Ecclesiastes · chapter 7 · verse 3
Ecclesiastes 7:3 in Kannada
ನಗೆಗಿಂತ ದುಃಖವು ವಾಸಿ; ಹೃದಯದ ದುಃಖದ ಭಾವನೆಯಿಂದ ಹೃದಯವು ಗುಣವಾಗುತ್ತದೆ.
Nageginta duhkhavu vaasi; hrudayada duhkhada bhaavaneyinda hrudayavu gunavaaguttade.
Ecclesiastes 7:3 in English
- King James Version (KJV)
- Sorrow [is] better than laughter: for by the sadness of the countenance the heart is made better.
- World English Bible (WEB)
- Sorrow is better than laughter; for by the sadness of the face the heart is made good.
- American Standard Version (ASV)
- Sorrow is better than laughter; for by the sadness of the countenance the heart is made glad.
- Bible in Basic English (BBE)
- Sorrow is better than joy; when the face is sad the mind gets better.
- Darby Translation (DBY)
- Vexation is better than laughter; for by the sadness of the countenance the heart is made better.
- Webster's Bible (WBS)
- Sorrow [is] better than laughter: for by the sadness of the countenance the heart is made better.
- Young's Literal Translation (YLT)
- Better [is] sorrow than laughter, For by the sadness of the face the heart becometh better.
Read in context
- 1ಅಮೂಲ್ಯವಾದ ತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ; ಒಬ್ಬನ ಜನ್ಮದಿನಕ್ಕಿಂತ ಮರಣದ ದಿನವೇ ಮೇಲು.
- 2ಔತಣದ ಮನೆಗೆ ಹೋಗುವದಕ್ಕಿಂತ ಗೋಳಾಟದ ಮನೆಗೆ ಹೋಗು ವದು ಲೇಸು; ಎಲ್ಲಾ ಮನುಷ್ಯರ ಅಂತ್ಯವು ಇದಾಗಿದೆ; ಇದರಿಂದ ಜೀವಿತನು ಅದನ್ನು ತಮ್ಮ ಹೃದಯದಲ್ಲಿ ಇಟ್ಟು ಸ್ಮರಿಸಿಕೊಳ್ಳುವನು.
- 3ನಗೆಗಿಂತ ದುಃಖವು ವಾಸಿ; ಹೃದಯದ ದುಃಖದ ಭಾವನೆಯಿಂದ ಹೃದಯವು ಗುಣವಾಗುತ್ತದೆ.
- 4ಗೋಳಾಟದ ಮನೆಯಲ್ಲಿ ಜ್ಞಾನಿಯ ಹೃದಯವು ಇರುವದು; ಮೂಢರ ಹೃದಯವು ಉಲ್ಲಾ ಸದ ಮನೆಯಲ್ಲಿರುವದು.
- 5ಮೂಢರ ಹಾಡನ್ನು ಒಬ್ಬ ಮನುಷ್ಯನು ಕೇಳುವದಕ್ಕಿಂತ ಜ್ಞಾನಿಗಳ ಗದರಿಕೆಯನ್ನು ಕೇಳುವದು ಲೇಸು.
Cross references
- 2 Corinthians 7:9–11 2 ಕೊರಿಂಥದವರಿಗೆ 7:9–11ಆದರೂ ನಿಮಗೆ ದುಃಖವಾಯಿತೆಂದು ನಾನು ಸಂತೋಷಪಡದೆ ನೀವು ದುಃಖಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಈಗ ಸಂತೋಷ ಪಡುತ್ತೇನೆ; ಯಾಕಂದರೆ ನೀವು ದೇವರ ಚಿತ್ತಾನುಸಾರ ವಾಗಿ ದುಃಖಿಸಿದ್ದರಿಂದ ನಮ್ಮಿಂದ ಯಾವದರಲ್ಲಿಯೂ ನೀವು ನಷ್ಟಪಡಲಿಲ್ಲವಲ್ಲಾ. ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ. ಯಾಕಂದರೆ ದೇವರ ಚಿತ್ತಾನುಸಾರವಾದ ಈ ದುಃಖವು ನಿಮ್ಮಲ್ಲಿ ಎಂಥ ಎಚ್ಚರಿಕೆಯನ್ನೂ ಎಂಥ ನಿರ್ದೋಷತ್ವವನ್ನೂ ಎಂಥ ರೋಷವನ್ನೂ ಎಂಥ ಭಯವನ್ನೂ ಎಂಥ ಅಧಿಕವಾದ ಹಂಬಲವನ್ನೂ ಎಂಥ ಆಸಕ್ತಿಯನ್ನೂ ಎಂಥ ಪ್ರತಿಕಾರವನ್ನೂ ಹುಟ್ಟಿಸಿತೆಂದು ನೋಡಿರಿ. ಇದರಲ್ಲಿ ನೀವೆಲ್ಲಾ ನಿರ್ದೋಷಿಗಳೆಂದು ತೋರಿಸಿಕೊಂ
- Romans 5:3–4 ರೋಮಾಪುರದವರಿಗೆ 5:3–4ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ ತಾಳ್ಮೆಯಿಂದ ಅನುಭವವೂ ಅನುಭವ ದಿಂದ ನಿರೀಕ್ಷೆಯೂ ಉಂಟಾಗುತ್ತವೆಂದು ಬಲ್ಲೆವು.
