Skip to content
ThuthiThuthiThuthi
Ecclesiastes · chapter 4 of 12 · 16 verses

Ecclesiastes 4 in Kannada

ಪ್ರಸಂಗಿ 4

  1. ಹೀಗೆ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನಾನು ಯೋಚಿಸಿದೆನು; ಹಿಂಸಿಸಲ್ಪಟ್ಟವರ ಕಣ್ಣೀರನ್ನೂ ಅವರನ್ನು ಆದರಿಸುವವರು ಯಾರೂ ಇಲ್ಲದಿರುವ ದನ್ನೂ ನೋಡಿದೆನು; ಅವರನ್ನು ಹಿಂಸೆಪಡಿಸುವವರ ಕಡೆಗೆ ಶಕ್ತಿ ಇತ್ತು; ಆದರೆ ಇವರನ್ನು ಆದರಿಸುವವನು ಯಾವನೂ ಇಲ್ಲ.

    So I returned, and considered all the oppressions that are done under the sun: and behold the tears of [such as were] oppressed, and they had no comforter; and on the side of their oppressors [there was] power; but they had no comforter.

  2. ಆದಕಾರಣ ಇನ್ನೂ ಜೀವ ದಿಂದಿದ್ದು ಬದುಕುವವರಿಗಿಂತ ಆಗಲೇ ಮೃತಪಟ್ಟ ಸತ್ತವರನ್ನು ನಾನು ಹೆಚ್ಚಾಗಿ ಹೊಗಳಿದೆನು.

    Wherefore I praised the dead which are already dead more than the living which are yet alive.

  3. ಹೌದು, ಇನ್ನೂ ಹುಟ್ಟದೆ, ಸೂರ್ಯನ ಕೆಳಗೆ ನಡೆಯುವ ಕೆಟ್ಟ ಕೃತ್ಯವನ್ನು ನೋಡದಿರುವವನೇ ಇವರಿಬ್ಬರಿ ಗಿಂತಲೂ ಶ್ರೇಷ್ಠನು.

    Yea, better [is he] than both they, which hath not yet been, who hath not seen the evil work that is done under the sun.

  4. ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.

    Again, I considered all travail, and every right work, that for this a man is envied of his neighbour. This [is] also vanity and vexation of spirit.

  5. ಬುದ್ಧಿಹೀನನು ತನ್ನ ಕೈಗಳನ್ನು ಒಟ್ಟಿಗೆ ಮಡಚಿಕೊಂಡು ತನ್ನ ಸ್ವಂತ ಮಾಂಸವನ್ನು ತಿನ್ನುತ್ತಾನೆ.

    The fool foldeth his hands together, and eateth his own flesh.

  6. ಪ್ರಯಾಸದಿಂದಲೂ ಪ್ರಾಣಕ್ಕೆ ಆಯಾಸದಿಂದಲೂ ತುಂಬಿದ ಎರಡು ಕೈಗಳಿಂದಾದದ್ದಕಿಂತ ನೆಮ್ಮದಿಯಿಂದ ಕೂಡಿದ ಒಂದು ಕೈಯಿಂದಾದದ್ದೇ ಲೇಸು.

    Better [is] an handful [with] quietness, than both the hands full [with] travail and vexation of spirit.

  7. ಆಗ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ಇದ್ದ ವ್ಯರ್ಥವನ್ನು ಕಂಡೆನು.

    Then I returned, and I saw vanity under the sun.

  8. ಎರಡನೆಯವನಿಲ್ಲದ ಒಬ್ಬೊಂಟಿಗನು ಒಬ್ಬನಿದ್ದಾನೆ; ಹೌದು, ಅವನಿಗೆ ಮಗುವಾಗಲೀ ಸಹೋದರನಾಗಲೀ ಇಲ್ಲ; ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ಅಲ್ಲದೆ ಐಶ್ವರ್ಯ ದಿಂದ ಅವನ ಕಣ್ಣು ತೃಪ್ತಿಹೊಂದದು; ಮಾತ್ರವಲ್ಲದೆ ಅವನು--ನಾನು ಯಾರಿಗೋಸ್ಕರ ಕಷ್ಟಪಟ್ಟು ಪ್ರಾಣ ವನ್ನು ಅದಕ್ಕೆ ಸುಖವಿಲ್ಲದ ಹಾಗೆ ಕೊರೆತೆಪಡಿಸು ತ್ತೇನೆ; ಎಂದು ಅವನು ಅಂದುಕೊಳ್ಳುವನು. ಇದು ಕೂಡ ವ್ಯರ್ಥವೇ; ಹೌದು, ವ್ಯಥೆಯಿಂದಾದ ಪ್ರಯಾಸವೇ.

    There is one [alone], and [there is] not a second; yea, he hath neither child nor brother: yet [is there] no end of all his labour; neither is his eye satisfied with riches; neither [saith he], For whom do I labour, and bereave my soul of good? This [is] also vanity, yea, it [is] a sore travail.

