Ecclesiastes · chapter 7 · verse 16
Ecclesiastes 7:16 in Kannada
ನೀನು ಅತಿ ಯಾಗಿ ನೀತಿವಂತನಾಗಿರಬೇಡ; ಅಲ್ಲದೆ ಅತಿಯಾಗಿ ನಿನ್ನನ್ನು ಜ್ಞಾನಿಯನ್ನಾಗಿ ಮಾಡಿಕೊಳ್ಳಬೇಡ; ನಿನ್ನನ್ನು ನೀನೇ ಯಾಕೆ ನಾಶಪಡಿಸಿಕೊಳ್ಳುವಿ?
Neenu ati yaagi neetivantanaagirabeda; allade atiyaagi ninnannu jnyaaniyannaagi maadikollabeda; ninnannu neene yaake naashapadisikolluvi?
Ecclesiastes 7:16 in English
- King James Version (KJV)
- Be not righteous over much; neither make thyself over wise: why shouldest thou destroy thyself?
- World English Bible (WEB)
- Don’t be overly righteous, neither make yourself overly wise. Why should you destroy yourself?
- American Standard Version (ASV)
- Be not righteous overmuch; neither make thyself overwise: why shouldest thou destroy thyself?
- Bible in Basic English (BBE)
- Be not given overmuch to righteousness and be not over-wise. Why let destruction come on you?
- Darby Translation (DBY)
- Be not righteous overmuch; neither make thyself overwise: why shouldest thou destroy thyself?
- Webster's Bible (WBS)
- Be not righteous over much; neither make thyself over wise: why shouldst thou destroy thyself?
- Young's Literal Translation (YLT)
- Be not over-righteous, nor show thyself too wise, why art thou desolate?
Read in context
- 14ಅಭಿವೃದ್ಧಿಯ ದಿನದಲ್ಲಿ ಸಂತೋಷವಾಗಿರು; ಆದರೆ ವಿಪತ್ಕಾಲದ ದಿವಸದಲ್ಲಿ ಯೋಚಿಸು; ತನ್ನ ಅಂತ್ಯ ಬಂದಾಗ ಮನುಷ್ಯನು ಯಾವದನ್ನು ನೋಡದಂತೆ ದೇವರು ಸಹ ಒಂದರ ಮೇಲೊಂದನ್ನು ಇಟ್ಟಿದ್ದಾನೆ.
- 15ನನ್ನ ವ್ಯರ್ಥದ ದಿನಗಳಲ್ಲಿ ಎಲ್ಲಾ ವಿಷಯಗಳನ್ನು ನಾನು ನೋಡಿದ್ದೇನೆ; ನೀತಿವಂತನು ತನ್ನ ನೀತಿಯಲ್ಲಿ ನಾಶವಾಗುತ್ತಾನೆ. ದುಷ್ಟನು ತನ್ನ ದುಷ್ಟತನದಲ್ಲಿ ತನ್ನ ಜೀವಮಾನವನ್ನು ಹೆಚ್ಚಿಸಿಕೊಳ್ಳುತ್ತಾನೆ.
- 16ನೀನು ಅತಿ ಯಾಗಿ ನೀತಿವಂತನಾಗಿರಬೇಡ; ಅಲ್ಲದೆ ಅತಿಯಾಗಿ ನಿನ್ನನ್ನು ಜ್ಞಾನಿಯನ್ನಾಗಿ ಮಾಡಿಕೊಳ್ಳಬೇಡ; ನಿನ್ನನ್ನು ನೀನೇ ಯಾಕೆ ನಾಶಪಡಿಸಿಕೊಳ್ಳುವಿ?
- 17ನೀನು ಅತಿ ಯಾಗಿ ದುಷ್ಟನಾಗಿರಬೇಡ; ಇಲ್ಲವೆ ಮೂರ್ಖನಾಗಿರ ಬೇಡ; ನಿನ್ನ ಸಮಯಕ್ಕಿಂತ ಮೊದಲು ನೀನು ಯಾಕೆ ಸಾಯುವಿ?
- 18ನೀನು ಇದನ್ನು ಹಿಡಿದುಕೊಳ್ಳುವದು ಒಳ್ಳೇದು. ಹೌದು, ಇದರಿಂದ ನಿನ್ನ ಕೈಯನ್ನು ಹಿಂತೆ ಗೆಯಬೇಡ; ದೇವರಿಗೆ ಭಯಪಡುವವನು ಅವೆಲ್ಲವು ಗಳಿಂದ ಹೊರಗೆ ಬರುವನು.
