Ecclesiastes · chapter 3 · verse 4
Ecclesiastes 3:4 in Kannada
ಅಳುವದಕ್ಕೆ ಒಂದು ಸಮಯ, ನಗುವದಕ್ಕೆ ಒಂದು ಸಮಯ; ಗೋಳಾಡುವದಕ್ಕೆ ಒಂದು ಸಮಯ, ಕುಣಿದಾಡುವದಕ್ಕೆ ಒಂದು ಸಮಯ;
Aluvadakke ondu samaya, naguvadakke ondu samaya; golaaduvadakke ondu samaya, kunidaaduvadakke ondu samaya;
Ecclesiastes 3:4 in English
- King James Version (KJV)
- A time to weep, and a time to laugh; a time to mourn, and a time to dance;
- World English Bible (WEB)
- a time to weep, and a time to laugh; a time to mourn, and a time to dance;
- American Standard Version (ASV)
- a time to weep, and a time to laugh; a time to mourn, and a time to dance;
- Bible in Basic English (BBE)
- A time for weeping and a time for laughing; a time for sorrow and a time for dancing;
- Darby Translation (DBY)
- A time to weep, and a time to laugh; A time to mourn, and a time to dance;
- Webster's Bible (WBS)
- A time to weep, and a time to laugh; a time to mourn, and a time to dance;
- Young's Literal Translation (YLT)
- A time to weep, And a time to laugh. A time to mourn, And a time to skip.
Read in context
- 2ಹುಟ್ಟುವದಕ್ಕೆ ಒಂದು ಸಮಯ, ಸಾಯುವದಕ್ಕೆ ಒಂದು ಸಮಯ; ನೆಡುವದಕ್ಕೆ ಒಂದು ಸಮಯ, ನೆಟ್ಟದ್ದನ್ನು ಕಿತ್ತು ಹಾಕು ವದಕ್ಕೆ ಒಂದು ಸಮಯ;
- 3ಕೊಲ್ಲುವದಕ್ಕೆ ಒಂದು ಸಮಯ, ಸ್ವಸ್ಥಮಾಡುವದಕ್ಕೆ ಒಂದು ಸಮಯ ಕೆಡವಿ ಬಿಡುವದಕ್ಕೆ ಒಂದು ಸಮಯ, ಕಟ್ಟುವದಕ್ಕೆ ಒಂದು ಸಮಯ;
- 4ಅಳುವದಕ್ಕೆ ಒಂದು ಸಮಯ, ನಗುವದಕ್ಕೆ ಒಂದು ಸಮಯ; ಗೋಳಾಡುವದಕ್ಕೆ ಒಂದು ಸಮಯ, ಕುಣಿದಾಡುವದಕ್ಕೆ ಒಂದು ಸಮಯ;
- 5ಕಲ್ಲುಗಳನ್ನು ಎಸೆಯುವದಕ್ಕೆ ಒಂದು ಸಮಯ, ಕಲ್ಲುಗಳನ್ನು ಕೂಡಿಸು ವದಕ್ಕೆ ಒಂದು ಸಮಯ; ಅಪ್ಪಿಕೊಳ್ಳುವದಕ್ಕೆ ಒಂದು ಸಮಯ, ಅಪ್ಪಿಕೊಳ್ಳುವದರಿಂದ ನಿಗ್ರಹಿಸುವ ಸಮ ಯ;
- 6ಗಳಿಸುವದಕ್ಕೆ ಒಂದು ಸಮಯ, ಕಳೆಯುವದಕ್ಕೆ ಒಂದು ಸಮಯ ಕಾಪಾಡುವದಕ್ಕೆ ಒಂದು ಸಮಯ, ಬಿಸಾಡುವದಕ್ಕೆ ಒಂದು ಸಮಯ;
Cross references
- Romans 12:15 ರೋಮಾಪುರದವರಿಗೆ 12:15ಸಂತೋಷಪಡುವವರ ಸಂಗಡ ಸಂತೋಷಪಡಿರಿ; ಅಳುವವರ ಸಂಗಡ ಅಳಿರಿ.
- Psalm 30:5 ಕೀರ್ತನೆಗಳು 30:5ಆತನ ಕೋಪವು ಕ್ಷಣಮಾತ್ರ. ಆತನ ಕಟಾಕ್ಷವು ಜೀವವೇ; ರಾತ್ರಿಯಲ್ಲಿ ದುಃಖವು ತಂಗಬಹುದಾದರೂ ಬೆಳಿಗ್ಗೆ ಆನಂದವು ಬರುವದು.
- James 4:9 ಯಾಕೋಬನು 4:9ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ.
- Psalm 126:5–6 ಕೀರ್ತನೆಗಳು 126:5–6ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನುತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು. ತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
- Psalm 126:1–2 ಕೀರ್ತನೆಗಳು 126:1–2ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು. ಆಗ ನಮ್ಮ ಬಾಯಿ ನಗೆಯಿಂದಲೂ ನಾಲಿಗೆ ಉತ್ಸಾಹ ಧ್ವನಿಯಿಂದಲೂ ತುಂಬಿದ್ದವು; ಆಗ ಅನ್ಯಜನರು--ಕರ್ತನು ಇವರಿಗೆ ಮಹತ್ಕಾರ್ಯಗಳನ್ನು ಮಾಡಿದ್ದಾನೆ ಎಂದು ಹೇಳಿದರು.
