Ecclesiastes · chapter 8 · verse 1
Ecclesiastes 8:1 in Kannada
ಜ್ಞಾನಿಯ ಹಾಗೆ ಇರುವವನು ಯಾರು? ಈ ಸಂಗತಿಯ ಅರ್ಥವನ್ನು ಬಲ್ಲವನು ಯಾರು? ಒಬ್ಬ ಮನುಷ್ಯನ ಜ್ಞಾನವು ಅವನ ಮುಖ ವನ್ನು ಬೆಳಗಿಸುತ್ತದೆ, ಅವನ ಧೈರ್ಯದ ಮುಖವು ಬದಲಾಗುವದು.
Jnyaaniya haage iruvavanu yaaru? Ee sangatiya arthavannu ballavanu yaaru? Obba manushyana jnyaanavu avana mukha vannu belagisuttade, avana dhairyada mukhavu badalaaguvadu.
Ecclesiastes 8:1 in English
- King James Version (KJV)
- Who [is] as the wise [man]? and who knoweth the interpretation of a thing? a man’s wisdom maketh his face to shine, and the boldness of his face shall be changed.
- World English Bible (WEB)
- Who is like the wise man? And who knows the interpretation of a thing? A man’s wisdom makes his face shine, and the hardness of his face is changed.
- American Standard Version (ASV)
- Who is as the wise man? and who knoweth the interpretation of a thing? A man’s wisdom maketh his face to shine, and the hardness of his face is changed.
- Bible in Basic English (BBE)
- Who is like the wise man? and to whom is the sense of anything clear? A man's wisdom makes his face shining, and his hard face will be changed.
- Darby Translation (DBY)
- Who is as the wise? and who knoweth the explanation of things? A man's wisdom maketh his face to shine, and the boldness of his face is changed.
- Webster's Bible (WBS)
- Who [is] as the wise [man] ? and who knoweth the interpretation of a thing? a man's wisdom maketh his face to shine, and the boldness of his face shall be changed.
- Young's Literal Translation (YLT)
- Who [is] as the wise? and who knoweth the interpretation of a thing? The wisdom of man causeth his face to shine, and the hardness of his face is changed.
Read in context
- 1ಜ್ಞಾನಿಯ ಹಾಗೆ ಇರುವವನು ಯಾರು? ಈ ಸಂಗತಿಯ ಅರ್ಥವನ್ನು ಬಲ್ಲವನು ಯಾರು? ಒಬ್ಬ ಮನುಷ್ಯನ ಜ್ಞಾನವು ಅವನ ಮುಖ ವನ್ನು ಬೆಳಗಿಸುತ್ತದೆ, ಅವನ ಧೈರ್ಯದ ಮುಖವು ಬದಲಾಗುವದು.
- 2ನಾನು ನಿಮಗೆ--ದೇವರ ಮೇಲೆ ಆಣೆಯಿಟ್ಟು ಅರಸನ ಆಜ್ಞೆಯನ್ನು ಕೈಕೊಳ್ಳಿರಿ ಎಂದು ಆಲೋಚನೆ ಹೇಳಿಕೊಡುತ್ತೇನೆ.
- 3ಅವನ ದೃಷ್ಟಿಯಿಂದ ಹೊರಗೆ ಹೋಗುವದಕ್ಕೆ ಆತುರಪಡಬೇಡಿರಿ; ಕೆಟ್ಟ ಕಾರ್ಯದಲ್ಲಿ ನಿಲ್ಲಬೇಡಿರಿ; ಅವನು ತನಗೆ ಇಷ್ಟ ಬಂದದ್ದನ್ನೆಲ್ಲಾ ಮಾಡುತ್ತಾನೆ.
Cross references
- Acts 6:15 ಅಪೊಸ್ತಲರ ಕೃತ್ಯಗಳು 6:15ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
- Deuteronomy 28:50 ಧರ್ಮೋಪದೇಶಕಾಂಡ 28:50ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು.
