Ecclesiastes · chapter 8 · verse 7
Ecclesiastes 8:7 in Kannada
ಮುಂದೆ ಆಗುವದೇನೆಂದು ಅವ ನಿಗೆ ತಿಳಿಯದು; ಅದು ಯಾವಾಗ ಆಗುವದೆಂದು ಯಾರು ಅವನಿಗೆ ಹೇಳುವರು?
Munde aaguvadenendu ava nige tiliyadu; adu yaavaaga aaguvadendu yaaru avanige heluvaru?
Ecclesiastes 8:7 in English
- King James Version (KJV)
- For he knoweth not that which shall be: for who can tell him when it shall be?
- World English Bible (WEB)
- For he doesn’t know that which will be; for who can tell him how it will be?
- American Standard Version (ASV)
- for he knoweth not that which shall be; for who can tell him how it shall be?
- Bible in Basic English (BBE)
- No one is certain what is to be, and who is able to say to him when it will be?
- Darby Translation (DBY)
- for he knoweth not that which shall be; for who can tell him how it shall be?
- Webster's Bible (WBS)
- For he knoweth not that which shall be: for who can tell him when it shall be?
- Young's Literal Translation (YLT)
- For he knoweth not that which shall be, for when it shall be who declareth to him?
Read in context
- 5ಆಜ್ಞೆ ಯನ್ನು ಕೈಕೊಳ್ಳುವವನು ಯಾವನೂ ಕೆಟ್ಟದ್ದನ್ನು ಅನು ಭವಿಸನು: ಜ್ಞಾನಿಯ ಹೃದಯವು ಕಾಲ ನ್ಯಾಯ ಎರಡನ್ನೂ ತಿಳಿದುಕೊಳ್ಳುತ್ತದೆ.
- 6ಪ್ರತಿಯೊಂದು ಕಾರ್ಯಕ್ಕೂ ಕಾಲ ಮತ್ತು ನ್ಯಾಯಗಳಿವೆ, ಆದದರಿಂದ ಮನುಷ್ಯನ ಕಷ್ಟವು ಅವನ ಮೇಲೆ ದೊಡ್ಡದಾಗಿ ಘೋರವಾಗಿದೆ.
- 7ಮುಂದೆ ಆಗುವದೇನೆಂದು ಅವ ನಿಗೆ ತಿಳಿಯದು; ಅದು ಯಾವಾಗ ಆಗುವದೆಂದು ಯಾರು ಅವನಿಗೆ ಹೇಳುವರು?
- 8ಆತ್ಮವನ್ನು ಹಿಡಿ ಯುವ ಶಕ್ತಿ ಯಾವ ಮನುಷ್ಯನಿಗೂ ಇಲ್ಲ; ಹಾಗೆಯೇ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇರುವದಿಲ್ಲ. ಯುದ್ಧದಿಂದ ಬಿಡುಗಡೆಯೂ ಹೇಗೆ ಇಲ್ಲವೋ ಹಾಗೆಯೇ ದುಷ್ಟನಿಗೆ ಅದರಿಂದ ಬಿಡು ಗಡೆಯೇ ಇಲ್ಲ.
- 9ನಾನು ಇದನ್ನೆಲ್ಲಾ ನೋಡಿ ಸೂರ್ಯನ ಕೆಳಗೆ ಮಾಡುವ ಪ್ರತಿಯೊಂದು ಕೆಲ ಸಕ್ಕೂ ನನ್ನ ಹೃದಯವನ್ನು ಪ್ರಯೋಗಿಸಿದ್ದೇನೆ; ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ತನ್ನ ಹಾನಿಗಾಗಿ ಅಧಿಕಾರ ನಡಿಸುವಂತ ಕಾಲವೂ ಇದೆ.
Cross references
- Ecclesiastes 10:14 ಪ್ರಸಂಗಿ 10:14ಮೂಢನು ಸಹ ಮಾತು ಗಳನ್ನು ಹೆಚ್ಚಿಸುತ್ತಾನೆ; ಆದರೂ ಅವನು ಏನೆಂದು ಹೇಳಲು ಸಾಧ್ಯವಿಲ್ಲ. ಅವನ ತರುವಾಯ ಆಗುವದನ್ನು ಅವನಿಗೆ ತಿಳಿಸುವವರು ಯಾರು?
- Matthew 24:50 ಮತ್ತಾಯನು 24:50ಅವನು ನಿರೀಕ್ಷಿಸದೆ ಇರುವ ದಿನದಲ್ಲಿ ಇಲ್ಲವೆ ನೆನಸದ ಗಳಿಗೆಯಲ್ಲಿ ಆ ಸೇವಕನ ಯಜಮಾ ನನು ಬಂದುಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
- Proverbs 24:22 ಜ್ಞಾನೋಕ್ತಿಗಳು 24:22ಅವರ ವಿಪತ್ತು ಫಕ್ಕನೆ ಸಂಭವಿಸುವದು; ಅವರಿಬ್ಬರ ನಾಶನವು ಯಾರಿಗೆ ತಿಳಿದೀತು?