Cross references
- Romans 12:3 ರೋಮಾಪುರದವರಿಗೆ 12:3ನಿಮ್ಮೊಳಗೆ ಪ್ರತಿಯೊಬ್ಬನು ತನ್ನ ಯೋಗ್ಯತೆಗೆ ವಿಾರಿ ಭಾವಿಸಿಕೊಳ್ಳದೆ ದೇವರು ಪ್ರತಿಯೊಬ್ಬನಿಗೆ ಅವನವನ ವಿಶ್ವಾಸದ ಪ್ರಮಾಣಕ್ಕನುಸಾರವಾಗಿ ಕೊಟ್ಟಂತೆ ತನ್ನನ್ನು ಮಿತವಾಗಿ ತಿಳಿದುಕೊಳ್ಳಬೇಕೆಂದು ನನಗೆ ಕೊಡಲ್ಪಟ್ಟ ಕೃಪೆಗನುಸಾರವಾಗಿ ನಾನು ಹೇಳುತ್ತೇನೆ.
- Proverbs 25:16 ಜ್ಞಾನೋಕ್ತಿಗಳು 25:16ಜೇನನ್ನು ಕಂಡುಕೊಂಡಿದ್ದೀಯಾ? ಅದನ್ನು ನಿನಗೆ ತೃಪ್ತಿಯಾಗುವಷ್ಟು ತಿನ್ನು; ಹೊಟ್ಟೆತುಂಬ ತಿಂದರೆ ಕಾರ ಬೇಕಾದೀತು.
- Colossians 2:18 ಕೊಲೊಸ್ಸೆಯವರಿಗೆ 2:18ಸ್ವಇಷ್ಟ ವಿನಯದಿಂದಲೂ ದೇವದೂತರ ಆರಾಧನೆ ಯಿಂದಲೂ ತನ್ನ ಶಾರೀರಕ ಮನಸ್ಸಿನಿಂದ ವ್ಯರ್ಥವಾಗಿ ಉಬ್ಬಿಕೊಂಡು ತಾನು ನೋಡದಿರುವವುಗಳಲ್ಲಿ ಬಲ ವಂತವಾಗಿ ನುಗ್ಗುವ ಯಾವನೂ ನಿಮ್ಮ ಬಹುಮಾನ ವನ್ನು ಮೋಸಗೊಳಿಸದಿರಲಿ.
- 1 Corinthians 3:18 1 ಕೊರಿಂಥದವರಿಗೆ 3:18ಯಾವನೂ ತನ್ನನ್ನು ತಾನೇ ಮೋಸಗೊಳಿಸ ದಿರಲಿ; ನಿಮ್ಮಲ್ಲಿ ಯಾವನಾದರೂ ಈ ಲೋಕ ಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿ ಕೊಂಡರೆ ಜ್ಞಾನಿಯಾಗುವಂತೆ ಹುಚ್ಚನಾಗಲಿ.
- James 3:13–17 ಯಾಕೋಬನು 3:13–17ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ. ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ. ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು. ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು. ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- Matthew 6:1–7 ಮತ್ತಾಯನು 6:1–7ಜನರು ನೋಡಲಿ ಎಂದು ನೀವು ನಿಮ್ಮ ದಾನವನ್ನು ಅವರ ಮುಂದೆ ಮಾಡದಂತೆ ಎಚ್ಚರಿಕೆ ತಂದುಕೊಳ್ಳಿರಿ; ಇಲ್ಲವಾದರೆ ಪರಲೋಕ ದಲ್ಲಿರುವ ನಿಮ್ಮ ತಂದೆಯಿಂದ ನಿಮಗೆ ಪ್ರತಿಫಲ ಸಿಗಲಾರದು. ಆದದರಿಂದ ಕಪಟಿಗಳು ಜನರಿಂದ ಹೊಗಳಿಸಿ ಕೊಳ್ಳಬೇಕೆಂದು ಸಭಾಮಂದಿರಗಳಲ್ಲಿಯೂ ಬೀದಿಗಳ ಲ್ಲಿಯೂ ಮಾಡುವಂತೆ ನೀನು ದಾನ ಮಾಡುವಾಗ ನಿನ್ನ ಮುಂದೆ ತುತ್ತೂರಿಯನ್ನೂದಬೇಡ. ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿದ್ದಾರೆ. ಆದರೆ ನೀನು ದಾನಮಾಡುವಾಗ ನಿನ್ನ ಬಲಗೈ ಮಾಡುವದು ನಿನ್ನ ಎಡಗೈಗೆ ತಿಳಿಯದಿರಲಿ. ಹೀಗೆ ನಿನ್ನ ದಾನವು ಅಂತರಂಗದಲ್ಲಿರುವದು; ಮತ್ತು ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ತಾನೇ ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು. ನೀನು ಪ್ರಾರ್ಥನೆ ಮಾಡುವಾಗ ಕಪಟಿಗಳಂತೆ ಇರಬೇಡ; ಯಾಕಂದರೆ ಜನರು ನೋಡುವಂತೆ ಸಭಾಮಂದಿರಗಳಲ್ಲಿಯೂ ಬೀದಿಗಳ ಮೂಲೆಗಳ ಲ್ಲಿಯೂ ನಿಂತು ಪ್ರಾರ್ಥನೆಮಾಡುವದನ್ನು ಅವರು ಪ್ರೀತಿಸುತ್ತಾರೆ. ನಾನು ನಿಮಗೆ ನಿಜವಾಗಿ ಹೇಳುವ ದೇನಂದರೆ--ಅವರು ತಮ್ಮ ಪ್ರತಿಫಲವನ್ನು ಹೊಂದಿ ದ್ದಾರೆ. ಆದರೆ ನೀನು ಪ್ರಾರ್ಥನೆ ಮಾಡುವಾಗ ನಿನ್ನ ಕೋಣೆಯೊಳಕ್ಕೆ ಹೋಗಿ ಬಾಗಿಲನ್ನು ಮುಚ್ಚಿ ಅಂತರಂಗದಲ್ಲಿರುವ ನಿನ್ನ ತಂದೆಗೆ ಪ್ರಾರ್ಥನೆಮಾಡು; ಆಗ ಅಂತರಂಗದಲ್ಲಿ ನೋಡುವ ನಿನ್ನ ತಂದೆಯು ಬಹಿರಂಗವಾಗಿ ನಿನಗೆ ಪ್ರತಿಫಲ ಕೊಡುವನು. ಆದರೆ ನೀವು ಪ್ರಾರ್ಥನೆ ಮಾಡುವಾಗ ಅನ್ಯರು ಮಾಡುವಂತೆ ವ್ಯರ್ಥವಾದದ್ದನ್ನು ಪದೇಪದೇ ಹೇಳ ಬೇಡಿರಿ ಯಾಕಂದರೆ ತಾವು ಬಹಳವಾಗಿ ಮಾತನಾಡು ವದರಿಂದ ತಮ್ಮ ಪ್ರಾರ್ಥನೆಯು ಕೇಳಲ್ಪಡುವದೆಂದು ಅವರು ಯೋಚಿಸುತ್ತಾರೆ.
- Ecclesiastes 12:12 ಪ್ರಸಂಗಿ 12:12ಕೊನೆಗೆ ನನ್ನ ಮಗನೇ, ಇವುಗಳಿಂದ ಎಚ್ಚರಿಕೆ ಯಾಗಿರು. ಬಹಳ ಪುಸ್ತಕಗಳನ್ನು ಮಾಡುವದಕ್ಕೆ ಅಂತ್ಯ ವಿಲ್ಲ; ಹೆಚ್ಚು ಅಭ್ಯಾಸವು ಶರೀರಕ್ಕೆ ಆಯಾಸವಾಗಿದೆ.
- Genesis 3:6 ಆದಿಕಾಂಡ 3:6ಸ್ತ್ರೀಯು--ಆ ಮರದ ಫಲವು ಆಹಾರಕ್ಕೆ ಒಳ್ಳೇದಾಗಿಯೂ ಕಣ್ಣಿಗೆ ರಮ್ಯವಾಗಿಯೂ ಒಬ್ಬನನ್ನು ಜ್ಞಾನಿಯನ್ನಾಗಿ ಮಾಡುವದಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಅದೆ ಎಂದು ನೋಡಿ ಅದರ ಫಲವನ್ನು ತೆಗೆದುಕೊಂಡು ತಿಂದಳು; ತನ್ನ ಸಂಗಡ ಇದ್ದ ತನ್ನ ಗಂಡನಿಗೂ ಕೊಟ್ಟಳು; ಅವನೂ ತಿಂದನು.
- Colossians 2:23 ಕೊಲೊಸ್ಸೆಯವರಿಗೆ 2:23ಅಂಥ ಉಪದೇಶಗಳು ಸ್ವೇಚ್ಛಾರಾಧನೆಯಲ್ಲಿಯೂ ವಿನಯದಲ್ಲಿಯೂ ದೇಹ ದಂಡನೆಯಲ್ಲಿಯೂ ಜ್ಞಾನವನ್ನು ತೋರಿಸುವಂಥವು ಗಳಾಗಿರುವದು ನಿಜವೇ. ಆದರೆ ಅವು ಶರೀರವನ್ನಲ್ಲದೆ ಯಾವ ವಿಧದಲ್ಲಿಯೂ ತೃಪ್ತಿ ಪಡಿಸಲಾರವು.
- Luke 18:12 ಲೂಕನು 18:12ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು.
- Job 28:28 ಯೋಬನು 28:28ಆತನು ಮನುಷ್ಯನಿಗೆ ಹೇಳಿದ್ದೇ ನಂದರೆ--ಇಗೋ, ಕರ್ತನ ಭಯವೇ ಜ್ಞಾನ; ಕೇಡಿನಿಂದ ತೊಲಗುವದೇ ಗ್ರಹಿಕೆ.
- Job 11:12 ಯೋಬನು 11:12ಕಾಡುಕತ್ತೆಯ ಮರಿಯ ಹಾಗೆ ಮನುಷ್ಯನು ಹುಟ್ಟಿ ದರೂ ವ್ಯರ್ಥ ಮನುಷ್ಯನು ಜ್ಞಾನಿಯಾಗಿರುವನು.