Ephesians · chapter 1 · verse 23
Ephesians 1:23 in Kannada
ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
Sabheyu aatana dehavaagide; ellavannu ellaa sambandhadalli vyaapisuvaataninda adu paripoornateyulla daagide.
Ephesians 1:23 in English
- King James Version (KJV)
- Which is his body, the fulness of him that filleth all in all.
- World English Bible (WEB)
- which is his body, the fullness of him who fills all in all.
- American Standard Version (ASV)
- which is his body, the fulness of him that filleth all in all.
- Bible in Basic English (BBE)
- Which is his body, the full measure of him in whom all things are made complete.
- Darby Translation (DBY)
- which is his body, the fulness of him who fills all in all:
- Webster's Bible (WBS)
- Which is his body, the fullness of him that filleth all in all.
- Young's Literal Translation (YLT)
- which is his body, the fulness of Him who is filling the all in all,
Read in context
- 21ಸಕಲ ರಾಜತ್ವ ಅಧಿಕಾರ ಮಹತ್ವ ಪ್ರಭುತ್ವಾಧಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೊಕದೊಳಗೆ ತನ್ನ ಸ್ವಂತ ಬಲಪಾರ್ಶ್ವದಲ್ಲಿ ಆತನನ್ನು ಕೂಡ್ರಿಸಿಕೊಂಡನು.
- 22ದೇವರು ಸಮಸ್ತವನ್ನೂ ಆತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇಮಿಸಿದನು.ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
- 23ಸಭೆಯು ಆತನ ದೇಹವಾಗಿದೆ; ಎಲ್ಲವನ್ನು ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳ ದಾಗಿದೆ.
Cross references
- Colossians 1:18–19 ಕೊಲೊಸ್ಸೆಯವರಿಗೆ 1:18–19ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ. ಆತನಲ್ಲಿ ಸರ್ವ ಸಂಪೂರ್ಣತೆಯು ವಾಸವಾಗಿರುವದು ತಂದೆಗೆ ಇಷ್ಟ ವಾಗಿತ್ತು.
- John 1:16 ಯೋಹಾನನು 1:16ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು.
- Colossians 2:9–10 ಕೊಲೊಸ್ಸೆಯವರಿಗೆ 2:9–10ಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ. ನೀವು ಆತನಲ್ಲಿದ್ದು ಕೊಂಡೇ ಪರಿಪೂರ್ಣತೆಯನ್ನು ಹೊಂದಿದವರಾಗಿ ದ್ದೀರಿ. ಆತನು ಎಲ್ಲಾ ದೊರೆತನಕ್ಕೂ ಅಧಿಕಾರಕ್ಕೂ ಶಿರಸ್ಸಾಗಿದ್ದಾನೆ.
- Ephesians 4:12 ಎಫೆಸದವರಿಗೆ 4:12ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.
- Ephesians 3:19 ಎಫೆಸದವರಿಗೆ 3:19ಜ್ಞಾನಕ್ಕೆ ವಿಾರುವ ಕ್ರಿಸ್ತನ ಪ್ರೀತಿ ಯನ್ನು ತಿಳಿದುಕೊಂಡು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆಯೂ ನಿಮಗೆ ದಯ ಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.
- Ephesians 4:10 ಎಫೆಸದವರಿಗೆ 4:10ಇಳಿದು ಬಂದಾತನು ಮೇಲಣ ಎಲ್ಲಾ ಆಕಾಶ ಗಳಿಗಿಂತ ಉನ್ನತವಾಗಿ ಏರಿ ಹೋದಾತನೇ; ಆದದರಿಂದ ಆತನು ಸಮಸ್ತವನ್ನು ತುಂಬಿದವ ನಾದನು).