- James 4:8–10 ಯಾಕೋಬನು 4:8–10ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ. ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗೆಯು ದುಃಖಕ್ಕೂ ನಿಮ್ಮ ಸಂತೋಷವು ವ್ಯಥೆಗೂ ತಿರುಗಿಕೊಳ್ಳಲಿ. ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿ ಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆತ್ತುವನು.
- John 16:20–22 ಯೋಹಾನನು 16:20–22ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು. ಒಬ್ಬ ಸ್ತ್ರೀಗೆ ತನ್ನ ಪ್ರಸವವೇದನೆಯ ಗಳಿಗೆ ಬಂದಾಗ ದುಃಖವಿರುವದು; ಆಕೆಯು ಮಗುವನ್ನು ಹೆತ್ತಕೂಡಲೆ ಈ ಲೋಕದೊಳಗೆ ಒಬ್ಬ ಮನುಷ್ಯನು ಹುಟ್ಟಿದನೆಂದು ಸಂತೋಷದಿಂದ ಆ ನೋವನ್ನು ಆಕೆಯು ನೆನಪಿಗೆ ತರುವದೇ ಇಲ್ಲ. ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
- Hebrews 12:10–11 ಇಬ್ರಿಯರಿಗೆ 12:10–11ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ. ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರ ವಾಗಿ ತೋಚದೆ ಕ್ರೂರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನ ವುಳ್ಳ ನೀತಿಯ ಫಲವನ್ನು ಕೊಡುತ್ತದೆ.
- 2 Corinthians 4:17 2 ಕೊರಿಂಥದವರಿಗೆ 4:17ಹೇಗಂದರೆ ಕ್ಷಣಮಾತ್ರ ವಿರುವ ನಮ್ಮ ಹಗುರವಾದ ಸಂಕಟವು ಅತ್ಯಂತಾಧಿಕ ವಾದ ಮತ್ತು ನಿರಂತರವಾಗಿರುವ ಗೌರವವುಳ್ಳ ಮಹಿಮೆಯನ್ನುಂಟು ಮಾಡುತ್ತದೆ.ನಾವು ಕಾಣು ವಂಥವುಗಳನ್ನು ದೃಷ್ಟಿಸದೆ ಕಾಣದಿರುವಂಥವುಗಳನ್ನು ದೃಷ್ಟಿಸುವವರಾಗಿದ್ದೇವೆ; ಯಾಕಂದರೆ ಕಾಣುವಂಥ ವುಗಳು ಸ್ವಲ್ಪಕಾಲ ಮಾತ್ರ ಇರುವವು; ಕಾಣದಿರುವಂಥ ವುಗಳು ಸದಾಕಾಲವೂ ಇರುವವು.
- Jeremiah 31:15–20 ಯೆರೆಮೀಯ 31:15–20ಕರ್ತನು ಹೀಗೆ ಹೇಳುತ್ತಾನೆ; ರಾಮದಲ್ಲಿ ಸ್ವರವೂ ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಲ್ಪ ಟ್ಟಿತು; ರಾಹೇಲಳು ತನ್ನ ಮಕ್ಕಳಿಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಅಳುತ್ತಾಳೆ; ಕರ್ತನು ಹೀಗೆ ಹೇಳು ತ್ತಾನೆ--ನಿನ್ನ ಸ್ವರವನ್ನು ಅಳದ ಹಾಗೆಯೂ ಕಣ್ಣುಗಳು ಕಣ್ಣೀರು ಇಡದ ಹಾಗೆಯೂ ಬಿಗಿ ಹಿಡಿ; ನಿನ್ನ ಕೆಲಸಕ್ಕೆ ಪ್ರತಿಫಲ ಉಂಟೆಂದು ಕರ್ತನು ಅನ್ನುತ್ತಾನೆ; ಅವರು ಶತ್ರುವಿನ ದೇಶದಿಂದ ತಿರುಗಿ ಬರುವರು. ನಿನ್ನ ಅಂತ್ಯದಲ್ಲಿ ನಿರೀಕ್ಷೆ ಉಂಟೆಂದು ಕರ್ತನು ಅನ್ನುತ್ತಾನೆ; ನಿನ್ನ ಮಕ್ಕಳು ತಮ್ಮ ಮೇರೆಗೆ ತಿರುಗಿ ಬರುವರು. ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ. ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು. ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.
