Ecclesiastes · chapter 3 · verse 7
Ecclesiastes 3:7 in Kannada
ಹರಿಯುವದಕ್ಕೆ ಒಂದು ಸಮಯ, ಹೊಲಿಯುವದಕ್ಕೆ ಒಂದು ಸಮಯ ಸುಮ್ಮನೆ ಇರುವದಕ್ಕೆ ಒಂದು ಸಮಯ, ಮಾತಾಡು ವದಕ್ಕೆ ಒಂದು ಸಮಯ;
Hariyuvadakke ondu samaya, holiyuvadakke ondu samaya summane iruvadakke ondu samaya, maataadu vadakke ondu samaya;
Ecclesiastes 3:7 in English
- King James Version (KJV)
- A time to rend, and a time to sew; a time to keep silence, and a time to speak;
- World English Bible (WEB)
- a time to tear, and a time to sew; a time to keep silence, and a time to speak;
- American Standard Version (ASV)
- a time to rend, and a time to sew; a time to keep silence, and a time to speak;
- Bible in Basic English (BBE)
- A time for undoing and a time for stitching; a time for keeping quiet and a time for talk;
- Darby Translation (DBY)
- A time to rend, and a time to sew; A time to keep silence, and a time to speak;
- Webster's Bible (WBS)
- A time to rend, and a time to sew; a time to keep silence, and a time to speak;
- Young's Literal Translation (YLT)
- A time to rend, And a time to sew. A time to be silent, And a time to speak.
Read in context
- 5ಕಲ್ಲುಗಳನ್ನು ಎಸೆಯುವದಕ್ಕೆ ಒಂದು ಸಮಯ, ಕಲ್ಲುಗಳನ್ನು ಕೂಡಿಸು ವದಕ್ಕೆ ಒಂದು ಸಮಯ; ಅಪ್ಪಿಕೊಳ್ಳುವದಕ್ಕೆ ಒಂದು ಸಮಯ, ಅಪ್ಪಿಕೊಳ್ಳುವದರಿಂದ ನಿಗ್ರಹಿಸುವ ಸಮ ಯ;
- 6ಗಳಿಸುವದಕ್ಕೆ ಒಂದು ಸಮಯ, ಕಳೆಯುವದಕ್ಕೆ ಒಂದು ಸಮಯ ಕಾಪಾಡುವದಕ್ಕೆ ಒಂದು ಸಮಯ, ಬಿಸಾಡುವದಕ್ಕೆ ಒಂದು ಸಮಯ;
- 7ಹರಿಯುವದಕ್ಕೆ ಒಂದು ಸಮಯ, ಹೊಲಿಯುವದಕ್ಕೆ ಒಂದು ಸಮಯ ಸುಮ್ಮನೆ ಇರುವದಕ್ಕೆ ಒಂದು ಸಮಯ, ಮಾತಾಡು ವದಕ್ಕೆ ಒಂದು ಸಮಯ;
- 8ಪ್ರೀತಿಸುವದಕ್ಕೆ ಒಂದು ಸಮಯ, ದ್ವೇಷಿಸುವದಕ್ಕೆ ಒಂದು ಸಮಯ; ಯುದ್ಧದ ಸಮಯ, ಸಮಾಧಾನದ ಸಮಯ.
- 9ತಾನು ಪ್ರಯಾಸಪಡುವದರಲ್ಲಿ ದುಡಿಯುವವನಿಗೆ ಲಾಭವೇನಿದೆ?
Cross references
- Micah 7:5 ಮೀಕ 7:5ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ.
- Amos 5:13 ಆಮೋಸ 5:13ಆದದ ರಿಂದ ಆ ಕಾಲದಲ್ಲಿ ಬುದ್ದಿವಂತನು ಮೌನವಾಗಿ ರುವನು; ಯಾಕಂದರೆ ಅದು ಕೆಟ್ಟ ಕಾಲವಾಗಿದೆ.