- 1 Corinthians 15:28 1 ಕೊರಿಂಥದವರಿಗೆ 15:28ಸಮಸ್ತವೂ ಆತನಿಗೆ ಅಧೀನವಾದ ಮೇಲೆ ಮಗನು ಸಹ ಸಮಸ್ತವನ್ನೂ ತನಗೆ ಅಧೀನ ಮಾಡಿಕೊಟ್ಟಾತನಿಗೆ ತಾನೇ ಅಧೀನನಾಗುವನು; ಹೀಗೆ ದೇವರು ಸಮಸ್ತರಲ್ಲಿಯೂ ಸಮಸ್ತವೂ ಆಗಿರುವನು.
- Colossians 1:24 ಕೊಲೊಸ್ಸೆಯವರಿಗೆ 1:24ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.
- 1 Corinthians 12:12–27 1 ಕೊರಿಂಥದವರಿಗೆ 12:12–27ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ. ಯೆಹೂದ್ಯರಾಗಲಿ ಅನ್ಯರಾಗಲಿ ದಾಸರಾಗಲಿ ಸ್ವತಂತ್ರರಾಗಲಿ ನಾವೆಲ್ಲರು ಒಂದೇ ದೇಹವಾಗು ವದಕ್ಕಾಗಿ ಒಬ್ಬನೇ ಆತ್ಮನಿಂದ ಬಾಪ್ತಿಸ್ಮ ಮಾಡಿಸಿ ಕೊಂಡೆವು; ಆ ಒಬ್ಬನೇ ಆತ್ಮನು ನಮ್ಮೆಲ್ಲರಿಗೂ ಪಾನವಾಗಿ ಕೊಡಲ್ಪಟ್ಟಿದ್ದಾನೆ. ದೇಹವು ಒಂದೇ ಅಂಗವಲ್ಲ, ಆದರೆ ಅದು ಅನೇಕ ಅಂಗಗಳುಳ್ಳದ್ದಾಗಿದೆ. ಕಾಲು--ನಾನು ಕೈಯಲ್ಲದ ಕಾರಣ ದೇಹಕ್ಕೆ ಸೇರಲಿಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ? ಕಿವಿ--ನಾನು ಕಣ್ಣಲ್ಲದ ಕಾರಣ ದೇಹಕ್ಕೆ ಸೇರಲಿಲ್ಲವೆಂದು ಹೇಳಿದರೂ ಅದು ದೇಹಕ್ಕೆ ಸೇರದೆ ಇರುವದೋ? ದೇಹವೆಲ್ಲಾ ಕಣ್ಣಾದರೆ ಕೇಳುವದೆಲ್ಲಿ? ಅದೆಲ್ಲಾ ಕೇಳುವದಾದರೆ ಮೂಸಿ ನೋಡುವದೆಲ್ಲಿ? ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನ್ನ ಇಷ್ಟಾನುಸಾರವಾಗಿ ದೇಹದಲ್ಲಿ ಇಟ್ಟಿದ್ದಾನೆ. ಅವೆಲ್ಲವೂ ಒಂದೇ ಅಂಗವಾಗಿದ್ದರೆ ದೇಹವೆಲ್ಲಿರುವದು? ಆದರೆ ಅಂಗಗಳೇನೋ ಅನೇಕ, ದೇಹವು ಒಂದೇ. ಕಣ್ಣು ಕೈಗೆ--ನೀನು ನನಗೆ ಅವಶ್ಯವಿಲ್ಲವೆಂದೂ ತಲೆಯು ಕಾಲು ಗಳಿಗೆ--ನೀವು ನನಗೆ ಅವಶ್ಯವಿಲ್ಲವೆಂದೂ ಹೇಳುವದ ಕ್ಕಾಗುವದಿಲ್ಲ. ಹೌದು, ಶರೀರದ ಅಂಗಗಳು ಬಹಳ ಬಲಹೀನವಾದವುಗಳೆಂದು ಕಂಡರೂ ಹೆಚ್ಚಾಗಿ ಅವಶ್ಯ ವಾಗಿವೆ. ಇದಲ್ಲದೆ ಅಲ್ಪ ಮಾನವುಳ್ಳವುಗಳೆಂದು ನಾವು ಎಣಿಸುವ ದೇಹದ ಅಂಗಗಳಿಗೆ ಹೆಚ್ಚಾದ ಗೌರವವನ್ನು ಕೊಡುತ್ತೇವೆ. ಆಗ ಅಂದವಿಲ್ಲದ ನಮ್ಮ ಅಂಗಗಳು ಹೆಚ್ಚು ಅಂದವಾಗಿರುತ್ತವೆ. ಅಂದವುಳ್ಳ ನಮ್ಮ ಅಂಗಗಳಿಗೆ ಯಾವ ಅವಶ್ಯಕತೆಯೂ ಇರುವದಿಲ್ಲ; ಆದರೆ ದೇವರು ಕೊರತೆಯುಳ್ಳ ಅಂಗ ವನ್ನು ಹೆಚ್ಚಾಗಿ ಗೌರವಿಸಿ ದೇಹವನ್ನು ಹದವಾಗಿ ಜೋಡಿಸಿದ್ದಾನೆ. ಹೀಗೆ ದೇಹದಲ್ಲಿ ಭೇದವಿರದೆ ಅಂಗಗಳು ಒಂದಕ್ಕೊಂದು ಚಿಂತಿಸುವವುಗಳಾಗಿ ರುತ್ತವೆ. ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಇಲ್ಲವೆ ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ. ಈಗ ನೀವು ಕ್ರಿಸ್ತನ ದೇಹವಾಗಿದ್ದು ವಿಶೇಷ ವಾಗಿ ಅಂಗಗಳಾಗಿದ್ದೀರಿ.
- Colossians 3:15 ಕೊಲೊಸ್ಸೆಯವರಿಗೆ 3:15ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ; ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ; ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ.
- Ephesians 2:16 ಎಫೆಸದವರಿಗೆ 2:16ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ.
- Ephesians 5:23–32 ಎಫೆಸದವರಿಗೆ 5:23–32ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಆತನು (ಕ್ರಿಸ್ತನು) ದೇಹಕ್ಕೆ ರಕ್ಷಕ ನಾಗಿದ್ದಾನೆ, ಆದದರಿಂದ ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನ ರಾಗಿರಬೇಕು. ಪುರಷರೇ, ನೀವು ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಯಾಕಂದರೆ ಕ್ರಿಸ್ತನು ಸಹ ಸಭೆಯನ್ನು ಪ್ರೀತಿಸಿ ಅದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು. ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ. ಹಾಗೆಯೇ ಪುರುಷರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೆ ಪ್ರೀತಿಸಿಕೊಳ್ಳುವನಾಗಿದ್ದಾನೆ. ಯಾರೂ ಎಂದೂ ಸ್ವಶರೀರವನ್ನು ಹಗೆಮಾಡಿದ್ದಿಲ್ಲ. ಆದರೆ ಅದನ್ನು ಪೋಷಿಸಿ ಸಂರಕ್ಷಿಸುವ ಪ್ರಕಾರ ಕರ್ತನು ಸಭೆಯನ್ನು ಪೋಷಿಸಿ ಸಂರಕ್ಷಿಸುವಾತನಾಗಿದ್ದಾನೆ. ನಾವು ಆತನ ದೇಹದ ಅಂಗಗಳೂ ಮಾಂಸವೂ ಎಲುಬುಗಳೂ ಆಗಿದ್ದೇವೆ. ಇದರ ನಿಮಿತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿ ಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು. ಇದೊಂದು ದೊಡ್ಡ ಮರ್ಮವೇ; ಆದರೆ ನಾನು ಕ್ರಿಸ್ತನ ವಿಷಯವಾಗಿಯೂ ಸಭೆಯ ವಿಷಯವಾಗಿಯೂ ಮಾತನಾಡುತ್ತೇನೆ.ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು.