Ecclesiastes · chapter 7 · verse 11
Ecclesiastes 7:11 in Kannada
ಜ್ಞಾನವು ಬಾಧ್ಯತೆಯ ಹಾಗೆ ಒಳ್ಳೇದು. ಸೂರ್ಯನನ್ನು ನೋಡುವವರಿಗೆ ಅದರಿಂದ ಲಾಭ ವಿದೆ.
Jnyaanavu baadhyateya haage olledu. Sooryanannu noduvavarige adarinda laabha vide.
Ecclesiastes 7:11 in English
- King James Version (KJV)
- Wisdom [is] good with an inheritance: and [by it there is] profit to them that see the sun.
- World English Bible (WEB)
- Wisdom is as good as an inheritance. Yes, it is more excellent for those who see the sun.
- American Standard Version (ASV)
- Wisdom is as good as an inheritance; yea, more excellent is it for them that see the sun.
- Bible in Basic English (BBE)
- Wisdom together with a heritage is good, and a profit to those who see the sun.
- Darby Translation (DBY)
- Wisdom is as good as an inheritance, and profitable to them that see the sun.
- Webster's Bible (WBS)
- Wisdom [is] good with an inheritance: and [by it there is] profit to them that see the sun.
- Young's Literal Translation (YLT)
- Wisdom [is] good with an inheritance, And an advantage [it is] to those beholding the sun.
Read in context
- 9ಕೋಪಿಸಿಕೊಳ್ಳು ವದಕ್ಕೆ ನಿನ್ನ ಮನಸ್ಸಿನಲ್ಲಿ ಆತುರಪಡದಿರು; ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.
- 10ಹಿಂದಿನ ದಿವಸಗಳು ಈ ದಿವಸಗಳಿಗಿಂತ ಮೇಲಾ ಗಿರುವದಕ್ಕಾಗಿ ಕಾರಣವೇನು ಎಂದು ನೀನು ಹೇಳ ಬೇಡ. ಈ ವಿಷಯದಲ್ಲಿ ನೀನು ಜ್ಞಾನದಿಂದ ವಿಚಾರಿ ಸುವದಿಲ್ಲ.
- 11ಜ್ಞಾನವು ಬಾಧ್ಯತೆಯ ಹಾಗೆ ಒಳ್ಳೇದು. ಸೂರ್ಯನನ್ನು ನೋಡುವವರಿಗೆ ಅದರಿಂದ ಲಾಭ ವಿದೆ.
- 12ಜ್ಞಾನವು ಆಶ್ರಯ, ಧನವು ಆಶ್ರಯ; ಆದರೆ ತಿಳುವಳಿಕೆಯ ಶ್ರೇಷ್ಠತೆ ಏನಂದರೆ, ಅದನ್ನು ಹೊಂದಿದವರಿಗೆ ಜ್ಞಾನವು ಜೀವವನ್ನು ಕೊಡುತ್ತದೆ.
- 13ದೇವರ ಕಾರ್ಯವನ್ನು ಯೋಚಿಸು; ಆತನು ಡೊಂಕು ಮಾಡಿದ್ದನ್ನು ಯಾವನು ನೆಟ್ಟಗೆ ಮಾಡಲು ಶಕ್ತನು.
Cross references
- Ecclesiastes 11:7 ಪ್ರಸಂಗಿ 11:7ನಿಜವಾಗಿ ಬೆಳಕು ಹಿತವಾಗಿಯೂ ಮತ್ತು ಸೂರ್ಯನನ್ನು ನೋಡುವದು ಕಣ್ಣುಗಳಿಗೆ ಮೆಚ್ಚಿಕೆಯಾಗಿಯೂ ಇರು ವದು.
- 1 Timothy 6:17–19 1 ತಿಮೊಥೆಯನಿಗೆ 6:17–19ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ ಅವರು ಒಳ್ಳೇದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲುಕೊಡುವದರಲ್ಲಿ ಸಿದ್ಧವಾಗಿ ರುವವರೂ ಪರೋಪಕಾರ ಮಾಡುವವರೂ ಆಗಿದ್ದು. ಮುಂದಿನ ಕಾಲಕ್ಕೆ ಒಳ್ಳೇ ಅಸ್ತಿವಾರವಾಗುವಂಥ ವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂತಲೂ ನಿತ್ಯಜೀವವನ್ನು ಹಿಡಿದುಕೊಳ್ಳುವವರಾಗಿರ ಬೇಕೆಂತಲೂ ಅವರಿಗೆ ಆಜ್ಞಾಪಿಸು.
- Ecclesiastes 2:13 ಪ್ರಸಂಗಿ 2:13ಆಗ ಕತ್ತಲೆಗಿಂತ ಬೆಳಕು ಶ್ರೇಷ್ಠವಾಗಿರುವಂತೆ ಮೂಢತನಕ್ಕಿಂತ ಜ್ಞಾನವು ಶ್ರೇಷ್ಠವಾಗಿದೆ ಎಂದು ನಾನು ಕಂಡೆನು.
