Ecclesiastes · chapter 7 · verse 4
Ecclesiastes 7:4 in Kannada
ಗೋಳಾಟದ ಮನೆಯಲ್ಲಿ ಜ್ಞಾನಿಯ ಹೃದಯವು ಇರುವದು; ಮೂಢರ ಹೃದಯವು ಉಲ್ಲಾ ಸದ ಮನೆಯಲ್ಲಿರುವದು.
Golaatada maneyalli jnyaaniya hrudayavu iruvadu; moodhara hrudayavu ullaa sada maneyalliruvadu.
Ecclesiastes 7:4 in English
- King James Version (KJV)
- The heart of the wise [is] in the house of mourning; but the heart of fools [is] in the house of mirth.
- World English Bible (WEB)
- The heart of the wise is in the house of mourning; but the heart of fools is in the house of mirth.
- American Standard Version (ASV)
- The heart of the wise is in the house of mourning; but the heart of fools is in the house of mirth.
- Bible in Basic English (BBE)
- The hearts of the wise are in the house of weeping; but the hearts of the foolish are in the house of joy.
- Darby Translation (DBY)
- The heart of the wise is in the house of mourning, but the heart of fools in the house of mirth.
- Webster's Bible (WBS)
- The heart of the wise [is] in the house of mourning; but the heart of fools [is] in the house of mirth.
- Young's Literal Translation (YLT)
- The heart of the wise [is] in a house of mourning, And the heart of fools in a house of mirth.
Read in context
- 2ಔತಣದ ಮನೆಗೆ ಹೋಗುವದಕ್ಕಿಂತ ಗೋಳಾಟದ ಮನೆಗೆ ಹೋಗು ವದು ಲೇಸು; ಎಲ್ಲಾ ಮನುಷ್ಯರ ಅಂತ್ಯವು ಇದಾಗಿದೆ; ಇದರಿಂದ ಜೀವಿತನು ಅದನ್ನು ತಮ್ಮ ಹೃದಯದಲ್ಲಿ ಇಟ್ಟು ಸ್ಮರಿಸಿಕೊಳ್ಳುವನು.
- 3ನಗೆಗಿಂತ ದುಃಖವು ವಾಸಿ; ಹೃದಯದ ದುಃಖದ ಭಾವನೆಯಿಂದ ಹೃದಯವು ಗುಣವಾಗುತ್ತದೆ.
- 4ಗೋಳಾಟದ ಮನೆಯಲ್ಲಿ ಜ್ಞಾನಿಯ ಹೃದಯವು ಇರುವದು; ಮೂಢರ ಹೃದಯವು ಉಲ್ಲಾ ಸದ ಮನೆಯಲ್ಲಿರುವದು.
- 5ಮೂಢರ ಹಾಡನ್ನು ಒಬ್ಬ ಮನುಷ್ಯನು ಕೇಳುವದಕ್ಕಿಂತ ಜ್ಞಾನಿಗಳ ಗದರಿಕೆಯನ್ನು ಕೇಳುವದು ಲೇಸು.
- 6ಗಡಿಗೆಯ ಕೆಳಗೆ ಮುಳ್ಳುಗಳ ಚಟಚಟನೆಯ ಶಬ್ದ ಹೇಗೋ ಮೂಢನ ನಗುವು ಹಾಗೆಯೇ ಇರುವದು; ಇದೂ ಕೂಡ ವ್ಯರ್ಥವೇ.
Cross references
- Matthew 8:14–16 ಮತ್ತಾಯನು 8:14–16ಇದಾದ ಮೇಲೆ ಯೇಸು ಪೇತ್ರನ ಮನೆಗೆ ಬಂದು ಅವನ ಹೆಂಡತಿಯ ತಾಯಿಯು ಜ್ವರದಿಂದ ಮಲಗಿರುವದನ್ನು ಕಂಡನು. ಆತನು ಆಕೆಯ ಕೈಯನ್ನು ಮುಟ್ಟಿದಾಗ ಜ್ವರವು ಆಕೆಯನ್ನು ಬಿಟ್ಟಿತು; ಮತ್ತು ಆಕೆಯು ಎದ್ದು ಅವರಿಗೆ ಉಪಚಾರ ಮಾಡಿದಳು. ಸಾಯಂಕಾಲವಾದಾಗ ದೆವ್ವಗಳು ಹಿಡಿದಿದ್ದ ಬಹಳ ಜನರನ್ನು ಅವರು ಆತನ ಬಳಿಗೆ ತಂದರು; ಮತ್ತು ಆತನು ತನ್ನ ಮಾತಿನಿಂದ ದೆವ್ವಗಳನ್ನು ಬಿಡಿಸಿ ದ್ದಲ್ಲದೆ ಅಸ್ವಸ್ಥವಾಗಿದ್ದವರೆಲ್ಲರನ್ನೂ ಸ್ವಸ್ಥ ಮಾಡಿದನು.
- 1 Samuel 25:36 1 ಸಮುವೇಲನು 25:36ತರುವಾಯ ಅಬೀಗೈಲಳು ನಾಬಾಲನ ಬಳಿಗೆ ಬಂದಾಗ ಇಗೋ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸ ಗೊಂಡಿತ್ತು. ಆದಕಾರಣ ಅವಳು ಉದಯವಾಗುವ ವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ ಹೆಚ್ಚಾದದ್ದ ನ್ನಾಗಲಿ ತಿಳಿಸಲಿಲ್ಲ.
- Luke 7:12–13 ಲೂಕನು 7:12–13ಆತನು ಪಟ್ಟಣ ದ್ವಾರದ ಸವಿಾಪಕ್ಕೆ ಬಂದಾಗ ಇಗೋ, ಸತ್ತುಹೋಗಿದ್ದ ಒಬ್ಬ ಮನುಷ್ಯನನ್ನು ಹೊತ್ತುಕೊಂಡು ಹೋಗುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ವಿಧವೆಯಾಗಿ ದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು. ಕರ್ತನು ಆಕೆಯನ್ನು ನೋಡಿ ಆಕೆಯ ಮೇಲೆ ಕನಿಕರಪಟ್ಟು ಆಕೆಗೆ--ಅಳಬೇಡ ಅಂದನು.
- Daniel 5:30 ದಾನಿಯೇಲನು 5:30ಅದೇ ರಾತ್ರಿಯಲ್ಲಿ ಕಸ್ದೀಯರ ಅರಸನಾದ ಬೇಲ್ಯಚ್ಚರನು ಕೊಲ್ಲಲ್ಪಟ್ಟನು.ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.
- Hosea 7:5 ಹೋಶೇಯ 7:5ನಮ್ಮ ಅರಸನ ದಿನದಲ್ಲಿ ಪ್ರಧಾನರು ದ್ರಾಕ್ಷಾರಸದ ಬುದ್ದಲಿಗಳಿಂದ ಅಸ್ವಸ್ಥರಾ ಗುತ್ತಾರೆ, ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ.
- 1 Samuel 30:16 1 ಸಮುವೇಲನು 30:16ಇವನು ದಾವೀದನನ್ನು ಕರಕೊಂಡು ಅಲ್ಲಿಗೆ ಹೋದಾಗ ಅವರು ಭೂಮಿಯ ಮೇಲೆ ಎಲ್ಲೆಲ್ಲಿಯೂ ಫಿಲಿಷ್ಟಿಯರ ದೇಶ ದಲ್ಲಿಯೂ ಯೆಹೂದ ದೇಶದಲ್ಲಿಯೂ ವ್ಯಾಪಿಸಿ ಕೊಂಡು ಎಲ್ಲಾ ಕೊಳ್ಳೆತಕ್ಕೊಂಡು ಬಂದದರಿಂದ ತಿಂದು ಕುಡಿದು ನಾಟ್ಯವಾಡಿಕೊಂಡಿದ್ದರು.
- Isaiah 53:3–4 ಯೆಶಾಯ 53:3–4ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ. ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು.
- 1 Kings 20:16 1 ಅರಸುಗಳು 20:16ಅವರು ಮಧ್ಯಾಹ್ನದಲ್ಲಿ ಹೊರಟರು; ಆದರೆ ಬೆನ್ಹದದನೂ ಅವನ ಸಹಾಯ ಕರಾದ ಮೂವತ್ತೆರಡು ಮಂದಿ ಅರಸುಗಳೂ ಕೂಡ ಡೇರೆಗಳಲ್ಲಿ ಅಮಲೇರುವ ಹಾಗೆ ಕುಡಿಯುತ್ತಾ ಇದ್ದರು.
