Ecclesiastes · chapter 7 · verse 15
Ecclesiastes 7:15 in Kannada
ನನ್ನ ವ್ಯರ್ಥದ ದಿನಗಳಲ್ಲಿ ಎಲ್ಲಾ ವಿಷಯಗಳನ್ನು ನಾನು ನೋಡಿದ್ದೇನೆ; ನೀತಿವಂತನು ತನ್ನ ನೀತಿಯಲ್ಲಿ ನಾಶವಾಗುತ್ತಾನೆ. ದುಷ್ಟನು ತನ್ನ ದುಷ್ಟತನದಲ್ಲಿ ತನ್ನ ಜೀವಮಾನವನ್ನು ಹೆಚ್ಚಿಸಿಕೊಳ್ಳುತ್ತಾನೆ.
Nanna vyarthada dinagalalli ellaa vishayagalannu naanu nodiddene; neetivantanu tanna neetiyalli naashavaaguttaane. Dushtanu tanna dushtatanadalli tanna jeevamaanavannu hechchisikolluttaane.
Ecclesiastes 7:15 in English
- King James Version (KJV)
- All [things] have I seen in the days of my vanity: there is a just [man] that perisheth in his righteousness, and there is a wicked [man] that prolongeth [his life] in his wickedness.
- World English Bible (WEB)
- All this I have seen in my days of vanity: there is a righteous man who perishes in his righteousness, and there is a wicked man who lives long in his evildoing.
- American Standard Version (ASV)
- All this have I seen in my days of vanity: there is a righteous man that perisheth in his righteousness, and there is a wicked man that prolongeth [his life] in his evil-doing.
- Bible in Basic English (BBE)
- These two have I seen in my life which is to no purpose: a good man coming to his end in his righteousness, and an evil man whose days are long in his evil-doing.
- Darby Translation (DBY)
- All [this] have I seen in the days of my vanity: there is a righteous [man] that perisheth by his righteousness, and there is a wicked [man] that prolongeth [his days] by his wickedness.
- Webster's Bible (WBS)
- All [things] have I seen in the days of my vanity: there is a just [man] that perisheth in his righteousness, and there is a wicked [man] that prolongeth [his life] in his wickedness.
- Young's Literal Translation (YLT)
- The whole I have considered in the days of my vanity. There is a righteous one perishing in his righteousness, and there is a wrong-doer prolonging [himself] in his wrong.
Read in context
- 13ದೇವರ ಕಾರ್ಯವನ್ನು ಯೋಚಿಸು; ಆತನು ಡೊಂಕು ಮಾಡಿದ್ದನ್ನು ಯಾವನು ನೆಟ್ಟಗೆ ಮಾಡಲು ಶಕ್ತನು.
- 14ಅಭಿವೃದ್ಧಿಯ ದಿನದಲ್ಲಿ ಸಂತೋಷವಾಗಿರು; ಆದರೆ ವಿಪತ್ಕಾಲದ ದಿವಸದಲ್ಲಿ ಯೋಚಿಸು; ತನ್ನ ಅಂತ್ಯ ಬಂದಾಗ ಮನುಷ್ಯನು ಯಾವದನ್ನು ನೋಡದಂತೆ ದೇವರು ಸಹ ಒಂದರ ಮೇಲೊಂದನ್ನು ಇಟ್ಟಿದ್ದಾನೆ.
- 15ನನ್ನ ವ್ಯರ್ಥದ ದಿನಗಳಲ್ಲಿ ಎಲ್ಲಾ ವಿಷಯಗಳನ್ನು ನಾನು ನೋಡಿದ್ದೇನೆ; ನೀತಿವಂತನು ತನ್ನ ನೀತಿಯಲ್ಲಿ ನಾಶವಾಗುತ್ತಾನೆ. ದುಷ್ಟನು ತನ್ನ ದುಷ್ಟತನದಲ್ಲಿ ತನ್ನ ಜೀವಮಾನವನ್ನು ಹೆಚ್ಚಿಸಿಕೊಳ್ಳುತ್ತಾನೆ.
- 16ನೀನು ಅತಿ ಯಾಗಿ ನೀತಿವಂತನಾಗಿರಬೇಡ; ಅಲ್ಲದೆ ಅತಿಯಾಗಿ ನಿನ್ನನ್ನು ಜ್ಞಾನಿಯನ್ನಾಗಿ ಮಾಡಿಕೊಳ್ಳಬೇಡ; ನಿನ್ನನ್ನು ನೀನೇ ಯಾಕೆ ನಾಶಪಡಿಸಿಕೊಳ್ಳುವಿ?
- 17ನೀನು ಅತಿ ಯಾಗಿ ದುಷ್ಟನಾಗಿರಬೇಡ; ಇಲ್ಲವೆ ಮೂರ್ಖನಾಗಿರ ಬೇಡ; ನಿನ್ನ ಸಮಯಕ್ಕಿಂತ ಮೊದಲು ನೀನು ಯಾಕೆ ಸಾಯುವಿ?
Cross references
- Ecclesiastes 8:12–14 ಪ್ರಸಂಗಿ 8:12–14ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು. ಆದರೆ ದುಷ್ಟನಿಗೆ ಒಳ್ಳೆಯದಾಗುವದಿಲ್ಲ. ತನ್ನ ನೆರಳಿನ ಹಾಗಿ ರುವ ಅವನ ದಿವಸಗಳನ್ನು ಹೆಚ್ಚಿಸುವದಿಲ್ಲ; ಅವನು ದೇವರ ಮುಂದೆ ಭಯಪಡುವದಿಲ್ಲ. ಭೂಮಿಯ ಮೇಲೆ ಮಾಡುವ ಒಂದು ವ್ಯರ್ಥವಾದದ್ದಿದೆ; ದುಷ್ಟರ ಕೆಲಸದ ಪ್ರಕಾರ ಅನುಭವಿಸುವ ನೀತಿವಂತರಿದ್ದಾರೆ; ನೀತಿವಂತರ ಕೆಲಸದ ಪ್ರಕಾರ ಅನುಭವಿಸುವ ದುಷ್ಟರಿ ದ್ದಾರೆ. ಇದೂ ಸಹ ವ್ಯರ್ಥವೆಂದು ನಾನು ಹೇಳಿದೆನು.
- Ecclesiastes 6:12 ಪ್ರಸಂಗಿ 6:12ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.
- Psalm 73:3–13 ಕೀರ್ತನೆಗಳು 73:3–13ದುಷ್ಟರ ಅಭಿವೃದ್ಧಿಯನ್ನು ನೋಡಿದಾಗ ಮೂರ್ಖರ ಮೇಲೆ ಹೊಟ್ಟೇಕಿಚ್ಚು ಪಟ್ಟೆನು. ಅವರ ಮರಣಕ್ಕೆ ಬಂಧನಗಳು ಇಲ್ಲ; ಅವರ ತ್ರಾಣವು ಸ್ಥಿರವಾಗಿದೆ. ಬೇರೆ ಮನುಷ್ಯರಂತೆ ಅವರು ಕಷ್ಟದಲ್ಲಿಲ್ಲ. ಇಲ್ಲವೆ ಬೇರೆ ಮನುಷ್ಯರ ಹಾಗೆ ಅವರಿಗೆ ವ್ಯಾಧಿಯೂ ಇಲ್ಲ; ಆದದರಿಂದ ಗರ್ವವು ಅವರಿಗೆ ಕಂಠಮಾಲೆಯಂತೆ ಅವರನ್ನು ಸುತ್ತಿದೆ, ಬಲಾತ್ಕಾರವು ಅವರನ್ನು ಬಟ್ಟೆಯ ಹಾಗೆ ಮುಚ್ಚುತ್ತದೆ. ಅವರ ಕಣ್ಣುಗಳು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ಹೃದಯವು ಆಶಿಸುವದಕ್ಕಿಂತಲೂ ಹೆಚ್ಚಾಗಿ ಅವರಿಗೆ ಇವೆ. ಅವರು ಕೆಟ್ಟುಹೋದವರು. ಸಂಕಟ ಪಡುವವರ ವಿಷಯ ಕೆಟ್ಟದ್ದಾಗಿಯೂ ಗರ್ವದಿಂದಲೂ ಮಾತನಾಡುತ್ತಾರೆ. ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ; ಭೂಲೋಕದಲ್ಲೆಲ್ಲಾ ಅವರ ಮಾತೇ ನಡೆಯುವದು. ಆದದರಿಂದ ಅವನ ಜನರು ಇಲ್ಲಿಗೆ ತಿರುಗಿ ಕೊಳ್ಳುತ್ತಾರೆ; ಅವರಿಗೆ ಪಾನವು ಯಥೇಚ್ಚವಾಗಿ ದೊರೆಯುತ್ತದೆ. ಅವರು-- ದೇವರು ಹೇಗೆ ಬಲ್ಲನು? ಮಹೋನ್ನತನಲ್ಲಿ ತಿಳುವಳಿಕೆ ಉಂಟೋ ಎಂದು ಅಂದುಕೊಳ್ಳುತ್ತಾರೆ. ಇಗೋ, ಇಹಲೋಕದಲ್ಲಿ ವೃದ್ಧಿಯಾಗುವ ದುಷ್ಟರು ಇವರೇ, ಐಶ್ವರ್ಯದಲ್ಲಿ ಇವರು ಹೆಚ್ಚುತ್ತಾರೆ. ನಿಶ್ಚಯವಾಗಿ ನನ್ನ ಹೃದಯವನ್ನು ವ್ಯರ್ಥವಾಗಿ ನಿರ್ಮಲ ಮಾಡಿಕೊಂಡು ನನ್ನ ಕೈಗಳನ್ನು ನಿರಪರಾಧ ದಲ್ಲಿ ತೊಳೆದಿದ್ದೇನೆ.
