Ephesians · chapter 2 · verse 19
Ephesians 2:19 in Kannada
ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ಪರಿಶುದ್ಧರೊಂದಿಗೆ ಒಂದೇ ಪಟ್ಟಣದವರೂ ದೇವರ ಮನೆಯವರೂ ಆಗಿದ್ದೀರಿ.
Heegiralaagi neevu innu mele paradeshadavaroo anyaroo aagirade parishuddharondige onde pattanadavaroo devara maneyavaroo aagiddeeri.
Ephesians 2:19 in English
- King James Version (KJV)
- Now therefore ye are no more strangers and foreigners, but fellowcitizens with the saints, and of the household of God;
- World English Bible (WEB)
- So then you are no longer strangers and foreigners, but you are fellow citizens with the saints and of the household of God,
- American Standard Version (ASV)
- So then ye are no more strangers and sojourners, but ye are fellow-citizens with the saints, and of the household of God,
- Bible in Basic English (BBE)
- So then you are no longer as those who have no part or place in the kingdom of God, but you are numbered among the saints, and of the family of God,
- Darby Translation (DBY)
- So then ye are no longer strangers and foreigners, but ye are fellow-citizens of the saints, and of the household of God,
- Webster's Bible (WBS)
- Now therefore ye are no more strangers and foreigners, but fellow-citizens with the saints, and of the household of God;
- Young's Literal Translation (YLT)
- Then, therefore, ye are no more strangers and foreigners, but fellow-citizens of the saints, and of the household of God,
Read in context
- 17ಇದಲ್ಲದೆ ಆತನು ಬಂದು ದೂರ ವಾಗಿದ್ದ ನಿಮಗೂ ಸವಿಾಪವಾಗಿದ್ದ ಅವರಿಗೂ ಸಮಾಧಾನವನ್ನು ಸಾರಿದನು.
- 18ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.
- 19ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ಪರಿಶುದ್ಧರೊಂದಿಗೆ ಒಂದೇ ಪಟ್ಟಣದವರೂ ದೇವರ ಮನೆಯವರೂ ಆಗಿದ್ದೀರಿ.
- 20ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು;
- 21ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
Cross references
- Philippians 3:20 ಫಿಲಿಪ್ಪಿಯವರಿಗೆ 3:20ನಾವಾದರೊ ಪರಲೋಕ ನಿವಾಸಿಗಳು; ಅಲ್ಲಿಂದಲೇ ರಕ್ಷಕನು ಬರುವದನ್ನು ಎದುರು ನೋಡುತ್ತಾ ಇದ್ದೇವೆ; ಆತನೇ ಕರ್ತನಾದ ಯೇಸು ಕ್ರಿಸ್ತನು.ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
- 1 John 3:1 1 ಯೋಹಾನನು 3:1ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ.
- Galatians 6:10 ಗಲಾತ್ಯದವರಿಗೆ 6:10ಆದದ ರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ವಿಶ್ವಾಸದ ಮನೆತನ ದವರಿಗೆ ಮಾಡೋಣ.
- Galatians 3:26–28 ಗಲಾತ್ಯದವರಿಗೆ 3:26–28ನೀವೆಲ್ಲರು ಕ್ರಿಸ್ತ ಯೇಸು ವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿ ದ್ದೀರಿ. ಹೇಗಂದರೆ ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡಿರುವ ನೀವೆಲ್ಲರು ಕ್ರಿಸ್ತನನ್ನು ಧರಿಸಿ ಕೊಂಡಿರಿ. ನೀವೆಲ್ಲರು ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವದರಿಂದ ಯೆಹೂದ್ಯನು ಗ್ರೀಕನು ಎಂದೂ ದಾಸನು ಸ್ವತಂತ್ರನು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ಸಂತತಿಯವರು ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
- Ephesians 2:12 ಎಫೆಸದವರಿಗೆ 2:12ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
- Ephesians 3:6 ಎಫೆಸದವರಿಗೆ 3:6ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ.
- Hebrews 11:13 ಇಬ್ರಿಯರಿಗೆ 11:13ಇವರೆಲ್ಲರು ವಾಗ್ದಾನಗಳ ಫಲವನ್ನು ಹೊಂದದೆ ಅವುಗಳನ್ನು ದೂರದಿಂದ ನೋಡಿ ನಿಶ್ಚಯದೊಡನೆ ಅಪ್ಪಿಕೊಂಡು ನಂಬಿಕೆಯುಳ್ಳವರಾಗಿ ಮೃತರಾದರು; ತಾವು ಭೂಮಿಯ ಮೇಲೆ ಪರದೇಶದವರೂ ಪ್ರವಾಸಿ ಗಳೂ ಆಗಿದ್ದೇವೆಂದು ಒಪ್ಪಿಕೊಂಡರು.