- Esther 4:13–14 ಎಸ್ತೇರಳು 4:13–14ಆಗ ಮೊರ್ದೆಕೈ ಎಸ್ತೇರಳಿಗೆ ಹೇಳಿ ಕಳುಹಿಸಿದ ಪ್ರತ್ಯುತ್ತರವೇನಂದರೆ--ನೀನು ಅರಮನೆಯಲ್ಲಿರುವ ದರಿಂದ ಸಮಸ್ತ ಯೆಹೂದ್ಯರಲ್ಲಿ ತಪ್ಪಿಸಿಕೊಳ್ಳುವೆ ನೆಂದು ನೆನಸಬೇಡ. ನೀನು ಈ ಕಾಲದಲ್ಲಿ ಮೌನವಾಗಿಯೇ ಇದ್ದರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ವಿಶ್ರಾಂತಿಯೂ ಬಿಡುಗಡೆಯೂ ಉಂಟಾಗುವವು; ಆದರೆ ನೀನೂ ನಿನ್ನ ತಂದೆಯ ಮನೆಯೂ ನಾಶವಾಗಿ ಹೋಗುವಿರಿ. ಇಂಥಾ ಕಾಲ ಕ್ಕೋಸ್ಕರ ನೀನು ರಾಜತ್ವಕ್ಕೆ ಬಂದಿ ಏನೋ ತಿಳಿದ ವರು ಯಾರು ಅಂದನು.
- Lamentations 3:28 ಪ್ರಲಾಪಗಳು 3:28ಅವನು ಒಂಟಿಯಾಗಿ ಕೂತುಕೊಂಡು ಮೌನ ವಾಗಿರುವನು, ಯಾಕಂದರೆ ಆತನೇ ಅದನ್ನು ಅವನ ಮೇಲೆ ಹೊರಿಸಿದ್ದಾನೆ.
- Proverbs 31:8–9 ಜ್ಞಾನೋಕ್ತಿಗಳು 31:8–9ಮೂಕರಿಗಾಗಿಯೂ ನಾಶವಾಗುವದಕ್ಕೆ ನೇಮಿಸಲ್ಪಟ್ಟ ವರೆಲ್ಲರಿಗಾಗಿಯೂ ನಿನ್ನ ಬಾಯನ್ನು ತೆರೆ. ನಿನ್ನ ಬಾಯಿ ತೆರೆದು ನೀತಿಯಿಂದ ನ್ಯಾಯತೀರಿಸು; ದರಿದ್ರ ರಿಗಾಗಿಯೂ ದಿಕ್ಕಿಲ್ಲದವರಿಗಾಗಿಯೂ ವ್ಯಾಜ್ಯಮಾಡು.
- Acts 4:20 ಅಪೊಸ್ತಲರ ಕೃತ್ಯಗಳು 4:20ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು.
- Job 32:4–22 ಯೋಬನು 32:4–22ಆಗ ಎಲೀಹುಯೋ ಬನ ಮಾತುಗಳು ಮುಗಿಯುವ ವರೆಗೂ ಕಾದು ಕೊಂಡನು; ಅವರು ತನಗಿಂತ ಹಿರಿಯರಾಗಿದ್ದರು. ಆ ಮೂವರ ಬಾಯಲ್ಲಿ ಏನೂ ಉತ್ತರವಿಲ್ಲವೆಂದು ಎಲೀಹು ನೋಡಿದಾಗ ಅವನ ಕೋಪ ಉರಿಯಿತು. ಆಗ ಬೂಜ್ನಾದ ಬರಕೇಲನ ಮಗನಾದ ಎಲೀಹು ಉತ್ತರಕೊಟ್ಟು ಹೇಳಿದ್ದೇನೆಂದರೆ--ನಾನು ಒಳ್ಳೇಪ್ರಾಯದವನು, ನೀವು ನೆರೆಯವರು; ಆದದ ರಿಂದ ನಾನು ಹೆದರಿ ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವದಕ್ಕೆ ಭಯಪಟ್ಟೆನು. ದಿನ ಗತಿಸಿದವರು ಮಾತನಾಡಲಿ, ಬಹಳ ವರುಷದವರು ಜ್ಞಾನವನ್ನು ಬೋಧಿಸಲಿ ಅಂದೆನು. ಆದರೆ ಮನುಷ್ಯನಲ್ಲಿ ಆತ್ಮ ಉಂಟು; ಸರ್ವಶಕ್ತನ ಶ್ವಾಸವು ಅವನಿಗೆ ಗ್ರಹಿಕೆ ಕೊಡುತ್ತದೆ. ದೊಡ್ಡ ಮನುಷ್ಯರೇ ಬುದ್ಧಿವಂತರಲ್ಲ; ಮುದುಕರೇ ನ್ಯಾಯವನ್ನು ಗ್ರಹಿಸಿಕೊಳ್ಳುವವರಲ್ಲ. ಆದದರಿಂದ ನನ್ನನ್ನು ಕೇಳು; ನನ್ನ ಅಭಿಪ್ರಾಯವನ್ನು ನಾನು ತಿಳಿಸುವೆನು ಅಂದೆನು. ಇಗೋ, ನಿಮ್ಮ ಮಾತುಗಳಿಗೋಸ್ಕರ ನಾನು ಎದುರು ನೋಡಿದೆನು; ನೀವು ಏನು ಹೇಳಬೇಕೆಂದು ಹುಡುಕುತ್ತಿದ್ದಾಗ, ನಿಮ್ಮ ವಿವಾದಗಳಿಗೆ ಕಿವಿಗೊಟ್ಟೆನು; ಆದರೆ ಇಗೋ, ಯೋಬನನ್ನು ಮನಗಾಣಿಸುವವನೂ ಅವನ ಮಾತು ಗಳಿಗೆ ಉತ್ತರ ಕೊಡುವವನೂ ನಿಮ್ಮಲ್ಲಿ ಒಬ್ಬನೂ ಇಲ್ಲ. ನಾವು ಜ್ಞಾನವನ್ನು ಕಂಡುಕೊಂಡೆವು; ಮನು ಷ್ಯನಲ್ಲ, ದೇವರು ಅವನನ್ನು ತಳ್ಳುತ್ತಾನೆಂದು ಹೇಳ ಬೇಡಿರಿ. ನನಗೆ ವಿರೋಧವಾಗಿ ಅವನು ನುಡಿ ಗಳನ್ನು ಸಿದ್ಧಮಾಡಲಿಲ್ಲ; ನಿಮ್ಮ ಮಾತುಗಳಿಂದ ನಾನು ಅವನಿಗೆ ಉತ್ತರ ಕೊಡುವದಿಲ್ಲ. ಅವರು ವಿಸ್ಮಯಗೊಂಡು ಇನ್ನು ಉತ್ತರ ಕೊಡ ಲಿಲ್ಲ; ಅವರು ಮಾತನಾಡುವದನ್ನು ನಿಲ್ಲಿಸಿದರು. ಅವರು ಮಾತನಾಡದೇ ಇರುವದರಿಂದ ನಾನು ಎದುರು ನೋಡಿದೆನು; ಯಾಕಂದರೆ ಇನ್ನೂ ಉತ್ತರ ಕೊಡದೆ ನಿಂತಿದ್ದಾರೆ. ನಾನು ನನ್ನ ಪಾಲಾಗಿ ಉತ್ತರ ಕೊಡುವೆನು: ನಾನೇ ನನ್ನ ಅಭಿಪ್ರಾಯ ತಿಳಿಸುವೆನು. ವಿಷಯಗಳಿಂದ ನಾನು ತುಂಬಿದ್ದೇನೆ: ನನ್ನೊಳಗಿನ ಆತ್ಮವು ನನ್ನನ್ನು ಇರಿಕಿಸುತ್ತದೆ. ಇಗೋ, ನನ್ನ ಹೊಟ್ಟೆಯು ತೆರೆಯಲ್ಪಡದ ದ್ರಾಕ್ಷಾರಸದ ಹಾಗೆಯೂ ಒಡೆದು ಹೋಗುವ ಹೊಸ ಬುದ್ದಲಿಗಳ ಹಾಗೆಯೂ ಅದೆ. ನಾನು ಚೈತನ್ಯಗೊಳ್ಳುವಂತೆ ಮಾತನಾಡು ವೆನು: ನನ್ನ ತುಟಿಗಳನ್ನು ತೆರೆದು ಉತ್ತರ ಕೊಡು ವೆನು. ನಾನು ಯಾವ ಮನುಷ್ಯನ ಮುಖದಾಕ್ಷಿಣ್ಯ ನೋಡೆನು, ಇಲ್ಲವೆ ಮನುಷ್ಯನನ್ನು ಹೊಗಳೆನು.ಹೊಗಳುವದನ್ನು ಅರಿಯೆನು; ಸ್ವಲ್ಪ ಕಾಲದಲ್ಲಿ ನನ್ನ ನಿರ್ಮಾಣಿಕನು ನನ್ನನ್ನು ಒಯ್ಯುವನೇನೋ? ಹೊಗಳುವದನ್ನು ಅರಿಯೆನು; ಸ್ವಲ್ಪ ಕಾಲದಲ್ಲಿ ನನ್ನ ನಿರ್ಮಾಣಿಕನು ನನ್ನನ್ನು ಒಯ್ಯುವನೇನೋ?
- Joel 2:13 ಯೋವೇಲ 2:13ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ.
- Proverbs 24:11–12 ಜ್ಞಾನೋಕ್ತಿಗಳು 24:11–12ಮರಣಕ್ಕೆ ಸೆಳೆಯ ಲ್ಪಟ್ಟವನನ್ನು ಬಿಡಿಸುವದಕ್ಕೂ ವಧಿಸಲ್ಪಡುವದಕ್ಕೆ ಸಿದ್ಧವಾದವರನ್ನು ನೀನು ರಕ್ಷಿಸಲೂ ಹಿಂದೆಗೆದರೆ ನೀನು--ಇಗೋ, ಅದು ನನಗೆ ಗೊತ್ತಿಲ್ಲ ಎಂದು ಹೇಳಿದರೆ ಹೃದಯವನ್ನು ಪರಿಶೋಧಿಸುವಾತನು ಅದನ್ನು ಯೋಚಿಸುವದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ಅದನ್ನು ತಿಳಿಯುವದಿಲ್ಲವೋ? ಪ್ರತಿ ಯೊಬ್ಬನಿಗೆ ತನ್ನ ಕಾರ್ಯಗಳಿಗನುಸಾರವಾಗಿ ಆತನು ಪ್ರತಿಫಲವನ್ನು ಕೊಡದೆ ಇರುವನೇ?
- Esther 7:4 ಎಸ್ತೇರಳು 7:4ಯಾಕಂದರೆ ನಾನೂ ನನ್ನ ಜನವೂ ಸಂಹರಿಸಲ್ಪಡುವದಕ್ಕೂ ಕೊಲ್ಲಲ್ಪ ಡುವದಕ್ಕೂ ನಾಶಮಾಡಲ್ಪಡುವದಕ್ಕೂ ಮಾರಲ್ಪಟ್ಟೆವು. ನಾವು ದಾಸದಾಸಿಗಳಾಗಿ ಮಾರಲ್ಪಟ್ಟಿದ್ದರೆ ನಾನು ಸುಮ್ಮನೆ ಇರುತ್ತಿದ್ದೆನು; ಆದರೆ ವೈರಿ ಅರಸನ ನಷ್ಟಕ್ಕೆ ಸರಿಯಾಗಿ ಕೊಡಲಾರನು ಅಂದಳು.
- 1 Samuel 25:24–44 1 ಸಮುವೇಲನು 25:24–44ದಯಮಾಡಿ ನಿನ್ನ ದಾಸಿಯನ್ನು ಮಾತಾಡಗೊಡಿಸಿ ನಿನ್ನ ದಾಸಿಯ ಮಾತುಗಳನ್ನು ಕೇಳು. ನನ್ನ ಒಡೆಯನು, ದಯಮಾಡಿ ಬೆಲಿಯಾಳನ ಈ ಮನುಷ್ಯ ನಾದ ನಾಬಾಲನ ಮೇಲೆ ಗಮನ ಇಡದೆ ಇರಲಿ. ಯಾಕಂದರೆ ಅವನ ಹೆಸರು ಹೇಗೋ ಹಾಗೆಯೇ ಅವನು ನಾಬಾಲನೆಂಬ ಹೆಸರುಳ್ಳವನು, ಮೂರ್ಖ ತನವು ಅವನ ಸಂಗಡ ಇರುವದು. ಆದರೆ ನನ್ನ ಒಡೆಯನಾದ ನೀನು ಕಳುಹಿಸಿದ ನಿನ್ನ ಯೌವನಸ್ಥರನ್ನು ನಿನ್ನ ದಾಸಿಯಾದ ನಾನು ನೋಡಲಿಲ್ಲ. ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವದಕ್ಕೂ ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವದಕ್ಕೂ ಹೋಗುವದನ್ನು ದೇವರು ಆಟಂಕ ಮಾಡಿದ್ದರಿಂದ ಕರ್ತನ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಿನ್ನ ಶತ್ರುಗಳೂ ನನ್ನ ಒಡೆಯನಿಗೆ ಕೇಡನ್ನು ಹುಡುಕು ವವರೂ ನಾಬಾಲನ ಹಾಗೆಯೇ ಆಗಲಿ. ಈಗ ನಿನ್ನ ದಾಸಿಯು ನನ್ನ ಒಡೆಯನಿಗೆ ತಕ್ಕೊಂಡು ಬಂದ ಈ ಆಶೀರ್ವಾದವು ನನ್ನ ಒಡೆಯನನ್ನು ಹಿಂಬಾಲಿಸುವ ಯೌವನಸ್ಥರಿಗೆ ಕೊಡಲ್ಪಡಲಿ. ನೀನು ದಯಮಾಡಿ ನಿನ್ನ ದಾಸಿಯದ್ರೋಹವನ್ನು ಮನ್ನಿಸಬೇಕು; ನನ್ನ ಒಡೆಯನು ಕರ್ತನ ಯುದ್ಧಗಳನ್ನು ನಡೆಸುತ್ತಾನೆ; ನಿನ್ನ ದಿನಗಳಲ್ಲಿ ನಿನ್ನ ಬಳಿಯಲ್ಲಿ ಕೆಟ್ಟತನವು ಕಂಡುಹಿಡಿ ಯಲ್ಪಟ್ಟದ್ದಿಲ್ಲ; ಆದದರಿಂದ ಕರ್ತನು ನನ್ನ ಒಡೆಯನಿಗೆ ಸ್ಥಿರವಾದ ಮನೆಯನ್ನು ಖಂಡಿತವಾಗಿ ಮಾಡುವನು. ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡು ಕುವದಕ್ಕೆ ಒಬ್ಬನು ಎದ್ದಿದ್ದಾನೆ; ಆದರೂ ನನ್ನ ಒಡೆ ಯನ ಪ್ರಾಣವು ದೇವರಾದ ಕರ್ತನ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಲ್ಪಟ್ಟಿರುವದು; ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ಆತನು ಎಸೆದು ಬಿಡುವನು. ಇದಲ್ಲದೆ ನನ್ನ ಒಡೆಯನಾದ ನಿನ್ನನ್ನು ಕುರಿತು ಕರ್ತನು ಹೇಳಿದ ಒಳ್ಳೇದನ್ನೆಲ್ಲಾ ನಿನಗೆ ಮಾಡಿ ನಿನ್ನನ್ನು ಇಸ್ರಾಯೇಲ್ಯರ ಮೇಲೆ ನಾಯಕನಾಗಿ ನೇಮಿಸಿದಾಗ ಏನಾಗುವ ದಂದರೆ, ನೀನು ಸುಮ್ಮನೆ ರಕ್ತ ಚೆಲ್ಲಿದ್ದೂ ನನ್ನ ಒಡೆಯನು ತನಗೆ ತಾನೇ ಮುಯ್ಯಿ ತೀರಿಸಿಕೊಂಡದ್ದೂ ನಿನಗೆ ವ್ಯಥೆಯಾಗಿರುವದಿಲ್ಲ; ನನ್ನ ಒಡೆಯನ ಹೃದಯಕ್ಕೆ ಅಪರಾಧವಾಗಿರುವದಿಲ್ಲ. ಆದರೆ ನನ್ನ ಒಡೆಯನಿಗೆ ಕರ್ತನು ಚೆನ್ನಾಗಿ ನಡೆಸಿದಾಗ ನಿನ್ನ ದಾಸಿಯನ್ನು ಜ್ಞಾಪಕಮಾಡಿಕೊಳ್ಳಬೇಕು ಅಂದಳು. ಆಗ ದಾವೀದನು ಅಬೀಗೈಲಳಿಗೆ--ನನ್ನನ್ನು ಎದುರು ಗೊಳ್ಳುವದಕ್ಕೆ ಈ ಹೊತ್ತು ನಿನ್ನನ್ನು ಕಳುಹಿಸಿದ ಇಸ್ರಾ ಯೇಲಿನ ದೇವರಾದ ಕರ್ತನಿಗೆ ಸ್ತೋತ್ರವಾಗಲಿ. ನಿನ್ನ ಬುದ್ಧಿಮಾತು ಆಶೀರ್ವದಿಸಲ್ಪಡಲಿ. ನಾನು ರಕ್ತ ಚೆಲ್ಲುವದನ್ನೂ ನನ್ನ ಕೈಯಿಂದ ನಾನೇ ಮುಯ್ಯಿ ತೀರಿಸದಂತೆಯೂ ಈ ಹೊತ್ತು ನನ್ನನ್ನು ಆಟಂಕಪಡಿ ಸಿದ ನಿನಗೆ ಆಶೀರ್ವಾದವಾಗಲಿ. ನಿನಗೆ ಕೇಡು ಮಾಡದ ಹಾಗೆ ನನಗೆ ಆಟಂಕ ಮಾಡಿದ ಇಸ್ರಾ ಯೇಲಿನ ದೇವರಾದ ಕರ್ತನ ಜೀವದಾಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದೆ ಹೋಗಿದ್ದರೆ ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ ಅಂದನು. ಅವಳು ತನಗೆ ತಂದ ದ್ದನ್ನು ದಾವೀದನು ಅವಳ ಕೈಯಿಂದ ತಕ್ಕೊಂಡು ಅವಳಿಗೆ--ನೀನು ಸಮಾಧಾನವಾಗಿ ನಿನ್ನ ಮನೆಗೆ ಹೋಗು; ಇಗೋ, ನಾನು ನಿನ್ನ ಮಾತನ್ನು ಕೇಳಿ ನಿನ್ನ ವಿಜ್ಞಾಪನೆಯನ್ನು ಅಂಗೀಕರಿಸಿದೆನು ಅಂದನು. ತರುವಾಯ ಅಬೀಗೈಲಳು ನಾಬಾಲನ ಬಳಿಗೆ ಬಂದಾಗ ಇಗೋ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸ ಗೊಂಡಿತ್ತು. ಆದಕಾರಣ ಅವಳು ಉದಯವಾಗುವ ವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ ಹೆಚ್ಚಾದದ್ದ ನ್ನಾಗಲಿ ತಿಳಿಸಲಿಲ್ಲ. ಉದಯದಲ್ಲಿ ನಾಬಾಲನಿಗೆ ದ್ರಾಕ್ಷಾರಸದ ಅಮಲು ಇಳಿದಾಗ ಅವನ ಹೆಂಡತಿಯು ಈ ಮಾತುಗಳನ್ನು ಅವನಿಗೆ ತಿಳಿಸಲು ಏನಾಯಿತಂದರೆ, ಅವನ ಹೃದಯವು ಅವನಲ್ಲಿ ಸತ್ತು ಅವನು ಕಲ್ಲಿನ ಹಾಗಾದನು. ಹೆಚ್ಚು ಕಡಿಮೆ ಹತ್ತು ದಿವಸಗಳಾದ ತರುವಾಯ ಏನಾಯಿತಂದರೆ, ಕರ್ತನು ನಾಬಾಲನನ್ನು ಹೊಡೆದದ್ದರಿಂದ ಅವನು ಸತ್ತನು. ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ ತನ್ನ ಸೇವಕ ನನ್ನು ಕೇಡುಮಾಡಗೊಡದ ಹಾಗೆ ಆಟಂಕಿಸಿದ ಕರ್ತನು ಸ್ತುತಿ ಹೊಂದಲಿ; ಯಾಕಂದರೆ ಕರ್ತನು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದನು ಅಂದನು. ದಾವೀದನು ಅಬೀಗೈಲ ಳನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ಅವಳ ಸಂಗಡ ಮಾತನಾಡ ಕಳುಹಿಸಿದನು. ದಾವೀದನ ಸೇವಕರು ಕರ್ಮೆಲಿನಲ್ಲಿರುವ ಅಬೀಗೈಲಳ ಬಳಿಗೆ ಬಂದಾಗ ಅವಳಿಗೆ--ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿ ತಕ್ಕೊಳ್ಳುವದಕ್ಕಾಗಿ ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದನೆಂದು ಹೇಳಿದರು. ಆಗ ಅವಳು ಎದ್ದು ಬೋರಲು ಬಿದ್ದು--ಇಗೋ, ನಿನ್ನ ದಾಸಿ ನನ್ನ ಒಡೆ ಯನ ಸೇವಕರ ಪಾದಗಳನ್ನು ತೊಳೆಯುವ ಒಬ್ಬ ಸೇವಕಳಾಗಬೇಕು ಅಂದಳು. ಅಬೀಗೈಲಳು ಬೇಗನೆ ಎದ್ದು ಕತ್ತೆಯ ಮೇಲೆ ಹತ್ತಿಕೊಂಡು ತನ್ನ ಸಂಗಡ ಇರುವ ಐದು ಮಂದಿ ದಾಸಿಯರನ್ನು ಕರಕೊಂಡು ದಾವೀದನ ಸೇವಕರ ಹಿಂದೆ ಹೋಗಿ ಅವನಿಗೆ ಹೆಂಡತಿ ಯಾದಳು. ಇದಲ್ಲದೆ ದಾವೀದನು ಇಜ್ರೇಲು ಊರಿನವಳಾದ ಅಹೀನೋವಮಳನ್ನು ತಕ್ಕೊಂಡನು.ಅವರಿಬ್ಬರೂ ಅವನಿಗೆ ಹೆಂಡತಿಯರಾದರು.ಆದರೆ ಸೌಲನು ದಾವೀದನ ಹೆಂಡತಿಯಾದ ವಿಾಕಲಳೆಂಬ ತನ್ನ ಕುಮಾರ್ತೆಯನ್ನು ಗಲ್ಲೀಮ್ ಪಟ್ಟಣದ ಲಯಿಷನ ಮಗನಾದ ಪಲ್ಟೀಗೆ ಕೊಟ್ಟನು. ಆದರೆ ಸೌಲನು ದಾವೀದನ ಹೆಂಡತಿಯಾದ ವಿಾಕಲಳೆಂಬ ತನ್ನ ಕುಮಾರ್ತೆಯನ್ನು ಗಲ್ಲೀಮ್ ಪಟ್ಟಣದ ಲಯಿಷನ ಮಗನಾದ ಪಲ್ಟೀಗೆ ಕೊಟ್ಟನು.
- 1 Kings 21:27 1 ಅರಸುಗಳು 21:27ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ ಏನಾಯಿತಂದರೆ, ಅವನು ತನ್ನ ವಸ್ತ್ರಗಳನ್ನು ಹರಿದು ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು ಉಪವಾಸಮಾಡಿ ಗೋಣಿಯಲ್ಲಿ ಮಲಗಿಕೊಂಡು ಮೆಲ್ಲಗೆ ನಡೆದನು.