- Proverbs 8:10–11 ಜ್ಞಾನೋಕ್ತಿಗಳು 8:10–11ಬೆಳ್ಳಿಯನ್ನಲ್ಲ, ನನ್ನ ಶಿಕ್ಷಣವನ್ನೂ ಆಯಲ್ಪಟ್ಟ ಬಂಗಾ ರಕ್ಕಿಂತ ತಿಳುವಳಿಕೆಯನ್ನೂ ಪಡೆದುಕೋ. ಮಾಣಿಕ್ಯ ಗಳಿಗಿಂತ ಜ್ಞಾನವು ಉತ್ತಮ, ಅಪೇಕ್ಷಿಸಲ್ಪಡತಕ್ಕ ಎಲ್ಲಾ ವಸ್ತುಗಳು ಅದಕ್ಕೆ ಹೋಲಿಸುವದಕ್ಕಾಗದು.
- Ecclesiastes 9:15–18 ಪ್ರಸಂಗಿ 9:15–18ಆಗ ಅದ ರಲ್ಲಿ ಒಬ್ಬ ಜ್ಞಾನಿಯಾದ ಬಡಮನುಷ್ಯನು ಕಾಣಿಸಿ ಕೊಂಡು ಅವನು ತನ್ನ ಜ್ಞಾನದಿಂದ ಆ ಪಟ್ಟಣವನ್ನು ತಪ್ಪಿಸಿದನು. ಆದರೂ ಆ ಬಡಮನುಷ್ಯನನ್ನು ಯಾವನೂ ಜ್ಞಾಪಕಮಾಡಿಕೊಳ್ಳಲಿಲ್ಲ. ಆ ಮೇಲೆ ನಾನು--ಜ್ಞಾನವು ಬಲಕ್ಕಿಂತ ಉತ್ತಮವಾದದ್ದಾಗಿ ದ್ದಾಗ್ಯೂ ಬಡವನ ಜ್ಞಾನವು ತಿರಸ್ಕರಿಸಲ್ಪಟ್ಟದ್ದಾಗಿದ್ದು ಅವನ ಮಾತುಗಳನ್ನು ಯಾರೂ ಲಕ್ಷಿಸುವದಿಲ್ಲ ಎಂದು ಅಂದುಕೊಂಡೆನು. ಜ್ಞಾನಿಗಳ ಮಾತುಗಳು ಹುಚ್ಚರನ್ನು ಆಳುವವನ ಕೂಗಿಗಿಂತಲೂ ಸಮಾಧಾನವಾಗಿ ಕೇಳಲ್ಪಡುತ್ತವೆ.ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ. ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.
- Luke 16:8–9 ಲೂಕನು 16:8–9ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ. ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು.
- 1 Kings 3:6–9 1 ಅರಸುಗಳು 3:6–9ಅದಕ್ಕೆ ಸೊಲೊಮೋನನು--ನನ್ನ ತಂದೆಯಾಗಿರುವ ನಿನ್ನ ಸೇವಕನಾದ ದಾವೀದನು ನಿನ್ನ ಮುಂದೆ ಸತ್ಯದಿಂದಲೂ ನೀತಿಯಿಂದಲೂ ಯಥಾರ್ಥವಾದ ಹೃದಯವುಳ್ಳವ ನಾಗಿಯೂ ನಡೆದದ್ದರಿಂದ ನೀನು ಅವನಿಗೆ ಬಹು ದಯೆತೋರಿಸಿ ಈ ಮಹಾಕರುಣೆಯನ್ನು ಅವನಿ ಗೋಸ್ಕರ ಕಾದಿಟ್ಟಿದ್ದೀ. ಈ ಹೊತ್ತಿರುವ ಹಾಗೆಯೇ ತನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಒಬ್ಬ ಮಗನನ್ನು ಕೊಟ್ಟಿದ್ದೀ. ನನ್ನ ದೇವರಾದ ಕರ್ತನೇ, ನೀನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ನಿನ್ನ ಸೇವಕನನ್ನು ಅರಸನಾಗಮಾಡಿದ್ದೀ. ಆದರೆ ನಾನು ಚಿಕ್ಕ ಬಾಲಕನಾಗಿದ್ದು ಹೊರಗೆ ಹೋಗುವದಕ್ಕೂ ಒಳಗೆ ಬರುವದಕ್ಕೂ ಅರಿಯದೆ ಇದ್ದೇನೆ. ಇದಲ್ಲದೆ ನಿನ್ನ ಸೇವಕನು ನೀನು ಆದುಕೊಂಡ ನಿನ್ನ ಮಹಾಜನರ ಮಧ್ಯದಲ್ಲಿ ಇದ್ದಾನೆ. ಆ ಜನರು ಬಹಳವಾಗಿರುವ ದರಿಂದ ಅವರನ್ನು ಎಣಿಸಲೂ ಲೆಕ್ಕ ಬರೆಯಲೂ ಆಗದು. ಆದದರಿಂದ ನಿನ್ನ ಜನರಿಗೆ ನ್ಯಾಯ ವಿಚಾ ರಿಸಲು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ ನಿನ್ನ ಸೇವಕನಿಗೆ ಜ್ಞಾನವುಳ್ಳ ಹೃದಯವನ್ನು ಕೊಡ ಬೇಕು. ಈ ನಿನ್ನ ಬಹು ಗುಂಪಾದ ಜನರ ನ್ಯಾಯ ವಿಚಾರಿಸಲು ಸಾಮರ್ಥ್ಯವುಳ್ಳವನು ಯಾವನು ಅಂದನು.