Ecclesiastes · chapter 7 · verse 2
Ecclesiastes 7:2 in Kannada
ಔತಣದ ಮನೆಗೆ ಹೋಗುವದಕ್ಕಿಂತ ಗೋಳಾಟದ ಮನೆಗೆ ಹೋಗು ವದು ಲೇಸು; ಎಲ್ಲಾ ಮನುಷ್ಯರ ಅಂತ್ಯವು ಇದಾಗಿದೆ; ಇದರಿಂದ ಜೀವಿತನು ಅದನ್ನು ತಮ್ಮ ಹೃದಯದಲ್ಲಿ ಇಟ್ಟು ಸ್ಮರಿಸಿಕೊಳ್ಳುವನು.
Autanada manege hoguvadakkinta golaatada manege hogu vadu lesu; ellaa manushyara antyavu idaagide; idarinda jeevitanu adannu tamma hrudayadalli ittu smarisikolluvanu.
Ecclesiastes 7:2 in English
- King James Version (KJV)
- [It is] better to go to the house of mourning, than to go to the house of feasting: for that [is] the end of all men; and the living will lay [it] to his heart.
- World English Bible (WEB)
- It is better to go to the house of mourning than to go to the house of feasting; for that is the end of all men, and the living should take this to heart.
- American Standard Version (ASV)
- It is better to go to the house of mourning than to go to the house of feasting: for that is the end of all men; and the living will lay it to his heart.
- Bible in Basic English (BBE)
- It is better to go to the house of weeping, than to go to the house of feasting; because that is the end of every man, and the living will take it to their hearts.
- Darby Translation (DBY)
- It is better to go to the house of mourning than to go to the house of feasting: in that that is the end of all men, and the living taketh it to heart.
- Webster's Bible (WBS)
- [It is] better to go to the house of mourning, than to go to the house of feasting: for that [is] the end of all men; and the living will lay [it] to his heart.
- Young's Literal Translation (YLT)
- Better to go unto a house of mourning, Than to go unto a house of banqueting, For that is the end of all men, And the living layeth [it] unto his heart.
Read in context
- 1ಅಮೂಲ್ಯವಾದ ತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ; ಒಬ್ಬನ ಜನ್ಮದಿನಕ್ಕಿಂತ ಮರಣದ ದಿನವೇ ಮೇಲು.
- 2ಔತಣದ ಮನೆಗೆ ಹೋಗುವದಕ್ಕಿಂತ ಗೋಳಾಟದ ಮನೆಗೆ ಹೋಗು ವದು ಲೇಸು; ಎಲ್ಲಾ ಮನುಷ್ಯರ ಅಂತ್ಯವು ಇದಾಗಿದೆ; ಇದರಿಂದ ಜೀವಿತನು ಅದನ್ನು ತಮ್ಮ ಹೃದಯದಲ್ಲಿ ಇಟ್ಟು ಸ್ಮರಿಸಿಕೊಳ್ಳುವನು.
- 3ನಗೆಗಿಂತ ದುಃಖವು ವಾಸಿ; ಹೃದಯದ ದುಃಖದ ಭಾವನೆಯಿಂದ ಹೃದಯವು ಗುಣವಾಗುತ್ತದೆ.
- 4ಗೋಳಾಟದ ಮನೆಯಲ್ಲಿ ಜ್ಞಾನಿಯ ಹೃದಯವು ಇರುವದು; ಮೂಢರ ಹೃದಯವು ಉಲ್ಲಾ ಸದ ಮನೆಯಲ್ಲಿರುವದು.
Cross references
- Psalm 90:12 ಕೀರ್ತನೆಗಳು 90:12ನಾವು ಜ್ಞಾನವುಳ್ಳ ಹೃದಯವನ್ನು ಹೊಂದುವ ಹಾಗೆ, ನಮ್ಮ ದಿವಸಗಳನ್ನು ಲೆಕ್ಕಿಸುವದಕ್ಕೆ ನಮಗೆ ಕಲಿಸು.
- Deuteronomy 32:29 ಧರ್ಮೋಪದೇಶಕಾಂಡ 32:29ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!
- Hebrews 9:27 ಇಬ್ರಿಯರಿಗೆ 9:27ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
- Deuteronomy 32:46 ಧರ್ಮೋಪದೇಶಕಾಂಡ 32:46ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ನಿಮ್ಮ ಹೃದಯಗಳಲ್ಲಿ ಇಡಿರಿ; ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಕೈಕೊಳ್ಳುವದಕ್ಕೆ ನಿಮ್ಮ ಮಕ್ಕಳಿಗೆ ಆಜ್ಞಾಪಿಸಬೇಕು.
- Philippians 3:19 ಫಿಲಿಪ್ಪಿಯವರಿಗೆ 3:19ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
- 1 Peter 4:3–4 1 ಪೇತ್ರನು 4:3–4ಬಂಡುತನ ದುರಾಶೆ ಕುಡಿಕತನ ದುಂದೌತನ ಮದ್ಯಪಾನಗೋಷ್ಠಿ ಅಸಹ್ಯವಾದ ವಿಗ್ರಹಾರಾಧನೆ ಗಳು ಇವುಗಳನ್ನು ನಡಿಸುವದರಲ್ಲಿಯೂ ಅನ್ಯಜನರಿಗೆ ಇಷ್ಟವಾದದ್ದನ್ನು ಮಾಡುವದರಲ್ಲಿಯೂ ನಮ್ಮ ಜೀವಿತ ದಲ್ಲಿ ಕಳೆದುಹೋದ ಕಾಲವೇ ಸಾಕು. ತಾವು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಅವರೊಂದಿಗೆ ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯ ಪಟ್ಟು ನಿಮ್ಮನ್ನು ದೂಷಿಸುತ್ತಾರೆ.
- Haggai 1:5 ಹಗ್ಗಾಯ 1:5ಆದದರಿಂದ ಈಗ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ.
- Romans 6:21–22 ರೋಮಾಪುರದವರಿಗೆ 6:21–22ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ. ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
- Genesis 48:1–22 ಆದಿಕಾಂಡ 48:1–22ಇವುಗಳಾದ ಮೇಲೆ ಒಬ್ಬನು ಯೋಸೇಫನಿಗೆ--ಇಗೋ, ನಿನ್ನ ತಂದೆಯು ಅಸ್ವಸ್ಥ ನಾಗಿದ್ದಾನೆ ಎಂದು ಹೇಳಿದನು. ಆಗ ಅವನು ತನ್ನ ಇಬ್ಬರು ಕುಮಾರರಾದ ಮನಸ್ಸೆಯನ್ನೂ ಎಫ್ರಾಯಾಮ ನನ್ನೂ ಕರಕೊಂಡು ಬಂದನು. ಆಗ ಒಬ್ಬನು ಯಾಕೋಬನಿಗೆ--ಇಗೋ, ನಿನ್ನ ಮಗನಾದ ಯೋಸೇ ಫನು ನಿನ್ನ ಬಳಿಗೆ ಬರುತ್ತಾನೆ ಎಂದು ತಿಳಿಸಿದಾಗ ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಕೂತುಕೊಂಡನು. ಆಗ ಯಾಕೋಬನು ಯೋಸೇಫ ನಿಗೆ ಸರ್ವಶಕ್ತನಾದ ದೇವರು ಕಾನಾನ್ದೇಶದ ಲೂಜ್ ಎಂಬಲ್ಲಿ ನನಗೆ ಕಾಣಿಸಿಕೊಂಡು ನನ್ನನ್ನು ಆಶೀರ್ವದಿಸಿದನು. ಆತನು ನನಗೆ--ಇಗೋ, ನಿನ್ನನ್ನು ಅಭಿವೃದ್ಧಿಪಡಿಸಿ ಹೆಚ್ಚಿಸಿ ಜನ ಸಮೂಹವನ್ನಾಗಿ ಮಾಡಿ ನಿನ್ನ ತರುವಾಯ ಹುಟ್ಟುವ ನಿನ್ನ ಸಂತತಿಗೆ ಈ ದೇಶವನ್ನು ಶಾಶ್ವತ ಸ್ವಾಸ್ಥ್ಯವಾಗಿ ಕೊಡುತ್ತೇನೆ ಎಂದು ಹೇಳಿದನು. ಈಗ ನಾನು ನಿನ್ನ ಬಳಿಗೆ ಐಗುಪ್ತಕ್ಕೆ ಬರುವ ಮೊದಲು ಐಗುಪ್ತದಲ್ಲಿ ನಿನಗೆ ಹುಟ್ಟಿದ ಇಬ್ಬರು ಕುಮಾರರಾದ ಎಫ್ರಾಯಾಮ್ ಮನಸ್ಸೆಯರು ನನ್ನ ವರು ಮತ್ತು ಅವರು ರೂಬೇನ್ ಸಿಮೆಯೋನ್ ಇವ ರಂತೆ ನನ್ನವರಾಗಿರಬೇಕು. ಆದರೆ ಅವರ ತರುವಾಯ ನಿನ್ನಿಂದ ಹುಟ್ಟುವ ಸಂತಾನವು ನಿನ್ನದಾಗಿರಲಿ. ಅವರು ತಮ್ಮ ತಮ್ಮ ಬಾಧ್ಯತೆಯಲ್ಲಿ ತಮ್ಮ ಸಹೋದರರ ಹೆಸರುಗಳ ಪ್ರಕಾರ ಕರೆಯಲ್ಪಡಲಿ. ನಾನು ಪದ್ದನ್ ಅರಾಮಿನಿಂದ ಬಂದಾಗ ಕಾನಾನ್ದೇಶದಲ್ಲಿ ಎಫ್ರಾ ತಿಗೆ ಸ್ವಲ್ಪ ದೂರದಲ್ಲಿರುವಾಗ ರಾಹೇಲಳು ನನ್ನ ಬಳಿಯಲ್ಲಿ ಸತ್ತಳು. ಅಲ್ಲಿ ಅಂದರೆ ಬೇತ್ಲೆಹೇಮೆಂಬ ಎಫ್ರಾತಿನ ಮಾರ್ಗದಲ್ಲಿ ಆಕೆಯನ್ನು ಹೂಣಿಟ್ಟೆನು ಅಂದನು. ಆಗ ಇಸ್ರಾಯೇಲನು ಯೋಸೇಫನ ಮಕ್ಕಳನ್ನು ನೋಡಿ--ಇವರು ಯಾರು ಅಂದನು. ಅದಕ್ಕೆ ಯೋಸೇಫನು ತನ್ನ ತಂದೆಗೆ--ದೇವರು ಈ ಸ್ಥಳದಲ್ಲಿ ನನಗೆ ಕೊಟ್ಟ ನನ್ನ ಕುಮಾರರು ಅಂದನು. ಆಗ ಅವನು ಅವರನ್ನು ನನ್ನ ಬಳಿಗೆ ಕರಕೊಂಡು ಬಾ. ನಾನು ಅವರನ್ನು ಆಶೀರ್ವದಿಸುತ್ತೇನೆ ಅಂದನು. ಆದರೆ ಇಸ್ರಾಯೇಲನು ಮುದುಕನಾಗಿದ್ದದರಿಂದ ಅವನ ಕಣ್ಣುಗಳು ಕಾಣದಷ್ಟು ಮೊಬ್ಬಾಗಿದ್ದವು. ಆಗ ಅವನು