Ecclesiastes · chapter 5 · verse 9
Ecclesiastes 5:9 in Kannada
ಇದಲ್ಲದೆ ಭೂಮಿಯ ಲಾಭವು ಎಲ್ಲರಿಗೂ ಇದೆ; ಭೂಮಿಯಿಂದಲೇ ಅರಸನಿಗೆ ಸೇವೆ ಯಾಗುತ್ತದೆ.
Idallade bhoomiya laabhavu ellarigoo ide; bhoomiyindale arasanige seve yaaguttade.
Ecclesiastes 5:9 in English
- King James Version (KJV)
- Moreover the profit of the earth is for all: the king [himself] is served by the field.
- World English Bible (WEB)
- Moreover the profit of the earth is for all. The king profits from the field.
- American Standard Version (ASV)
- Moreover the profit of the earth is for all: the king [himself] is served by the field.
- Bible in Basic English (BBE)
- It is good generally for a country where the land is worked to have a king.
- Darby Translation (DBY)
- Moreover the earth is every way profitable: the king [himself] is dependent upon the field.
- Webster's Bible (WBS)
- Moreover, the profit of the earth is for all: the king [himself] is served by the field.
- Young's Literal Translation (YLT)
- And the abundance of a land is for all. A king for a field is served.
Read in context
- 7ಬಹು ಕನಸುಗಳಲ್ಲಿ ಬಹಳ ಮಾತುಗಳಲ್ಲಿ ವಿಧವಿಧವಾದ ವ್ಯರ್ಥವಾದವುಗಳು ಇವೆ; ನೀನು ದೇವರಿಗೆ ಭಯಪಡು.
- 8ಬಡವರ ಹಿಂಸೆಯನ್ನೂ ಒಬ್ಬ ಅಧಿಪತಿಯಲ್ಲಿ ನೀತಿ ನ್ಯಾಯಗಳ ಬಲಾತ್ಕಾರದ ವಕ್ರತೆಯನ್ನೂ ನೀನು ನೋಡಿದರೆ ಆ ಸಂಗತಿಯಲ್ಲಿ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷಿಸುತ್ತಾನೆ; ಅವರಿಗಿಂತ ಉನ್ನತವಾ ದವರು ಇದ್ದಾರೆ.
- 9ಇದಲ್ಲದೆ ಭೂಮಿಯ ಲಾಭವು ಎಲ್ಲರಿಗೂ ಇದೆ; ಭೂಮಿಯಿಂದಲೇ ಅರಸನಿಗೆ ಸೇವೆ ಯಾಗುತ್ತದೆ.
- 10ಬೆಳ್ಳಿಯನ್ನು ಪ್ರೀತಿಸುವವನು ಬೆಳ್ಳಿಯಿಂದ ತೃಪ್ತ ನಾಗನು; ಸಮೃದ್ಧಿಯನ್ನು ಪ್ರೀತಿಸುವವನು ಅಭಿವೃದ್ಧಿ ಯಿಂದ ತೃಪ್ತನಾಗಲಾರನು; ಇದೂ ಕೂಡ ವ್ಯರ್ಥವೇ.
- 11ಸೊತ್ತುಗಳು ಹೆಚ್ಚಿದರೆ ಅದನ್ನು ತಿನ್ನುವವರು ಹೆಚ್ಚಾ ಗುವರು; ಅವುಗಳನ್ನು ತಮ್ಮ ಕಣ್ಣುಗಳಿಂದ ನೋಡು ವದೇ ಹೊರತು ಅವುಗಳ ಸ್ವಂತದವರಿಗೆ ಯಾವ ಪ್ರಯೋಜನವಿದೆ?
Cross references
- 1 Kings 4:7–23 1 ಅರಸುಗಳು 4:7–23ಇದಲ್ಲದೆ ಅರಸನಿಗೂ ಅವನ ಮನೆಗೂ ಆಹಾರವನ್ನು ಸಿದ್ಧಮಾಡಿಸುವದಕ್ಕೊಸ್ಕರ ಸೊಲೊಮೋನನಿಗೆ ಸಮಸ್ತ ಇಸ್ರಾಯೇಲಿನ ಮೇಲೆ ಹನ್ನೆರಡು ಮಂದಿ ಅಧಿಪತಿಗಳಿದ್ದರು. ಅವನವನು ವರುಷದಲ್ಲಿ ತನ್ನ ವಂತಿನ ತಿಂಗಳು ಬಂದಾಗ ಆಹಾರವನ್ನು ಸಿದ್ಧಮಾಡಿ ದನು. ಅವರ ಹೆಸರುಗಳೇನಂದರೆ, ಎಫ್ರಾಯಾಮಿನ ಬೆಟ್ಟದಲ್ಲಿ ಹೂರನ ಮಗನು; ಮಾಕಚ್, ಶಾಲ್ಬೀಮ್, ಬೇತ್ಷೆಮೆಷ್, ಏಲೋನ್, ಬೆತ್ಹಾನಾನ್, ಇವುಗಳಲ್ಲಿ ದೆಕೆರ ಮಗನು. ಅರುಬ್ಬೋತಿನಲ್ಲಿ ಹೆಸದನ ಮಗನು; ಅವನಿಗೆ ಸೋಕೋಹೇಫೆರ್ ಸಮಸ್ತ ದೇಶವೂ ಇದ್ದವು. ದೋರಿನ ಸಮಸ್ತ ದೇಶದಲ್ಲಿ ಅಬೀನಾದಾಬನ ಮಗನು, ಇವನಿಗೆ ಸೊಲೊಮೋ ನನ ಮಗಳಾದ ಟಾಫತಳು ಹೆಂಡತಿಯಾಗಿದ್ದಳು. ತಾಣಕವು ಮೆಗಿದ್ದೋನು ಎಂಬವುಗಳಲ್ಲಿ ಅಹೀ ಲೂದನ ಮಗನಾದ ಬಾಣನು, ಅವನಿಗೆ ಚಾರೆತಾನ ಬಳಿಯಲ್ಲಿ ಇಜ್ರೇಲಿನ ಕೆಳಗಿರುವ ಸಮಸ್ತ ಬೇತ್ಷೆ ಯಾನ್; ಬೇತ್ಷೆಯಾನ್ ಮೊದಲುಗೊಂಡು ಅಬೇಲ್ ಮೆಹೋಲವನ್ನು ಹಾದು ಯೊಕ್ಮೆಯಾನಿನ ಆಚೆ ವರೆಗೂ ಇತ್ತು. ರಾಮೋತು ಗಿಲ್ಯಾದಿನಲ್ಲಿ ಗೇಬೆರ್ನ ಮಗನು, ಅವನಿಗೆ ಗಿಲ್ಯಾದಿನಲ್ಲಿರುವ ಮನಸ್ಸೆಯ ಮಗನಾದ ಯಾಯಾರನ ಊರುಗಳೂ ಬಾಷಾನಿ ನಲ್ಲಿರುವ ಅರ್ಗೋಬು ದೇಶವೂ ಇತ್ತು; ಅದರಲ್ಲಿ ಹಿತ್ತಾಳೆಯ ಅಗುಳಿಗಳೂ ಗೋಡೆಗಳೂ ಉಳ್ಳ ಅರುವತ್ತು ದೊಡ್ಡ ಪಟ್ಟಣಗಳಿದ್ದವು. ಮಹನಯಿಮಿನಲ್ಲಿ ಇದ್ದೋನನ ಮಗನಾದ ಅಹೀನಾದಾಬನು. ನಫ್ತಾಲಿಯಲ್ಲಿ ಅಹೀಮಾಚನು; ಅವನಿಗೆ ಸೊಲೊ ಮೋನನ ಮಗಳಾದ ಬಾಸೆಮತಳು ಹೆಂಡತಿಯಾಗಿದ್ದಳು. ಆಶೇರನಲ್ಲಿಯೂ ಅಲೋತಿ ನಲ್ಲಿಯೂ ಹೂಷೈಯನ ಮಗನಾದ ಬಾಣನು; ಇಸ್ಸಕಾರನಲ್ಲಿ ಫಾರೂಹನ ಮಗನಾದ ಯೆಹೋ ಷಾಫಾಟನು; ಬೆನ್ಯಾವಿಾನಿನಲ್ಲಿ ಏಲನ ಮಗನಾದ ಶಿವ್ಮೆಾಯು. ಗಿಲ್ಯಾದಿನ ದೇಶದಲ್ಲಿಯೂ ಅಮೋ ರಿಯರ ಅರಸನಾದ ಸೀಹೋನನ ದೇಶದಲ್ಲಿಯೂ ಬಾಷಾನಿನ ಅರಸನಾದ ಓಗನ ದೇಶದಲ್ಲಿಯೂ ಉರೀಯನ ಮಗನಾದ ಗೆಬೆರ್ನು, ಅವನೊಬ್ಬನೇ ಆ ದೇಶಕ್ಕೆ ಅಧಿಪತಿಯಾಗಿದ್ದನು. ಯೆಹೂದ ಮತ್ತು ಇಸ್ರಾಯೇಲ್ಯರು ತಿನ್ನುತ್ತಾ ಕುಡಿಯುತ್ತಾ ಸಂತೋಷಪಡುತ್ತಾ ಸಮುದ್ರದ ಬಳಿಯಲ್ಲಿರುವ ಮರಳಿನ ಹಾಗೆ ಹೆಚ್ಚಾಗಿದ್ದರು. ಇದಲ್ಲದೆ ಸೊಲೊಮೋನನು ನದಿ ಮೊದಲು ಗೊಂಡು ಫಿಲಿಷ್ಟಿಯರ ದೇಶವನ್ನು ಹಾದು ಐಗುಪ್ತದ ಮೇರೆಯ ವರೆಗೂ ಇರುವ ಸಮಸ್ತ ರಾಜ್ಯಗಳ ಮೇಲೆ ಆಳುತ್ತಿದ್ದನು. ಆ ರಾಜ್ಯಗಳವರು ಸೊಲೊಮೋನನು ಜೀವಿಸಿರುವ ದಿವಸಗಳಲ್ಲೆಲ್ಲಾ ಕಾಣಿಕೆಗಳನ್ನು ತಂದು ಅವನನ್ನು ಸೇವಿಸುತ್ತಾ ಇದ್ದರು. ಸೊಲೊಮೋನನ ಒಂದು ದಿನದ ಭೋಜನ ವೇನಂದರೆ--ನಯವಾದ ಹಿಟ್ಟು ಮೂವತ್ತು ಅಳತೆ, ಹಿಟ್ಟು ಅರವತ್ತು ಅಳತೆ, ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಮೇಯುವ ಎತ್ತುಗಳು, ನೂರು ಕುರಿಗಳು; ಇವುಗಳ ಹೊರತಾಗಿ ದುಪ್ಪಿಗಳೂ ಜಿಂಕೆಗಳೂ ಕೆಂದ ಜಿಂಕೆಗಳೂ ಕೊಬ್ಬಿದ ಕೋಳಿಗಳೂ
- Psalm 115:16 ಕೀರ್ತನೆಗಳು 115:16ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ.
- Genesis 1:29–30 ಆದಿಕಾಂಡ 1:29–30ದೇವರು--ಇಗೋ, ಸಮಸ್ತ ಭೂಮಿಯ ಮೇಲೆ ಇರುವ ಬೀಜವುಳ್ಳ ಪ್ರತಿಯೊಂದು ಪಲ್ಯವನ್ನೂ ಬೀಜಬಿಡುವ ಪ್ರತಿಯೊಂದು ಹಣ್ಣಿನ ಮರವನ್ನೂ ನಿಮಗೆ ಕೊಟ್ಟಿದ್ದೇನೆ. ಅದು ನಿಮಗೆ ಆಹಾರಕ್ಕಾಗಿ ರುವದು. ಇದಲ್ಲದೆ ನಾನು ಭೂಮಿಯ ಪ್ರತಿ ಯೊಂದು ಮೃಗಕ್ಕೂ ಆಕಾಶದ ಪ್ರತಿಯೊಂದು ಪಕ್ಷಿಗೂ ಭೂಮಿಯ ಮೇಲೆ ಹರಿದಾಡುವ ಜೀವವುಳ್ಳ ಪ್ರತಿ ಯೊಂದಕ್ಕೂ ಹಸುರಾದ ಪ್ರತಿಯೊಂದು ಪಲ್ಯವನ್ನು ಆಹಾರಕ್ಕಾಗಿ ಕೊಟ್ಟಿದ್ದೇನೆ ಅಂದನು; ಅದು ಹಾಗೆಯೇ ಆಯಿತು.ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.
- Psalm 104:14–15 ಕೀರ್ತನೆಗಳು 104:14–15ಆತನು ಪಶುಗಳಿಗೋಸ್ಕರ ಹುಲ್ಲನ್ನೂ ಮನುಷ್ಯನ ಸೇವೆ ಗೋಸ್ಕರ ಪಲ್ಯಗಳನ್ನೂ ಮೊಳಿಸುತ್ತಾನೆ; ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾನೆ. ದ್ರಾಕ್ಷಾರಸವು ಮನುಷ್ಯನ ಹೃದಯವನ್ನು ಸಂತೋಷ ಪಡಿಸುತ್ತದೆ; ಎಣ್ಣೆಯು ಅವನ ಮುಖವನ್ನು ಪ್ರಕಾ ಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಹೃದಯವನ್ನು ಬಲಪಡಿಸುತ್ತದೆ.
- 1 Samuel 8:12–17 1 ಸಮುವೇಲನು 8:12–17ಕೆಲ ವರು ಅವನ ರಥಗಳ ಮುಂದೆ ಓಡುವರು. ಸಾವಿರ ಜನಕ್ಕೆ ಅಧಿಪತಿಗಳಾಗಿಯೂ ಐವತ್ತು ಜನಕ್ಕೆ ಅಧಿಪತಿ ಗಳಾಗಿಯೂ ತನ್ನ ಭೂಮಿಯನ್ನು ಉಳುವವರಾ ಗಿಯೂ ತನ್ನ ಪೈರನ್ನು ಕೊಯ್ಯುವವರಾಗಿಯೂ ತನ್ನ ಯುದ್ಧದ ಆಯುಧಗಳನ್ನು ತನ್ನ ರಥದ ಸಾಮಾನು ಗಳನ್ನು ಮಾಡುವವರಾಗಿಯೂ ನೇಮಿಸುವನು. ಇದಲ್ಲದೆ ಅವನು ನಿಮ್ಮ ಕುಮಾರ್ತೆಯರನ್ನು ತೈಲ ಗಾರ್ತಿಗಳಾಗಿಯೂ ಅಡಿಗೆ ಮಾಡುವವರಾಗಿಯೂ ರೊಟ್ಟಿಸುಡುವವರಾಗಿಯೂ ಇಟ್ಟುಕೊಳ್ಳುವನು. ಅವನು ಉತ್ತಮವಾದ ನಿಮ್ಮ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಇಪ್ಪೇ ತೋಪುಗಳನ್ನೂ ತೆಗೆದು ಕೊಂಡು ತನ್ನ ಸೇವಕರಿಗೆ ಕೊಡುವನು. ನಿಮ್ಮ ಧಾನ್ಯಗಳಲ್ಲಿಯೂ ದ್ರಾಕ್ಷೇ ಫಲಗಳಲ್ಲಿಯೂ ಹತ್ತರಲ್ಲಿ ಒಂದನ್ನು ತೆಗೆದುಕೊಂಡು ತನ್ನ ಅಧಿಕಾರಿಗಳಿಗೂ ಸೇವಕರಿಗೂ ಕೊಡುವನು. ನಿಮ್ಮ ದಾಸದಾಸಿಯ ರನ್ನೂ ಉತ್ತಮ ಯೌವನಸ್ಥರನ್ನೂ ನಿಮ್ಮ ಕತ್ತೆಗಳನ್ನೂ ತಕ್ಕೊಂಡು ತನ್ನ ಕೆಲಸಕ್ಕೆ ಇಡುವನು. ಇದಲ್ಲದೆ ಅವನು ನಿಮ್ಮ ಕುರಿಗಳಲ್ಲಿ ಹತ್ತರಲ್ಲಿ ಒಂದನ್ನು ಆದು ಕೊಳ್ಳುವನು; ನೀವು ಅವನಿಗೆ ದಾಸರಾಗುವಿರಿ.
- Proverbs 27:23–27 ಜ್ಞಾನೋಕ್ತಿಗಳು 27:23–27ನಿನ್ನ ಹಿಂಡುಗಳ ಸ್ಥಿತಿಯನ್ನು ತಿಳಿದುಕೊಳ್ಳುವಂತೆ ಶ್ರದ್ಧೆವಹಿಸು; ನಿನ್ನ ಮಂದೆಗಳನ್ನು ಚೆನ್ನಾಗಿ ನೋಡಿಕೋ. ಐಶ್ವರ್ಯವು ಶಾಶ್ವತವಲ್ಲ; ಕಿರೀಟವು ಪ್ರತಿಯೊಂದು ವಂಶಾವಳಿಗೆ ಇರುತ್ತದೋ? ಹುಲ್ಲು ಕಾಣುತ್ತದೆ; ಹಸಿ ಹುಲ್ಲು ತನ್ನನ್ನೇ ತೋರುತ್ತದೆ, ಬೆಟ್ಟಗಳ ಸೊಪ್ಪು ಕೂಡಿಸಲ್ಪಡುತ್ತದೆ. ನಿನ್ನ ವಸ್ತ್ರಕ್ಕಾಗಿ ಕುರಿಮರಿಗಳು ಮತ್ತು ಹೊಲದ ಕ್ರಯಕ್ಕಾಗಿ ನಿನ್ನ ಆಡುಗಳು ಇವೆ.ನಿನ್ನ ಊಟಕ್ಕಾಗಿಯೂ ನಿನ್ನ ಮನೆಯವರ ಆಹಾರ ಕ್ಕಾಗಿಯೂ ನಿನ್ನ ದಾಸಿಯರ ಜೀವನಕ್ಕಾಗಿಯೂ ಆಡುಗಳ ಹಾಲು ಸಾಕಾಗುತ್ತದೆ. ನಿನ್ನ ಊಟಕ್ಕಾಗಿಯೂ ನಿನ್ನ ಮನೆಯವರ ಆಹಾರ ಕ್ಕಾಗಿಯೂ ನಿನ್ನ ದಾಸಿಯರ ಜೀವನಕ್ಕಾಗಿಯೂ ಆಡುಗಳ ಹಾಲು ಸಾಕಾಗುತ್ತದೆ.
- 1 Chronicles 27:26–31 1 ಪೂರ್ವಕಾಲವೃತ್ತಾಂತ 27:26–31ಹೊಲದಲ್ಲಿ ವ್ಯವಸಾಯ ಮಾಡುವ ಕೆಲಸದವರ ಮೇಲೆ ಕೆಲೂಬನ ಮಗನಾದ ಎಜ್ರೀಯು ಇದ್ದನು. ಬಹಳ ದ್ರಾಕ್ಷೇ ತೋಟಗಳ ಮೇಲೆ ರಾಮಾ ಊರಿನ ಶಿಮ್ಮನು ಇದ್ದನು; ಅಲೆಗೋಸ್ಕರ ದ್ರಾಕ್ಷೇ ತೋಟಗಳ ಫಲದ ಮೇಲೆ ಶಿಪ್ಮಿಯನಾದ ಜಬ್ದೀಯು ಇದ್ದನು. ತಗ್ಗಿನಲ್ಲಿರುವ ಇಪ್ಪೆ ಮರಗಳ ಮೇಲೆಯೂ ಅತ್ತಿ ಮರಗಳ ಮೇಲೆಯೂ ಗೆದೆರೂರಿನವನಾದ ಬಾಳ್ಹಾನಾನನು ಇದ್ದನು; ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷನು ಇದ್ದನು. ಶಾರೋನಿನಲ್ಲಿ ಮೇಯಿಸುವ ದನಗಳ ಮೇಲೆ ಶಾರೋನಿನವನಾದ ಶಿಟ್ರೈ ಇದ್ದನು; ತಗ್ಗುಗಳಲ್ಲಿರುವ ದನಗಳ ಮೇಲೆ ಅದ್ಲೈಯ ಮಗನಾದ ಶಾಫಾಟನು ಇದ್ದನು. ಒಂಟೆಗಳ ಮೇಲೆ ಇರುವವನು ಇಷ್ಮಾ ಯೇಲ್ಯನಾದ ಓಬೀಲನು; ಕತ್ತೆಗಳ ಮೇಲೆ ಇರುವ ವನು ಮೇರೊನೋತಿನವನಾದ ಯೆಹ್ದೆಯನು. ಕುರಿ ಮಂದೆಗಳ ಮೇಲೆ ಇರುವವನು ಹಗ್ರೀಯನಾದ ಯಾಜೀಜನು. ಇವೆರಲ್ಲರೂ ಅರಸನಾದ ದಾವೀದನ ಸ್ವಾಸ್ಥ್ಯದ ಮೇಲೆ ಪ್ರಧಾನರಾಗಿದ್ದರು.
- Jeremiah 40:10–12 ಯೆರೆಮೀಯ 40:10–12ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಕಸ್ದೀಯರ ಹತ್ತಿರ ಕಾದುಕೊಳ್ಳುವದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು; ಆದರೆ ನೀವು ದ್ರಾಕ್ಷಾ ರಸವನ್ನೂ ಹಣ್ಣುಗಳನ್ನೂ ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣ ಗಳಲ್ಲಿ ವಾಸವಾಗಿರಿ. ಹಾಗೆಯೇ ಮೋವಾಬಿನ ಲ್ಲಿಯೂ ಅಮ್ಮೋನ್ಯನ ಮಕ್ಕಳಲ್ಲಿಯೂ ಎದೋಮ್ನ ಲ್ಲಿಯೂ ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆ ಲ್ಲರೂ ಬಾಬೆಲಿನ ಅರಸನು ಯೆಹೂದದ ಶೇಷವನ್ನು ಬಿಟ್ಟಿದ್ದಾನೆಂದೂ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನನ್ನು ಅವರ ಮೇಲೆ ಇಟ್ಟಿದ್ದಾ ನೆಂದು ಕೇಳಿದಾಗ ಯೆಹೂದ್ಯರೆಲ್ಲರೂ ಅವರು ಓಡಿಸ ಲ್ಪಟ್ಟ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಕೂಡಿಸಿದರು.
- Proverbs 28:19 ಜ್ಞಾನೋಕ್ತಿಗಳು 28:19ತನ್ನ ಭೂಮಿಯನ್ನು ವ್ಯವಸಾಯ ಮಾಡುವ ವನಿಗೆ ಸಮೃದ್ಧಿಯಾದ ರೊಟ್ಟಿ ಇರುವದು; ಆದರೆ ವ್ಯರ್ಥ ಜನರನ್ನು ಹಿಂಬಾಲಿಸುವವನಿಗೆ ಸಾಕಾದಷ್ಟು ಬಡತನವು ಇರುವದು.
- Proverbs 13:23 ಜ್ಞಾನೋಕ್ತಿಗಳು 13:23ಬಡವರಿಗೆ ಭೂಮಿಯ ಸಾಗುವಳಿಯಲ್ಲಿ ಬಹಳ ಆಹಾರವು ಸಿಕ್ಕುತ್ತದೆ; ನ್ಯಾಯ ತೀರ್ಪಿನ ಕೊರತೆಯಿಂದ ಹಾಳಾಗುವದು ಉಂಟು.
- Genesis 3:17–19 ಆದಿಕಾಂಡ 3:17–19ಆದಾಮನಿಗೆ ಆತನು--ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ತಿನ್ನಬಾರದೆಂದು ನಾನು ನಿನ ಆಜ್ಞಾಪಿಸಿದ ಮರದ ಫಲವನ್ನು ತಿಂದಕಾರಣ ನಿನ್ನ ನಿಮಿತ್ತ ಭೂಮಿಯು ಶಪಿಸಲ್ಪಟ್ಟಿದೆ; ನಿನ್ನ ಜೀವನದ ದಿನಗಳಲ್ಲೆಲ್ಲಾ ದುಃಖದಲ್ಲೇ ನೀನು ಅದರ ಫಲವನ್ನು ತಿನ್ನುವಿ. ಇದಲ್ಲದೆ ಭೂಮಿಯು ಮುಳ್ಳುಗಳನ್ನೂ ದತ್ತೂರಿಗಳನ್ನೂ ನಿನಗಾಗಿ ಬೆಳೆಯುವದು. ನೀನು ಹೊಲದ ಪಲ್ಯವನ್ನು ತಿನ್ನುವಿ. ನೀನು ಮಣ್ಣಿಗೆ ತಿರುಗುವ ವರೆಗೆ ನಿನ್ನ ಹಣೆಯ ಬೆವರನ್ನು ಸುರಿಸಿ ರೊಟ್ಟಿಯನ್ನು ತಿನ್ನುವಿ. ಯಾಕಂದರೆ ನೀನು ಅದ ರೊಳಗಿಂದ ಅಂದರೆ (ಮಣ್ಣಿನೊಳಗಿಂದ) ತೆಗೆಯ ಲ್ಪಟ್ಟೆ; ನೀನು ಮಣ್ಣಾಗಿದ್ದಿ, ಮಣ್ಣಿಗೆ ತಿರುಗಿಕೊಳ್ಳುವಿ ಅಂದನು.