- James 1:2–4 ಯಾಕೋಬನು 1:2–4ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ. ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ. ಆ ತಾಳ್ಮೆಯು ಸಿದ್ದಿಗೆ ಬಂದಾಗ ನೀವು ಸಂಪೂರ್ಣರೂ ಸಿದ್ಧವಾದವರೂ ಯಾವದರ ಲ್ಲಿಯೂ ಕಡಿಮೆಯಿಲ್ಲದವರೂ ಆಗಿರುವಿರಿ.
- Psalm 119:71 ಕೀರ್ತನೆಗಳು 119:71ನಿನ್ನ ನಿಯಮಗಳನ್ನು ಕಲಿಯುವ ಹಾಗೆ ನಾನು ಶ್ರಮೆಪಟ್ಟದ್ದು ನನಗೆ ಒಳ್ಳೇದು.
- Zechariah 12:10–14 ಜೆಕರ್ಯ 12:10–14ದಾವೀದನ ಮನೆತನದವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಕೃಪೆಯ ಆತ್ಮವನ್ನೂ ಬಿನ್ನಹಗಳ ಆತ್ಮವನ್ನೂ ಒಯ್ಯುವೆನು; ಇರಿದವರು ಆತನನ್ನು ದೃಷ್ಟಿಸಿ ನೋಡುವರು; ಒಬ್ಬನೇ ಮಗನ ನಿಮಿತ್ತ ಗೋಳಾಡುವವನ ಹಾಗೆ ಆತನ ನಿಮಿತ್ತ ಗೋಳಾಡುವರು; ಚೊಚ್ಚಲ ಮಗನ ನಿಮಿತ್ತ ವ್ಯಥೆಪಡುವವನ ಹಾಗೆ ಆತನ ನಿಮಿತ್ತ ವ್ಯಥೆಪಡು ವರು. ಮೆಗಿದ್ದೋವಿನ ತಗ್ಗಿನಲ್ಲಾದ ಹದದ್ ರಿಮ್ಮೊನಿನ ಗೋಳಾಟದ ಹಾಗೆ ಆ ದಿನ ದಲ್ಲಿ ಯೆರೂಸಲೇಮಿನೊಳಗೆ ಮಹಾಗೋಳಾಟವಿ ರುವದು. ದೇಶವು ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾಗಿ ಗೋಳಾಡುವದು; ದಾವೀದನ ಮನೆಯ ಗೋತ್ರವು ಪ್ರತ್ಯೇಕ ಅವರ ಹೆಂಡತಿಯರು ಪ್ರತ್ಯೇಕ; ನಾತಾನನ ಮನೆತನದ ಗೋತ್ರವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ. ಲೇವಿಯರ ಮನೆತ ನದ ಗೋತ್ರವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ; ಶಿಮ್ಮಿಯನ ಗೋತ್ರವು ಪ್ರತ್ಯೇಕ, ಅವರ ಹೆಂಡತಿ ಯರು ಪ್ರತ್ಯೇಕ.ಉಳಿದ ಗೋತ್ರಗ ಳೆಲ್ಲಾ ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾ ಗಿಯೂ ಅವರ ಹೆಂಡತಿಯರು ಪ್ರತ್ಯೇಕವಾಗಿಯೂ ಗೋಳಾಡುವರು. ಉಳಿದ ಗೋತ್ರಗ ಳೆಲ್ಲಾ ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾ ಗಿಯೂ ಅವರ ಹೆಂಡತಿಯರು ಪ್ರತ್ಯೇಕವಾಗಿಯೂ ಗೋಳಾಡುವರು.
- Luke 6:21 ಲೂಕನು 6:21ಈಗ ಹಸಿದವರಾದ ನೀವು ಧನ್ಯರು; ಯಾಕಂದರೆ ನೀವು ತೃಪ್ತಿ ಹೊಂದುವಿರಿ. ಈಗ ಅಳುವವರಾದ ನೀವು ಧನ್ಯರು; ಯಾಕಂದರೆ ನೀವು ನಗುವಿರಿ.
- Luke 6:25 ಲೂಕನು 6:25ತೃಪ್ತಿಯಿಂದಿರುವವರೇ, ನಿಮಗೆ ಅಯ್ಯೋ! ಯಾಕಂದರೆ ನಿಮಗೆ ಹಸಿವೆಯಾಗುವದು. ಈಗ ನಗುವವರೇ, ನಿಮಗೆ ಅಯ್ಯೋ! ನೀವು ಶೋಕಿಸಿ ಅಳುವಿರಿ.