ಅವರನ್ನು ಯಾಕೋಬನ ಸವಿಾಪಕ್ಕೆ ತಂದಾಗ ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು. ಇಸ್ರಾಯೇಲನು ಯೋಸೇಫನಿಗೆ--ನಿನ್ನ ಮುಖ ವನ್ನು ನೋಡುವೆನೆಂದು ನಾನು ನೆನಸಲಿಲ್ಲ. ಆದರೆ ಇಗೋ, ನಿನ್ನ ಸಂತಾನವನ್ನು ಸಹ ದೇವರು ನನಗೆ ನೋಡಮಾಡಿದ್ದಾನೆ ಅಂದನು. ಆಗ ಯೋಸೇಫನು ಅವರನ್ನು ತನ್ನ ಮೊಣಕಾಲುಗಳ ಬಳಿಯಿಂದ ದೂರ ಮಾಡಿ ಅಡ್ಡಬಿದ್ದನು. ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯಾಮನನ್ನೂ ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ ಅವರಿಬ್ಬರನ್ನು ತನ್ನ ತಂದೆಯ ಬಳಿಗೆ ತಂದನು. ಆಗ ಇಸ್ರಾಯೇಲನು ತನ್ನ ಬಲಗೈಯನ್ನು ಚಾಚಿ ಚಿಕ್ಕವನಾದ ಎಫ್ರಾಯಾಮನ ತಲೆಯ ಮೇಲೆಯೂ ತನ್ನ ಎಡಗೈಯನ್ನು ಮನಸ್ಸೆಯ ತಲೆಯ ಮೇಲೆಯೂ ಇಟ್ಟನು. ಮನಸ್ಸೆಯು ಹಿರಿಯವನಾಗಿದ್ದರೂ ಬೇಕೆಂದೇ ಅವನು ತನ್ನ ಕೈಗಳನ್ನು ಹಾಗೆ ಇಟ್ಟನು. ಆಗ ಅವನು ಯೋಸೇಫನನ್ನು ಆಶೀರ್ವದಿಸಿ--ನನ್ನ ತಂದೆಗಳಾದ ಅಬ್ರಹಾಮನೂ ಇಸಾಕನೂ ಯಾವಾತನ ಮುಂದೆ ನಡಕೊಂಡರೋ ಆ ದೇವರೇ, ನಾನು ಹುಟ್ಟಿದಂದಿನಿಂದ ಇಂದಿನ ವರೆಗೆ ನನ್ನನ್ನು ಪೋಷಣೆ ಮಾಡಿದ ದೇವರು, ಎಲ್ಲಾ ಕೇಡಿನಿಂದ ನನ್ನನ್ನು ತಪ್ಪಿಸಿದ ದೂತನು ಈ ಹುಡುಗರನ್ನು ಆಶೀರ್ವದಿಸಲಿ. ನನ್ನ ಹೆಸರಿನಿಂದ ನನ್ನ ತಂದೆಗಳಾದ ಅಬ್ರಹಾಮ್ ಇಸಾಕ್ ಅವರ ಹೆಸರಿನಿಂದ ಅವರು ಕರೆಯಲ್ಪಡಲಿ. ಅವರು ಭೂಮಧ್ಯದಲ್ಲಿ ಸಮೂಹವಾಗಿ ಹೆಚ್ಚಲಿ ಅಂದನು. ತನ್ನ ತಂದೆಯು ಎಫ್ರಾಯಾಮನ ತಲೆಯ ಮೇಲೆ ಬಲಗೈ ಇಟ್ಟದ್ದನ್ನು ಯೋಸೇಫನು ನೋಡಿದಾಗ ಅದು ಅವನ ದೃಷ್ಟಿಗೆ ಅಯುಕ್ತವಾಗಿತ್ತು. ಆದದರಿಂದ ಅವನು ತನ್ನ ತಂದೆಯ ಕೈಯನ್ನು ಹಿಡಿದು ಎಫ್ರಾಯಾಮನ ತಲೆಯ ಮೇಲಿಂದ ತೆಗೆದು ಮನಸ್ಸೆಯ ತಲೆಯ ಮೇಲೆ ಇಡುವದಕ್ಕಿದ್ದನು. ಯೋಸೇಫನು ತನ್ನ ತಂದೆಗೆ--ನನ್ನ ಅಪ್ಪಾ, ಹಾಗಲ್ಲ, ಇವನೇ ಚೊಚ್ಚಲ ಮಗನು. ಇವನ ತಲೆಯ ಮೇಲೆ ಬಲಗೈ ಇಡು ಅಂದನು. ಅದಕ್ಕೆ ಅವನ ತಂದೆಯು ಒಪ್ಪದೆ--ನನಗೆ ತಿಳಿಯಿತು, ನನ್ನ ಮಗನೇ, ನನಗೆ ತಿಳಿಯಿತು. ಅವನು ಸಹ ಜನಾಂಗವಾಗುವದಲ್ಲದೆ ಅವನು ದೊಡ್ಡವನಾ ಗುವನು. ಆದಾಗ್ಯೂ ಅವನ ತಮ್ಮನು ನಿಶ್ಚಯವಾಗಿ ಅವನಿಗಿಂತ ದೊಡ್ಡವನಾಗುವನು. ಅವನ ಸಂತ ತಿಯು ಜನಾಂಗಗಳ ಸಮೂಹವಾಗುವದು ಅಂದನು. ಹೀಗೆ ಅವನು ಅವರನ್ನು ಆ ದಿನದಲ್ಲಿ ಆಶೀರ್ವ ದಿಸಿ--ನಿನ್ನಲ್ಲಿ ಇಸ್ರಾಯೇಲ್ ಆಶೀರ್ವದಿಸಲ್ಪಡು ವದು. ಎಫ್ರಾಯಾಮ್ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲೆಂದು ಹೇಳುವ ಹೇಳಿಕೆಯಾಗುವದು ಎಂದು ಹೇಳಿ ಎಫ್ರಾಯಾಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು. ಆಗ ಇಸ್ರಾಯೇಲನು ಯೋಸೇಫನಿಗೆ--ಇಗೋ, ನಾನು ಸಾಯುತ್ತೇನೆ; ಆದರೆ ದೇವರು ನಿಮ್ಮ ಸಂಗಡವಿದ್ದು ನಿಮ್ಮನ್ನು ನಿಮ್ಮ ತಂದೆಗಳ ದೇಶಕ್ಕೆ ಮತ್ತೆ ಸೇರಿಸುವನು.ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು. ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು.
- Amos 6:3–6 ಆಮೋಸ 6:3–6ನೀವು ಕೆಟ್ಟ ದಿನವನ್ನು ದೂರಮಾಡಿ ಕೊಂಡು ಬಲಾತ್ಕಾರದ ಪೀಠವನ್ನು ಹತ್ತಿರ ಮಾಡಿಕೊ ಳ್ಳುತ್ತೀರಿ. ದಂತದ ಮಂಚಗಳ ಮೇಲೆ ಮಲಗಿಕೊಳ್ಳು ತ್ತಾರೆ; ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿ ಕೊಳ್ಳುತ್ತಾರೆ; ಮಂದೆಯೊಳಗಿಂದ ಕುರಿಮರಿಗಳನ್ನು, ಹಟ್ಟಿಯ ಮಂದೆಯೊಳಗಿಂದ ಕರುಗಳನ್ನು ತಿನ್ನುತ್ತಾರೆ. ವೀಣೆಯ ಸ್ವರಕ್ಕೆ ಹಾಡುತ್ತಾರೆ; ದಾವೀದನ ಹಾಗೆ ತಮಗೆ ತಾವೇ ಗಾನ ವಾದ್ಯಗಳನ್ನು ಕಲ್ಪಿಸಿಕೊಳ್ಳು ತ್ತಾರೆ. ದ್ರಾಕ್ಷಾರಸದ ಪಾತ್ರೆಗಳಲ್ಲಿ ಕುಡಿಯುತ್ತಾರೆ. ಶ್ರೇಷ್ಠವಾದ ಎಣ್ಣೆಗಳಿಂದ ತಮ್ಮನ್ನು ಅಭಿಷೇಕಿಸಿ ಕೊಳ್ಳುತ್ತಾರೆ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡು ವದಿಲ್ಲ.