- Hebrews 12:22–24 ಇಬ್ರಿಯರಿಗೆ 12:22–24ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇಮಿಗೂ ಎಣಿಸಲಸಾಧ್ಯವಾದ ದೂತ ಗಣಗಳ ಬಳಿಗೂ ಪರ ಲೋಕದಲ್ಲಿ ಹೆಸರು ಬರೆಸಿಕೊಂಡಿರುವ ಸಾರ್ವತ್ರಿಕ ಸಂಘಕ್ಕೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೆ ನ್ಯಾಯಾ ಧಿಪತಿಯಾಗಿರುವ ದೇವರ ಬಳಿಗೂ ಸಿದ್ದಿಗೆ ಬಂದಿರುವ ನೀತಿವಂತರ ಆತ್ಮಗಳ ಬಳಿಗೂ ಹೊಸಒಡಂಬಡಿಕೆಗೆ ಮಧ್ಯಸ್ಥನಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಹಿತಕರವಾಗಿ ಮಾತನಾಡುವ ಪ್ರೋಕ್ಷಣ ರಕ್ತದ ಬಳಿಗೂ ಬಂದಿದ್ದೀರಿ.
- Revelation 21:12–26 ಪ್ರಕಟನೆ 21:12–26ಆ ಪಟ್ಟಣಕ್ಕೆ ಬಹಳ ಎತ್ತರವಾದ ಗೋಡೆ ಇತ್ತು; ಅದಕ್ಕೆ ಹನ್ನೆರಡು ಹೆಬ್ಬಾಗಿಲು ಗಳಿದ್ದವು; ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೂತರಿದ್ದರು; ಅವುಗಳ ಮೇಲೆ ಇಸ್ರಾ ಯೇಲ್ಯರ ಹನ್ನೆರಡು ಗೋತ್ರಗಳ ಹೆಸರುಗಳು ಬರೆ ದಿದ್ದವು. ಪೂರ್ವ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲು ಗಳು. ಉತ್ತರ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ದಕ್ಷಿಣ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು, ಪಶ್ಚಿಮ ದಿಕ್ಕಿನಲ್ಲಿ ಮೂರು ಹೆಬ್ಬಾಗಿಲುಗಳು ಇದ್ದವು. ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು; ಅವುಗಳ ಮೇಲೆ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು. ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಗೋಡೆಯನ್ನೂ ಅಳತೆ ಮಾಡು ವದಕ್ಕಾಗಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು. ಪಟ್ಟಣವು ಚಚ್ಚೌಕವಾಗಿದೆ; ಅದರ ಉದ್ದವು ಅದರ ಅಗಲದಷ್ಟಿದೆ. ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು; ಅಳತೆಯು ಹನ್ನೆರಡು ನೂರು ಮೈಲಿ ಆಯಿತು. ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ. ಅದರ ಗೋಡೆಯನ್ನು ಅವನು ಅಳತೆ ಮಾಡಿದನು; ಅದು ನೂರನಾಲ್ವತ್ತ ನಾಲ್ಕು ಮೊಳ ದಷ್ಟಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ ಅಂದರೆ ದೂತನ ಮೊಳ. ಆ ಗೋಡೆಯ ಕಟ್ಟಡವು ಸೂರ್ಯ ಕಾಂತದಿಂದ ಆಗಿತ್ತು; ಪಟ್ಟಣವು ಶುದ್ಧ ಗಾಜಿನಂತಿರುವ ಸೋಸಿದ ಭಂಗಾರವೇ. ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲವಿಧವಾದ ಅಮೂಲ್ಯವಾದ ಕಲ್ಲುಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿ ವಾರವು ಸೂರ್ಯಕಾಂತ, ಎರಡನೆಯದು ನೀಲಮಣಿ, ಮೂರನೆಯದು ಕೆಂಪು, ನಾಲ್ಕನೆಯದು ಪಚ್ಚೆ. ಐದನೆಯದು ಗೋಮೇಧಿಕ. ಆರನೆಯದು ಮಾಣಿಕ್ಯ, ಏಳನೆಯದು ಪೀತರತ್ನ, ಎಂಟನೆಯದು ಬೆರುಲ್ಲ, ಒಂಭತ್ತನೆಯದು ಪುಷ್ಯರಾಗ, ಹತ್ತನೆಯದು ಗರುಡಪಚ್ಚೆ, ಹನ್ನೊಂದನೆಯದು ಕೆಂಗಿತ್ತಳೆ, ಹನ್ನೆರಡನೆ ಯದು ನೀಲಸ್ಪಟಿಕ. ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು; ಒಂದೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಸ್ವಚ್ಛವಾದ ಗಾಜಿನಂತಿರುವ ಸೋಸಿದ ಬಂಗಾರವಾಗಿತ್ತು. ಪಟ್ಟಣದಲ್ಲಿ ನಾನು ಆಲಯವನ್ನು ಕಾಣಲಿಲ್ಲ; ಯಾಕಂದರೆ ಸರ್ವಶಕ್ತನಾದ ದೇವರಾಗಿ ರುವ ಕರ್ತನೂ ಕುರಿಮರಿಯಾದಾತನೂ ಅದರ ಆಲಯವಾಗಿದ್ದಾರೆ. ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ. ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು; ಕುರಿಮರಿಯಾದಾತನೇ ಅದರ ದೀಪ. ರಕ್ಷಿಸಲ್ಪಟ್ಟ ಜನಾಂಗದವರು ಅದರ ಬೆಳಕಿನಲಿ ನಡೆಯುವರು; ಭೂರಾಜರು ತಮ್ಮ ವೈಭವವನ್ನೂ ಘನವನ್ನೂ ಅಲ್ಲಿಗೆ ತರುವರು. ಅದರ ಹೆಬ್ಬಾಗಿಲು ಗಳನ್ನು ಹಗಲಿನಲ್ಲಿ ಮುಚ್ಚುವದೇ ಇಲ್ಲ. ಯಾಕಂದರೆ ರಾತ್ರಿಯು ಅಲ್ಲಿಲ್ಲ. ಅವರು ಜನಾಂಗಗಳ ವೈಭವ ವನ್ನೂ ಘನವನ್ನೂ ಅಲ್ಲಿಗೆ ತರುವರು.ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.