- 2 Peter 1:20 2 ಪೇತ್ರನು 1:20ಬರಹದ ಯಾವ ಪ್ರವಾದನೆಯೂ ಕೇವಲ ಸ್ವಂತ ವಾಗಿ ವಿವರಿಸತಕ್ಕಂಥದ್ದಲ್ಲವೆಂಬದನ್ನು ಮೊದಲು ತಿಳಿದುಕೊಳ್ಳಿರಿ.ಯಾಕಂದರೆ ಹಿಂದಿನ ಕಾಲದಲ್ಲಿ ಯಾವ ಪ್ರವಾದನೆಯೂ ಮನುಷ್ಯನ ಚಿತ್ತದಿಂದ ಬರಲಿಲ್ಲ; ಪರಿಶುದ್ಧರಾದ ದೇವಜನರು ಪವಿತ್ರಾತ್ಮ ಪ್ರೇರಿತರಾಗಿ ಮಾತನಾಡಿದರು.
- Exodus 34:29–30 ವಿಮೋಚನಕಾಂಡ 34:29–30ಮೋಶೆಯು ಸಾಕ್ಷಿಯ ಎರಡು ಹಲಗೆಗಳನ್ನು ತನ್ನ ಕೈಯಲ್ಲಿ ಹಿಡುಕೊಂಡು ಸೀನಾಯಿ ಬೆಟ್ಟದಿಂದ ಇಳಿದಾಗ ಅವನು ದೇವರ ಸಂಗಡ (ಬೆಟ್ಟದಲ್ಲಿ) ಮಾತನಾಡಿದ್ದರಿಂದ ಅವನ ಮುಖವು ಪ್ರಕಾಶಿ ಸುತ್ತಿದೆ ಎಂದು ಮೋಶೆಗೆ ತಿಳಿಯಲಿಲ್ಲ. ಆದರೆ ಆರೋನನೂ ಇಸ್ರಾಯೇಲ್ ಮಕ್ಕಳೆಲ್ಲರೂ ಮೋಶೆ ಯನ್ನು ನೋಡಿದಾಗ ಇಗೋ, ಅವನ ಮುಖವು ಪ್ರಕಾಶಿಸುತ್ತಿತ್ತು. ಆದದರಿಂದ ಅವರು ಅವನ ಹತ್ತಿರ ಬರುವದಕ್ಕೆ ಭಯಪಟ್ಟರು.
- Proverbs 4:8–9 ಜ್ಞಾನೋಕ್ತಿಗಳು 4:8–9ಆಕೆಯನ್ನು ನೀನು ಮೇಲೆತ್ತಿದರೆ ಆಕೆಯು ನಿನ್ನನ್ನು ಮೇಲೆತ್ತುವಳು; ಆಕೆಯನ್ನು ನೀನು ಅಪ್ಪಿ ಕೊಂಡರೆ ಆಕೆಯು ನಿನ್ನನ್ನು ಘನತೆಗೆ ತರುವಳು. ಆಕೆಯು ನಿನ್ನ ತಲೆಗೆ ಕೃಪೆಯ ಆಭರಣವಾಗಿರುವಳು; ಆಕೆಯು ನಿನಗೆ ಘನತೆಯ ಕಿರೀಟವನ್ನು ಒಪ್ಪಿಸುವಳು.
- Acts 4:13 ಅಪೊಸ್ತಲರ ಕೃತ್ಯಗಳು 4:13ಅವರು ಪೇತ್ರ ಯೋಹಾನರ ಧೈರ್ಯವನ್ನು ನೋಡಿ ಇವರು ವಿದ್ಯೆಯಿಲ್ಲದವರೂ ತಿಳುವಳಿಕೆ ಯಿಲ್ಲದವರೂ ಎಂದು ಗ್ರಹಿಸಿ ಆಶ್ಚರ್ಯಪಟ್ಟು ಅವರು ಯೇಸುವಿನೊಂದಿಗೆ ಇದ್ದವರೆಂದು ತಿಳಿದುಕೊಂಡರು.
- Daniel 4:18–19 ದಾನಿಯೇಲನು 4:18–19ಈ ಕನಸನ್ನು ನೆಬೂಕದ್ನೆಚ್ಚರನೆಂಬ ಅರಸನಾದ ನಾನು ಕಂಡಿದ್ದೇನೆ. ಈಗ ಬೆಲ್ತೆಶಚ್ಚರ ನೆಂಬ ನೀನು ಅದರ ಅರ್ಥವನ್ನು ಹೇಳು. ನನ್ನ ರಾಜ್ಯದಲ್ಲಿರುವ ಸಕಲ ಜ್ಞಾನಿಗಳು ಅದರ ಅರ್ಥವನ್ನು ನನಗೆ ಹೇಳಲು ಶಕ್ತರಾದವರಲ್ಲ. ಆದರೆ ನಿನ್ನಲ್ಲಿ ಪರಿ ಶುದ್ಧ ದೇವರುಗಳ ಆತ್ಮವು ಇರುವದರಿಂದ ನೀನು ಹೇಳಲು ಸಾಧ್ಯವಾಯಿತು. ಆಗ ಬೆಲ್ತೆಶಚ್ಚರನೆಂಬ ಹೆಸರುಳ್ಳ ದಾನಿಯೇಲನು ಒಂದು ಗಳಿಗೆ ವಿಸ್ಮಿತನಾಗಿ ತನ್ನ ಆಲೋಚನೆಗಳಲ್ಲಿ ಕಳವಳಗೊಂಡನು. ಆಗ ಅರಸನು ಮಾತನಾಡಿ-- ಬೆಲ್ತೆಶಚ್ಚರನೇ, ಕನಸಾಗಲಿ ಅದರ ಅರ್ಥವಾಗಲಿ ನಿನ್ನನ್ನು ಕಳವಳಪಡಿಸದಿರಲಿ ಅಂದನು. ಆಗ ಬೆಲ್ತೆಶ ಚ್ಚರನು ಪ್ರತ್ಯುತ್ತರವಾಗಿ--ನನ್ನ ಒಡೆಯನೇ, ಆ ಕನಸು ನಿನ್ನ ವೈರಿಗಳಿಗೂ ಅದರ ಅರ್ಥವು ನಿನ್ನ ಶತ್ರುಗಳಿಗೂ ಆಗಲಿ.
- Acts 4:29 ಅಪೊಸ್ತಲರ ಕೃತ್ಯಗಳು 4:29ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ
- Proverbs 17:24 ಜ್ಞಾನೋಕ್ತಿಗಳು 17:24ವಿವೇಕಿಯ ಮುಂದೆ ಜ್ಞಾನವಿದೆ; ಬುದ್ಧಿಹೀನನ ಕಣ್ಣುಗಳು ಭೂಮಿಯ ಅಂತ್ಯಗಳಲ್ಲಿ ಇರುವವು.
- Job 33:23 ಯೋಬನು 33:23ಸಹಸ್ರ ಜನರಲ್ಲಿ ಒಬ್ಬನಾದ ಮಧ್ಯಸ್ಥ ನಾಗಿರುವ ದೂತನು ಮನುಷ್ಯನಿಗೆ ಅವನ ಯಥಾರ್ಥ ತೆಯನ್ನು ತಿಳಿಸುವದಕ್ಕೆ ಅವನ ಬಳಿಯಲ್ಲಿದ್ದರೆ,
- 2 Timothy 4:17 2 ತಿಮೊಥೆಯನಿಗೆ 4:17ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸಾರಲ್ಪಡುವದು ಸಂಪೂರ್ಣವಾಗಿ ಗ್ರಹಿಕೆ ಯಾಗುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
- Proverbs 24:5 ಜ್ಞಾನೋಕ್ತಿಗಳು 24:5ಜ್ಞಾನಿಯು ಬಲವುಳ್ಳವನು; ಹೌದು, ತಿಳುವಳಿಕೆಯು ಳ್ಳವನು ಬಲವನ್ನು ಹೆಚ್ಚಿಸಿಕೊಳ್ಳುತ್ತಾನೆ.