- John 16:20–22 ಯೋಹಾನನು 16:20–22ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು. ಒಬ್ಬ ಸ್ತ್ರೀಗೆ ತನ್ನ ಪ್ರಸವವೇದನೆಯ ಗಳಿಗೆ ಬಂದಾಗ ದುಃಖವಿರುವದು; ಆಕೆಯು ಮಗುವನ್ನು ಹೆತ್ತಕೂಡಲೆ ಈ ಲೋಕದೊಳಗೆ ಒಬ್ಬ ಮನುಷ್ಯನು ಹುಟ್ಟಿದನೆಂದು ಸಂತೋಷದಿಂದ ಆ ನೋವನ್ನು ಆಕೆಯು ನೆನಪಿಗೆ ತರುವದೇ ಇಲ್ಲ. ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
- Exodus 15:20 ವಿಮೋಚನಕಾಂಡ 15:20ಆಗ ಪ್ರವಾದಿನಿಯಾಗಿದ್ದ ಆರೋನನ ಸಹೋ ದರಿ ಮಿರ್ಯಾಮಳು ಕೈಯಲ್ಲಿ ದಮ್ಮಡಿಯನ್ನು ತೆಗೆದು ಕೊಂಡಳು. ಸ್ತ್ರೀಯರೆಲ್ಲರೂ ದಮ್ಮಡಿಗಳನ್ನು ಹಿಡಿದು ಕೊಂಡು ನಾಟ್ಯವಾಡುತ್ತಾ ಆಕೆಯನ್ನು ಹಿಂಬಾಲಿಸಿ ಹೋದರು.
- Luke 6:21–25 ಲೂಕನು 6:21–25ಈಗ ಹಸಿದವರಾದ ನೀವು ಧನ್ಯರು; ಯಾಕಂದರೆ ನೀವು ತೃಪ್ತಿ ಹೊಂದುವಿರಿ. ಈಗ ಅಳುವವರಾದ ನೀವು ಧನ್ಯರು; ಯಾಕಂದರೆ ನೀವು ನಗುವಿರಿ. ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು. ಆ ದಿನದಲ್ಲಿ ನೀವು ಸಂತೋಷ ಪಡಿರಿ. ಉಲ್ಲಾಸದಿಂದ ಕುಣಿದಾಡಿರಿ; ಯಾಕಂದರೆ ಇಗೋ, ಪರಲೋಕದಲ್ಲಿ ನಿಮ್ಮ ಬಹುಮಾನವು ದೊಡ್ಡದು; ಅವರ ಪಿತೃಗಳು ಪ್ರವಾದಿಗಳಿಗೆ ಅದೇ ರೀತಿಯಲ್ಲಿ ಮಾಡಿದರು. ಆದರೆ ಐಶ್ವರ್ಯವಂತರೇ, ನಿಮಗೆ ಅಯ್ಯೋ! ನೀವು ನಿಮ್ಮ ಆದರಣೆಯನ್ನು ಹೊಂದಿದ್ದೀರಿ. ತೃಪ್ತಿಯಿಂದಿರುವವರೇ, ನಿಮಗೆ ಅಯ್ಯೋ! ಯಾಕಂದರೆ ನಿಮಗೆ ಹಸಿವೆಯಾಗುವದು. ಈಗ ನಗುವವರೇ, ನಿಮಗೆ ಅಯ್ಯೋ! ನೀವು ಶೋಕಿಸಿ ಅಳುವಿರಿ.
- 2 Corinthians 7:10 2 ಕೊರಿಂಥದವರಿಗೆ 7:10ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
- Luke 1:58 ಲೂಕನು 1:58ಆಗ ಕರ್ತನು ತನ್ನ ಮಹಾಕರುಣೆಯನ್ನು ಆಕೆಯ ಮೇಲೆ ತೋರಿಸಿದ್ದನ್ನು ಆಕೆಯ ನೆರೆಹೊರೆಯವರೂ ಬಂಧುಗಳೂ ಕೇಳಿ ಆಕೆಯ ಕೂಡ ಸಂತೋಷಪಟ್ಟರು.
- Matthew 11:17 ಮತ್ತಾಯನು 11:17ನಾವು ನಿಮಗೋಸ್ಕರ ಕೊಳಲೂದಿದೆವು, ಆದರೆ ನೀವು ಕುಣಿಯಲಿಲ್ಲ; ನಾವು ನಿಮಗೋಸ್ಕರ ಶೋಕಿಸಿದೆವು, ಆದರೆ ನೀವು ಗೋಳಾಡಲಿಲ್ಲ ಎಂದು ಹೇಳುವವರಿಗೆ ಇದು ಹೋಲಿಕೆಯಾಗಿದೆ.
- Matthew 9:15 ಮತ್ತಾಯನು 9:15ಅದಕ್ಕೆ ಯೇಸು ಅವರಿಗೆ--ಮದಲಿಂಗನು ತಮ್ಮ ಜೊತೆಯಲ್ಲಿರುವ ತನಕ ಮದಲಗಿತ್ತಿಯ ಮನೇ ಮಕ್ಕಳು ದುಃಖಪಡುವರೇ? ಆದರೆ ಮದಲಿಂಗನು ಅವರಿಂದ ತೆಗೆಯಲ್ಪಡುವ ದಿವಸಗಳು ಬರುವವು; ಆಗ ಅವರು ಉಪವಾಸ ಮಾಡುವರು.