- Mark 5:38–43 ಮಾರ್ಕನು 5:38–43ಆತನು ಆ ಸಭಾಮಂದಿರದ ಅಧಿಕಾರಿಯ ಮನೆಗೆ ಬಂದು ಗೊಂದಲವನ್ನೂ ಬಹಳವಾಗಿ ಗೋಳಾಡುತ್ತಾ ಅಳುತ್ತಿರುವವರನ್ನೂ ಕಂಡನು. ಆತನು ಒಳಕ್ಕೆ ಬಂದಾಗ ಅವರಿಗೆ--ನೀವು ಈ ಗೊಂದಲ ಮಾಡು ವದೂ ಅಳುವದೂ ಯಾಕೆ? ಹುಡುಗಿಯು ಸತ್ತಿಲ್ಲ; ನಿದ್ರಿಸುತ್ತಿದ್ದಾಳೆ ಅಂದನು. ಆಗ ಅವರು ಆತನಿಗೆ ಹಾಸ್ಯಮಾಡಿ ನಕ್ಕರು. ಆದರೆ ಆತನು ಅವರೆಲ್ಲರನ್ನು ಹೊರಗೆ ಹಾಕಿ ಹುಡುಗಿಯ ತಂದೆ ತಾಯಿಗಳನ್ನು ಮತ್ತು ತನ್ನ ಜೊತೆಯಲ್ಲಿದ್ದವರನ್ನು ಕರೆದುಕೊಂಡು ಒಳಕ್ಕೆ ಹುಡುಗಿಯು ಮಲಗಿದ್ದಲ್ಲಿಗೆ ಹೋದನು. ಮತ್ತು ಆತನು ಆ ಹುಡುಗಿಯ ಕೈ ಹಿಡಿದು ಆಕೆಗೆ --ತಲಿಥಾ ಕೂಮ್ ಅಂದನು. ಹುಡುಗಿಯೇ, ಎದ್ದೇಳು ಎಂದು ನಾನು ನಿನಗೆ ಹೇಳುತ್ತೇನೆ ಎಂದರ್ಥ. ಕೂಡಲೆ ಆ ಹನ್ನೆರಡು ವರುಷದ ಹುಡುಗಿಯು ಎದ್ದು ನಡೆದಾಡಿದಳು; ಆಗ ಅವರು ಅತ್ಯಾಶ್ಚರ್ಯ ದಿಂದ ಬೆರಗಾದರು.ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು. ಇದು ಯಾವ ಮನುಷ್ಯ ನಿಗೂ ತಿಳಿಯಬಾರದೆಂದು ಆತನು ಅವರಿಗೆ ಖಂಡಿತ ವಾಗಿ ಹೇಳಿ ಅವಳಿಗೆ ತಿನ್ನುವದಕ್ಕೆ ಏನಾದರೂ ಕೊಡಬೇಕೆಂದು ಅಪ್ಪಣೆಕೊಟ್ಟನು.
- Jeremiah 51:39 ಯೆರೆಮೀಯ 51:39ಅವರ ಉರಿಯಲ್ಲಿ ನಾನು ಅವರ ಔತಣವನ್ನು ಸಿದ್ಧಮಾಡುವೆನು; ಅವರು ಉಲ್ಲಾಸಿಸಿ ನಿತ್ಯವಾದ ನಿದ್ರೆಯನ್ನು ಮಾಡಿ ಎಚ್ಚರವಾಗದ ಹಾಗೆ ಅವರಿಗೆ ಅಮಲೇರಿಸುವೆನೆಂದು ಕರ್ತನು ಅನ್ನುತ್ತಾನೆ.
- Isaiah 21:4 ಯೆಶಾಯ 21:4ನನ್ನ ಹೃದಯವು (ಎದುರಿಸುತ್ತದೆ) ಗಾಬರಿಗೊಂಡಿದೆ, ನಡು ಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನನ್ನ ಆನಂ ದದ ರಾತ್ರಿಯನ್ನು ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ.
- John 11:31–35 ಯೋಹಾನನು 11:31–35ಮನೆ ಯಲ್ಲಿ ಆಕೆಯ ಕೂಡ ಇದ್ದು ಆಕೆಯನ್ನು ಆದರಿಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವದನ್ನು ನೋಡಿ--ಆಕೆಯು ಅಳುವದಕ್ಕಾಗಿ ಸಮಾಧಿಯ ಬಳಿಗೆ ಹೋಗುತ್ತಾಳೆಂದು ತಿಳಿದು ಆಕೆ ಯನ್ನು ಹಿಂಬಾಲಿಸಿದರು. ತರುವಾಯ ಯೇಸು ಇದ್ದ ಸ್ಥಳಕ್ಕೆ ಮರಿಯಳು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು ಆತನಿಗೆ--ಕರ್ತನೇ, ನೀನು ಇಲ್ಲಿ ಇರುತ್ತಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ ಎಂದು ಹೇಳಿದಳು. ಆಕೆಯು ಅಳುವದನ್ನು ಮತ್ತು ಆಕೆಯೊಂದಿಗೆ ಬಂದ ಯೆಹೂದ್ಯರು ಸಹ ಅಳುವದನ್ನು ಯೇಸು ನೋಡಿದಾಗ ಆತ್ಮದಲ್ಲಿ ಕಳವಳಪಟ್ಟು ಮೂಲ್ಗುತ್ತಾ-- ಅವನನ್ನು ಎಲ್ಲಿ ಇಟ್ಟಿದ್ದೀರಿ ಅಂದನು. ಅವರು ಆತನಿಗೆ--ಕರ್ತನೇ, ಬಂದು ನೋಡು ಅಂದರು. ಯೇಸು ಅತ್ತನು.