Ecclesiastes · chapter 4 · verse 3
Ecclesiastes 4:3 in Kannada
ಹೌದು, ಇನ್ನೂ ಹುಟ್ಟದೆ, ಸೂರ್ಯನ ಕೆಳಗೆ ನಡೆಯುವ ಕೆಟ್ಟ ಕೃತ್ಯವನ್ನು ನೋಡದಿರುವವನೇ ಇವರಿಬ್ಬರಿ ಗಿಂತಲೂ ಶ್ರೇಷ್ಠನು.
Haudu, innoo huttade, sooryana kelage nadeyuva ketta krutyavannu nodadiruvavane ivaribbari gintaloo shreshthanu.
Ecclesiastes 4:3 in English
- King James Version (KJV)
- Yea, better [is he] than both they, which hath not yet been, who hath not seen the evil work that is done under the sun.
- World English Bible (WEB)
- Yes, better than them both is him who has not yet been, who has not seen the evil work that is done under the sun.
- American Standard Version (ASV)
- yea, better than them both [did I esteem] him that hath not yet been, who hath not seen the evil work that is done under the sun.
- Bible in Basic English (BBE)
- Yes, happier than the dead or the living seemed he who has not ever been, who has not seen the evil which is done under the sun.
- Darby Translation (DBY)
- and more fortunate than both is he who hath not yet been, who hath not seen the evil work that is done under the sun.
- Webster's Bible (WBS)
- Yes, better is [he] than both they, who hath not yet been, who hath not seen the evil work that is done under the sun.
- Young's Literal Translation (YLT)
- And better than both of them [is] he who hath not yet been, in that he hath not seen the evil work that hath been done under the sun.
Read in context
- 1ಹೀಗೆ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನಾನು ಯೋಚಿಸಿದೆನು; ಹಿಂಸಿಸಲ್ಪಟ್ಟವರ ಕಣ್ಣೀರನ್ನೂ ಅವರನ್ನು ಆದರಿಸುವವರು ಯಾರೂ ಇಲ್ಲದಿರುವ ದನ್ನೂ ನೋಡಿದೆನು; ಅವರನ್ನು ಹಿಂಸೆಪಡಿಸುವವರ ಕಡೆಗೆ ಶಕ್ತಿ ಇತ್ತು; ಆದರೆ ಇವರನ್ನು ಆದರಿಸುವವನು ಯಾವನೂ ಇಲ್ಲ.
- 2ಆದಕಾರಣ ಇನ್ನೂ ಜೀವ ದಿಂದಿದ್ದು ಬದುಕುವವರಿಗಿಂತ ಆಗಲೇ ಮೃತಪಟ್ಟ ಸತ್ತವರನ್ನು ನಾನು ಹೆಚ್ಚಾಗಿ ಹೊಗಳಿದೆನು.
- 3ಹೌದು, ಇನ್ನೂ ಹುಟ್ಟದೆ, ಸೂರ್ಯನ ಕೆಳಗೆ ನಡೆಯುವ ಕೆಟ್ಟ ಕೃತ್ಯವನ್ನು ನೋಡದಿರುವವನೇ ಇವರಿಬ್ಬರಿ ಗಿಂತಲೂ ಶ್ರೇಷ್ಠನು.
- 4ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
- 5ಬುದ್ಧಿಹೀನನು ತನ್ನ ಕೈಗಳನ್ನು ಒಟ್ಟಿಗೆ ಮಡಚಿಕೊಂಡು ತನ್ನ ಸ್ವಂತ ಮಾಂಸವನ್ನು ತಿನ್ನುತ್ತಾನೆ.
Cross references
- Luke 23:29 ಲೂಕನು 23:29ಯಾಕಂದರೆ--ಇಗೋ, ಬಂಜೆಯರೂ ಎಂದಿಗೂ ಗರ್ಭಿಣಿಯಾಗದವರೂ ಎಂದಿಗೂ ಮೊಲೆ ಕುಡಿಸದವರೂ ಧನ್ಯರು ಎಂದು ಹೇಳುವ ದಿವಸಗಳು ಬರುತ್ತವೆ.
- Matthew 24:19 ಮತ್ತಾಯನು 24:19ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಕೂಸುಗಳಿದ್ದ ವರಿಗೂ ಅಯ್ಯೋ!