  9. ಒಬ್ಬನಿಗಿಂತ ಇಬ್ಬರು ಲೇಸು; ತಮ್ಮ ಪ್ರಯಾಸಕ್ಕೆ ಅವರಿಗೆ ಒಳ್ಳೆಯ ಪ್ರತಿಫಲವಿದೆ.

    Two [are] better than one; because they have a good reward for their labour.

  10. ಒಬ್ಬನು ಬಿದ್ದರೆ ಇನ್ನೊಬ್ಬನು ತನ್ನ ಸಂಗಡಿಗನನ್ನು ಎತ್ತುವನು; ಅವನು ಒಬ್ಬೊಂಟಿಗನಾಗಿ ಬಿದ್ದರೆ ಅಯ್ಯೋ! ಅವನಿಗೆ ಸಹಾಯ ಮಾಡುವದಕ್ಕೆ ಇನ್ನೊಬ್ಬ ನಿಲ್ಲ.

    For if they fall, the one will lift up his fellow: but woe to him [that is] alone when he falleth; for [he hath] not another to help him up.

  11. ತಿರುಗಿ ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ; ಒಬ್ಬನು ಹೇಗೆ ಬೆಚ್ಚಗಾಗಿ ರುತ್ತಾನೆ?

    Again, if two lie together, then they have heat: but how can one be warm [alone]?

  12. ಅವನನ್ನು ಒಬ್ಬನು ಜಯಿಸಿದರೆ ಇಬ್ಬರು ಅವನನ್ನು ಎದುರಿಸುವರು; ಮೂರು ಹುರಿಯ ಹಗ್ಗವು ಬೇಗನೆ ಕಿತ್ತುಹೋಗುವದಿಲ್ಲ.

    And if one prevail against him, two shall withstand him; and a threefold cord is not quickly broken.

  13. ಬುದ್ಧಿಯ ಹೇಳಿಕೆಗೆ ಕಿವಿಗೊಡದ ಮುದುಕನೂ ಮೂಢನೂ ಆದ ಅರಸನಿಗಿಂತ ಬಡವನೂ ಜ್ಞಾನಿಯೂ ಆದ ಒಂದು ಮಗುವೇ ಮೇಲು.

    Better [is] a poor and a wise child than an old and foolish king, who will no more be admonished.

  14. ಸೆರೆ ಯಿಂದ ಆಳುವದಕ್ಕಾಗಿ ಅವನು ಬರುತ್ತಾನೆ; ಇದಲ್ಲದೆ, ತನ್ನ ರಾಜ್ಯದಲ್ಲಿ ಹುಟ್ಟಿದವನು ಬಡವನಾಗುತ್ತಾನೆ.

    For out of prison he cometh to reign; whereas also [he that is] born in his kingdom becometh poor.

  15. ತನಗೆ ಪ್ರತಿಯಾಗಿ ನಿಲ್ಲುವ ಎರಡನೆಯ ಮಗು ವಿನೊಂದಿಗೆ ನಡೆಯುವ ಜೀವಿತರನ್ನೆಲ್ಲಾ ಸೂರ್ಯನ ಕೆಳಗೆ ನಾನು ನೋಡಿದೆನು.ಎಲ್ಲಾ ಜನರಿಗೂ ಅವರಿಗಿಂತ ಮುಂಚೆ ಇದ್ದ ಎಲ್ಲವುಗಳಿಗೂ ಅಂತ್ಯವಿಲ್ಲ; ಅವನ ತರುವಾಯ ಬರುವವನು ಸಹ ಅವನಲ್ಲಿ ಆನಂದಿಸುವದಿಲ್ಲ. ಖಂಡಿತವಾಗಿಯೂ ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.

    I considered all the living which walk under the sun, with the second child that shall stand up in his stead.

  16. ಎಲ್ಲಾ ಜನರಿಗೂ ಅವರಿಗಿಂತ ಮುಂಚೆ ಇದ್ದ ಎಲ್ಲವುಗಳಿಗೂ ಅಂತ್ಯವಿಲ್ಲ; ಅವನ ತರುವಾಯ ಬರುವವನು ಸಹ ಅವನಲ್ಲಿ ಆನಂದಿಸುವದಿಲ್ಲ. ಖಂಡಿತವಾಗಿಯೂ ಇದೂ ಕೂಡ ವ್ಯರ್ಥವೂ ಮನಸ್ಸಿಗೆ ಆಯಾಸಕರವೂ ಆಗಿದೆ.

    [There is] no end of all the people, [even] of all that have been before them: they also that come after shall not rejoice in him. Surely this also [is] vanity and vexation of spirit.

All chapters of Ecclesiastes · Kannada Bible · Ecclesiastes 4 in Tamil

Kannada Bible: Kannada Old Version, public domain.

King James Version: public domain.