Ephesians · chapter 1 · verse 9
Ephesians 1:9 in Kannada
ಆತನು ತನ್ನಲ್ಲಿ ಉದ್ದೇಶಿಸಿದ ಪ್ರಕಾರ ಆನಂದಪೂರ್ವಕವಾದ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದನು.
Aatanu tannalli uddeshisida prakaara aanandapoorvakavaada tanna chittada rahasyavannu namage tiliyapadisidanu.
Ephesians 1:9 in English
- King James Version (KJV)
- Having made known unto us the mystery of his will, according to his good pleasure which he hath purposed in himself:
- World English Bible (WEB)
- making known to us the mystery of his will, according to his good pleasure which he purposed in him
- American Standard Version (ASV)
- making known unto us the mystery of his will, according to his good pleasure which he purposed in him
- Bible in Basic English (BBE)
- Having made clear to us the secret of his purpose, in agreement with the design which he had in mind, to put into his hands
- Darby Translation (DBY)
- having made known to us the mystery of his will, according to his good pleasure which he purposed in himself
- Webster's Bible (WBS)
- Having made known to us the mystery of his will, according to his good pleasure which he hath purposed in himself:
- Young's Literal Translation (YLT)
- having made known to us the secret of His will, according to His good pleasure, that He purposed in Himself,
Read in context
- 7ಆತನ ಕೃಪಾ ಐಶ್ವರ್ಯ ಕ್ಕನುಸಾರವಾಗಿ ಆತನ ರಕ್ತದ ಮೂಲಕ ಆತನಲ್ಲಿ ನಮಗೆ ವಿಮೋಚನೆಯು ಅಂದರೆ ಪಾಪಗಳ ಕ್ಷಮಾ ಪಣೆಯು ಉಂಟಾಯಿತು.
- 8ಹೀಗೆ ಆತನು ತನ್ನ ಕೃಪಾತಿಶಯದಲ್ಲಿ ಸಕಲ ಜ್ಞಾನವನ್ನೂ ಬುದ್ದಿಯನ್ನೂ ಇನ್ನೂ ಹೆಚ್ಚಾಗಿ ನಮ್ಮ ಕಡೆಗೆ ತೋರಿಸಿದ್ದಾನೆ.
- 9ಆತನು ತನ್ನಲ್ಲಿ ಉದ್ದೇಶಿಸಿದ ಪ್ರಕಾರ ಆನಂದಪೂರ್ವಕವಾದ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದನು.
- 10ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು.
- 11ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
Cross references
- Colossians 1:26–28 ಕೊಲೊಸ್ಸೆಯವರಿಗೆ 1:26–28ಆ ವಾಕ್ಯವು ಹಿಂದಿನ ಯುಗಗಳಿಂದಲೂ ತಲಾತಲಾಂತರಗಳಿಂದಲೂ ಮರೆ ಯಾಗಿತ್ತು; ಅದು ಈಗಿನ ಕಾಲದಲ್ಲಿ ಆತನ ಪರಿಶುದ್ಧರಿಗೆ ತಿಳಿಸಲ್ಪಟ್ಟಿದೆ; ಅನ್ಯಜನಗಳಲ್ಲಿ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ (ಪರಿಶುದ್ಧರಿಗೆ) ತಿಳಿಸುವದಕ್ಕೆ ಮನಸ್ಸು ಮಾಡಿ ಕೊಂಡನು. ಈ ಮರ್ಮವು ಏನೆಂದರೆ ನಿಮ್ಮಲ್ಲಿರುವ ಕ್ರಿಸ್ತನು ಮಹಿಮೆಯ ನಿರೀಕ್ಷೆಯಾಗಿದ್ದಾನೆ ಎಂಬದೇ. ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
- Romans 16:25–27 ರೋಮಾಪುರದವರಿಗೆ 16:25–27ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್. ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
- Ephesians 3:3–9 ಎಫೆಸದವರಿಗೆ 3:3–9ಇದುವರೆಗೆ ಗುಪ್ತವಾಗಿದ್ದದನ್ನು ಆತನು ಪ್ರಕಟನೆಯಿಂದ ನನಗೆ ಹೇಗೆ ತಿಳಿಸಿದನೆಂಬದನ್ನು ಮೊದಲು ನಾನು ನಿಮಗೆ ಸಂಕ್ಷೇಪವಾಗಿ ಬರೆದೆನು; (ಬರೆದದ್ದನ್ನು ನೀವು ಓದಿ ನೋಡಿದರೆ ಕ್ರಿಸ್ತನ ವಿಷಯವಾದ ಮರ್ಮವನ್ನು ಕುರಿತು ನನಗಿರುವ ಗ್ರಹಿಕೆಯನ್ನು ನೀವು ತಿಳುಕೊಳ್ಳ ಬಹುದು.) ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಆತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿ ಮನುಷ್ಯ ಪುತ್ರರಿಗೆ ತಿಳಿಸಲ್ಪಡಲಿಲ್ಲ. ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ. ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಅನುಗ್ರಹಿಸಿದ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು. ಕ್ರಿಸ್ತನ ಶೋಧಿಸಲ ಶಕ್ಯವಾದ ಐಶ್ವರ್ಯದ ವಿಷಯವಾಗಿ ಅನ್ಯಜನರಿಗೆ ನಾನು ಸಾರುವ ಹಾಗೆ ಪರಿಶುದ್ಧರೊಳಗೆ ಅತ್ಯಲ್ಪ ನಾದ ನನಗೆ ಅನುಗ್ರಹಿಸೋಣವಾಯಿತು. ಸಮಸ್ತ ವನ್ನು ಯೇಸು ಕ್ರಿಸ್ತನಿಂದ ಸೃಷ್ಟಿಸಿದ ದೇವರಲ್ಲಿ ಲೋಕಾದಿ ಯಿಂದ ಮರೆಯಾಗಿದ್ದ ಮರ್ಮದ ಅನ್ಯೋನ್ಯತೆಯು ಎಲ್ಲರಿಗೂ ತೋರುವಂತೆ ಮಾಡುವ ಹಾಗೆಯೂ
- 2 Timothy 1:9 2 ತಿಮೊಥೆಯನಿಗೆ 1:9ಆತನು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತನ್ನ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಕರೆಯಿಂದ ನಮ್ಮನ್ನು ಕರೆದನು. ಆತನು ಜಗದುತ್ಪತ್ತಿಗೆ ಮುಂಚೆಯೇ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿದನು.
- Ephesians 1:11 ಎಫೆಸದವರಿಗೆ 1:11ಆತನ ಸ್ವಚಿತ್ತದ ಆಲೋಚನೆಗನುಸಾರವಾಗಿ ಎಲ್ಲಾ ಕಾರ್ಯ ಗಳನ್ನು ಸಾಧಿಸುವ ಆತನ ಉದ್ದೇಶದ ಮೇರೆಗೆ ಮೊದಲೇ ನೇಮಿಸಲ್ಪಟ್ಟವರಾದ ನಾವು ಆತನಲ್ಲಿ ಬಾಧ್ಯತೆಯನ್ನು ಸಹ ಹೊಂದಿದೆವು.
- Galatians 1:12 ಗಲಾತ್ಯದವರಿಗೆ 1:12ನಾನು ಅದನ್ನು ಮನುಷ್ಯ ನಿಂದ ಹೊಂದಲಿಲ್ಲ. ಇಲ್ಲವೆ ನನಗೆ ಯಾರೂ ಉಪದೇಶಿಸಲಿಲ್ಲ. ಆದರೆ ಯೇಸು ಕ್ರಿಸ್ತನಿಂದಲೇ ಅದು ನನಗೆ ಪ್ರಕಟವಾಯಿತು.
- Romans 8:28 ರೋಮಾಪುರದವರಿಗೆ 8:28ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
- Ephesians 3:11 ಎಫೆಸದವರಿಗೆ 3:11ನಮ್ಮ ಕರ್ತನಾದ ಕ್ರಿಸ್ತ ಯೇಸು ವಿನಲ್ಲಿ ಆತನು ಸಂಕಲ್ಪಿಸಿದ ಶಾಶ್ವತವಾದ ಸಂಕಲ್ಪದಂತೆ ಇದಾಯಿತು.
- 1 Corinthians 2:10–12 1 ಕೊರಿಂಥದವರಿಗೆ 2:10–12ನಮಗಾದರೋ ದೇವರು ತನ್ನ ಆತ್ಮನ ಮೂಲಕ ಅವುಗಳನ್ನು ಪ್ರಕಟಿಸಿದನು. ಆ ಆತ್ಮನು ಎಲ್ಲಾ ವಿಷಯಗಳನ್ನು, ಹೌದು, ದೇವರ ಅಗಾಧವಾದ ವಿಷಯಗಳನ್ನು ಕೂಡ ಪರಿಶೋಧಿಸು ವವನಾಗಿದ್ದಾನೆ. ಮನುಷ್ಯನ ಒಳಗಿನ ವಿಷಯಗಳು ಅವನಲ್ಲಿರುವ ಆತ್ಮಕ್ಕೆ ಹೊರತು ಮತ್ತಾರಿಗೆ ತಿಳಿದಾವು? ಹಾಗೆಯೇ ದೇವರ ವಿಷಯಗಳನ್ನು ದೇವರ ಆತ್ಮನೇ ಹೊರತು ಬೇರೆ ಯಾರೂ ಗ್ರಹಿಸುವದಿಲ್ಲ. ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ಉಚಿತವಾಗಿ ದಯಪಾಲಿಸಿರುವವುಗಳನ್ನು ತಿಳುಕೊಳ್ಳು ವದಕ್ಕಾಗಿ ದೇವರ ಆತ್ಮನನ್ನೇ ಹೊಂದಿದೆವು.
- Ephesians 1:17–18 ಎಫೆಸದವರಿಗೆ 1:17–18ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
- 1 Timothy 3:16 1 ತಿಮೊಥೆಯನಿಗೆ 3:16ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
- Galatians 1:16 ಗಲಾತ್ಯದವರಿಗೆ 1:16ಇದಲ್ಲದೆ ದೇವರು ಅನ್ಯಜನರಲ್ಲಿ ತನ್ನ ಮಗನನ್ನು ನಾನು ಸಾರುವವನಾಗಬೇಕೆಂದು ಆತನನ್ನು ನನ್ನೊಳಗೆ ಪ್ರಕಟಿಸುವದಕ್ಕೆ ಇಚ್ಛೈಸಿದಾಗಲೇ ನಾನು ಮನುಷ್ಯರನ್ನು ವಿಚಾರಿಸದೆ