- Ecclesiastes 6:3–5 ಪ್ರಸಂಗಿ 6:3–5ತನ್ನ ವರುಷಗಳ ದಿನಗಳು ಬಹಳವಾಗಿದ್ದು ತನ್ನ ಪ್ರಾಣವು ಸುಖದಿಂದ ತೃಪ್ತಿ ಪಡದೆ ತನಗೆ ಹೂಣಿಡುವಿಕೆಯು ಇಲ್ಲದೇ ಅವನು ನೂರು ಮಕ್ಕಳನ್ನು ಪಡೆದು ಅನೇಕ ವರುಷಗಳು ಬದುಕಿದರೆ ನಾನು ಹೇಳುವದೇನಂದರೆ, ಅವನಿ ಗಿಂತಲೂ ಇನ್ನು ಹುಟ್ಟದಿರುವವನೇ ಉತ್ತಮ. ಅವನು ವ್ಯರ್ಥದಿಂದ ಬಂದು ಕತ್ತಲೆಯಲ್ಲಿ ಹೊರಟು ಹೋಗು ತ್ತಾನೆ; ಅವನ ಹೆಸರು ಕತ್ತಲೆಯಿಂದ ಮುಚ್ಚಲ್ಪಡುವದು. ಇದಲ್ಲದೆ ಅವನು ಸೂರ್ಯನನ್ನು ನೋಡಲಿಲ್ಲ, ಯಾವದನ್ನು ಅರಿತಿರಲಿಲ್ಲ; ಮತ್ತೊಬ್ಬನಿಗಿಂತ ಇದಕ್ಕೆ ಹೆಚ್ಚಿನ ವಿಶ್ರಾಂತಿ ಇದೆ.
- Ecclesiastes 2:17 ಪ್ರಸಂಗಿ 2:17ಆದಕಾರಣ ಜೀವವನ್ನು ನಾನು ಹಗೆಮಾಡಿದೆನು; ಸೂರ್ಯನ ಕೆಳಗೆ ನಡೆಯುವ ಕಾರ್ಯವು ವ್ಯಥೆಯಾಗಿ ನನಗೆ ತೋರಿತು; ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕ ರವೂ ಆಗಿವೆ.
- Job 3:10–16 ಯೋಬನು 3:10–16ಅದು ನನ್ನ ತಾಯಿಯ ಗರ್ಭದ ಬಾಗಲನ್ನು ಮುಚ್ಚಲಿಲ್ಲ; ದುಃಖವನ್ನು ನನ್ನ ಕಣ್ಣುಗಳಿಗೆ ಮರೆಮಾಡಲಿಲ್ಲ. ನಾನು ಗರ್ಭ ಬಿಟ್ಟಾಗಲೇ ಯಾಕೆ ಸಾಯಲಿಲ್ಲ? ಹೊಟ್ಟೆಯೊಳಗಿಂದ ಹೊರಟಾಗಲೇ ಯಾಕೆ ಪ್ರಾಣ ಬಿಡಲಿಲ್ಲ? ಮೊಣಕಾಲುಗಳು ನನ್ನನ್ನು ತಡೆಯದಿ ದ್ದದ್ದೇಕೆ? ನಾನು ಕುಡಿಯುವ ಹಾಗೆ ಮೊಲೆಗಳು ಯಾಕೆ? ಹಾಗಾಗಿದ್ದರೆ ಈಗ ಮೌನವಾಗಿ ಮಲಗಿ ಕೊಳ್ಳುತ್ತಿದ್ದೆನು; ವಿಶ್ರಾಂತಿಯಲ್ಲಿರುತ್ತಿದ್ದೆನು. ತಮಗೆ ಹಾಳಾದ ಸ್ಥಳಗಳನ್ನು ಕಟ್ಟುವ ಅರಸುಗಳ ಸಂಗಡಲೂ; ಭೂಮಿಯ ಸಲಹೆಗಾರರ ಸಂಗಡಲೂ ಇಲ್ಲವೆ ಬಂಗಾರ ಇರುವ ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸುವಂಥ ಪ್ರಧಾನರ ಸಂಗಡ ಆಗಲೇ ನನಗೆ ಶಾಂತಿಯಾಗಿರುವದು. ಇಲ್ಲವೆ ಮರೆಯಾದ ಗರ್ಭ ಪತನದ ಹಾಗೆಯೂ ಬೆಳಕನ್ನು ನೋಡದ ಕೂಸುಗಳ ಹಾಗೆಯೂ ಇಲ್ಲದೆ ಇರುವೆನು.
- Jeremiah 9:2–3 ಯೆರೆಮೀಯ 9:2–3ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ. ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ.