- Matthew 23:34–35 ಮತ್ತಾಯನು 23:34–35ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು.
- Ecclesiastes 9:1–2 ಪ್ರಸಂಗಿ 9:1–2ನಾನು ಇವೆಲ್ಲವುಗಳ ಮೇಲೆ ಮನಸ್ಸಿಟ್ಟು ಇವೆಲ್ಲವುಗಳಲ್ಲಿ ನಾನು ತೀರ್ಮಾನಿಸಿ ದ್ದೇನಂದರೆ--ನೀತಿವಂತನು ಮತ್ತು ಜ್ಞಾನಿ ಇವರ ಕೆಲಸಗಳು ದೇವರ ಕೈಯಲ್ಲಿವೆ; ಯಾವ ಮನುಷ್ಯನೂ ಅವರ ಮುಂದಿರುವ ಎಲ್ಲವುಗಳನ್ನು, ಅಂದರೆ ಪ್ರೀತಿ ಯನ್ನು ಅಥವಾ ದ್ವೇಷವನ್ನು ತಿಳಿಯಲಾರನು. ಎಲ್ಲವು ಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವವು. ನೀತಿವಂತನಿಗೂ ದುಷ್ಟನಿಗೂ ಸಂಗತಿ ಒಳ್ಳೆಯವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವದು. ಒಳ್ಳೆಯ ವನ ಹಾಗೆಯೇ ಪಾಪಿಯೂ ಇರುವನು; ಆಣೆಯಿಡು ವವನಿಗೆ ಹೇಗೋ ಹಾಗೆಯೇ ಆಣೆಗೆ ಭಯಪಡುವ ವನೂ ಇರುವನು.
- 1 Samuel 22:18–19 1 ಸಮುವೇಲನು 22:18–19ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು. ಇದಲ್ಲದೆ ಯಾಜಕರ ಪಟ್ಟಣ ವಾದ ನೋಬಿನಲ್ಲಿ ಇರುವ ಪುರುಷರನ್ನೂ ಸ್ತ್ರೀಯ ರನ್ನೂ ಮಕ್ಕಳನ್ನೂ ಕೂಸುಗಳನ್ನೂ ಎತ್ತುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕತ್ತಿಯಿಂದ ಸಂಹರಿಸಿದನು.
- Genesis 47:9 ಆದಿಕಾಂಡ 47:9ಯಾಕೋಬನು ಫರೋಹನಿಗೆ--ನನ್ನ ಪ್ರವಾಸದ ದಿನಗಳು ನೂರ ಮೂವತ್ತು ವರುಷಗಳು. ನನ್ನ ಜೀವನದ ದಿನಗಳು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇದ್ದವು. ನನ್ನ ತಂದೆಗಳು ತಾವು ಪ್ರವಾಸಿಗಳಾಗಿದ್ದ ಜೀವನದ ವರುಷಗಳ ದಿನಗಳಿಗೆ ನಾನು ಮುಟ್ಟಲಿಲ್ಲ ಅಂದನು.
- Job 9:22–23 ಯೋಬನು 9:22–23ಇದೊಂದು ವಿಷಯ ಆದದರಿಂದ ನಾನು ಅದನ್ನು ಹೇಳಿದ್ದೇನೆ. ಪರಿಪೂರ್ಣರನ್ನೂ ಕೆಟ್ಟ ವರನ್ನೂ ಆತನು ನಾಶಮಾಡುತ್ತಾನೆ. ಕೊರಡೆಯು ಫಕ್ಕನೆ ಕೊಂದರೆ, ನಿರಪರಾಧಿಗಳ ಪರೀಕ್ಷೆಗೆ ಅವನು ಗೇಲಿ ಮಾಡುತ್ತಾನೆ.
- Ecclesiastes 5:16–17 ಪ್ರಸಂಗಿ 5:16–17ಇದೂ ಕೂಡ ವ್ಯಥೆಯಿಂದ ಕೂಡಿದ ಕೆಟ್ಟತನವೇ. ಅದು ಯಾವ ದಂದರೆ ಎಲ್ಲಾ ವಿಷಯಗಳಲ್ಲಿ ತಾನು ಹೇಗೆ ಬಂದನೋ ಹಾಗೆಯೇ ಹೋಗುವನು; ಗಾಳಿಗಾಗಿ ಪ್ರಯಾಸಪಟ್ಟ ವನಿಗೆ ಲಾಭವೇನಿದೆ? ತನ್ನ ಜೀವಮಾನದಲ್ಲೆಲ್ಲಾ ಅವನು ಕತ್ತಲೆಯಲ್ಲಿ ತಿನ್ನುತ್ತಾನೆ; ತನ್ನ ವ್ಯಾಧಿಯೊಂದಿಗೆ ಅವನಿಗೆ ಬಹಳ ವ್ಯಥೆಯೂ ಕ್ರೋಧವೂ ಇರುತ್ತದೆ.
- Ecclesiastes 9:9 ಪ್ರಸಂಗಿ 9:9ನಿನ್ನ ನಿರ್ಥಕವಾದ ಎಲ್ಲಾ ದಿನಗಳಲ್ಲಿ ಸೂರ್ಯನ ಕೆಳಗೆ ಆತನು ನಿನಗೆ ಕೊಟ್ಟ ಜೀವನದ ಎಲ್ಲಾ ದಿನಗಳಲ್ಲಿ ನೀನು ಪ್ರೀತಿಸುವ ನಿನ್ನ ಹೆಂಡತಿ ಯೊಡನೆ ಆನಂದದಿಂದ ವಾಸಿಸು; ಸೂರ್ಯನ ಕೆಳಗೆ ನೀನು ಪಡುವ ಕಷ್ಟದಲ್ಲಿಯೂ ಇದೇ ನಿನ್ನ ಪಾಲಾಗಿದೆ.
- Job 21:7–15 ಯೋಬನು 21:7–15ದುಷ್ಟರು ಯಾಕೆ ಬದುಕಿ ಮುದುಕರಾಗಿ ಹೌದು, ತ್ರಾಣದಿಂದ ಬಲಗೊಳ್ಳುತ್ತಾರೆ? ಅವರ ಸಂತಾನದವರು ಅವರ ಮುಂದೆ ಅವರ ಸಂಗಡ ದೃಢವಾಗಿದ್ದಾರೆ; ಅವರ ಸಂತಾನದವರು ಅವರ ಕಣ್ಣು ಗಳ ಮುಂದೆ ಇದ್ದಾರೆ. ಅವರ ಮನೆಗಳು ಅಂಜಿಕೆ ಇಲ್ಲದೆ ಸಮಾಧಾನವಾಗಿವೆ; ದೇವರ ಕೋಲು ಅವರ ಮೇಲೆ ಇಲ್ಲ. ಅವನ ಗೂಳಿ ಹೇಸದೆ ಬಸುರು ಮಾಡುತ್ತದೆ; ಅವನ ಆಕಳು ತಪ್ಪದೆ ಈಯುತ್ತದೆ; ತಮ್ಮ ಚಿಕ್ಕವರನ್ನು ಮಂದೆಯ ಹಾಗೆ ಕಳುಹಿಸು ತ್ತಾರೆ; ಅವರ ಮಕ್ಕಳು ಕುಣಿದಾಡುತ್ತಾರೆ. ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಹಾಡುತ್ತಾರೆ; ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ. ಸಂಪತ್ತಿನಲ್ಲಿ ತಮ್ಮ ದಿವಸ ಗಳನ್ನು ಕಳೆಯುತ್ತಾರೆ; ಕ್ಷಣದಲ್ಲಿ ಪಾತಾಳಕ್ಕೆ ಇಳಿ ಯುತ್ತಾರೆ. ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ. ನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ.
- Acts 7:52 ಅಪೊಸ್ತಲರ ಕೃತ್ಯಗಳು 7:52ಪ್ರವಾದಿ ಗಳಲ್ಲಿ ನಿಮ್ಮ ಪಿತೃಗಳು ಹಿಂಸೆಪಡಿಸದವರು ಯಾರಿ ದ್ದಾರೆ? ಅವರು ಆ ನೀತಿವಂತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು. ನೀವು ಈಗ ಆತನನ್ನು ಹಿಡುಕೊಟ್ಟು ಕೊಂದವರಾದಿರಿ.