- Ecclesiastes 6:12 ಪ್ರಸಂಗಿ 6:12ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.
- Ecclesiastes 9:12 ಪ್ರಸಂಗಿ 9:12ಮನುಷ್ಯನು ಸಹ ತನ್ನ ಕಾಲವನ್ನು ತಿಳಿದಲ್ಲಿ ಬಾಧೆಯನ್ನುಂಟುಮಾಡುವ ಬಲೆಯಿಂದ ಹಿಡಿಯುವ ವಿಾನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗ ಳಂತೆಯೂ ಮನುಷ್ಯನ ಮಕ್ಕಳ ಮೇಲೆ ಕೇಡಿನ ಕಾಲವು ತಕ್ಷಣ ಬೀಳುವಾಗ ಹಿಡಿಯಲ್ಪಡುತ್ತಾರೆ.
- Matthew 24:44 ಮತ್ತಾಯನು 24:44ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ.
- Matthew 25:6–13 ಮತ್ತಾಯನು 25:6–13ಮಧ್ಯರಾತ್ರಿಯಲ್ಲಿ--ಇಗೋ, ಮದಲಿಂಗನು ಬರುತ್ತಾನೆ; ಅವನನ್ನು ಎದುರುಗೊಳ್ಳುವದಕ್ಕಾಗಿ ಹೊರಡಿರಿ ಎಂಬ ಕೂಗಾ ಯಿತು. ಆಗ ಆ ಕನ್ಯೆಯರೆಲ್ಲರೂ ಎದ್ದು ತಮ್ಮ ದೀಪಗಳನ್ನು ಸರಿಪಡಿಸಿಕೊಂಡರು; ಬುದ್ಧಿಹೀನರು ಬುದ್ಧಿವಂತೆಯರಿಗೆ-- ನಿಮ್ಮ ಎಣ್ಣೆಯಲ್ಲಿ ನಮಗೆ ಕೊಡಿರಿ; ಯಾಕಂದರೆ ನಮ್ಮ ದೀಪಗಳು ಆರಿಹೋಗಿವೆ ಅಂದರು. ಆದರೆ ಬುದ್ಧಿವಂತೆಯರು ಪ್ರತ್ಯುತ್ತರ ವಾಗಿ--ಹಾಗಲ್ಲ, ಅದು ನಮಗೂ ನಿಮಗೂ ಸಾಲದೆ ಹೋದೀತು; ಆದದರಿಂದ ನೀವು ಮಾರು ವವರ ಬಳಿಗೆ ಹೋಗಿ ನಿಮಗೋಸ್ಕರ ಕೊಂಡು ಕೊಳ್ಳಿರಿ ಅಂದರು. ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು. ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು--ಕರ್ತನೇ, ಕರ್ತನೇ, ನಮಗೆ ಬಾಗಲನ್ನು ತೆರೆ ಅಂದರು. ಆದರೆ ಅವನು ಪ್ರತ್ಯುತ್ತರವಾಗಿ--ನಿಮ್ಮನ್ನು ಅರಿ ಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು. ಆದದರಿಂದ ಎಚ್ಚರವಾಗಿರ್ರಿ; ಯಾಕಂದರೆ ಮನುಷ್ಯಕುಮಾರನು ಬರುವ ದಿನ ವನ್ನಾಗಲೀ ಗಳಿಗೆಯನ್ನಾಗಲೀ ನೀವು ಅರಿಯದವರಾ ಗಿದ್ದೀರಿ ಅಂದನು.
- Ecclesiastes 3:22 ಪ್ರಸಂಗಿ 3:22ಆದಕಾರಣ ಮನುಷ್ಯನು ತನ್ನ ಸ್ವಂತ ಕೆಲಸಗಳಲ್ಲಿ ಆನಂದಿಸುವದಕ್ಕಿಂತ ಒಳ್ಳೆಯದು ಯಾವದೂ ಇಲ್ಲ ವೆಂದು ನಾನು ಗ್ರಹಿಸುತ್ತೇನೆ; ಅದೇ ಅವನ ಪಾಲು; ಅದರಿಂದ ತನ್ನ ಜೀವಮಾನದ ನಂತರ ಸಂಭವಿಸುವದನ್ನು ನೋಡುವಂತೆ ಯಾವನು ಅವನನ್ನು ಪುನಃ ಬರಮಾಡುತ್ತಾನೆ.?
- Proverbs 29:1 ಜ್ಞಾನೋಕ್ತಿಗಳು 29:1ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
- 1 Thessalonians 5:1–3 1 ಥೆಸಲೊನೀಕದವರಿಗೆ 5:1–3ಸಹೋದರರೇ, ಈ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯು ವದು ಅವಶ್ಯವಿಲ್ಲ. ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ. ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.