- Job 10:18–19 ಯೋಬನು 10:18–19ಹಾಗಾದರೆ ಯಾಕೆ ನನ್ನನ್ನು ಗರ್ಭದಿಂದ ಹೊರಡ ಮಾಡಿದಿ? ಯಾವ ಕಣ್ಣು ನನ್ನನ್ನು ನೋಡದ ಹಾಗೆ ನಾನು ಸತ್ತಿದ್ದರೆ ಎಷ್ಟೋ ಒಳ್ಳೆಯದಾಗಿತ್ತು. ನಾನು ಇರದವನಂತಿದ್ದು ಗರ್ಭದೊಳಗಿಂದಲೇ ಸಮಾಧಿ ಸೇರುತ್ತಿದ್ದೆನು.
- Jeremiah 20:17–18 ಯೆರೆಮೀಯ 20:17–18ನಾನು ಗರ್ಭಬಿಟ್ಟಾ ಗಲೇ ಆತನು ನನ್ನನ್ನು ಕೊಲ್ಲದೆ ಹೋದದ್ದರಿಂದ ಇಲ್ಲವೆ ನನ್ನ ತಾಯಿ ನನಗೆ ಸಮಾಧಿಯಾಗಿದ್ದು ಅವಳ ಗರ್ಭವು ನಿತ್ಯವಾಗಿ ಬಸುರಾಗಿಯೇ ಇದ್ದರೆ ಒಳ್ಳೇದಾ ಗಿತ್ತು.ನಾನು ಕಷ್ಟವನ್ನೂ ಚಿಂತೆಯನ್ನೂ ನೋಡುವ ದಕ್ಕೂ ನನ್ನ ದಿನಗಳು ನಾಚಿಕೆಯಲ್ಲಿ ಕಳೆದುಹೋಗು ವದಕ್ಕೂ ಗರ್ಭದಿಂದ ಹೊರಗೆ ಬಂದದ್ದು ಯಾಕೆ? ನಾನು ಕಷ್ಟವನ್ನೂ ಚಿಂತೆಯನ್ನೂ ನೋಡುವ ದಕ್ಕೂ ನನ್ನ ದಿನಗಳು ನಾಚಿಕೆಯಲ್ಲಿ ಕಳೆದುಹೋಗು ವದಕ್ಕೂ ಗರ್ಭದಿಂದ ಹೊರಗೆ ಬಂದದ್ದು ಯಾಕೆ?
- Job 3:22 ಯೋಬನು 3:22ಸಮಾಧಿ ಕಂಡುಕೊಂಡೆವೆಂದು ಸಂತೋಷ ಸಂಭ್ರಮವಾಗಿ ಹರ್ಷಿಸುವವರಿಗೂ
- Psalm 55:6–11 ಕೀರ್ತನೆಗಳು 55:6–11ನನಗೆ ಪಾರಿವಾಳದಂತೆ ರೆಕ್ಕೆಗಳಿರುತ್ತಿದ್ದರೆ ಹಾರಿ ಹೋಗಿ ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಿದ್ದೆನು ಎಂದು ಅಂದುಕೊಂಡೆನು. ಇಗೋ, ದೂರದ ಅರ ಣ್ಯಕ್ಕೆ ಅಲೆದಾಡುತ್ತಾ ಹೋಗಿ ತಂಗುವೆನು. ಸೆಲಾ. ಗಾಳಿಯ ತುಫಾನಿಗೂ ಬಿರುಗಾಳಿಗೂ ತಪ್ಪಿಸಿಕೊಳ್ಳಲು ತ್ವರೆಪಡುವೆನು. ಓ ಕರ್ತನೇ, (ಅವರನ್ನು) ನಾಶಮಾಡು. ಅವರ ನಾಲಿಗೆಗಳನ್ನು ಭೇದಿಸು; ಯಾಕಂದರೆ ಬಲಾತ್ಕಾರ ವನ್ನೂ ವಿವಾದವನ್ನೂ ಪಟ್ಟಣದಲ್ಲಿ ನಾನು ನೋಡಿ ದ್ದೇನೆ; ಹಗಲು ಇರುಳು ಅದರ ಗೋಡೆಗಳ ಮೇಲೆ ಅವರು ಸುತ್ತುತ್ತಾರೆ; ಕೇಡೂ ದುಃಖವೂ ಅವರ ಮಧ್ಯದಲ್ಲಿದೆ; ದುಷ್ಟತನವು ಅದರ ಮಧ್ಯ ದಲ್ಲಿದೆ; ಅದರ ಬೀದಿಗಳೊಳಗಿಂದ ಮೋಸವೂ ವಂಚನೆಯೂ ತೊಲಗುವದಿಲ್ಲ.
- Ecclesiastes 1:14 ಪ್ರಸಂಗಿ 1:14ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ.