Ecclesiastes · chapter 7 · verse 10
Ecclesiastes 7:10 in Kannada
ಹಿಂದಿನ ದಿವಸಗಳು ಈ ದಿವಸಗಳಿಗಿಂತ ಮೇಲಾ ಗಿರುವದಕ್ಕಾಗಿ ಕಾರಣವೇನು ಎಂದು ನೀನು ಹೇಳ ಬೇಡ. ಈ ವಿಷಯದಲ್ಲಿ ನೀನು ಜ್ಞಾನದಿಂದ ವಿಚಾರಿ ಸುವದಿಲ್ಲ.
Hindina divasagalu ee divasagaliginta melaa giruvadakkaagi kaaranavenu endu neenu hela beda. Ee vishayadalli neenu jnyaanadinda vichaari suvadilla.
Ecclesiastes 7:10 in English
- King James Version (KJV)
- Say not thou, What is [the cause] that the former days were better than these? for thou dost not enquire wisely concerning this.
- World English Bible (WEB)
- Don’t say, “Why were the former days better than these?” For you do not ask wisely about this.
- American Standard Version (ASV)
- Say not thou, What is the cause that the former days were better than these? for thou dost not inquire wisely concerning this.
- Bible in Basic English (BBE)
- Say not, Why were the days which have gone by better than these? Such a question comes not from wisdom.
- Darby Translation (DBY)
- Say not, How is it that the former days were better than these? for thou dost not inquire wisely concerning this.
- Webster's Bible (WBS)
- Say not thou, What is [the cause] that the former days were better than these? for thou dost not inquire wisely concerning this.
- Young's Literal Translation (YLT)
- Say not thou, 'What was it, That the former days were better than these?' For thou hast not asked wisely of this.
Read in context
- 8ಒಂದು ಸಂಗತಿಯ ಪ್ರಾರಂಭ ಕ್ಕಿಂತ ಅದರ ಅಂತ್ಯವೇ ಲೇಸು; ಆತ್ಮದಲ್ಲಿ ಗರ್ವಿಷ್ಠ ನಿಗಿಂತ ತಾಳ್ಮೆಯುಳ್ಳವನೇ ಉತ್ತಮ.
- 9ಕೋಪಿಸಿಕೊಳ್ಳು ವದಕ್ಕೆ ನಿನ್ನ ಮನಸ್ಸಿನಲ್ಲಿ ಆತುರಪಡದಿರು; ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.
- 10ಹಿಂದಿನ ದಿವಸಗಳು ಈ ದಿವಸಗಳಿಗಿಂತ ಮೇಲಾ ಗಿರುವದಕ್ಕಾಗಿ ಕಾರಣವೇನು ಎಂದು ನೀನು ಹೇಳ ಬೇಡ. ಈ ವಿಷಯದಲ್ಲಿ ನೀನು ಜ್ಞಾನದಿಂದ ವಿಚಾರಿ ಸುವದಿಲ್ಲ.
- 11ಜ್ಞಾನವು ಬಾಧ್ಯತೆಯ ಹಾಗೆ ಒಳ್ಳೇದು. ಸೂರ್ಯನನ್ನು ನೋಡುವವರಿಗೆ ಅದರಿಂದ ಲಾಭ ವಿದೆ.
- 12ಜ್ಞಾನವು ಆಶ್ರಯ, ಧನವು ಆಶ್ರಯ; ಆದರೆ ತಿಳುವಳಿಕೆಯ ಶ್ರೇಷ್ಠತೆ ಏನಂದರೆ, ಅದನ್ನು ಹೊಂದಿದವರಿಗೆ ಜ್ಞಾನವು ಜೀವವನ್ನು ಕೊಡುತ್ತದೆ.
Cross references
- Psalm 14:2–3 ಕೀರ್ತನೆಗಳು 14:2–3ದೇವರನ್ನು ಹುಡುಕುವ ಬುದ್ಧಿವಂತನು ಇದ್ದಾನೋ ಎಂದು ನೋಡುವದಕ್ಕೆ ಕರ್ತನು ಆಕಾಶದಿಂದ ಮನುಷ್ಯನ ಮಕ್ಕಳ ಮೇಲೆ ಕಣ್ಣಿಟ್ಟನು. ಅವರೆಲ್ಲರೂ ತಪ್ಪಿಹೋಗಿದ್ದಾರೆ, ಅವರೆಲ್ಲರೂ ಏಕವಾಗಿ ಹೊಲೆ ಯಾಗಿದ್ದಾರೆ; ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ.
- Isaiah 50:1 ಯೆಶಾಯ 50:1ಕರ್ತನು ಹೀಗನ್ನುತ್ತಾನೆ--ನಾನು ಬಿಟ್ಟು ಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ಇಲ್ಲವೆ ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೇನು? ಇಗೋ, ನಿಮ್ಮ ಅಕ್ರಮ ಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ; ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.
- Judges 6:13 ನ್ಯಾಯಸ್ಥಾಪಕರು 6:13ಆಗ ಗಿದ್ಯೋನನು ಅವನಿಗೆ--ನನ್ನ ಕರ್ತನೇ, ಕರ್ತನು ನಮ್ಮ ಸಂಗಡ ಇದ್ದರೆ ಇದೆಲ್ಲಾ ನಮಗೆ ಸಂಭವಿಸಿದ್ದೇನು? ಕರ್ತನು ನಮ್ಮನ್ನು ಐಗುಪ್ತದಿಂದ ಬರಮಾಡಲಿಲ್ಲವೋ ಎಂದು ನಮ್ಮ ತಂದೆಗಳು ನಮಗೆ ವಿವರಿಸಿ ಹೇಳಿದ ಆತನ ಅದ್ಭುತಗಳೆಲ್ಲಾ ಎಲ್ಲಿ? ಈಗ ಕರ್ತನು ನಮ್ಮನ್ನು ಕೈಬಿಟ್ಟು ಮಿದ್ಯಾನ್ಯರ ಕೈಗೆ ಒಪ್ಪಿಸಿ ದ್ದಾನೆ ಅಂದನು.
- Romans 1:22–32 ರೋಮಾಪುರದವರಿಗೆ 1:22–32ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು; ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಕ್ಷಿ, ಪಶುಗಳ ಮತ್ತು ಹರಿದಾಡುವವುಗಳ ಪ್ರತಿಮೆಗೆ ಮಾರ್ಪಡಿಸಿದರು. ಆದಕಾರಣ ತಮ್ಮ ಹೃದಯಗಳ ದುರಾಶೆಗಳ ಮೂಲಕ ತಮ್ಮ ಸ್ವಂತ ದೇಹಗಳನ್ನು ತಮ್ಮೊಳಗೆ ಅವ ಮಾನಪಡಿಸಿಕೊಳ್ಳುವಂತೆ ದೇವರು ಅವರನ್ನು ಅಶುದ್ಧ ತನಕ್ಕೆ ಒಪ್ಪಿಸಿದನು; ಅವರು ದೇವರ ವಿಷಯವಾದ ಸತ್ಯವನ್ನು ಸುಳ್ಳಿಗೆ ಬದಲಾಯಿಸಿ ಸೃಷ್ಟಿಕರ್ತನಿಗಿಂತ ಹೆಚ್ಚಾಗಿ ಸೃಷ್ಟಿಯನ್ನೇ ಆರಾಧಿಸಿ ಸೇವಿಸಿದರು; ಆತನು (ಸೃಷ್ಟಿಕರ್ತನು) ಎಂದೆಂದಿಗೂ ಸ್ತುತಿ ಹೊಂದತಕ್ಕವನು. ಆಮೆನ್. ಈ ಕಾರಣದಿಂದ ದೇವರು ಅವರನ್ನು ತುಚ್ಛ ವಾದ ಮನೋಭಾವಗಳಿಗೆ ಒಪ್ಪಿಸಿಬಿಟ್ಟನು. ಹೇಗೆಂದರೆ ಅವರ ಹೆಂಗಸರು ಸಹ ಸ್ವಾಭಾವಿಕವಾದ ಭೋಗ ವನ್ನು ಸ್ವಭಾವ ವಿರುದ್ಧವಾದ ಭೋಗಕ್ಕೆ ಮಾರ್ಪಡಿ ಸಿದರು. ಅದರಂತೆ ಗಂಡಸರೂ ಸ್ವಾಭಾವಿಕ ಸ್ತ್ರೀ ಭೋಗವನ್ನು ಬಿಟ್ಟು ಒಬ್ಬರಮೇಲೊಬ್ಬರು ತಮ್ಮ ಕಾಮಾತುರದಿಂದ ತಾಪಪಡುತ್ತಾ ಗಂಡಸರ ಸಂಗಡ ಗಂಡಸರು ಅಯೋಗ್ಯವಾದದ್ದನ್ನು ಮಾಡುತ್ತಾ ತಮ್ಮ ತಪ್ಪಿಗೆ ತಕ್ಕ ಪ್ರತಿಫಲವನ್ನು ತಮ್ಮಲ್ಲಿ ಹೊಂದಿದರು. ಇದಲ್ಲದೆ ಅವರು ತಮ್ಮ ತಿಳುವಳಿಕೆಯಿಂದ ದೇವರನ್ನು ಸ್ಮರಿಸುವದಕ್ಕೆ ಮನಸ್ಸಿಲ್ಲದ ಕಾರಣ ದೇವರು ಅವರನ್ನು ಮಾಡಬಾರದವುಗಳನ್ನು ಮಾಡು ವಂತೆ ಅನಿಷ್ಟಭಾವಕ್ಕೆ ಒಪ್ಪಿಸಿದನು. ಹೀಗೆ ಅವರು ಸಕಲ ಅನೀತಿಯಿಂದಲೂ ಜಾರತ್ವ ದುರ್ಮಾರ್ಗತನ ದುರಾಶೆ ದುಷ್ಟತ್ವ ಇವುಗಳಿಂದಲೂ ತುಂಬಿದವರಾಗಿ ಹೊಟ್ಟೇಕಿಚ್ಚು ಕೊಲೆ ವಿವಾದ ಮೋಸ ತುಂಬಿದವರೂ ಅತಿಉಗ್ರತೆಯಿಂದ ತುಂಬಿದವರೂ ಪಿಸುಗುಟ್ಟುವ ವರೂ ಚಾಡಿಹೇಳುವವರೂ ದೇವರನ್ನು ಹಗೆ ಮಾಡುವವರೂ ಧಿಕ್ಕರಿಸುವವರೂ ಅಹಂಕಾರಿಗಳೂ ಉಬ್ಬಿಕೊಳ್ಳುವವರೂ ಕೆಟ್ಟವುಗಳನ್ನು ಕಲ್ಪಿಸುವವರೂ ತಂದೆತಾಯಿಗಳಿಗೆ ಅವಿಧೇಯರೂ ತಿಳುವಳಿಕೆಯಿಲ್ಲ ದವರೂ ಪ್ರಮಾಣಕ್ಕೆ ತಪ್ಪುವವರೂ ಸ್ವಾಭಾವಿಕವಾದ ಮಮತೆಯಿಲ್ಲದವರೂ ಸಮಾಧಾನವಾಗದವರೂ ಕರುಣೆಯಿಲ್ಲದವರೂ ಆದರು.ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ. ಇಂಥವುಗಳನ್ನು ಮಾಡುವವರು ಮರಣಕ್ಕೆ ಯೋಗ್ಯರೆಂಬ ದೇವರ ನ್ಯಾಯತೀರ್ಪನ್ನು ಅವರು ತಿಳಿದವರಾಗಿದ್ದರೂ ಅವು ಗಳನ್ನು ಮಾಡುವದಲ್ಲದೆ ಅಂಥವುಗಳನ್ನು ಮಾಡುವವ ರಲ್ಲಿ ಸಂತೋಷಪಡುತ್ತಾರೆ.
- Genesis 6:11–12 ಆದಿಕಾಂಡ 6:11–12ಭೂಲೋಕದವರು ದೇವರ ದೃಷ್ಟಿಯಲ್ಲಿ ಕೆಟ್ಟು ಹೋಗಿದ್ದರು; ಭೂಮಿಯು ಬಲಾತ್ಕಾರದಿಂದ ತುಂಬಿತ್ತು. ದೇವರು ಭೂಮಿಯನ್ನು ನೋಡಲಾಗಿ, ಇಗೋ, ಅದು ಕೆಟ್ಟುಹೋದದ್ದಾಗಿತ್ತು; ಮನುಷ್ಯ ರೆಲ್ಲರು ಭೂಮಿಯ ಮೇಲೆ ತಮ್ಮ ಮಾರ್ಗವನ್ನು ಕೆಡಿಸಿಕೊಂಡಿದ್ದರು.
- Romans 3:9–19 ರೋಮಾಪುರದವರಿಗೆ 3:9–19ಹಾಗಾದರೆ ಏನು? ನಾವು ಅವರಿಗಿಂತಲೂ ಉತ್ತಮರಾಗಿದ್ದೇವೋ? ಇಲ್ಲವೇ ಇಲ್ಲ; ಯಾಕಂದರೆ ಯೆಹೂದ್ಯರೂ ಅನ್ಯಜನರೂ ಎಲ್ಲರೂ ಪಾಪಕ್ಕೊಳಗಾಗಿದ್ದಾರೆಂದು ಮೊದಲೇ ನಾವು ಸ್ಥಾಪಿಸಿ ದ್ದೇವಲ್ಲಾ. ಬರೆದಿರುವ ಪ್ರಕಾರ--ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ; ತಿಳುವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನೂ ಇಲ್ಲ. ಎಲ್ಲರೂ ದಾರಿತಪ್ಪಿದವರಾಗಿ ಕೆಲಸಕ್ಕೆ ಬಾರದವರಾದರು, ಒಳ್ಳೆ ಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ. ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ತಮ್ಮ ನಾಲಿಗೆಗಳಿಂದ ವಂಚಿಸುತ್ತಾರೆ; ಅವರ ತುಟಿಗಳ ಕೆಳಗೆ ಹಾವಿನ ವಿಷವಿದೆ. ಅವರ ಬಾಯಿ ಶಾಪದಿಂದಲೂ ವಿಷದಿಂದಲೂ ತುಂಬಿ ಅದೆ. ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರ ಪಡುತ್ತವೆ. ಅವರ ದಾರಿಗಳಲ್ಲಿ ನಾಶ ಸಂಕಟಗಳು ಉಂಟಾಗುತ್ತವೆ. ಅವರು ಸಮಾಧಾನದ ಮಾರ್ಗ ವನ್ನೇ ಅರಿತವರಲ್ಲ; ಅವರ ಕಣ್ಣೆದುರಿಗೆ ದೇವರ ಭಯವೇ ಇಲ್ಲ ಎಂಬವುಗಳೇ. ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
- Jeremiah 44:17–19 ಯೆರೆಮೀಯ 44:17–19ಆದರೆ ಸ್ವಂತ ಬಾಯಿಂದ ಹೊರಡು ವವೆಲ್ಲವನ್ನೂ ಖಂಡಿತವಾಗಿ ಮಾಡುತ್ತೇವೆ; ಗಗನದ ಒಡತಿಗೆ ಧೂಪ ಸುಡುತ್ತೇವೆ. ಪಾನದರ್ಪಣೆಗಳನ್ನು ಅವಳಿಗೆ ಹೊಯ್ಯುತ್ತೇವೆ, ನಮ್ಮ ತಂದೆಗಳೂ ನಮ್ಮ ಅರಸರೂ ನಮ್ಮ ಪ್ರಧಾನರೂ ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಮಾಡಿದ ಪ್ರಕಾರವೇ ನಾವೂ ಮಾಡುವೆವು; ಆಗ ಆಹಾರದಿಂದ ಚೆನ್ನಾಗಿದ್ದೆವು, ಕೇಡು ನೋಡಲಿಲ್ಲ. ಆದರೆ ನಾವು ಗಗನದ ಒಡತಿಗೆ ಧೂಪ ಸುಡುವ ದನ್ನೂ ಪಾನದರ್ಪಣೆಗಳನ್ನೂ ಅವಳಿಗೆ ಹೊಯ್ಯುವ ದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು ಕತ್ತಿಯಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು. ಇದಲ್ಲದೆ ನಾವು ಗಗನದ ಒಡತಿಗೆ ಧೂಪಸುಟ್ಟು, ಅವಳಿಗೆ ಪಾನದರ್ಪಣೆ ಹೊಯ್ದಾಗ ನಮ್ಮ ಗಂಡಂದಿರನ್ನು ಬಿಟ್ಟು ಅವಳ ಪೂಜೆ ಗೋಸ್ಕರ ದೋಸೆಗಳನ್ನು ಮಾಡಿ ಅವಳಿಗೆ ಪಾನ ದರ್ಪಣೆಗಳನ್ನೂ ಹೊಯಿದೆವಲ್ಲವೋ?