Ephesians · chapter 1 · verse 7
Ephesians 1:7 in Kannada
ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
Aatana krupaa aishvarya kkanusaaravaagi aatana raktada moolaka aatanalli namage vimochaneyu andare paapagala kshamaa paneyu untaayitu.
Ephesians 1:7 in English
- King James Version (KJV)
- In whom we have redemption through his blood, the forgiveness of sins, according to the riches of his grace;
- World English Bible (WEB)
- In him we have our redemption through his blood, the forgiveness of our trespasses, according to the riches of his grace
- American Standard Version (ASV)
- in whom we have our redemption through his blood, the forgiveness of our trespasses, according to the riches of his grace,
- Bible in Basic English (BBE)
- In whom we have salvation through his blood, the forgiveness of our sins, through the wealth of his grace,
- Darby Translation (DBY)
- in whom we have redemption through his blood, the forgiveness of offences, according to the riches of his grace;
- Webster's Bible (WBS)
- In whom we have redemption through his blood, the forgiveness of sins, according to the riches of his grace;
- Young's Literal Translation (YLT)
- in whom we have the redemption through his blood, the remission of the trespasses, according to the riches of His grace,
Read in context
- 5ಆತನು ತನ್ನ ಚಿತ್ತದ ದಯಾ ಪೂರ್ವಕವಾದ ಆನಂದಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೋಸ್ಕರ ದತ್ತುಪುತ್ರ ಸ್ವೀಕಾರ ಮಾಡುವಂತೆ ಮೊದಲೇ ಸಂಕಲ್ಪಿಸಿ.
- 6ತನ್ನ ಕೃಪಾಮಹಿಮೆಯ ಸ್ತುತಿಗಾಗಿ ಆತನು ನಮ್ಮನ್ನು ಆ ಪ್ರಿಯನಲ್ಲಿ ಅಂಗೀಕರಿಸಿದ್ದಾನೆ.
- 7ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
- 8ಹೀಗೆ ಆತನು ತನ್ನ ಕೃಪಾತಿಶಯದಲ್ಲಿ ಸಕಲ ಜ್ಞಾನವನ್ನೂ ಬುದ್ದಿಯನ್ನೂ ಇನ್ನೂ ಹೆಚ್ಚಾಗಿ ನಮ್ಮ ಕಡೆಗೆ ತೋರಿಸಿದ್ದಾನೆ.
- 9ಆತನು ತನ್ನಲ್ಲಿ ಉದ್ದೇಶಿಸಿದ ಪ್ರಕಾರ ಆನಂದಪೂರ್ವಕವಾದ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದನು.
Cross references
- 1 Peter 2:24 1 ಪೇತ್ರನು 2:24ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.
- Romans 3:24 ರೋಮಾಪುರದವರಿಗೆ 3:24ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು.
- 1 John 1:7–9 1 ಯೋಹಾನನು 1:7–9ಆತನು ಬೆಳಕಿನಲ್ಲಿರು ವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲೊಬ್ಬರು ಅನ್ಯೋನ್ಯತೆಯಲ್ಲಿದ್ದೇವೆ; ಆತನ ಮಗನಾದ ಯೇಸುಕ್ರಿಸ್ತನ ರಕ್ತವು ನಮ್ಮನ್ನು ಸಕಲ ಪಾಪದಿಂದ ಶುದ್ಧಿಮಾಡುತ್ತದೆ. ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Colossians 1:14 ಕೊಲೊಸ್ಸೆಯವರಿಗೆ 1:14ಆತನಲ್ಲಿ (ಆ ಕುಮಾರನಲ್ಲಿ) ಆತನ ರಕ್ತದ ಮೂಲಕ ನಮಗೆ ವಿಮೋಚನೆಯು ಅಂದರೆ ಪಾಪಪರಿಹಾರವು ಉಂಟಾಯಿತು.
- 1 Peter 1:18–19 1 ಪೇತ್ರನು 1:18–19ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ; ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
- Hebrews 9:22 ಇಬ್ರಿಯರಿಗೆ 9:22ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ.
- Hebrews 9:12–15 ಇಬ್ರಿಯರಿಗೆ 9:12–15ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು. ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ. ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ.
- Matthew 26:28 ಮತ್ತಾಯನು 26:28ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.
