Ecclesiastes · chapter 9 · verse 18
Ecclesiastes 9:18 in Kannada
ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.
Yuddhada aayudhagaligintaloo jnyaanavu lesu. Aadare obba paapiyu hechchu olleyadannu naashapadisuttaane.
Ecclesiastes 9:18 in English
- King James Version (KJV)
- Wisdom [is] better than weapons of war: but one sinner destroyeth much good.
- World English Bible (WEB)
- Wisdom is better than weapons of war; but one sinner destroys much good.
- American Standard Version (ASV)
- Wisdom is better than weapons of war; but one sinner destroyeth much good.
- Bible in Basic English (BBE)
- Wisdom is better than instruments of war, but one sinner is the destruction of much good.
- Darby Translation (DBY)
- Wisdom is better than weapons of war; but one sinner destroyeth much good.
- Webster's Bible (WBS)
- Wisdom [is] better than weapons of war: but one sinner destroyeth much good.
- Young's Literal Translation (YLT)
- Better [is] wisdom than weapons of conflict, And one sinner destroyeth much good!
Read in context
- 16ಆ ಮೇಲೆ ನಾನು--ಜ್ಞಾನವು ಬಲಕ್ಕಿಂತ ಉತ್ತಮವಾದದ್ದಾಗಿ ದ್ದಾಗ್ಯೂ ಬಡವನ ಜ್ಞಾನವು ತಿರಸ್ಕರಿಸಲ್ಪಟ್ಟದ್ದಾಗಿದ್ದು ಅವನ ಮಾತುಗಳನ್ನು ಯಾರೂ ಲಕ್ಷಿಸುವದಿಲ್ಲ ಎಂದು ಅಂದುಕೊಂಡೆನು.
- 17ಜ್ಞಾನಿಗಳ ಮಾತುಗಳು ಹುಚ್ಚರನ್ನು ಆಳುವವನ ಕೂಗಿಗಿಂತಲೂ ಸಮಾಧಾನವಾಗಿ ಕೇಳಲ್ಪಡುತ್ತವೆ.ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.
- 18ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.
Cross references
- Joshua 7:11–12 ಯೆಹೋಶುವ 7:11–12ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ. ಆದದ ರಿಂದ ಇಸ್ರಾಯೇಲ್ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ.
- Joshua 7:1 ಯೆಹೋಶುವ 7:1ಯೆಹೂದ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಶಾಪಕ್ಕೀಡಾದದ್ದರಲ್ಲಿ ಕೆಲವನ್ನು ತೆಗೆದುಕೊಂಡನು. ಈ ಕಾರಣದಿಂದ ಇಸ್ರಾಯೇಲ್ ಮಕ್ಕಳು ಶಾಪಕ್ಕೀಡಾದವರಲ್ಲಿ ಅಪರಾಧಿಗಳಾದರು. ಆದದರಿಂದ ಕರ್ತನ ಕೋಪವು ಇಸ್ರಾಯೇಲ್ ಮಕ್ಕಳ ಮೇಲೆ ಉರಿಯಹತ್ತಿತ್ತು.
- 2 Timothy 4:3–4 2 ತಿಮೊಥೆಯನಿಗೆ 4:3–4ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು. ಅವರು ಸತ್ಯಕ್ಕೆ ಕಿವಿಗೊಡದೆ ಕಲ್ಪನಾಕಥೆಗಳನ್ನು ಕೇಳುವದಕ್ಕೆ ತಿರುಗಿಕೊಳ್ಳುವರು.
- 2 Timothy 2:16–18 2 ತಿಮೊಥೆಯನಿಗೆ 2:16–18ಆದರೆ ಅಶುದ್ಧವಾದ ಹರಟೆಮಾತುಗಳನ್ನು ನಿರಾಕರಿಸು; ಅವುಗಳಿಂದ ಹೆಚ್ಚೆಚ್ಚಾಗಿ ಭಕ್ತಿಹೀನತೆಯು ಉಂಟಾಗುವದು. ಅವರ ಮಾತು ವ್ರಣವ್ಯಾಧಿಯಂತೆ ತಿನ್ನುವದು; ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ; ಅವರು ಪುನರುತ್ಥಾನವು ಆಗಲೇ ಆಗಿಹೋಯಿ ತೆಂದು ಹೇಳುತ್ತಾ ಸತ್ಯಭ್ರಷ್ಠರಾಗಿ ಕೆಲವರ ನಂಬಿಕೆ ಯನ್ನು ಕೆಡಿಸುವವರಾಗಿದ್ದಾರೆ.
- Ecclesiastes 9:16 ಪ್ರಸಂಗಿ 9:16ಆ ಮೇಲೆ ನಾನು--ಜ್ಞಾನವು ಬಲಕ್ಕಿಂತ ಉತ್ತಮವಾದದ್ದಾಗಿ ದ್ದಾಗ್ಯೂ ಬಡವನ ಜ್ಞಾನವು ತಿರಸ್ಕರಿಸಲ್ಪಟ್ಟದ್ದಾಗಿದ್ದು ಅವನ ಮಾತುಗಳನ್ನು ಯಾರೂ ಲಕ್ಷಿಸುವದಿಲ್ಲ ಎಂದು ಅಂದುಕೊಂಡೆನು.
- Joshua 7:5 ಯೆಹೋಶುವ 7:5ಆಯಿ ಮನುಷ್ಯರು ಇವರಲ್ಲಿ ಹೆಚ್ಚು ಕಡಿಮೆ ಮೂವತ್ತಾರು ಮಂದಿಯನ್ನು ಹೊಡೆದು ಹಾಕಿದರು. ಬಾಗಲಿನಿಂದ ಪ್ರಾರಂಭಿಸಿ ಷೆಬಾರಿಮಿನ ವರೆಗೂ ಅವರನ್ನು ಹಿಂದಟ್ಟಿ ಇಳಿದು ಹೋಗುವ ವರೆಗೂ ಅವರನ್ನು ಹೊಡೆದರು. ಆದದ ರಿಂದ ಜನರ ಹೃದಯವು ಕರಗಿ ನೀರಿನಂತಾಯಿತು.
- Titus 1:10–11 ತೀತನಿಗೆ 1:10–11ಅನೇಕರು ಅವರೊಳಗೆ ಮುಖ್ಯವಾಗಿ ಸುನ್ನತಿ ಯವರು ಅಧಿಕಾರಕ್ಕೆ ಒಳಗಾಗದವರೂ ವ್ಯರ್ಥವಾದ ಮಾತಿನವರೂ ಮೋಸಗಾರರೂ ಆಗಿದ್ದಾರೆ; ಅವರು ನೀಚಲಾಭವನ್ನು ಹೊಂದುವದಕ್ಕಾಗಿ ಮಾಡಬಾರದ ಉಪದೇಶವನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳುಮಾಡುತ್ತಾರಾದದರಿಂದ ಅವರ ಬಾಯಿಗಳನ್ನು ಮುಚ್ಚಿಸತಕ್ಕದ್ದು.
- 2 Timothy 3:8 2 ತಿಮೊಥೆಯನಿಗೆ 3:8ಯನ್ನಯಂಬ್ರ ಎಂಬ ವರು ಮೋಶೆಯನ್ನು ವಿರೋಧಿಸಿದಂತೆಯೇ ಇವರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಇದಲ್ಲದೆ ಇವರು ಬುದ್ಧಿಗೆಟ್ಟವರೂ ಭ್ರಷ್ಟರೂ ಆಗಿದ್ದಾರೆ.
- Hebrews 12:15–16 ಇಬ್ರಿಯರಿಗೆ 12:15–16ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹೋಗ ದಂತೆಯೂ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಕಳವಳ ಹುಟ್ಟಿಸಿ ಅದರಿಂದ ಅನೇಕರು ಅಶುದ್ಧರಾಗ ದಂತೆಯೂ ಯಾವ ಜಾರನಾಗಲಿ--ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆ ಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದು ತುತ್ತನ್ನಕ್ಕಾಗಿ ತನ್ನ ಚೊಚ್ಚಲತನದ ಹಕ್ಕನ್ನು ಮಾರಿ ಬಿಟ್ಟನು;
- 2 Thessalonians 2:8–12 2 ಥೆಸಲೊನೀಕದವರಿಗೆ 2:8–12ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು. ಆ ಕೆಡುಕನ ಬರುವಿಕೆಯು ಸೈತಾನನ ಕಾರ್ಯಕ್ಕನು ಸಾರವಾಗಿರುವದು; ಅದು ಎಲ್ಲಾ ಶಕ್ತಿಯಿಂದಲೂ ಸೂಚಕ ಕಾರ್ಯಗಳಿಂದಲೂ ಸುಳ್ಳಾದ ಅದ್ಭುತ ಕಾರ್ಯಗಳಿಂದಲೂ ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ. ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ. ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು.
- 1 Samuel 14:36–46 1 ಸಮುವೇಲನು 14:36–46ಸೌಲನು ಜನರಿಗೆ--ನಾವು ಈ ರಾತ್ರಿಯಲ್ಲಿ ಫಿಲಿಷ್ಟಿಯರನ್ನು ಬೆನ್ನಟ್ಟಿಹೋಗಿ ಉದಯಕಾಲದ ವರೆಗೆ ಅವರನ್ನು ಸುಲುಕೊಂಡು ಅವರಲ್ಲಿ ಒಬ್ಬನನ್ನಾದರೂ ಉಳಿಸಬಾರದು ಅಂದನು. ಅದಕ್ಕೆ ಜನರು--ನಿನ್ನ ಕಣ್ಣುಗಳಿಗೆ ಒಳ್ಳೇದಾಗಿ ತೋರುವದನ್ನೆಲ್ಲಾ ಮಾಡು ಅಂದರು. ಆಗ ಯಾಜಕನು--ದೇವರ ಸನ್ನಿಧಿಗೆ ಹೋಗೋಣ ಅಂದನು. ಸೌಲನು--ನಾನು ಫಿಲಿಷ್ಟಿಯರನ್ನು ಹಿಂಬಾಲಿಸಿ ಹೋಗಲೋ? ನೀನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿಕೊಡುವಿಯೋ ಎಂದು ದೇವರ ಆಲೋಚನೆಯನ್ನು ಕೇಳಿದನು; ಆದರೆ ಆತನು ಅವನಿಗೆ ಆ ದಿವಸದಲ್ಲಿ ಪ್ರತ್ಯುತ್ತರ ಕೊಡದೆ ಹೋದನು. ಆಗ ಸೌಲನು--ಜನರ ಎಲ್ಲಾ ಮುಖ್ಯಸ್ಥರೇ, ಇಲ್ಲಿ ಬನ್ನಿರಿ; ಈಹೊತ್ತು ಈ ಪಾಪ ಯಾವದರಿಂದ ಉಂಟಾಯಿತೆಂದು ತಿಳುಕೊಂಡು ನೋಡಿರಿ. ನನ್ನ ಕುಮಾರನಾದ ಯೋನಾತಾನ ನಿಂದಾದರೂ ಉಂಟಾಗಿದ್ದರೆ ಅವನು ಸಾಯಲೇ ಸಾಯುವನೆಂದು ಇಸ್ರಾಯೇಲನ್ನು ರಕ್ಷಿಸುವ ಕರ್ತನ ಮೇಲೆ ಆಣೆ ಇಟ್ಟು ಹೇಳುತ್ತೇನೆ ಅಂದನು. ಆದರೆ ಸಕಲ ಜನರಲ್ಲಿ ಒಬ್ಬನಾದರೂ ಅವನಿಗೆ ಪ್ರತ್ಯುತ್ತರ ಕೊಡಲಿಲ್ಲ. ಆಗ ಸೌಲನು ಸಮಸ್ತ ಇಸ್ರಾಯೇ ಲಿಗೆ--ನೀವು ಒಂದು ಕಡೆಯಲ್ಲಿ ಇರ್ರಿ; ನಾನೂ ನನ್ನ ಮಗನಾದ ಯೋನಾತಾನನೂ ಒಂದು ಕಡೆಯಲ್ಲಿ ಇರುತ್ತೇವೆ ಅಂದನು. ಜನರು ಸೌಲನಿಗೆ--ನಿನ್ನ ದೃಷ್ಟಿಗೆ ಒಳ್ಳೇದಾಗಿ ತೋರುವದನ್ನು ಮಾಡು ಅಂದರು. ಸೌಲನು ಇಸ್ರಾಯೇಲಿನ ದೇವರಾದ ಕರ್ತನಿಗೆ--ನೀನು ಪೂರ್ಣ ನಿರ್ಣಯವನ್ನು ದಯಪಾಲಿಸು ಎಂದು ಹೇಳಿ ಚೀಟು ಹಾಕಿದೆನು ಅಂದನು. ಸೌಲನಿಗೂ ಯೋನಾತಾನನಿಗೂ ಚೀಟುಬಂತು. ಆದರೆ ಜನರು ಪಾರಾದರು. ಸೌಲನು ಅವರಿಗೆ--ನನ್ನ ಮೇಲೆಯೂ ನನ್ನ ಮಗನಾದ ಯೋನಾತಾನನ ಮೇಲೆಯೂ ಚೀಟು ಹಾಕಿರಿ ಅಂದಾಗ ಯೋನಾತಾನನಿಗೆ ಚೀಟು ಬಿತ್ತು. ಆಗ ಸೌಲನು ಯೋನಾತಾನನಿಗೆ--ನೀನು ಮಾಡಿ ದ್ದನ್ನು ನನಗೆ ತಿಳಿಸು ಅಂದನು. ಅದಕ್ಕೆ ಯೋನಾ ತಾನನು--ನನ್ನ ಕೈಯಲ್ಲಿರುವ ಕೋಲಿನ ಕೊನೆಯಿಂದ ನಾನು ಸ್ವಲ್ಪ ಜೇನು ತುಪ್ಪವನ್ನು ತಕ್ಕೊಂಡು ರುಚಿ ನೋಡಿದೆನು; ಇಗೋ, ನಾನು ಸಾಯಬೇಕು ಅಂದನು. ಅದಕ್ಕೆ ಸೌಲನು--ಯೋನಾತಾನನೇ, ನೀನು ನಿಜವಾಗಿ ಸಾಯಬೇಕು; ಇಲ್ಲದಿದ್ದರೆ ದೇವರು ನನಗೆ ಹೆಚ್ಚಾದದ್ದನ್ನು ಮಾಡಲಿ ಅಂದನು. ಆದರೆ ಜನರು ಸೌಲನಿಗೆ--ಇಸ್ರಾಯೇಲಿನಲ್ಲಿ ಈ ದೊಡ್ಡ ರಕ್ಷಣೆ ಯನ್ನುಂಟು ಮಾಡಿದ ಯೋನಾತಾನನು ಸಾಯ ಬಹುದೋ? ಅದು ಎಂದಿಗೂ ಆಗದು; ಅವನು ಇಂದು ಕರ್ತನ ಸಹಾಯದ ಮೂಲಕ ಕಾರ್ಯವನ್ನು ನಡಿಸಿದ್ದರಿಂದ ಕರ್ತನ ಆಣೆ, ಅವನ ತಲೆಯಲ್ಲಿರುವ ಒಂದು ಕೂದಲಾದರೂ ನೆಲದ ಮೇಲೆ ಬೀಳಬಾರದು ಅಂದರು. ಜನರು ಯೋನಾತಾನನನ್ನು ಸಾಯದ ಹಾಗೆ ಬಿಡಿಸಿಕೊಂಡರು. ಆಗ ಸೌಲನು ಫಿಲಿಷ್ಟಿಯರನ್ನು ಹಿಂಬಾಲಿಸುವದನ್ನು ಬಿಟ್ಟುಬಿಟ್ಟನು. ಫಿಲಿಷ್ಟಿಯರು ತಮ್ಮ ಸ್ಥಳಕ್ಕೆ ಹೋದರು.
- 2 Samuel 20:1–2 2 ಸಮುವೇಲನು 20:1–2ಬೆನ್ಯಾವಿಾನನ ಕುಲದವನಾದ ಬಿಕ್ರೀಯಮಗನಾಗಿರುವ ಶೆಬನೆಂಬ ಹೆಸರುಳ್ಳ ಬೆಲಿಯಾಳನವನಾದ ಒಬ್ಬನು ಅಲ್ಲಿದ್ದನು. ಅವನು ತುತೂರಿಯನ್ನು ಊದಿ--ನಮಗೆ ದಾವೀದನಲ್ಲಿ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಓ ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ ಅಂದನು. ಇಸ್ರಾಯೇಲ್ ಜನರೆಲ್ಲರು ದಾವೀದನನ್ನು ಬಿಟ್ಟು ಸರಿದು ಬಿಕ್ರೀಯ ಮಗನಾದ ಶೆಬನ ಹಿಂದೆ ಹೋದರು. ಆದರೆ ಯೊರ್ದನಿನಿಂದ ಯೆರೂಸಲೇಮಿನ ವರೆಗೂ ಇರುವ ಯೆಹೂದ ಜನರು ತಮ್ಮ ಅರಸನನ್ನು ಅಂಟಿಕೊಂಡಿದ್ದರು.