- Numbers 23:10 ಅರಣ್ಯಕಾಂಡ 23:10ಯಾಕೋಬನ ಧೂಳನ್ನು ಎಣಿಸುವದಕ್ಕೂ ಇಸ್ರಾಯೇಲಿನ ನಾಲ್ಕನೇ ಒಂದು ಪಾಲನ್ನಾದರೂ ಲೆಕ್ಕ ಮಾಡುವದಕ್ಕೂ ಯಾರಿಂದಾದೀತು? ನೀತಿವಂತನು ಸಾಯುವಂತೆ ನಾನೂ ಸಾಯಬೇಕು, ನನ್ನ ಕಡೇ ಅಂತ್ಯವು ಅವನಂತೆಯೇ ಆಗಲಿ ಎಂದು ಹೇಳಿದನು.
- Genesis 50:15–17 ಆದಿಕಾಂಡ 50:15–17ತಮ್ಮ ತಂದೆ ಸತ್ತುಹೋದದ್ದನ್ನು ಯೋಸೇಫನ ಸಹೋದರರು ನೋಡಿ--ಒಂದು ವೇಳೆ ಯೋಸೇಫನು ನಮ್ಮನ್ನು ಹಗೆಮಾಡಿ ನಾವು ಅವನಿಗೆ ಮಾಡಿದ್ದ ಎಲ್ಲಾ ಕೇಡಿಗೆ ನಿಶ್ಚಯವಾಗಿ ಪ್ರತೀಕಾರ ಮಾಡಾನು ಎಂದು ಅಂದುಕೊಂಡು ಅವರು ಒಬ್ಬ ಸೇವಕನನ್ನು ಕಳುಹಿಸಿ ಯೋಸೇಫನಿಗೆ ಹೇಳಿದ್ದೇನಂದರೆ--ನಿನ್ನ ತಂದೆಯು ಸಾಯುವದಕ್ಕಿಂತ ಮುಂಚೆ ನಿನ್ನ ಸಹೋದರರ ಅಪರಾಧವನ್ನೂ ಅವರ ಪಾಪವನ್ನೂ ಮನ್ನಿಸು ಎಂಬದಾಗಿ ಯೋಸೇಫನಿಗೆ ಹೇಳಿರಿ ಎಂದು ಆಜ್ಞಾಪಿಸಿದ್ದಾನೆ. ಹೀಗಿರುವದರಿಂದ ನಿನ್ನ ತಂದೆಯ ದೇವರ ದಾಸರಾದ ನಾವು ಮಾಡಿದ ಅಪರಾಧವನ್ನು ಕ್ಷಮಿಸು ಅಂದರು. ಹೀಗೆ ಅವರು ಯೋಸೇಫನ ಸಂಗಡ ಮಾತನಾಡುತ್ತಿರುವಾಗ ಅವನು ಅತ್ತನು.
Original words (Hebrew)
- better · H2896טוֹב ṭôwb
- go · H3212יָלַךְ yâlak
- house · H1004בַּיִת bayith
- mourning · H60אֵבֶל ʼêbel
- go · H3212יָלַךְ yâlak
- house · H1004בַּיִת bayith
- feasting · H4960מִשְׁתֶּה mishteh
- for · H834אֲשֶׁר ʼăsher
- end · H5490סוֹף çôwph
- men · H120אָדָם ʼâdâm
- living · H2416חַי chay
- lay · H5414נָתַן nâthan
- heart · H3820לֵב lêb