- Hebrews 10:4–12 ಇಬ್ರಿಯರಿಗೆ 10:4–12ಹೋರಿಗಳ ಮತ್ತು ಹೋತಗಳ ರಕ್ತವು ಪಾಪಗಳನ್ನು ತೆಗೆದು ಹಾಕುವದು ಅಸಾಧ್ಯವಾಗಿದೆ. ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ; ದಹನ ಬಲಿಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ನೀನು ಸಂತೋಷಪಡಲಿಲ್ಲ; ಆಗ ನಾನು--ಇಗೋ, ಓ ದೇವರೇ, ಗ್ರಂಥದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ; ನಿನ್ನ ಚಿತ್ತವನ್ನು ನೇರವೇರಿಸುವದಕ್ಕೆ ಬಂದಿ ದ್ದೇನೆ ಎಂದು ಹೇಳಿದೆನು ಅನ್ನುತ್ತಾನೆ. ಆಮೇಲೆ ಆತನು--ನ್ಯಾಯಪ್ರಮಾಣದಂತೆ ಅರ್ಪಿಸಲ್ಪಡುವಂಥ ಯಜ್ಞವೂ ಅರ್ಪಣೆಯೂ ದಹನ ಬಲಿಗಳೂ ಪಾಪ ಕ್ಕಾಗಿ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ ಇಲ್ಲವೆ ಅವುಗಳಲ್ಲಿ ನಿನಗೆ ಸಂತೋಷವಿರಲಿಲ್ಲ ಎಂದು ಹೇಳಿ ದ್ದಾನೆ. ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ. ಯೇಸು ಕ್ರಿಸ್ತನು ಒಂದೇ ಸಾರಿ ಎಂದೆಂದಿಗೂ ಅರ್ಪಿಸಿದ ತನ್ನ ದೇಹದ ಮೂಲಕ ಆತನ ಚಿತ್ತದಿಂದ ನಾವು ಶುದ್ಧರಾದೆವು. ಇದಲ್ಲದೆ ಪ್ರತಿ ಯಾಜಕನು ದಿನಾಲು ಸೇವೆ ಮಾಡುತ್ತಾ ಎಂದಿಗೂ ಪಾಪವನ್ನು ತೆಗೆದು ಹಾಕಲಾರ ದಂಥ ಒಂದೇ ವಿಧವಾದ ಯಜ್ಞಗಳನ್ನು ಪದೇ ಪದೇ ಅರ್ಪಿಸುತ್ತಾ ನಿಂತುಕೊಂಡಿರುವನು. ಆದರೆ ಈ ಮನುಷ್ಯನು ಪಾಪಗಳಿಗೋಸ್ಕರ ನಿರಂತರವಾದ ಒಂದೇ ಯಜ್ಞವನ್ನು ಅರ್ಪಿಸಿದ ಮೇಲೆ ದೇವರ ಬಲ ಗಡೆಯಲ್ಲಿ ಕೂತುಕೊಂಡನು.
- Revelation 5:9 ಪ್ರಕಟನೆ 5:9ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ;
- Philippians 4:19 ಫಿಲಿಪ್ಪಿಯವರಿಗೆ 4:19ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.
- 1 John 2:12 1 ಯೋಹಾನನು 2:12ಚಿಕ್ಕ ಮಕ್ಕಳೇ, ಆತನ ಹೆಸರಿನ ನಿಮಿತ್ತ ನಿಮ್ಮ ಪಾಪಗಳು ಕ್ಷಮಿಸಲ್ಪಟ್ಟಿರುವದರಿಂದ ನಾನು ನಿಮಗೆ ಬರೆಯುತ್ತೇನೆ.
Original words (Greek)
- In · G1722ἐν en
- whom · G3739ὅς hós
- have · G2192ἔχω échō
- redemption · G629ἀπολύτρωσις apolýtrōsis
- through · G1223διά diá
- his · G846αὐτός autós
- blood · G129αἷμα haîma
- forgiveness · G859ἄφεσις áphesis
- sins · G3900παράπτωμα paráptōma
- according · G2596κατά katá
- riches · G4149πλοῦτος ploûtos
- his · G846αὐτός autós
- grace · G5485χάρις cháris