಂಬ ಶಿಕ್ಷೆ ಯನ್ನು ಹೊಂದುವರು. ಆ ದಿನದಲ್ಲಿ ಆತನು ತನ್ನ ಪರಿಶುದ್ಧರಲ್ಲಿ ಮಹಿಮೆ ಹೊಂದುವಂತೆಯೂ ನಂಬುವವರೆಲ್ಲರಲ್ಲಿ ಮೆಚ್ಚಿಕೆ ಹೊಂದುವಂತೆಯೂ ಬರುವನು. (ಯಾಕಂದರೆ ನೀವು ನಮ್ಮ ಸಾಕ್ಷಿಯನ್ನು ನಂಬಿದಿರಿ).
- Ecclesiastes 11:9 ಪ್ರಸಂಗಿ 11:9ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
- Acts 1:7 ಅಪೊಸ್ತಲರ ಕೃತ್ಯಗಳು 1:7ಆತನು ಅವರಿಗೆ--ತಂದೆಯು ತನ್ನ ಸ್ವಂತ ಅಧಿಕಾರದಲ್ಲಿ ಇಟ್ಟುಕೊಂಡಿರುವ ಸಮಯ ಗಳನ್ನೂ ಕಾಲಗಳನ್ನೂ ತಿಳಿದುಕೊಳ್ಳುವದು ನಿಮಗೆ ಸಂಬಂಧಪಟ್ಟದ್ದಲ್ಲ.
- Revelation 20:11–15 ಪ್ರಕಟನೆ 20:11–15ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು. ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು. ಆಮೇಲೆ ಮೃತ್ಯುವೂ ನರಕವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಇದೇ ಎರಡನೆಯ ಮರಣವು.ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು. ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
- Genesis 18:25 ಆದಿಕಾಂಡ 18:25ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
- John 5:26–29 ಯೋಹಾನನು 5:26–29ತಂದೆಯು ಹೇಗೆ ಸ್ವತಃ ಜೀವವುಳ್ಳವನಾಗಿದ್ದಾನೋ ಹಾಗೆಯೇ ಮಗನೂ ಸ್ವತಃ ಜೀವವುಳ್ಳವನಾಗಿರುವಂತೆ ಆತನು ಅನುಗ್ರಹಿಸಿದ್ದಾನೆ. ಆತನು ಮನುಷ್ಯಕುಮಾರ ನಾಗಿರುವದರಿಂದ ನ್ಯಾಯತೀರಿಸುವ ಅಧಿಕಾರವನ್ನು ಸಹ ಆತನಿಗೆ ಕೊಟ್ಟಿದ್ದಾನೆ. ಇದಕ್ಕೆ ಆಶ್ಚರ್ಯಪಡ ಬೇಡಿರಿ; ಒಂದು ಕಾಲ ಬರುತ್ತದೆ; ಆಗ ಸಮಾಧಿಗಳಲ್ಲಿ ರುವವರೆಲ್ಲರೂ ಆತನ ಧ್ವನಿಯನ್ನು ಕೇಳಿ ಹೊರಗೆ ಬರುವರು, ಒಳ್ಳೇದನ್ನು ಮಾಡಿದವರು ಜೀವದ ಪುನರುತ್ಥಾನವನ್ನೂ ಕೆಟ್ಟದ್ದನ್ನು ಮಾಡಿದವರು ತೀರ್ಪಿನ ಪುನರುತ್ಥಾನವನ್ನೂ ಹೊಂದುವರು.