- Galatians 4:26–31 ಗಲಾತ್ಯದವರಿಗೆ 4:26–31ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮ್ಮೆಲ್ಲರಿಗೆ ತಾಯಿ. ಯಾಕಂದರೆ--ಬಂಜೆಯೇ, ಹೆರದವಳೇ, ಸಂತೋಷಿಸು; ಪ್ರಸವ ವೇದನೆ ಪಡದವಳೇ, ಸ್ವರವೆತ್ತಿ ಕೂಗು; ಯಾಕಂದರೆ ಗಂಡನುಳ್ಳವಳಿಗಿಂತ ಬಿಡಲ್ಪಟ್ಟವಳಿಗೆ ಎಷ್ಟೋ ಹೆಚ್ಚು ಮಕ್ಕಳಿದ್ದಾರೆಂದು ಬರೆದದೆ. ಸಹೋದರರೇ, ನಾವು ಈಗ ಇಸಾಕನಂತೆ ವಾಗ್ದಾನದ ಮಕ್ಕಳಾಗಿದ್ದೇವೆ. ಆದರೆ ಆಗ ಶರೀರಕ್ಕನುಸಾರವಾಗಿ ಹುಟ್ಟಿದವನು ಆತ್ಮಕ್ಕನುಸಾರವಾಗಿ ಹುಟ್ಟಿದವನನ್ನು ಹಿಂಸೆಪಡಿಸಿದನು. ಅದರಂತೆಯೇ ಈಗಲೂ ಅದೆ. ಆದರೂ ಬರಹವು ಏನು ಹೇಳುತ್ತದೆ? ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಯಾಕಂದರೆ ದಾಸಿಯ ಮಗನು ಸ್ವತಂತ್ರಳ ಮಗನೊಂದಿಗೆ ಎಷ್ಟು ಮಾತ್ರಕ್ಕೂ ಬಾಧ್ಯ ನಾಗಬಾರದು ಎಂದು ಹೇಳುತ್ತದೆ.ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ. ಹೀಗಿರುವಲ್ಲಿ ಸಹೋದರರೇ, ನಾವು ದಾಸಿಯ ಮಕ್ಕಳಲ್ಲ, ಆ ಸ್ವತಂತ್ರಳ ಮಕ್ಕಳೇ ಆಗಿದ್ದೇವೆ.
- Ephesians 3:15 ಎಫೆಸದವರಿಗೆ 3:15ಯಾವ ತಂದೆಯ ಹೆಸರನ್ನು ಪರಲೋಕ ಭೂಲೋಕಗಳಲ್ಲಿರುವ ಕುಟುಂಬವೆಲ್ಲಾ ತೆಗೆದುಕೊಳ್ಳು ತ್ತದೋ, ಆ ತಂದೆಯು
- Matthew 10:25 ಮತ್ತಾಯನು 10:25ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?
Original words (Greek)
- Now · G3767οὖν oûn
- therefore · G686ἄρα ára
- are · G2075ἐστέ esté
- more · G3765οὐκέτι oukéti
- strangers · G3581ξένος xénos
- and · G2532καί kaí
- foreigners · G3941πάροικος pároikos
- but · G235ἀλλά allá
- fellowcitizens · G4847συμπολίτης sympolítēs
- saints · G40ἅγιος hágios
- and · G2532καί kaí
- household · G3609οἰκεῖος oikeîos
- God · G2316θεός theós